

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಂಟೆಮಜಲು ಎಂಬಲ್ಲಿ ವ್ಯಕ್ತಿಯೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅಂಟೆಮಜಲು ನಿವಾಸಿ ಓಬಯ್ಯ ಮಲೆಕುಡಿಯ (70) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಇವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು ವಿಪರೀತ ಮದ್ಯ ಸೇವಿಸುವ ಚಟ ಹೊಂದಿದ್ದರು ಎನ್ನಲಾಗಿದ್ದು ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜೂನ್ 26ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡುಕೊಂಡಿದ್ದಾರೆ ಎಂದು ಮೃತರ ಮಗ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಪೊಲೀಸರು ಪ್ರಕರಣದಾಖಲಿಸಿಕೊಂಡಿದ್ದಾರೆ.
