


ಬೆಳ್ತಂಗಡಿ; ಉಜಿರೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿಬ ಮುಂಡಾಜೆ ಗ್ರಾಮದ ಕಾಪು ಎಂಬಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು ಐದಕ್ಕೂ ಹೆಚ್ಚು ವಿದ್ಯುತ್ ಕಂಬಗಳು ರಸ್ತೆಗೆ ಮುರಿದುಬಿದ್ದಿವೆ. ಮರವು ಚಲಿಸುತ್ತಿದ್ದ ಜೀಪಿನ ಮೇಲೆ ಬಿದ್ದಿದ್ದು, ಓರ್ವ ಗಾಯಗೊಂಡಿರುವುದಾಗಿ ತಿಳಿದು ಬಂದಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರಸ್ತುತ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಘಟನೆಯಲ್ಲಿ ವಾಹನಗಳ ಮೇಲೆ ಮರ ಹಾಗೂ ವಿದ್ಯುತ್ ಕಂಬಗಳು ಬಿದ್ದಿರುವುದಾಗಿ ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ
