ಕುದುರೇ ಮುಖ ರಾಷ್ಟ್ರೀಯ ಉದ್ಯಾನವನದ ಆದಿವಾಸಿಗಳಿಗೆ ವಿದ್ಯುತ್ ಸಂಪರ್ಕ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ ಅನುಮೋದನೆ, ಅನುದಾನ ಒದಗಿಸುವಂತೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಮುಖಂಡರಿಂದ ಇಂಧನ ಸಚಿವರಿಗೆ ಮನವಿ
ಬೆಳ್ತಂಗಡಿ; ಶತಮಾನಗಳಿಂದ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಲ್ಲೇ ಜೀವನ ನಡೆಸುತ್ತಿದ್ದ ಕುದುರೆಮುಖ ರಾಷ್ಟ್ರೀಯ ಉದ್ಯಾನ ನಿವಾಸಿಗಳಿಗೆ ಭರವಸೆಯ ಭರವಸೆ ಮೂಡಿಸಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರ ನಿರಂತರ ಪ್ರಯತ್ನದ ಫಲವಾಗಿ ವಿದ್ಯುತ್ ವಂಚಿತ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ನಡೆದ ಪ್ರಯತ್ನ ಇದೀಗ ಒಂದು ಹಂತದಲ್ಲಿ ಈಡೇರಿದೆ. ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯು ತನ್ನ 91ನೇ ಸಭೆಯಲ್ಲಿ ಕೆಲವು ಷರತ್ತುಗಳಿಗೊಳಪಟ್ಟು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಮತ್ತು ನಾವೂರು ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ನೀಡಲು ಅನುಮೋದನೆ ನೀಡಿದೆ. ಕುದುರೆಮುಖ...
ಕಡಬ; ಬೈಕ್ ಡಿಕ್ಕಿ ರಸ್ತೆಬದಿಯಲ್ಲಿ ನಿಂತಿದ್ದ ವೃದ್ದೆ ಸಾವು
ಕಡಬ: ಉಪ್ಪಿನಂಗಡಿ-ಕಡಬ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಬಳಿಯ ಕಲಾರದಲ್ಲಿ ರಸ್ತೆಬದಿಯಲ್ಲಿ ನಿಂತಿದ್ದ 81 ವರ್ಷದ ಮಹಿಳೆಯೊಬ್ಬರು ಬೈಕ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಕಡಬ ಗ್ರಾಮದ ಕಾಳಾರ ಪೆರ್ಲದಕೆರೆ ನಿವಾಸಿ ದಿವಂಗತ ಕೃಷ್ಣಪ್ಪ ಭಂಡಾರಿಯವರ ಪತ್ನಿ ವಾರಿಜಾ ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯಾಹ್ನ ವಾರಿಜಾ ರಸ್ತೆ ದಾಟಲು ಕಾಯುತ್ತಿದ್ದಾಗ ರಸ್ತೆಬದಿಯಲ್ಲಿ ನಿಂತಿದ್ದಾಗ ಈ ಘಟನೆ ಸಂಭವಿಸಿದೆ. ಕಡಬ ಕಡೆಯಿಂದ ಬರುತ್ತಿದ್ದ ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಬೆಳ್ತಂಗಡಿ; ಆದಿವಾಸಿ ಸಮುದಾಯಗಳ ಬೇಡಿಕೆಗಳನ್ನು ಈಡೇರಿಸುವಂತೆ ಕೆ.ಪಿ.ಸಿ.ಸಿ ಅಧ್ಯಕ್ಷರಿಗೆ ಮನವಿ
ಬೆಳ್ತಂಗಡಿ; ಆದಿವಾಸಿ ಸಮುದಾಯಗಳ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಬಗ್ಗೆ ವಿಧಾನ ಪರಿಷತ್ ಸದಸ್ಯ , ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಬುಧವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರ ನೇತೃತ್ವದಲ್ಲಿ ಆದಿವಾಸಿ ಸಮನ್ವಯ ಸಮಿತಿಯ ಮುಖಂಡರು ಭೇಟಿಯಾಗಿ ಮನವಿ ಸಲ್ಲಿಸಿದರು. ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ನೀಡಲಾದ ಮನವಿಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಮಲೆಕುಡಿಯ...
ಬೆಳ್ತಂಗಡಿ:ಕೊಯ್ಯೂರು ನಿವಾಸಿ ಪ್ರವೀಣ್ ನಾಪತ್ತೆ
ಬೆಳ್ತಂಗಡಿ: ಮನೆಯಿಂದ ಬೈಕ್ ನಲ್ಲಿ ಪೇಟೆಗೆಂದು ಹೊರಟ ಪ್ರವೀಣ್ (40) ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಆ. 22 ರಂದು ಕೊಯ್ಯೂರಿನಲ್ಲಿ ನಡೆದಿದ್ದು ಈಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂಜೀವ ಗೌಡ ಎಂಬವರು ಈಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಕೊಯ್ಯೂರು ನಾನಿಲ್ದಡಿ ನಿವಾಸಿ ಪ್ರವೀಣ್ (40ವ) ಎಂಬುವವರು ಚಾಲಕ ಕೆಲಸ ಮಾಡಿಕೊಂಡಿದ್ದು ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ.ಈತ ಎಂದಿನಂತೆ ಆ.22ರಂದು ಬೆಳಿಗ್ಗೆ ಮನೆಯಿಂದ ಮನೆಯಲ್ಲಿ ಸಿಸಿ ಕ್ಯಾಮಾರ, ಆದರ ಡಿವಿಆರ್ ನ್ನು ಬ್ಯಾಗ್ ನಲ್ಲಿ ಹಾಕಿಕೊಂಡು ಆತನ ಬೈಕ್ ನಲ್ಲಿ...
