ಬೆಳ್ತಂಗಡಿ; ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ರವಿವಾರ ತಡ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಕಾರ್ಕಳ ಹೆರ್ಮುಂಡೆ ನಿವಾಸಿ ಶಂಕರ ನಾರಾಯಣ ಭಟ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ...
ಬೆಳ್ತಂಗಡಿ : ಮನೆಯ ಕಪಾಟಿನಲ್ಲಿಟ್ಟಿದಚಿನ್ನಾಭರಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ಘಟನೆ ಜೂ.14 ರಂದು ಬೆಳ್ತಂಗಡಿಯ ರೆಖ್ಯಾದಲ್ಲಿ ಬೆಳಕಿಗೆ ಬಂದಿದೆ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಘಟನಾ ಸ್ಥಳಕ್ಕೆ ಧರ್ಮಸ್ಥಳ ಸಬ್ ಇನ್ಸೆಕ್ಟರ್ ಸಮರ್ಥ ಆರ್ ಗಾಣಿಗೇರ ಮತ್ತು ತಂಡ,ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದು.ಈ...
ಬೆಳ್ತಂಗಡಿ ಜಿಲ್ಲೆಯಾದ್ಯತ ಬಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿ ಸಲಾಗಿದೆ ನೀಡಿದೆ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್‌16 ಸೋಮವಾರ ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ.ಆರಂಭದಲ್ಲಿ ಜಿಲ್ಲೆಯ ಐದು ತಾಲೂಕುಗಳಿಗೆ ಮಾತ್ರ ರಜೆ ನೀಡಲಾಗಿತ್ತಿ. ಇಂದು ಸೋಮವಾರ ಬೆಳಗ್ಗೆ ಜಿಲ್ಲಾಧಿಕಾರಿಯವರು ಪರಿಷ್ಕೃತ ಆದೇಶ ಹೊರಡಿಸಿದ್ದು ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ...
ಬೆಳ್ತಂಗಡಿ; ಭಾರೀ ಮಳೆ ಹಿನ್ನಲೆಯಲ್ಲಿ ದ.ಕ ಜಿಲ್ಲೆಯ ಐದು ತಾಲೂಕುಗಳಿಗೆ ರಜೆ ನೀಡಿ ಜಿಲ್ಲಾಧಿ ಕಾರಿಯವರು ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿಲ್ಲ.ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮುಲ್ಕಿ ತಾಲೂಕುಗಳ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಅಕೌಂಟಿನಿಂದ ಎರಡು ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಂಘದ ಅಧ್ಯಕ್ಷರ ದೂರಿನಂತೆ ಇಬ್ಬರ ಸಿಬ್ಬಂದಿಗಳ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದಲ್ಲಿ...
ಬೆಳ್ತಂಗಡಿ : ವೇಶ್ಯಾವಟಿಕೆ ಚಟುವಟಿಕೆ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಜೂ‌.14 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಉಜಿರೆಯ ಶ್ರೀ ದುರ್ಗಾ ಲಾಡ್ಜ್ ನಲ್ಲಿ ವೇಶ್ಯಾವಟಿಕೆ ನಡೆಸಲು ಯುವತಿಯನ್ನು ಕರೆತಂದಿದ್ದು ಬಯಲಾಗಿದೆ. ಉಜಿರೆ ಬಸ್...
ಮಂಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಭಾನುವಾರವೂ ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ.ಶನಿವರಾ ರಾತ್ರಿಯೂ ಭಾರೀ ಮಳೆ ಸುರಿದಿದ್ದು ಭಾನುವಾರವೂ ಇದು ಮುಂದುವರಿದಿರುವುದು ಆತಂಕ ಮೂಡಿಸಿದೆ.ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ (ಜೂ.15) ಭಾರೀ...
ಬೆಳ್ತಂಗಡಿ; ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸದಸ್ಯರ ಮಕ್ಕಳಿಗೆ ಎನ್.ಎಸ್.ಗೋಖಲೆ ಸಂಸ್ಮರಣ ವಿದ್ಯಾನಿಧಿ ವಿತರಣೆ ಕಾರ್ಯಕ್ರಮ ಶನಿವಾರ ಸಂಘದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಜರಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆನರಾ ಬ್ಯಾಂಕ್ ನ ನಿವೃತ್ತ ಅಧಿಕಾರಿ ವಾಸುದೇವ ಗೋಖಲೆ ಮಾತನಾಡಿ "ನಾವು ಎಲ್ಲೇ ಇದ್ದರೂ ನಮ್ಮ ಊರಿಗೆ ನಮ್ಮಿಂದಾದ ಸೇವೆಯನ್ನು ಪ್ರೀತಿ, ವಿಶ್ವಾಸದಿಂದ...
ಬೆಳ್ತಂಗಡಿ; ಕೊಯ್ಯೂರಿನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮೃತ ವ್ಯಕ್ತಿ ಕೊಯ್ಯೂರು ಗ್ರಾಮದ ದೇಲೋಡಿ ಮನೆ ನಿವಾಸಿ ಕಿಶನ್ ಕುಮಾರ್ ಎಂಬಾತನಾಗಿದ್ದಾನೆ.ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಈತನ ಮೃತದೇಹ ಜೂನ್ 12ರಂದು ಪತ್ತೆಯಾಗಿದೆ.ಈತ ವಿಪರೀತ ಸಾಲ ಮಾಡಿಕೊಂಡಿದ್ದ...
ಬೆಳ್ತಂಗಡಿ;  2025 ರ ಜೂನ್ 12 ರ ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ AI171 ರ  ಅಪಘಾತದ ಬಗ್ಗೆ ಬೆಳ್ತಂಗಡಿ ಧರ್ಮಪ್ರಾಂಥ್ಯವು ತೀವ್ರ ದುಃಖವನ್ನು ವ್ಯಕ್ತಪಡಿಸುತ್ತದೆ. 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ವಿಮಾನದ ದುರಂತದ  ಹೃದಯವಿದ್ರಾವಕ ಘಟನೆಯು ರಾಷ್ಟ್ರವನ್ನು ಶೋಕದಲ್ಲಿ ಮುಳುಗಿಸಿದೆ. "ಈ ವಿನಾಶಕಾರಿ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ...