ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತು ಹಾಕಿರುವ ಬಗ್ಗೆ ಈ ಹಿಂದೆ ಇಲ್ಲಿ ಸ್ವಚ್ಚತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಹೇಳಿಕೆ ನೀಡಿದ ಪ್ರಕರಣದಲ್ಲಿ ಆತ ಹೂತು ಹಾಕಿದ್ದಾನೆ ಎಂದು ಹೇಳುತ್ತಿರುವ ಮೃತದೇಹಗಳನ್ನು ಹೊರತೆಗೆಯವ ವಿಚಾರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಹೇಳಿಕೆ ನೀಡಿದ್ದು ತನಿಖಾಧಿಕಾರಿ ತನಿಖೆಯ ಯಾವ ಹಂತದಲ್ಲಿ ಸಮಾಧಿ ಅಗೆಯುವ ಪ್ರಕ್ರಿಯೆ ಸೂಕ್ತವೆಂದು ನುರ್ಧರಿಸುತ್ತಾರೋ ಆಗ ಸೂಕ್ತ ಕಾನೂನು ಪ್ರಕ್ರಿಯೆ ಅನುಸರಿಸಿಕೊಂಡು ಸಮಾಧಿ ಅಗೆಯುವ ಪ್ರಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಈ ವಿಚಾರದ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಹೇಳಿಕೆಯೊಂದನ್ನು ನೀಡಿದ್ದು
ಈ ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು ಈ ಬಗ್ಗೆ ತನಿಖಾಧಿಕಾರಿಗಳಿಗೆ ಇತ್ತೀಚೆಗೆ ಮಾಹಿತಿ ಬಂದಿದೆ. ಈ ವಿಚಾರವನ್ನು ತನಿಖಾಧಿಕಾರಿಯವರ ಗಮನಕ್ಕೆ ಸಾಕ್ಷಿ ದೂರುದಾರನ ಪರ ವಕೀಲರು ತಂದಿರುವುದಿಲ್ಲ.
ಸಮಾಧಿ ಅಗೆಯುವ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಸಾಕ್ಷಿ ದೂರುದಾರನು ತಲರೆಸಿಕೊಳ್ಳುವ ಸಾಧ್ಯತೆಯಿದೆ ಎಂದು ಸ್ಥಳೀಯ ವ್ಯಕ್ತಿಗಳಿಂದ ಗುಪ್ತ ಮಾಹಿತಿ ದೊರಕಿರುತ್ತದೆ ಇದೇ ಕಾರಣಕ್ಕಾಗಿ ತನಿಖಾ ಪ್ರಕ್ರಿಯೆಯನ್ನು ಅನುಸರಿಸದೆ ಸಮಾಧಿ ಅಗೆಯುವ ಪ್ರಕ್ರಿಯೆಯನ್ನು ನಡೆಸಲು ಆತುರ ತೋರುತ್ತಿರುವಂತೆ ಸುದ್ದಿ ಹರಿದಾಡುತ್ತಿದೆ. ಈ ವಿಷಯವನ್ನು ಸಾಕ್ಷಿದಾರರ ಪರವಾದ ವಕೀಲರಿಗೂ ತಿಳಿಸಲಾಗಿದೆ. ಹಾಗೂ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ.
ಸಾಕ್ಷಿ ದೂರು ದಾರರು ಸಮ್ಮತಿಸಿದಲ್ಲಿ ಆತನ ಬ್ರೈನ್ ಮಾಪಿಂಗ್ ಫಿಂಗರ್ ಪ್ರಿಂಟ್ , ನಾರ್ಕೋ ಅನಾಲಿಸಿಸ್ ಪರೀಕ್ಷೆಗಳನ್ನು ನಡೆಸಲು ತನಿಖಾಧಿಕಾರಿಗಳು ಮಾನ್ಯ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದಾರೆ.
ಅದೇರೀತಿ ತನಿಖಾಧಿಕಾರಿ ತನಿಖೆಯ ಯಾವ ಹಂತದಲ್ಲಿ ಸಮಾಧಿ ಅಗೆಯುವ ಪ್ರಕ್ರಿಯೆ ಸೂಕ್ತವೆಂದು ನುರ್ಧರಿಸುತ್ತಾರೋ ಆಗ ಸೂಕ್ತ ಕಾನೂನು ಪ್ರಕ್ರಿಯೆ ಅನುಸರಿಸಿಕೊಂಡು ಸಮಾಧಿ ಅಗೆಯುವ ಪ್ರಕ್ರಿಯೆ ನಡೆಸಕಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
