ಬೆಳ್ತಂಗಡಿ; ಕಾಡಾನೆ ದಾಳಿ; ಜು21 ರಂದು ಕೆ.ಎಸ್.ಎಂ.ಸಿ ಎ ನೇತೃತ್ವದಲ್ಲಿ ಕೃಷಿಕರಿಂದ ಅರಣ್ಯ ಇಲಾಖೆಗೆ ಮನವಿ
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆಹಾವಳಿ ತೀವ್ರವಾಗಿದ್ದು ಕೃಷಿಕರು ಆತಂಕ ಪಡುವಂತಹ ವಾತಾವರಣವಿದ್ದು ಕಾಡಾನೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಯಿಸಿ ಕೆ.ಎಸ್.ಎಂ.ಸಿ. ಎ ವತಿಯಿಂದ ಜು 21 ಸೋಮವಾರ ಬೆಳ್ತಂಗಡಿಯಲ್ಲಿ ಮೆರವಣಿಗೆ ನಡೆಸಿ ಅರಣ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಸ್.ಎಂ.ಸಿ ಎ ಅಧ್ಯಕ್ಷ ಬಿಟ್ಟಿ ನೆಡುನಿಲಂ ತಿಳಿಸಿದ್ದಾರೆ.ಬೆಳ್ತಂಗಡಿ ಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಚಾರ ತಿಳಿಸಿದರು.ಬೆಳ್ತಂಗಡಿ ತಾಲೂಕಿನ ಮಲೆನಾಡಿನ ಭಾಗಗಳಲ್ಲಿ ಕಾಡಾನೆ ಹಾವಳಿ ತೀರಾ ಹೆಚ್ಚಾಗಿದೆ. ಕೃಷಿಕರು ತಮ್ಮ...
ಧರ್ಮಸ್ಥಳದಲ್ಲಿ ಮುಂದುವರಿದ ಕಾಡಾನೆ ದಾಳಿ ಕೃಷಿ ನಾಶ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇರ್ತನೆ ಪರಿಸರದಲ್ಲಿ ಕಾಡಾನೆಗಳು ಪ್ರತಿ ನಿತ್ಯ ತೋಟಗಳಿಗೆ ನುಗ್ಗುತ್ತಿದ್ದು ಕೃಷಿಗೆ ವ್ಯಾಪಕ ಹಾನಿಯುಂಟುಮಾಡುತ್ತಿದೆ.ಕಳೆದ ಮೂರು ದಿನಗಳಿಂದ ಕಾಡಾನೆಗಳು ಇಲ್ಲಿಯೇ ಬೀಡು ಬಿಟ್ಟಿದ್ದು ಸಂಜೆಯಾದಕೂಡಲೇ ತೋಟಗಳಿಗೆ ನುಗ್ಗುತ್ತಿವೆ.ಗುರುವಾರ ರಾತ್ರಿಯ ವೇಳೆ ಇಲ್ಲಿನ ನಿವಾಸಿ ಟಿ.ವಿ ದೇವಸ್ಯ ಎಂಬವರ ಮನೆಯ ಸಮೀಪಕ್ಕೆ ಬಂದ ಕಾಡಾನೆಗಳು ಇಲ್ಲಿ ಕೃಷಿ ಮಾಡಿದ್ದ ಮರಗೆಣಸಿನ ಗಿಡಗಳನ್ನು ಸಂಪೂರ್ಣ ನಾಶಗೈದಿದೆ. ಬಾಲೆ ಹಾಗೂ ಇತರ ಕೃಷಿಗೂ ಹಾನಿಯುಂಟಾಗಿದೆ.ಸಮೀಪದ ವಿಲ್ಸನ್ ಟಿ.ವಿ ಅವರ ತೋಟಕ್ಕೂ ನುಗ್ಗಿದ್ದು ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶಗೊಳಿಸಿದೆ. ಇಲ್ಲಿನ ನಿವಾಸಿ ವಿಲ್ಸನ್ ಎಂಬವರ...
