Home ಅಪರಾಧ ಲೋಕ ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ!   ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ!   ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

36
0

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ  ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 18-09-2025 ರಿಂದ 17-09-2026 ರವರೆಗೆ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು ಪುತ್ತೂರು ಎ.ಸಿ ಸ್ಟೆಲ್ಲಾ ವರ್ಗಿಸ್ ಅವರ ಆದೇಶದ ವಿರುದ್ಧ ಮಧ್ಯಂತರ ತಡೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಲು ತಮ್ಮ ವಕೀಲರ ಮೂಲಕ ಸೆ.29 ರಂದು ಹೈಕೋರ್ಟ್ ನಲ್ಲಿ ರಾಜ್ಯ ಸರಕಾರ, ಪುತ್ತೂರು ಎಸಿ, ಡಿವೈಎಸ್ಪಿ, ಬೆಳ್ತಂಗಡಿ ಇನ್ಸ್‌ಪೆಕ್ಟರ್ ಪ್ರತಿವಾದಿಯಾಗಿಸಿ ಅರ್ಜಿ ಸಲ್ಲಿಕ್ಕೆ ಮಾಡಿದ್ದಾರೆ.

ಹೈಕೋರ್ಟ್ ನ ಸಿ.ಎಂ.ಪೂನಚ ಅವರ ಏಕಸದಸ್ಯ ಪೀಠದ ಎದುರು ಮಧ್ಯಂತರ ತಡೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು ಸೆ.30 ರಂದು ನ್ಯಾಯಪೀಠದಲ್ಲಿ ವಿಚಾರಣೆಗೆ ಬರಲಿದೆ.

LEAVE A REPLY

Please enter your comment!
Please enter your name here