ಪಶ್ಚಿಮ ವಲಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ ಬೆಳ್ತಗಂಡಿ ವೃತ್ತ ನೀರಿಕ್ಷಕ ರವಿ ಬಿಎಸ್, ಹೆಡ್ ಕಾನ್‌ಸ್ಟೇಬಲ್ ವಿಜಯ್ ಕುಮಾರ್, ಕಾನ್‌ಸ್ಟೇಬಲ್ ಪ್ರಸನ್ನ, ಮೋಹನ್‌ರಿಗೆ ಪ್ರಶಸ್ತಿ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಕ್ಲಿನಿಕಲ್ ಮತ್ತು ಇನ್ನೋವೇಟಿವ್ ಫೊರೆನ್ಸಿಕ್ಸ್ ಸೆಂಟರ್ ಕೆಎಂಸಿ ಮಣಿಪಾಲ ವತಿಯಿಂದ ಕೆಎಂಸಿ ಡಾ.ಟಿ.ಎಂ.ಎ ಪೈ ಸಭಾಂಗಣದಲ್ಲಿ ಸೆ.1 ರಂದು ಪಶ್ಚಿಮ ವಲಯ ಮಟ್ಟದ 8ನೇ ಪೊಲೀಸ್ ಕರ್ತವ್ಯ ಕೂಟ ಸಮಾರಂಭ ನಡೆಯಿತು. ವೈಜಾನಿಕ ತನಿಖಾ ವಿಭಾಗ ಸ್ಪರ್ಧೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ವೃತ್ತ ನೀರಿಕ್ಷಕ ರವಿ.ಬಿಎಸ್‌ಅವರಿಗೆ ಐದು ಪ್ರಶಸ್ತಿ, ಅಪಾರಾಧ ಸ್ಥಳ ನೀರೀಕ್ಷಣೆ ಹಾಗೂ ಪೊಟ್ರೆಟ್ ವಿಭಾಗದಲ್ಲಿ ಪುಂಜಾಲಕಟ್ಟೆ ಠಾಣೆಯ ಹೆಡ್ ಕಾನ್‌ಸ್ಟೇಬಲ್ ವಿಜಯಕುಮಾರ್ ರೈ ಎರಡು ಪ್ರಶಸ್ತಿ ಹಾಗೂ ಪೊಲೀಸ್ ಕಾನ್‌ಸ್ಟೇಬಲ್ ಪ್ರಸನ್ನ ಮತ್ತು...
ಧರ್ಮಸ್ಥಳ;ಪೊಸೊಳಿಕೆ ಯಲ್ಲಿ ಸ್ಮೋಕ್ ಹೌಸ್ ಬೆಂಕಿಗೆ ಆಹುತಿ ಲಕ್ಷಾಂತರ ನಷ್ಟ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಪೊಸೊಳಿಕೆ ಯಲ್ಲಿ ರಬ್ಬರ್ ಒಣಗಿಸುವ 'ಸ್ಮೋಕ್ ಹೌಸ್' ಕಟ್ಟಡಕ್ಕೆ ಬೆಂಕಿ ಬಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ.ಇಲ್ಲಿನ ನಿವಾಸಿ ಪಿ. ಕೆ ಜೋಬ್ ಎಂಬವರಿಗೆ ಸೇರಿದ ಸ್ಮೋಕ್ ಹೌಸ್ ಬೆಂಕಿಗೆ ಆಹುತಿಯಾಗಿದೆ. ಮನೆಯ ಸಮೀಪವೇ ಎರಡು ಸ್ಮೋಕ್ ಹೌಸ್ ಗಳು ಇದ್ದು ಬೆಂಕಿ ಆಕಸ್ಮಿಕದಲ್ಲಿ ಎರಡೂ ಕಟ್ಟಡಗಳು ಸಂಪೂರ್ಣ ಹಾನಿಗೀಡಾಗಿದೆ. ಒಣಗಲು ಹಾಕಿದ್ದ ರಬ್ಬರ್, ಕಟ್ಟಡದೊಳಗಿದ್ದ ಮರಮಟ್ಟುಗಳು ಪೂರ್ಣ ಸುಟ್ಟು ಹೋಗಿದೆ. ಸುಮಾರು ಐದರಿಂದ ಆರು ಲಕ್ಷ ರೂ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.ಸೆ.2ರಂದು ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು...
