

ಬೆಳ್ತಂಗಡಿ; ತಾಲೂಕಿನ ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ಯುವತಿ ವೀಣಾಳ ಅನುಮಾನಾಸ್ಪದ ಸಾವಿನ ಕುರಿತು ಹಲವಾರು ಅನುಮಾನಗಳಿದ್ದು ಈ ಬಗ್ಗೆ ಸಮಗ್ರವಾದ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ
ಜನವಾದಿ ಮಹಿಳಾ ಸಂಘಟನೆ ಬೆಳ್ತಂಗಡಿ ತಾಲೂಕು ಸಮಿತಿ ಇದರ ವತಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮನವಿ ನೀಡಲಾಗಿದೆ.
ಬಾಣಂತಿಯಾದ ಈಕೆಯ ಮಗುವನ್ನು ಅವಳಿಂದ ದೂರ ಮಾಡಿ ಆಕೆಯ ತಂದೆ ನಾಗೇಶ್ ರವರು ಆಕೆಯನ್ನು ಮಾನಸಿಕ ಅಸ್ವಸ್ಥೆ ಎಂದು ಬಿಂಬಿಸುವ ಕಾರ್ಯವನ್ನು ಮಾಡಿದ್ದಾರೆ. ಒಟ್ಟು ಘಟನೆಯನ್ನು ಗಮನಿಸದಾಗ ಇದೊಂದು ಸಹಜ ಸಾವು ಅಲ್ಲ ಎಂಬ ಭಾವನೆ ಮೂಡುತ್ತಿದೆ. ಆದ್ದರಿಂದ ಯುವತಿಯ ಅಸಹಜ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ಸತ್ಯಾಂಶ ಹೊರಬರುವಂತೆ ಮಾಡಿ ಈಕೆಯ ಸಾವಿಗೆ ಕಾರಣರದಾ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಮನವಿ ನೀಡಿದ ಸಂದರ್ಭದಲ್ಲಿ ಜನವಾದಿ ಮಹಿಳಾ ಸಂಘಟನೆಯ ಬೆಳ್ತಂಗಡಿ ತಾಲೂಕು ಅಧ್ಯಕ್ಷೆ ಕಿರಣಪ್ರಭಾ, ಸಹಕಾರ್ಯದರ್ಶಿ ಜಯಶ್ರೀ, ಸದಸ್ಯರಾದ ಮುನೀರ ಮತ್ತಿತರರು ಉಪಸ್ಥಿತರಿದ್ದರು.
