Home ಅಪರಾಧ ಲೋಕ ದ್ವೇಷ ಭಾಷಣ ಕಲ್ಲಡ್ಕ ಪ್ರಭಾಕರ ಭಟ್ ಗೆ ಜಾಮೀನು ಮಂಜೂರು

ದ್ವೇಷ ಭಾಷಣ ಕಲ್ಲಡ್ಕ ಪ್ರಭಾಕರ ಭಟ್ ಗೆ ಜಾಮೀನು ಮಂಜೂರು

25
0

ಪುತ್ತೂರು: ದ್ವೇಷ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್.ಎಸ್. ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪುತ್ತೂರು ತಾಲೂಕಿನ ಉಪ್ಪಳಿಗೆ ಎಂಬಲ್ಲಿ ಅ.22ರಂದು ನಡೆದ ದೀಪೋತ್ಸವ ಮತ್ತು ಗೋಪೂಜೆಯಲ್ಲಿ ಭಾಗವಹಿಸಿದ್ದ ಕಲ್ಲಡ್ಕ ಪ್ರಭಾಕರ ಭಟ್ ಕೋಮು ಪ್ರಚೋದನಾತ್ಮಕವಾಗಿ ಭಾಷಣ ಮಾಡಿರುವ ಬಗ್ಗೆ ಈಶ್ವರಿ ಪದ್ಮುಂಜ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮನೆಗೆ ನೋಟೀಸ್ ಜಾರಿಗೊಳಿಸಿದ್ದರು. ಬಳಿಕದ ಬೆಳವಣಿಗೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅ.27ರಂದು ನಡೆದ ವಿಚಾರಣೆಯಲ್ಲಿ ನ್ಯಾಯಾಲಯವು ಬಲವಂತದ ಕ್ರಮ ತೆಗೆದುಕೊಳ್ಳದಂತೆ ಮಧ್ಯಂತರ ಆದೇಶ ನೀಡಿ ಪೂರ್ಣ ವಿಚಾರಣೆಯನ್ನು ಅ.29ಕ್ಕೆ ಮುಂದೂಡಿತ್ತು. ಅ.29ರಂದು ದೂರುದಾರೆ ಈಶ್ವರಿ ಪದ್ಮುಂಜ ಅವರ ಪರ ವಕೀಲರು
ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ಬಿಎನ್‌ಎಸ್‌ಎಸ್ ಸೆಕ್ಷನ್ 338, 339 ಅಡಿ ವಾದ ಮಂಡಿಸಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು. ಅಂದು ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಹಲವು ಬಾರಿ ಮುಂದೂಡಿತ್ತು. ಇದೀಗ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here