ಬೆಳ್ತಂಗಡಿ; ಪಣಕಜೆ ಬೈಕ್ ಟೆಂಪೋ ನಡುವೆ ಅಪಘಾತ ಯುವಕ ಮೃತ್ಯು
ಬೆಳ್ತಂಗಡಿ; ಪಣಕಜೆ ಮಸೀದಿ ಸಮೀಪ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಮೃತ ಯುವಕ ಉಜಿರೆ ನಿವಾಸಿ ರಿನ್ಸ್ ಶಿಬಿ (24) ಎಂಬಾತನಾಗಿದ್ದಾನೆಮಂಗಳವಾರ ಸಂಜೆಯ ವೇಳೆ ಪಣಕಜೆಯಲ್ಲಿ ಟೆಂಪೋದ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದು ರಿನ್ಸ್ ಶಿಬಿ ಗಂಭೀರವಾಗಿ ಗಾಯಗೊಂಡಿದ್ದ ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಆತ ಮೃತಪಟ್ಟಿದ್ದಾನೆ. ಘಟನೆಯ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ರಿನ್ಸ್ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದು ಯು ಕಾಂಗ್ರೆಸ್ ನಲ್ಲಿ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದ. ರಾಹುಲ್ ಗಾಂಧಿಯವರ ಭಾರತ್...
ಕಳ್ಳತನ ಪ್ರಕರಣ ತಲೆ ಮರೆಸಿಕೊಂಡಿದ್ದ ಇತ್ತೆ ಬರ್ಪೆ ಅಬೂಬಕರ್ ಬಂಧನ
ಮೂಡುಬಿದಿರೆ: ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಆರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾರೆಂಟ್ ಜಾರಿಯಾಗಿದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಅಬೂಬಕರ್ ಅಲಿಯಾಸ್ ಅಬ್ದುಲ್ ಖಾದರ್ ಅಲಿಯಾಸ್ ಇತ್ತೆ ಬರ್ಪೆ ಅಬೂಬಕರ್ ಬಂಧಿತ ಆರೋಪಿ.ಮೂಡುಬಿದಿರೆ ಪೊಲೀಸ್ ಠಾಣೆಯ ವಾರೆಂಟ್ ಜಾರಿ ಕರ್ತವ್ಯದ ಹೆಡ್ ಕಾನ್‌ಸ್ಟೆಬಲ್ ರವೀಂದ್ರ, ಪೊಲೀಸ್ ಕಾನ್‌ಸ್ಟೆಬಲ್ ಲಿಂಗೇಶ್ ಹಾಗೂ ಕೋರ್ಟ್ ಪೊಲೀಸ್ ಕಾನ್‌ಸ್ಟೆಬಲ್ ರಮೇಶ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿಯ ವಿರುದ್ಧ ಕಾರ್ಕಳ ಗ್ರಾಮಾಂತರ, ಶಿರ್ವ, ಮುಲ್ಕಿ,...
ಪುತ್ತೂರು ಗುಂಪು ಘರ್ಷಣೆ ಹಲವರ ವಿರುದ್ದ ಪ್ರಕರಣ ದಾಖಲು
ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.1ರಂದು ಮಧ್ಯಾಹ್ನ ಪ್ರೆಸ್‌ಕ್ಲಬ್ ಎದುರು ಕೆಲವರು ಗುಂಪು ಸೇರಿ ಗಲಾಟೆ ನಡೆಸುತ್ತಿರುವ ಬಗ್ಗೆ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದಾಗ ಕೆಲವರು ಪರಸ್ಪರ ಕೈ ಕೈ ಮಿಲಾಯಿಸಿ ಗಲಾಟೆ ನಡೆಸುತ್ತಿದ್ದು, ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುತ್ತಿರುವುದು ಕಂಡುಬಂದಿದೆ.ಪೊಲೀಸರು ತಿಳುವಳಿಕೆ ನೀಡಿದರೂ ಗಲಾಟೆ ಮುಂದುವರಿಸಿದ ಹಿನ್ನೆಲೆಯಲ್ಲಿ ಮುಂಡೂರು ಗ್ರಾಮದ...
ಪಣಕಜೆ ಟೆಂಪೋಗೆ ಬೈಕ್ ಡಿಕ್ಕಿ ಸವಾರನಿಗೆ ಗಾಯ
ಬೆಳ್ತಂಗಡಿ; ಪಣಕಜೆ ಮಸೀದಿ ಸಮೀಪ ಟೆoಪೊ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುವನ್ನು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಟೆoಪೊ ಮಡoತ್ಯಾರು ಕಡೆಯಿಂದ ಬರುತ್ತಿದ್ದು ಪಣಕಜೆ ಮಸೀದಿ ಬಳಿ ಚಾ ಕುಡಿಯಲು ನಿಲ್ಲಿಸಿದ್ದಾರೆ ಎನ್ನಲಾಗಿದೆ ಈ ಸಂಧರ್ಭದಲ್ಲಿ ಬೈಕ್ ಸವಾರ ಹಿoದಿನಿoದ ಬoದು ನಿಯಂತ್ರಣ ಕಳೆದುಕೊಂಡು ಟೆಂಪೋಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದರುವುದಾಗಿ ತಿಳಿದು ಬಂದಿದೆ.















