


ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಇದೀಗ ಸ್ಪೋಟಕ ತಿರುವು ಪಡೆದುಕೊಂಡಿದೆ ಕೊನೆಗೂ ತಲೆಬುರುಡೆ ಎಲ್ಲಿಂದ ತರಲಾಗಿದೆ ಎಂಬುದು ಬಹಿರಂಗಗೊಂಡಿದ್ದು ನೇತ್ರಾವತಿ ಸ್ನಾನಘಟ್ಟದ ಸಮೀಪದ ಅರಣ್ಯದಲ್ಲಿ ಸೌಜನ್ಯ ಮಾವ ವಿಠಲ ಗೌಡ ಹಾಗೂ ಜಯಂತ್ ಅವರೊಂದಿಗೆ ಬಂದ ಎಸ್.ಐ.ಟಿ ತಂಡಬ ತಲೆಬುರುಡೆಯ ಸ್ಥಳಮಹಜರು ನಡೆಸಿದ್ದಾರೆ.
ಇಡೀ ಪ್ರಕರಣದಲ್ಲಿ ಈ ಬುರುಡೆಯ ಸುತ್ತ ಹಲವು ಕತೆಗಳನ್ನಿ ಹೆಣೆಯಲಾಗಿತ್ತು. ಆದರೆ ಅದೆಲ್ಲದಕ್ಕೂ ಇದೀಗ ಕೊನೆಯಾಗಿದ್ದು ತಲೆಬುರುಡೆಯನ್ನು ಇದೇ ಸ್ಥಳದಿಂದ ತೆಗೆದಿರುವುದು ತನಿಖೆಯಿಂದ ಬಹಿರಂಗ ಗೊಂಡಿದೆ
ಈ ಪ್ರಕರಣದಲ್ಲಿ ಬುರುಡೆಯನ್ನು ಮೊದಲು ನೋಡಿರುವ ವಿಠಲ ಗೌಡ ಹಾಗೂ ಜಯಂತ್ ಅವರೊಂದಿಗೆ ಸ್ಥಳಕ್ಕೆ ತೆರಳಿದ ಎಸ್.ಐ.ಟಿ ಅಧಿಕಾರಿಗಳು ಸ್ಥಳಮಹಜರು ನಡೆಸಿದ್ದಾರೆ. ಶನಿವಾರ ರತ್ರಿಯ ವೇಳೆ ನೇತ್ರಾವತಿ ಸ್ನಾನಘಟ್ಟದ ಬದಿಯಲ್ಲಿರುವ ಬಂಗ್ಲೆ ಗುಡ್ಡದಲ್ಲಿ ವಿಠಲಗೌಡ ಅವರೊಂದಿಗೆ ಆಗಮಿಸಿದ ಎಸ್.ಐ.ಟಿ ತಂಡ ಸ್ಥಳ ಮಹಜರು ನಡೆಸಿದ್ದಾರೆ.
