


ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪವಿರುವ ದಟ್ಟ ಅರಣ್ಯದ ನಡುವೆ ಎಸ್.ಐ.ಟಿ ತಂಡದ ಅಧಿಕಾರಿಗಳು ಸಾಕ್ಷಿ ದೂರುದಾರನ್ನನ್ನು ಕರೆದೊಯ್ದಿದ್ದು ಸ್ಥಳ ಪರಿಶೀಲನೆ ನಡೆಸುತ್ತುದ್ದಾರೆ.
ಮಧ್ಯಾಹ್ನದ ವೇಳೆ ಬಿಗು ಪೊಲೀಸ್ ಬಂದೋಬಸ್ತ್ ನಲ್ಲಿ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟಕ್ಕೆ ಸಾಕ್ಷಿ ದೂರುದಾರನನ್ನು ಕರೆತಂದರು.
ಸ್ನಾನಘಟ್ಟದ ಸಮೀಪವೇ ಒಂದು ಸ್ಥಳವನ್ನು ಆತ ತೋರಿಸಿದ್ದು ಅದನ್ನು ಗುರುತಿಸಿ ಟೇಪ್ ಹಾಕಿದ್ದಾರೆ. ಬಳಿಕ ಇದೀಗ ತಂಡ ದಟ್ಟ ಅರಣ್ಯದಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಕಳೆದ ಸುಮಾರು ಒಂದು ಗಂಟೆಯದ ಅರಣ್ಯದಲ್ಲಿ ಪರಿಶೀಲನಾ ಕಾರ್ಯ ನಡೆಯುತ್ತಿದೆ.
ಈ ಕಾಡಿನ ಒಳಗೆ ಆತ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಅನುಮಾನವಿದ್ದು ಇಲ್ಲಿ ಅಧಿಕಾರಿಗಳು ಅದನ್ನು ಗುರುತಿಸುವ ಕಾರ್ಯ ಮಾಡುತ್ತಿದ್ದಾರೆ. ಇಲ್ಲಿನ ಸ್ಥಳ ಪರಿಶೀಲನೆ ಇನ್ನಷ್ಟು ಹೊತ್ತು ಮುಂದುವರಿಯುವ ನಿರೀಕ್ಷೆಯಿದೆ.
ಈತ ಇಂದು ನೀಡುವ ಮಾಹಿತಿ ಹಾಗೂ ಗುರುತಿಸುವ ಸ್ಥಳಗಳನ್ನು ಪೊಲೀಸರು ಮಾರ್ಕ್ ಮಾಡುತ್ತಿರುವುದಾಗಿ ಮಾಹಿತಿ ಲಭ್ಯವಾಗಿತ್ತಿದೆ. ಆರಂಭದ ಹಂತದಲ್ಲಿ ಸ್ಥಳಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದ್ದು ಮುಂದಿನ ಹಂತದಲ್ಲಿ ಮೃತದೇಹಗಳನ್ನು ಹೊರತೆಗೆಯುವ ಕಾರ್ಯಕ್ಕೆ ಮುಂದಾಗಲಿದ್ದಾರೆ ಎಂದು ತಿಳಿದು ಬಂದಿದೆ.
