

ಬೆಳ್ತಂಗಡಿ; ನಗರದ ಕಾಂಗ್ರೆಸ್ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕ ನಗರ ಸಮಿತಿ ಹಾಗೂ ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಮಲೋಚನೆ ಸಭೆ ಜರಗಿತು
ಸಭೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ಸಂಘಟನೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು ಅಸಂಘಟಿತ ಕಾರ್ಮಿಕರಿಗೆ ಸರಕಾರದಿಂದ ಸಿಗುವ ಸೌಲಭ್ಯವನ್ನು ಎಲ್ಲರಿಗೂ ದೊರಕಿಸುವಂತೆ ಮಾಡುವ ನಿಟ್ಟಿನಲ್ಲಿ ಸಂಘಟನೆ ಪ್ರಯತ್ನಿಸಬೇಕು ಎಂದರು.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಸಂಘಟಿತ ಕಾರ್ಮಿಕ ಕಾಂಗ್ರೆಸಿನ ಅಧ್ಯಕ್ಷರಾದ ಅಬ್ಬಾಸ್ ಆಲಿ ವಹಿಸಿದರು ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ರಾಜ್ಯ ಸರಕಾರದಿಂದ ಸಿಗುವ ಸೌಲಭ್ಯವನ್ನು ಎಲ್ಲಾ ಸಂಘಟಿತ ಕಾರ್ಮಿಕರಿಗೆ ದೊರಕಿಸಿ ಕೊಡುವ ಬಗ್ಗೆ ವಿವರಿಸಿದ್ದರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯನ್ನು ಬಲಿಷ್ಠಗೊಳಿಸಲು ಹಾಗೂ ಮುಂದಿನ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಗ್ರಾಮ ಪಂಚಾಯತ್ ಚುನಾವಣೆಯನ್ನು ಗೆಲ್ಲಿಸಲು ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಶ್ರಮಿಸಬೇಕು ಸರಕಾರದಿಂದ ಸಿಗುವ ಪ್ರತಿಯೊಂದು ಸೌಲಭ್ಯವು ಕಾರ್ಮಿಕರಿಗೆ ತಲ್ಪಿಸುವ ಕೆಲಸವನ್ನು ಸಂಘಟಕರು ಮಾಡಬೇಕು ಎಂದು ನೆರೆದ ಕಾರ್ಯಕರ್ತರಿಗೆ ಮಾಹಿತಿ ನೀಡಿದರು ಬೆಳ್ತಂಗಡಿ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ಸಿನ ನಗರ ಅಧ್ಯಕ್ಷರಾದ ಅಬ್ದುಲ್ ರಜಾಕ್ ಸ್ವಾಗತಿಸಿದರು. ಹಾಗೂ ಅಸಂಘಟಿತ ಕಾರ್ಮಿಕರಿಗೆ ಸಿಗುವ ಎಲ್ಲಾ ಸೌಲಭ್ಯಗಳ ಬಗ್ಗೆ ವಿವರಿಸಿದರು. ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿಯಾದ ನಿರಂಜನ್ ರೈ ಹಾಗೂ ನಾರಾಯಣ ಮಚ್ಚಿನ ಕೆವಿ ಜಾರ್ಜ್ ಹಾಗೂ ಗ್ರಾಮೀಣ ಅಧ್ಯಕ್ಷ ತುಕರಾಮ್ ಗೌಡ ಹಾಗೂ ಸೇವಾದಳದ ಅಧ್ಯಕ್ಷರಾದ ಯೂಸುಫ್ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಅಬ್ದುಲ್ ಕರೀಂ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾದ ಶೇಖರ್ ಕುಕ್ಕೆ ಡಿ ಮಹಿಳಾ ಕಾಂಗ್ರೆಸ್ಸಿನ ಜಿಲ್ಲಾ ಕಾರ್ಯದರ್ಶಿ ಜೀನತ್ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷರಾದ ಸತೀಶ್ ಬಂಗೇರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಸೌಮ್ಯ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ಸಿನ ಕಾರ್ಯದರ್ಶಿ ಇಸ್ಮಾಯಿಲ್ ಇವರು ಸಭೆಯಲ್ಲಿ ಭಾಗವಹಿಸಿದರು ಹಾಗೂ ಸಭೆಯಲ್ಲಿ ಅಸಂಗಡಿತ ಕಾರ್ಮಿಕ ಕಾಂಗ್ರೆಸ್ಸಿನ ಹಿರಿಯ 9 ಜನ ಕಾರ್ಯಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ನಡೆಸಲಾಯಿತು ಹಾಗೂ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಎಲ್ಲರೂ ಉಪಸ್ಥಿತರಿದ್ದರು.
