


ಬೆಳ್ತಂಗಡಿ; ಸೌಜನ್ಯ ಪ್ರಕರಣದ ಬಗ್ಗೆ ಸ್ನೇಹಮಯಿ ಕೃಷ್ಣನ್ ಎಂಬವರು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ದೂರು ನೀಡಿದ್ದು ಈ ದೂರನ್ನು ಧರ್ಮಸ್ಥಳ ಪೊಲೀಸರಿಗೆ ಕಳುಹಿಸಲಾಗಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.
ದೂರು ನೀಡಲು ಹೋಗುವ ಮೊದಲು ಬೆಳ್ತಂಗಡಿ ಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣನ್ ಸೌಜನ್ಯ ಪ್ರಕರಣದಲ್ಲಿ ಆಕೆಯ ಮಾವ ವಿಠಲ ಗೌಡ ಅವರೇ ಕೊಲೆಗಾರರಾಗಿರುವ ಬಗ್ಗೆ ಅನುಮಾನವಿದೆ ಈ ಬಗ್ಗೆ ಹಲವಾರು ದಾಖಲೆಗಳಿದ್ದು ಈ ದಾಖಲೆಗಳೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ದೂರು ನೀಡುವುದಾಗಿ ತಿಳಿಸಿದ್ದ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ದೂರನ್ನು ಧರ್ಮಸ್ಥಳ ಠಾಣೆಗೆ ಕಳುಹಿಸಿದ್ದಾರೆ.









