
ಬೆಳ್ತಂಗಡಿ: ಉಜಿರೆ ಗ್ರಾಮದ ಪಲ್ಲದಳಿಕೆ ಎಂಬಲ್ಲಿ ಆರೋಗ್ಯ ಸಮಸ್ಯೆಯಿಂದಬಳಲುತ್ತಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ 25 ರಂದು ಸಂಭವಿಸಿದೆ.
ಮೃತ ಯುವಕ ಸ್ಥಳೀಯ ನಿವಾಸಿ ಗುರು ಪ್ರಸಾದ್ ಎಂಬಾತನಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ. ಈ ಬಗ್ಗೆ ಮೃತನ ಸಹೋದರ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಗುರುಪ್ರಸಾದ್ ಕಳೆದ ಕೆಲವು ವರ್ಷಗಳಿಂದ ಕಾಲುಗಳ ನರದಲ್ಲಿ ರಕ್ತ ಹೆಪ್ಪುಕಟ್ಟುವ ಸಮಸ್ಯೆಯಿಂದ ಬಳಲುತ್ತಿದ್ದು ಇತ್ತೀಚೆಗೆ ನೋವು ಹೆಚ್ಚಾಗಿ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದು ಇದೇ ಕಾರಣಕ್ಕೆ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ದೂರು ನೀಡಿದ್ದಾರೆ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.









