ಬೆಳ್ತಂಗಡಿ. ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಾದ ಬಳಂಜ, ಬಂಗಾಡಿ, ಕಲ್ಮಂಜ, ಬಯಲು ನೆರಿಯಾ, ಮಲವಂತಿಗೆ ಕಜಕ್ಕೆ ಶಾಲೆಗಳಲ್ಲಿ ಕೊಠಡಿಗಳ ಅತಿ ಅಗತ್ಯತೆ ಇದ್ದು. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಹಾಗೂ ತಾಲೂಕಿನ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ವೇಣೂರು, ಶಾಲೆಗಳನ್ನು ಕೆಪಿಎಸ್ ( ಕರ್ನಾಟಕ ಪಬ್ಲಿಕ್ ಸ್ಕೂಲ್ )ಶಾಲೆಯಾಗಿ ಮೇಲ್ದರ್ಜೆಗೇರಿಸುವಂತೆ...
ಬೆಳ್ತಂಗಡಿ; ತಾಲೂಕಿನಾಧ್ಯಂತ ಭಾರೀ ಮಳೆ ಮುಂದುವರಿಯುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಕ ಅಂಗನವಾಡಿಗಳಿಗೆ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 26 ಗುರುವಾರದಂದು ರಜೆ ನೀಡಿ ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಂ ಆದೇಶ ಹೊರಡಿಸಿದ್ದಾರೆ.
ಬೆಳ್ತಂಗಡಿ: ತಾಲೂಕಿನಲ್ಲಿ ಇಂದು ಬಾರಿ ಮಳೆ ಸುರಿದ ಪರಿಣಾಮ ಬೆಳ್ತಂಗಡಿ ತಾಲೂಕಿನ ಶಶಿಲದ ಕಪಿಲ ನದಿಯಲ್ಲಿ ನೀರು ಉಕ್ಕಿ ಹರಿದ ಪರಿಣಾಮ ಮತ್ಸ್ಯ ಕ್ಷೇತ್ರವೆಂದೇ ಪ್ರಸಿದ್ಧವಾಗಿರುವ ಶಿಶಿಲೇಶ್ವರ ದೇವಾಲಯಕ್ಕೆ ನೀರು ನುಗ್ಗಿದ್ದು ದೇವಸ್ಥಾನ ಜಾಲಾವೃತಗೊಂಡಿದೆ.
ನದಿನೀರಿನ ಮಟ್ಟ ಏರಿಕೆಯಾದ ಪರಿಣಾಮ ನದಿ ನೋರು ಗರ್ಭಗುಡಿ ಪ್ರವೇಶಿಸಿದೆ. ಪಕ್ಕದಲ್ಲೇ ಇರುವ ಕಿಂಡಿ ಆಣೆಕಟ್ಟು (ದೇವಳದ ಸಂಪರ್ಕ ರಸ್ತೆ)...
ಬೆಳ್ತಂಗಡಿ; ತಾಲೂಕಿನ ಕಾಜೂರು ಸಮೀಪದ ನಿವಾಸಿ ಸುಮಾರು 85 ವರ್ಷ ಪ್ರಾಯದ ಅಲಿಮಮ್ಮ ಎಂಬವರು ಸಂಬಂಧಿಕರ ಮನೆ ಬೋಳಿಯಾರಿಗೆಂದು ಒಬ್ಬರೇ ಕಾಜೂರಿನಿಂದ ಹೊರಟವರು ಬೆಳ್ತಂಗಡಿಯಿಂದ ದಿಕ್ಕು ತಪ್ಪಿ ಪುತ್ತೂರುಗೆ ಹೋಗುವ ಸರಕಾರಿ ಎಕ್ಸ್ ಪ್ರೆಸ್ ಬಸ್ಸಿಗೆ ಹತ್ತಿದರು. ವಯೋವೃದ್ದೆಯ ಮಾತು ಕಂಡಕ್ಟರ್ ಗೆ ಅರ್ಥವಾಗದೇ ಗೇರುಕಟ್ಟೆಯಲ್ಲಿ ಇಳಿಸಿಬಿಟ್ಟರು.ಈ ವೃದ್ದೆಗೆ ದಿಕ್ಕು ದೋಚದಾಯಿತು.ಬಸ್ಸಿನಲ್ಲಿ ಪುತ್ತೂರು ಕಡೆ...
ಬೆಳ್ತಂಗಡಿ; ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಭವನದಲ್ಲಿ ನಡೆದ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ನಲ್ಲಿ ದಸ್ಕತ್ ಸಿನೆಮಾವು ಈ ವರ್ಷದ ಉತ್ತಮ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.ಇದೆ ಸಿನೆಮಾದ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಉತ್ತಮ ನಿರ್ದೇಶಕ ಪ್ರಶಸ್ತಿ ಮತ್ತು ಉತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಯನ್ನು ಹಾಗೂ ಸಂತೋಷ್ ಆಚಾರ್ಯ ಗುಂಪಲಾಜೆ ಉತ್ತಮ ಛಾಯಾಗ್ರಾಹಕ,...
ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯ ಮತ್ತಿಲ ನಿವಾಸಿ ಶಿವರಾಜ್ ಮತ್ತಿಲ(33) ತನ್ನ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂನ್ 23ರಂದು ಸಂಭವಿಸಿದೆ.ಈತ ಕೂಲಿ ಕೆಲಸ ಮಾಡಿಕೊಂಡಿದ್ದ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈತ ಈ ಹಿಂದೆಯೂ ಆತ್ಮಹತ್ಯೆಗೆ ವಿಫಲ ಪ್ರಯತ್ನ ನಡೆಸಿದ್ದ ಎನ್ನಲಾಗಿದೆ ಧರ್ಮಸ್ಥಳ ಪೊಲೋಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ; ಉಜಿರೆ ಪೇಟೆಯಲ್ಲಿ ಮಂಗಳವಾರ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಂಗಳವಾರ ಉಜಿರೆ ಪೇಟೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಗ್ರಾಮಪಂಚಾಯತು ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಮಾರು 45ರಿಂದ 50ವರ್ಷ ಪ್ರಯಾದ ವ್ಯಕ್ತಿಯ ಮೃತದೇಹ ಇದಾಗಿದ್ದು ಎಡ ಕೈಯಲ್ಲಿ G MAHESH ಎಂದೂ ಬಲ ಕೈಯಲ್ಲಿ ABGTK ಎಂದೂ...
ಬೆಳ್ತಂಗಡಿ: ಕೊಯ್ಯರು ಮಲೆಬೆಟ್ಟು ನಿವಾಸಿಯಾಗಿರುವ ರಝೀನ(24ವ) ಎಂಬವರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಿ.ಸಿ.ರೋಡಿನ ಕಾರಿಂಜದ ಮಹಮ್ಮದ್ ಸಲೀಂ ಎಂಬವರ ಪತ್ನಿಯಾದ ರಝೀನರ 2ವರ್ಷದ ಮಗ 40 ದಿನಗಳ ಹಿಂದೆ ಸಾವನ್ನಪ್ಪಿದ್ದರು. ಬಳಿಕ ಅವರು ಕೊಯ್ಯರಿನ ತಾಯಿ ಮನೆಯಲ್ಲಿದ್ದರು. ರಝೀನ 22-06-2025ರಂದು ಸಂಜೆ 4.00ಗಂಟೆಗೆ ಗಂಡನ ಮನೆಗೆ ಹೋಗುತ್ತೇನೆಂದು...
ಬೆಳ್ತಂಗಡಿ:ಮನೆಯಂಗಳ ಪ್ರವೇಶಿಸಿದ ಚಿರತೆ ಸಾಕುನಾಯಿಯ ಮೇಲೆ ದಾಳಿ ಮಾಡಿದ ಘಟನೆ ನೆರಿಯದಲ್ಲಿ ನಡೆದಿದೆ.ಇಲ್ಲಿನ ಅಂಕೊತ್ಯಾರ್ ಎಂಬಲ್ಲಿ ಸಿಜು ಎಂಬವರ ಮನೆಯಂಗಳಕ್ಕೆ ಜೂ. 24ರ ಮುಂಜಾನೆ 3.30ರ ಸುಮಾರಿಗೆ ಚಿರತೆ ಆಗಮಿಸಿದ್ದು ನಾಯಿ ಮೇಲೆ ದಾಳಿ ಮಾಡಿದಾಗ ಅದು ಬೊಬ್ಬೆ ಹೊಡೆಯುವ ಶಬ್ದಕ್ಕೆ ಮನೆಯವರು ಎಚ್ಚೆತ್ತು ಹೊರಗೆ ಬರುತ್ತಿದ್ದಂತೆ ನಾಯಿಯನ್ನು ಗಾಯಗೊಳಿಸಿ ಚಿರತೆ ಸಮೀಪದ ಅರಣ್ಯದತ್ತ...
ಬೆಳ್ತಂಗಡಿ (ಜೂ-24): ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ಮತ್ತು ಅಧಿಕಾರಿಗಳಿಗೆ ಬೆದರಿಕೆ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಯಿತು.
ಸರಕಾರಿ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಮುಸ್ಲಿಮರು ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿ ತಮ್ಮ ಹೆಸರಿಗೆ ಜಮೀನು ನೋಂದಣಿ ಮಾಡುವಂತೆ...