Home ರಾಜಕೀಯ ಸಮಾಚಾರ ಧರ್ಮಸ್ಥಳ ವಿರುದ್ದ ಅಪಪ್ರಚಾರ,ಷಡ್ಯಂತ್ರ  ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾರವರನ್ನು ಭೇಟಿ...

ಧರ್ಮಸ್ಥಳ ವಿರುದ್ದ ಅಪಪ್ರಚಾರ,ಷಡ್ಯಂತ್ರ  ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಿಯೋಗ.

77
0


ಬೆಳ್ತಂಗಡಿ;  ಧರ್ಮಸ್ಥಳದ ಷಡ್ಯಂತರದ ಬಗ್ಗೆ ಸೆಪ್ಟೆಂಬರ್ 08 ರಂದು ಬಿಜೆಪಿ ರಾಜ್ಯ ಅಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಇತರ ಮುಖಂಡರ ನಿಯೋಗ   ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಆಗುತ್ತಿರುವ ಅಪಪ್ರಚಾರ, ಷಡ್ಯಂತ್ರದ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆ  ನಡೆಸಿ ಕ್ರಮ ಕೈಗೊಳ್ಖಬೇಕಾಗಿ ವಿನಂತಿಸಿದರು.
ಈ ಸಂದರ್ಭದಲ್ಲಿ ರಾಜ್ಯ  ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ವಿಧಾನಪರಿಷತ್ ಪ್ರತಿಪಕ್ಷದ ನಾಯಕರದ ಛಲವಾದಿ.ಟಿ. ನಾರಾಯಣಸ್ವಾಮಿ, ವಿಧಾನಸಭಾ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ,ಸಂಸದರು ಮತ್ತು ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ,ಯಲಹಂಕ ಶಾಸಕರಾದ ಎಸ್.ಆರ್. ವಿಶ್ವನಾಥ್ ಮತ್ತು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here