Home ಸ್ಥಳೀಯ ಸಮಾಚಾರ ಪಂಚ ಗ್ಯಾರಂಟಿ ಯೋಜನೆ; ಪದ್ಮನಾಭ ಸಾಲಿಯಾನ್ ಅಧ್ಯಕ್ಷತೆಯಲ್ಲಿ ತಾಲೂಕು ಅನುಷ್ಠಾನ ಸಮಿತಿ ಸಭೆ

ಪಂಚ ಗ್ಯಾರಂಟಿ ಯೋಜನೆ; ಪದ್ಮನಾಭ ಸಾಲಿಯಾನ್ ಅಧ್ಯಕ್ಷತೆಯಲ್ಲಿ ತಾಲೂಕು ಅನುಷ್ಠಾನ ಸಮಿತಿ ಸಭೆ

21
0

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿಯವರಾದ ಭವಾನಿಶಂಕರ್ ಎನ್. ಇವರ ಉಪಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಸಮಿತಿಯ ಕಛೇರಿಯಲ್ಲಿ ನಡೆಯಿತು. ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಉದ್ಯೋಗ ವಿನಿಮಯ ಕಛೇರಿಗಳ ಮೂಲಕ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಲ್ಲಿ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಮತ್ತು ಸವಲತ್ತು ಪಡೆದ ಫಲಾನುಭವಿಗಳ ಸಂಖ್ಯೆಯನ್ನು ಪರಿಶೀಲಿಸಲಾಯಿತು. ಸರ್ಕಾರದ ಪಂಚಯೋಜನೆಗಳ ಸವಲತ್ತುಗಳನ್ನು ಪಡೆಯಲು ಬಾಕಿ ಇರುವ ಫಲಾನುಭವಿಗಳ ಅರ್ಜಿಗಳನ್ನು ವಿಲೇವಾರಿಗೊಳಿಸುವ ಕುರಿತು, ಚರ್ಚಿಸಲಾಯಿತು. ಗೃಹಜ್ಯೋತಿ ಯೋಜನೆಯಡಿ ಉಜಿರೆ ಉಪವಿಭಾಗದಲ್ಲಿ 2025ರ ಅಕ್ಟೋಬರ್ ತಿಂಗಳವರೆಗೆ 25724 ಕುಟುಂಬಗಳಿಗೆ 35,21,88,750/- ರೂ, ಬೆಳ್ತಂಗಡಿ ಉಪವಿಭಾಗದಲ್ಲಿ 2025ರ ಅಕ್ಟೋಬರ್ ತಿಂಗಳವರೆಗೆ 44861 ಕುಟುಂಬಗಳಿಗೆ 104,09,84,789/-ರೂ ಸಹಾಯಧನ ದೊರತಿದ್ದು ತಾಲೂಕಿಗೆ ಈವರೆಗೆ 139,31,73,539/- ರೂ ಸಹಾಯಧನ ದೊರೆತಿರುವುದಾಗಿ ಅಧಿಕಾರಿಗಳು ತಿಳಿಸಿದರು. ಗೃಹಲಕ್ಷ್ಮೀ ಯೋಜನೆಯಡಿ ಪ್ರಕೃತ 58833 ಫಲಾನುಭವಿಗಳಿದ್ದು, ಆಗಸ್ಟ್-2023 ರಿಂದ ಈವರೆಗೆ 240,91,38,000/-ರೂ ಸಹಾಯಧನ ದೊರೆತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು. ಅನ್ನ ಭಾಗ್ಯ ಯೋಜನೆಯಡಿ 45,613 ಪಡಿತರ ಚೀಟಿದಾರರಿಗೆ ಪ್ರತೀ ಕೆ.ಜಿ.ಗೆ ರೂಪಾಯಿ 34.00 ರಂತೆ 55,49,55,540.00 ಗಳ ಅನುದಾನವು ಆಗಸ್ಟ್-2023 ರಿಂದ ಆಗಸ್ಟ್-2025ರವರೆಗೆ ತಾಲೂಕಿನ ಪಡಿತರ ಚೀಟಿದಾರರಿಗೆ ದೊರೆತಿರುವುದಾಗಿ ಅಧಿಕಾರಿಗಳು ಸಭೆಗೆ ವಿವರ ನೀಡಿದರು. ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 6362 ಫಲಾನುಭವಿಗಳಿದ್ದು, ಬೆಳ್ತಂಗಡಿ ತಾಲೂಕಿನ 883 ಅಭ್ಯರ್ಥಿಗಳಿಗೆ ಆಗಸ್ಟ್-2023 ರಿಂದ ಈ ತಿಂಗಳವರೆಗೆ 2,14,59,000.00 ರೂ.