ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸೇವಾಪಾಕ್ಷಿಕ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 30 ರಂದು ನಡೆದ ಕಾರ್ಯಕ್ರಮದಲ್ಲಿ ರಕ್ತದಾನ ನೀಡುವ ಮೂಲಕ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ...
ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ದ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಸೆ30ರಂದು ಮಂಗಳೂರಿನ ಪ್ರಿನ್ಸಿಪಲ್ ಡಿಸ್ಟ್ರಿಕ್ಟ್ ಹಾಗೂ ಸೆಕ್ಷನ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಅ.4 ಕ್ಕೆ ಮುಂದೂಡಲಾಗಿದೆ.ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರಿ ವಕೀಲರು ಇಂದು ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಸಿದರು.ಇದಾದ ಬಳಿಕ ಮಹೇಶ್ ಶೆಟ್ಟಿ ಪರ ವಕೀಲರು ವಾದ...
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ನೇತ್ರಾವತಿ ಸ್ನಾನಘಟ್ಟದ ಸಮೀಪ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮಂಗಳವಾರ ಮತ್ತೆ ಆಗಮಿಸಿ ಇಲ್ಲಿನ ಅರಣ್ಯದಲ್ಲಿ ಪರಿಶೀಲನೆ ಆರಂಭಿಸಿದ್ದಾರೆ . ಎಸ್.ಐ.ಟಿ ಅಧಿಕಾರಿಗಳ ಆಗಮನ ಕುತೂಹಲಕ್ಕೆ ಕಾರಣವಾಗಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು PWD ಇಂಜಿನಿಯರ್ ಜೊತೆಯಲ್ಲಿ ಸೆ.30 ರಂದು ಸಂಜೆ...
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣವೇದಿಕೆಯ ಸ್ಥಾಪಕಾಧ್ಯಕ್ಷ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶದಲ್ಲಿ ಹೈಕೋರ್ಟ್ ಅ8ರ ವರೆಗೆ ಬಲವಂತದ ಕ್ರಮ ಬೇಡ ಆದೇಶ ನೀಡಿರುವುದಾಗಿ ತಿಳಿದು ಬಂದಿದೆ ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಿಚಾರಣೆ ನಡೆದು ಅ. 8ರವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ನ್ಯಾಯಾಲಯವು ಸೂಚಿಸಿದ್ದು...
ಬೆಳ್ತಂಗಡಿ:ಉಚ್ಚಿಲದಲ್ಲಿ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಮಾಲಾಡಿ ಕೊಲ್ಪೆದ ಬೈಲು ನಿವಾಸಿ ರಮೇಶ್ ಹೆಗ್ಡೆ ಸ್ಥಳದಲ್ಲೇ ಮೃತಪಟ್ಟ ಘಟನೆ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ
ಮೃತ ಬೈಕ್ ಸವಾರನ ತಲೆ ಜಜ್ಜಿ ಹೋಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ....
ಚಾರ್ಮಾಡಿ : ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅರ್ಚಕರಾದ ಮಧುಸೂಧನ್ ರಾವ್ ಪೌರೋಹಿತ್ಯದಲ್ಲಿ ಶ್ರೀ ದೇವಿಗೆ ಸೆಪ್ಟೆಂಬರ್ 29 ರಂದು ಚಂಡಿಕಾ ಹೋಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರಕಾಶ್ ಹೊಸಮಠ, ದೇವಸ್ಥಾನದ ಪ್ರಧಾನ ಅರ್ಚಕರಾದ...
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ ದಾರುನ್ನೂರು ಎಜುಕೇಶನ್ ಸೆಂಟರ್, ಈ ಸಂಸ್ಥೆಯ ವತಿಯಿಂದ ನಡೆಸುತ್ತಿರುವ ಶಿಕ್ಷಣ ಸಂಸ್ಥೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗೆ ಒಂದು ಕೋಟಿ ಅನುದಾನ .ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮಂಜೂರು ಮಾಡಿರುವುದಾಗಿಮಂಜೂರಾಗಿರುವುದಾಗಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ
ಬೆಳ್ತಂಗಡಿ : ನೆರಿಯ ಪೆಟ್ರೋನೆಟ್ ಪೈಪ್ ಲೈನ್ ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ನಿವಾಸಿ ತಮ್ಮಯ್ಯ(35) ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಸೆ.28 ರಂದು ಮಂಗಳೂರು...
ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 18-09-2025 ರಿಂದ 17-09-2026 ರವರೆಗೆ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು ಪುತ್ತೂರು ಎ.ಸಿ ಸ್ಟೆಲ್ಲಾ ವರ್ಗಿಸ್ ಅವರ ಆದೇಶದ ವಿರುದ್ಧ ಮಧ್ಯಂತರ ತಡೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ...
ಬೆಳ್ತಂಗಡಿ: ದೈನಂದಿನ ಚಟುವಟಿಕೆಗಳ ಒತ್ತಡದಲ್ಲಿ ಜೀವನ ಸಾಗಿಸುತ್ತಿರುವ ಜನ ಸಾಮಾನ್ಯರ ಆರೋಗ್ಯದ ಕಾಳಜಿಯ ಬಗ್ಗೆ ಗಮನ ಹರಿಸಿ ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿರುವ ರಾಜಕೇಸರಿ ಸೇವಾ ಟ್ರಸ್ಟ್ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ ಹೇಳಿದರು. ಅವರು ಸರಕಾರಿ ಕಿರಿಯ .ಪ್ರಾಥಮಿಕ ಶಾಲೆ ನಾವೂರು...