Home ಅಪರಾಧ ಲೋಕ ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ನೋಟೀಸ್ ಅಂಟಿಸಿದ ಪೊಲೀಸರು. ಮೂರನೇ ನೋಟಿಸ್ ಜಾರಿ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ನೋಟೀಸ್ ಅಂಟಿಸಿದ ಪೊಲೀಸರು. ಮೂರನೇ ನೋಟಿಸ್ ಜಾರಿ

38
0

ಬೆಳ್ತಂಗಡಿ : ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಹಾಜರಾಗುವಂತೆ ಎರಡು ನೋಟಿಸ್ ಜಾರಿ ಮಾಡಿದ್ದರೂ ಈವರೆಗೆ ಹಾಜರಾಗದ ಕಾರಣ ಮತ್ತೆ ಸೆ.26 ರಂದು ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ಮೂರನೇ ನೋಟೀಸ್ ಜಾರಿ ಮಾಡಿದ್ದು ಸೆ.29 ಕ್ಕೆ ವಿಚಾರಣೆಗೆ ಹಾಜರಾಗುಂತೆ ನೋಟಿಸ್ ಅನ್ನು ತಿಮರೋಡಿ ಅವರ ಮನೆಯ ಗೋಡೆಗೆ ಅಂಟಿಸಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಅವರು ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಜಾಮೀನಿಗಾಗಿ ಮಂಗಳೂರಿನ ಸೆಷನ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು ಅದರ ವಿಚಾರಣೆ ಸೆ27ರಂದು ನಡೆಯಲಿದೆ. ಇಲ್ಲಿ ಅವರಿಗೆ ನಿರೀಕ್ಷಣಾ ಜಾಮೀನಿನ ಮೇಲೆ ತೀರ್ಪು ಬರುವ ವರೆಗೆ ಅವರು ಠಾಣೆಗೆ ಹಾಜರಾಗುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ.
ಮಹೇಶ್ ಶೆಟ್ಟಿ ತಿಮರೋಡಿ ಪ್ರಕರಣ ದಾಖಲಾದ ಬಳಿಕ ಕಳೆದ ಹತ್ತು ದಿನಗಳಿಂದ ತಲೆ ಮರೆಸಿಕೊಂಡಿದ್ದಾರೆ.

ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಹೊರಡಿಸಿದ್ದು ಮಹೇಶ್ ಶೆಟ್ಟಿ ಅವರನ್ನು ಇಕ್ಕಟ್ಟಿಗೆ ಸಿಕುಕಿಸಿದೆ ಗಡಿಪಾರು ಆದೇಶವನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಗೆ ಹೋಗುವ ಅವಕಾಶವಿದ್ದು ಈ ಬಗ್ಗೆಯೂ ಪ್ರಯತ್ನಗಳು ನಡೆಯುತ್ತಿರುವುದಾಗಿ ಮಾಹಿತಿಗಳು ಲಭ್ಯವಾಗುತ್ತಿದೆ.

LEAVE A REPLY

Please enter your comment!
Please enter your name here