
ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಹಾಗೂ ರಾಜ್ಯದ ರಬ್ಬರ್ ವ್ಯವಹಾರ ಮಾಡುವ ಸಹಕಾರ ಸಂಘಗಳ ಆಶ್ರಯದಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ ನ 29 ರಂದು ಉಜಿರೆಯ ಶ್ರೀಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು.
ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ರಬ್ಬರು ಬೆಳೆಗಾರರ ಸಮ್ಮೇಳನ ಉದ್ಘಾಟಿಸಿ ಮಾತನಾಡಿ ದ.ಕ ಜಿಲ್ಲೆಯ ಕೃಷಿಕರ ಜೊತೆ ನಾವು ನಿಲ್ಲುತ್ತೇವೆ, ರಬ್ಬರ್ ಕೃಷಿಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ರಬ್ಬರ್ ಮಂಡಳಿ ಸದಸ್ಯ ಮುಳಿಯ ಕೇಶವ ಭಟ್ ಗುತ್ತಿಗಾರು, ಕರ್ನಾಟಕ ರಾಜ್ಯ ರಬ್ಬರು ವ್ಯಾಪಾರಿಗಳ ಸಂಘದ ಅಧ್ಯಕ್ಷ ಶಾಜಿ ಯು.ವಿ., ಎಸ್‌ಕೆಡಿಆರ್‌ಡಿಪಿ ಬಿ.ಸಿ. ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ಮತ್ತಿತರರು ಉಪಸ್ಥಿತರಿದ್ದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಶ್ರೀಧರ ಜಕ ಬಿಢೆ ವಹಿಸಿದ್ದರು. ಹಿರಿಯ ಅರ್ಥ ಶಾಸ್ತ್ರಜ್ಞರಾದ ಡಾ.ವಿಗ್ನೇಶ್ ವರ್ಮುಡಿ ದಿಕ್ಸೂಚಿ ಭಾಷಣ ಮಾಡಿ ರಬ್ಬರ್ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ ಕೃಷಿಕರಿಗೆ ಸರಕಾರಗಳ ಬೆಂಬಲ ಯಾಕೆ ಅಗತ್ಯವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಬ್ಬರು ಸೊಸೈಟಿ ಅಧ್ಯಕ್ಷ ಶ್ರೀಧರ್ ಜಿ ಭಿಡೆ ಸ್ವಾಗತಿಸಿದರು. ರಬ್ಬರ್ ಸೊಸೈಟಿ ಉಪಾಧ್ಯಕ್ಷ, ಸಮ್ಮೇಳನ ಸಂಯೋಜಕ ಅನಂತ ಭಟ್ ಮಚ್ಚಿಮಲೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ, ಕಾರ್ಯದರ್ಶಿ ವಿಜಯ ಕೃಷ್ಣ ಸುಳ್ಯ, ಉಪಾಧ್ಯಕ್ಷರುಗಳಾದ ನಿತ್ಯಾನಂದ ಮುಂಡೋಡಿ ಸುಳ್ಯ, ಪ್ರಸಾದ್ ಕೌಶಲ್ ಶೆಟ್ಟಿ, ಗೋಪಾಲಕೃಷ್ಣ ಭಟ್, ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.









