
ಬೆಳ್ತಂಗಡಿ: ಪಡಂಗಡಿ ಗ್ರಾಮದ ಕಲ್ಬೊಟ್ಟು ನಿವಾಸಿ ಎಲೆಕ್ಟ್ರಿಷಿಯನ್ ಸುರೇಶ್ ಪೂಜಾರಿ (40 ವರ್ಷ) ಡಿ1ರಂದು ವಿಷ ಸೇವಿಸಿ
ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಹಲವು ವರ್ಷಗಳಿಂದ ಎಲೆಕ್ಟ್ರಿಷಿನ್ ಆಗಿ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಯಾವ ಕಾರಣಕ್ಕೆ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೋಲೀಸರು ಸ್ಥಳಕ್ಕೆ ಆಗಮಿಸಿ ತನಿಖೆಯಿಂದ ತಿಳಿದು ಬರಬೇಕಾಗಿದೆ.
ಮೃತರು ತಂದೆ,ತಾಯಿ, ಪತ್ನಿ ಎರಡು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.




