Home ಅಪರಾಧ ಲೋಕ ಉಪ್ಪಿನಂಗಡಿ; ವಿಧ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಇಬ್ಬರ ಬಂಧನ

ಉಪ್ಪಿನಂಗಡಿ; ವಿಧ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಇಬ್ಬರ ಬಂಧನ

0
47

ಉಪ್ಪಿನಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾರಿಯ ಆರೋಗ್ಯ ವಿಚಾರಿಸಲು ಆತನ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಮೆರೆದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ತಾಫ ಪೆರಿಯಡ್ಕ ಹಾಗೂ ಮುಸ್ತಾಫ ಬಂಧಿತ ಆರೋಪಿಗಳು

ಪ್ರಕರಣದ ವಿವರ

ದಿನಾಂಕ 06-11-2025 ರಂದು ಕಾಲೇಜೊಂದರ 09 ವಿದ್ಯಾರ್ಥಿ/ವಿಧ್ಯಾರ್ಥಿನಿಯರು ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ತಮ್ಮ ಸಹಪಾಠಿಯ ಆರೋಗ್ಯ ವಿಚಾರಿಸಲು ಅಂತಾ ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್ ನಲ್ಲಿ ಬಂದ ಆರೋಪಿಗಳಾದ ಮುಸ್ತಾಫ ಪೆರಿಯಡ್ಕ ಹಾಗೂ ಮುಸ್ತಾಫ ಅವರು ವಿದ್ಯಾರ್ಥಿಗಳ ಹೆಸರು, ಕಾಲೇಜ್ ಹಾಗೂ ಊರಿನ ಬಗ್ಗೆ ವಿಚಾರಿಸಿ, ವಿಭಿನ್ನ ಕೋಮುಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಜೊತೆಗೆ ತೆರಳುತ್ತಿರುವ ಬಗ್ಗೆ ತಕರಾರು ತೆಗೆದು, ಕೋಮುದ್ವೇಷದಿಂದ ಅವಾಚ್ಯವಾಗಿ ಬೈದು, ಓರ್ವ ವಿಧ್ಯಾರ್ಥಿಗೆ ಹಲ್ಲೆ ನಡೆಸಿರುತ್ತಾರೆ. ಈ ಬಗ್ಗೆ ಉಪ್ಪಿನಂಗಡಿ 0.5, 107/2025, ໐: 126(2), 352, 351(2), 115(2), 353(2) 22 2023 03 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು ತನಿಖೆ ಮುಂದುವರಿದಿದೆ.

NO COMMENTS

LEAVE A REPLY

Please enter your comment!
Please enter your name here