ಗಳನ್ನು ಸರ್ಕಾರದಿಂದ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಶಕ್ತಿ ಯೋಜನೆಯಡಿ ಧರ್ಮಸ್ಥಳ ಘಟಕದ ಬಸ್ಸುಗಳ ಮೂಲಕ 2025ರ ಅಕ್ಟೋಬರ್ ತಿಂಗಳಲ್ಲಿ 777078 ಮಹಿಳಾ ಪ್ರಯಾಣಿಕರು ಯೋಜನೆಯ ಸವಲತ್ತನ್ನು ಪಡೆದಿದ್ದು, ಜೂನ್-2023 ರಿಂದ ಈವರೆಗೆ 18376179 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, 83,93,21,686/-ರೂ. ಬಿಡುಗಡೆಯಾಗಿರುವುದಾಗಿ ಇಲಾಖಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾದ ಶೇಖರ್ ಕುಕ್ಕೇಡಿ, ತಾಲೂಕು ಅನುಷ್ಟಾನ ಸಮಿತಿಯ ಸದಸ್ಯರಾದ ಶ್ರೀಮತಿ ವಂದನಾಕುಮಾರಿ, ಶ್ರೀಮತಿ ಸೌಮ್ಯ ಲಾಯಿಲ, ಶ್ರೀಮತಿ ಮೆರಿಟಾ ಪಿಂಟೋ, ವಾಸುದೇವ ರಾವ್, ವಿಜಯಗೌಡ ಬೆಳಾಲು, ಕೇಶವ ನಾಯ್ಕ, ಶರೀಫ್ ಸಬರಬೈಲ್, ಕೆ.ನೇಮಿರಾಜ್ ಕಿಲ್ಲೂರು, ಶ್ರೀಪತಿ ಉಪಾಧ್ಯಾಯ, ಅಬ್ದುಲ್‌ ಸಲಾಂ, ಹಕೀಂ ಕೊಕ್ಕಡ, ಸತೀಶ್‌ ಹೆಗ್ಡೆ ವೇಣೂರು ಮತ್ತು ವೀರಪ್ಪ ಮೊಯ್ಲಿ ಹಾಗೂ ನೋಡೆಲ್ ಅಧಿಕಾರಿಯಾದ ಹೆರಾಲ್ಡ್ ಸ್ವಿಕ್ವೇರಾ ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ತಾಲೂಕು ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಧರ್ಮಸ್ಥಳ ಘಟಕದ ಘಟಕ ವ್ಯವಸ್ಥಾಪಕರು ನಿರಂತರ ಗೈರು ಹಾಜರಾಗುತ್ತಿರುವುದನ್ನು ಮತ್ತು ಸಭೆಗಳಲ್ಲಿ ಕೈಗೊಂಡ ನಿರ್ಣಯಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯ ಧೋರಣೆ ತಾಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲು ತೀರ್ಮಾನಿಸಲಾಯಿತು. ಅರ್ಹ ಫಲಾನುಭವಿಗಳು BPL ಪಡಿತರ ಚೀಟಿಯನ್ನು ಪಡೆಯಲು ವಂಚಿತರಾಗದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು. ಜನಸ್ಪಂದನ ಸಭೆಗಳಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ದೊರೆಯುತ್ತಿರುವ ಸವಲತ್ತುಗಳ ಮಾಹಿತಿಯನ್ನು ಇಲಾಖಾಧಿಕಾರಿಗಳು ನೀಡದಿರುವುದನ್ನು ಚರ್ಚಿಸಲಾಯಿತು, ಇನ್ನು ಮುಂದಿನ ದಿನಗಳಲ್ಲಿ ನಡೆಯುವ ಜನಸ್ಪಂದನ ಸಭೆಗಳಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಮತ್ತು ಈವರೆಗೆ ಸರ್ಕಾರದಿಂದ ತಾಲೂಕಿಗೆ ಬಿಡುಗಡೆಯಾದ ಅನುದಾನದ ವಿವರವನ್ನು ಕಡ್ಡಾಯವಾಗಿ ವಿವರಿಸುವಂತೆ ತಿಳಿಸಲಾಯಿತು.

LEAVE A REPLY

Please enter your comment!
Please enter your name here