

ಬೆಳ್ತಂಗಡಿ :ಉಜಿರೆಯಲ್ಲಿ ಸ್ಕೂಟರ್ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿ ಘಟನೆ ಸಂಭವಿಸಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ನಿನ್ನಿಕಲ್ಲು ರಸ್ತೆಯಲ್ಲಿ ಡಿ.1 ಮಧ್ಯಾಹ್ನ ಸ್ಕೂಟರ್ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ಸವಾರ ಉಜಿರೆ ಗ್ರಾಮದ ಪಕ್ಕಿಂಜೆ ನಿವಾಸಿ ಜಯ ಗೌಡ(40) ಚಿಕಿತ್ಸೆ ಫಲಿಸದೆ ಡಿ.3 ರಂದು ಸಂಜೆ ಮಂಗಳೂರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.




