ಬೆಳ್ತಂಗಡಿ; ತಾಲೂಕಿನ ಬಾರ್ಯಗ್ರಾಮದ ಪಿಲಿಗೂಡು ಎಂಬಲ್ಲಿ ಪಿಕಪ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ದನಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿದ್ದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಉಪ್ಪಿನಂಗಡಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಪೆದಮಲೆ ಕಡೆಯಿಂದ ಬಂದ ಪಿಕಪ್ ವಾಹವನ್ನು ತಡೆದು ಪರಿಶೀಲಿಸಿದಾಗ ಯಾವುದೇ ಪರವಾನಿಗೆಯಿಲ್ಲದೆ ದನವನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು ಪಿಕಪ್ ವಾಹನವನ್ನು ಹಾಗೂ ಅದರಲ್ಲಿದ್ದ ದನವನ್ನು ವಶಪಡಿಸಿಕೊಂಡ ಪೊಲೀಸರು ವಾಹನದಲ್ಲಿದ್ದ ಅಬೂಬಕ್ಕರ್, ಇಮ್ರಾನ್ ಹಾಗೂ ಮೊಹಮ್ಮದ್ ಎಂಬವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
