

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಆರು ಮಂದಿಯ ವಿರುದ್ಧ ವರದಿ ಸಲ್ಲಿಸಿರುವ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯ ವಿಚಾರಣೆ ನಡೆಸಿದ್ದು. ಮುಂದಿನ ಶನಿವಾರಕ್ಕೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.
ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್.ಐ.ಟಿ ಅಧಿಕಾರಿಗಳು ನ.20 ಕ್ಕೆ (Perjury Report) u/s 215 ಅಡಿಯಲ್ಲಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್.ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ವಿರುದ್ಧ 3,923 ಪುಟಗಳ ವರದಿಯನ್ನು ಸಲ್ಲಿಸಿದ್ದರು.
ಈ ಬಗ್ಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಹೆಚ್ ಅವರ ಮುಂದೆ ಡಿ.2 ರಂದು ಎಸ್ಐಟಿ ಪರ ಸರಕಾರಿ ವಕೀಲರಾದ ದಿವ್ಯರಾಜ್ ವಾದ ಮಾಡಿದರು.
ವಾದದಲ್ಲಿ 39/2025 ಅಪರಾಧ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ತನಿಖೆ ಮುಗಿಯದ ಕಾರಣದಿಂದ ಚಾರ್ಜ್ ಶೀಟ್ ಬದಲು BNS u/s 215 ಅಡಿಯಲ್ಲಿ ವರದಿ ನೀಡಿದ್ದು.ಈ ವರದಿಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಆರೋಪಿಗಳ ವಿರುದ್ದ ಎಫ್ಎಸ್ಎಲ್ ವರದಿ ಮತ್ತು ಇತರ ದಾಖಲೆಗಳ ಮೂಲಕ ವಿವರಿಸಲಾಗಿದೆ.ಇದರಿಂದ ನ್ಯಾಯಾಲಯ ಕಾನೂನು ಕ್ರಮ ಕೈಗೊಳ್ಳುವ ಅವಕಾಶವಿದೆ. ಎಂದು ಹಲವು ಅಂಶಗಳನ್ನು ಮುಂದಿಟ್ಟು ಸರಕಾರಿ ವಕೀಲರು ನ್ಯಾಯಾಲಯಕ್ಕೆ ವಿವರಿಸಿದರು. ಬಳಿಕ ಸರಕಾರಿ ವಕೀಲರು ಮುಂದಿನ ವಿಚಾರಣೆಗೆ ಸಮಯಾವಕಾಶ ಕೇಳಿದ್ದು. ಈ ಬಗ್ಗೆ ನ್ಯಾಯಲಯ ಮುಂದಿನ ಡಿ.6 ಕ್ಕೆ ನ್ಯಾಯಾಧೀಶರು ವಿಚಾರಣೆ ಮುಂದೂಡಿದ್ದಾರೆ.




