Home ಸ್ಥಳೀಯ ಸಮಾಚಾರ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

0
7

ಇಂದಬೆಟ್ಟು:ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ 2.5 NVG eyiMiTRA Surathkal ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ, ಸಮೃದ್ಧಿ ಸಂಜೀವಿನಿ ಒಕ್ಕೂಟ ಇಂದಬೆಟ್ಟು ಇದರ ಸಹಕಾರದೊಂದಿಗೆ ಕಣ್ಣಿನ ಉಚಿತ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಇಂದಬೆಟ್ಟು ಗ್ರಾಮ ಪಂಚಾಯತನ ಹಿರಿಯ ಸದಸ್ಯರಾದ ವೀರಪ್ಪ ಮೊಯ್ಲಿ ರವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು, ಸದಸ್ಯರಾದ ಪ್ರಮೋದ್ ಕುಮಾರ್, ಶ್ರೀಕಾಂತ್ ಎಸ್ ಇಂದಬೆಟ್ಟು ಸಹಕರಿಸಿದರು. ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ಸ್ವಾಗತಿಸಿದರು, ಸಂಸ್ಥೆಯ ಡಾಕ್ಟರ್ ರಾಮಚಂದ್ರ ರವರು ಶಿಬಿರದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸಮೃದ್ಧಿ ಸಂಜೀವಿನಿ ಒಕ್ಕೂಟದ ಸೌಮ್ಯ, ಕವಿತಾ, ಪಂಚಾಯತ್ ಸಿಬ್ಬಂದಿಗಳು, ಸಂಸ್ಥೆಯ ಸಿಬ್ಬಂದಿಗಳು ಸಹಕರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದು ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.

NO COMMENTS

LEAVE A REPLY

Please enter your comment!
Please enter your name here