ಕೊಕ್ಕಡ; ಚಲಿಸಿತ್ತಿದ್ದ ಬಸ್ ಮೇಲೆ ಮುರಿದು ಬಿದ್ದ ವಿದ್ಯುತ್ ಕಂಬ
ಬೆಳ್ತಂಗಡಿ; ಧರ್ಮಸ್ಥಳದಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಅಶ್ವಮೇಧ ಬಸ್ ಮೇಲೆ ವಿದ್ಯುತ್ ಕಂಬ ಬಿದ್ದ ಘಟನೆ ಜು.18 ರಂದು ನಡೆದಿದೆ. ಕೊಕ್ಕಡ ಸಮೀಪದ ಕೌಕ್ರಡಿ ಬಳಿ ಈ ಘಟನೆ ಸಂಭವಿಸಿದ್ದು ಬಸ್ ನ ಎಡಭಾಗದಲ್ಲಿದ್ದ ವಿದ್ಯುತ್ ಕಂಬ ಬಸ್ ಮೇಲೆ ಬಿದ್ದು ಅದನ್ನು ತಪ್ಪಿಸಲು ಹೋಗಿ ಬಲ ಭಾಗದಲ್ಲಿದ್ದ ಕಂಬವು ಬಸ್ ಮೇಲೆ ಮುರಿದು ಬಿದ್ದಿದೆ. ತಂತಿಗಳು ತುಂಡರಿಸಿ ಬಿದ್ದಿದ್ದು, ವಿದ್ಯುತ್ ಸರಬರಾಜು ಇಲ್ಲದ ಪರಿಣಾಮ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ. ಬಸ್ ನ ಗಾಜುಗಳು ಹುಡಿಯಾಗಿದೆ ಎಂದು ಧರ್ಮಸ್ಥಳ ಡಿಫೋ ಅಧಿಕಾರಿ ತಿಳಿಸಿದ್ದಾರೆ.
ಪತ್ರಕರ್ತ, ಭುವನೇಶ್ ಗೇರುಕಟ್ಟೆ ಮಾತೃವಿಯೋಗ ಮಂಗಳೂರು ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನ
ಬೆಳ್ತಂಗಡಿ: ಗೇರುಕಟ್ಟೆ ಮಾತೃ ಕೃಪ ನಿವಾಸಿ, ದಿ. ಲಕ್ಷ್ಮಣ ರಾವ್ ಅವರ ಪತ್ನಿ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೋಶಾಧಿಕಾರಿ, ಜಿಲ್ಲಾ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಅವರ ಮಾತೃಶ್ರೀ ಶ್ರೀಮತಿ ಸರೋಜಿನಿ(70) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು. ಕಳೆದ ಭಾನುವಾರ ಅಸೌಖ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾದರು. ಅವರು ಪುತ್ರ ಭುವನೇಶ್, ಸೊಸೆ, ಮೊಮ್ಮಕ್ಕಳು, ಸಹೋದರಿಯನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ ಗೇರುಕಟ್ಟೆಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಕೊಕ್ಕಡ ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಪಾವತಿ ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಳ್ತಂಗಡಿ; ಬೆಳ್ತಂಗಡಿತಾಲೂಕಿನ ಕೊಕ್ಕಡದಲ್ಲಿ ಆನೆ ದಾಳಿಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ಕೂಡಲೇ ರೂ 20 ಲಕ್ಷ ಪರಿಹಾರ ಮೊತ್ತ ಪಾವತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಅರಣ್ಯ, ಜೀವಿಶಾಸ್ತ್ರಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಹೇಳಿದ್ದಾರೆ.ಕೊಕ್ಕಡದಲ್ಲಿ ಆನೆದಾಳಿಗೆ ವ್ಯಕ್ತಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಈ ದುಖದ ಸಂದರ್ಭದಲ್ಲಿ ಸರಕಾರ ಅವರಕುಟುಂಬದ ಜೊತೆ ನಿಲ್ಲುತ್ತದೆ ಎಂದು ಹೇಳಿರುವ ಅವರುಮೃತರ ಹತ್ತಿರದ ಬಂಧುಗಳಿಗೆ ಕೂಡಲೇ ಪರಿಹಾರದ ಮೊತ್ತ 20 ಲಕ್ಷ ರೂ. ಪಾವತಿಸುವಂತೆ ಮತ್ತು ಆನೆಗಳನ್ನು ಕಾಡಿಗೆ ಮರಳಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ...
ಧರ್ಮಸ್ಥಳ ಕಾಡಾನೆ ದಾಳಿ ವ್ಯಾಪಕ ಕೃಷಿ ಹಾನಿ; ಜನರಲ್ಲಿ ಆತಂಕ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿಯೂ ಬುಧವಾರ ತಡ ರಾತ್ರಿ ಕಾಡನೆಗಳು ದಾಳಿ ಸಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿ ಯುಂಟುಮಾಡಿದೆ.ಇಲ್ಲಿನ ನೇರ್ತನೆ ಪರಿಸರದಲ್ಲಿ ರಾತ್ರಿಯವೇಳೆ ಕಾಡಾನೆಗಳು ಕಾಣಿಸಿಕೊಂಡಿದ್ದು ಶ್ರೀನಿವಾಸ ಎಂಬವರ ತೋಟದ ತೆಂಗಿನ ಗಿಡಗಳನ್ನು ಹಾಗೂ ಅಡಿಕೆ ಗಿಡಗಳನ್ನು ನಾಶಪಡಿಸಿದೆ. ಈ ಪರಿಸರದ ಇತರ ಹಲವರ ತೋಟಗಳಿಗು ಕಾಡಾನೆ ನುಗ್ಗಿದ್ದು ಅಲ್ಲಲ್ಲಿ ಹಾನಿಯುಂಟುಮಾಡಿದೆ. ಮುಖ್ಯ ರಸ್ತೆಯ ಬದಿಯಲ್ಲಿ ಕಾಡಾನೆಗಳು ಓಡಾಟ ನಡೆಸುತ್ತಿದೆ. ಕೊಕ್ಕಡದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿರುವುದು ಧರ್ಮಸ್ಥಳ ನೇರ್ತನೆ ಪರಿಸರದ ಜನರಲ್ಲಿಯೂ ಆತಂಕ ಮೂಡಿಸಿದೆ. ರಾತ್ರಿಯ ವೇಳೆ ರಸ್ತೆಯಲ್ಲಿ ಓಡಾಡಲೂ ಜನ ಭಯ...
ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ
ಬೆಳ್ತಂಗಡಿ. ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ತಿರುಗಾಡುತ್ತಿದ್ದು ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ಆನೆ ದಾಳಿಗೆ ಬಲಿಯಾಗಿದ್ದು. ಈ ಬಗ್ಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ “ಆನೆ-ಮಾನವ ಸಂಘರ್ಷದಿಂದ, ತಾಲೂಕಿನಲ್ಲಿ ಹೆಚ್ಚಿನ ನಷ್ಟ ಹಾಗೂ ಸಾವು ಸಂಭವಿಸುತ್ತಿದ್ದು, ನಿಯಂತ್ರಣಕ್ಕೆ ಸರ್ಕಾರ ಸಕಲ ರೀತಿಯ, ಪ್ರಯತ್ನ ಮಾಡುವಂತೆ, ಹಾಗೂ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು...
ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ – ಹರೀಶ್ ಪೂಂಜ ಆಕ್ರೋಶ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕೊಕ್ಕಡ ಬಳಿಯ ಸೌತಡ್ಕದಲ್ಲಿ ಇಂದು ಬೆಳಿಗ್ಗೆ 2 ಕಾಡಾನೆಗಳು ದಿಢೀರ್ ಪ್ರತ್ಯಕ್ಷವಾಗಿ ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿಯವರನ್ನು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟ ಘಟನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀವ್ರ ದುಃಖ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಕೃಷಿ ಚಟುವಟಿಕೆಗಳಿಗೆ ಕಾಡಾನೆಗಳು ದಾಳಿ ನಡೆಸಿ ಹಾನಿ ಮಾಡುತ್ತಿರುವ ಬಗ್ಗೆ ತಾನು ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದರೂ ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಶಾಸಕರು ಸಂತ್ರಸ್ತ ಕೃಷಿಕರ...
ಕೊಕ್ಕಡ; ಕಾಡಾನೆ ದಳಿಗೆ ವ್ಯಕ್ತಿ ಬಲಿ
ಬೆಳ್ತಂಗಡಿ: ಕೊಕ್ಕೆ ಸಮೀಪ ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ಓಡಿಸುವ ಸಂದರ್ಭದಲ್ಲಿ ಓರ್ವ ವ್ಯಕ್ತಿ ಆನೆ ದಾಳಿಗೆ ಬಲಿಯಾದ ಘಟನೆ ಜು. 17 ರಂದು ನಡೆದಿದೆ. ಮೃತ ವ್ಯಕ್ತಿ ಸೌತಡ್ಕದ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂದು ತಿಳಿದುಬಂದಿದೆ.ಕಾಡಾನೆಯ ಹಿಂಡು ಈ ಪ್ರದೇಶದಲ್ಲಿ ಓಡಾಟ ನಡೆಸಿದ್ದು ಇದನ್ನು ಗಮನಿಸಿದ ಸ್ಥಳೀಯರು ಆನೆಯನ್ನು ಓಡಿಸುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ ಹೆಚ್ವಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ
ಬೆಳಾಲು ವೀಣಾ ಅಸಹಜ ಸಾವು ಪ್ರಕರಣ ; ಸಮಗ್ರ ತನಿಖೆಗೆ ಜನವಾದಿ ಮಹಿಳಾ ಸಂಘಟನೆಯಿಂದ ಪೊಲೀಸರಿಗೆ ಮನವಿ
ಬೆಳ್ತಂಗಡಿ; ತಾಲೂಕಿನ ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ಯುವತಿ ವೀಣಾಳ ಅನುಮಾನಾಸ್ಪದ ಸಾವಿನ ಕುರಿತು ಹಲವಾರು ಅನುಮಾನಗಳಿದ್ದು ಈ ಬಗ್ಗೆ ಸಮಗ್ರವಾದ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜನವಾದಿ ಮಹಿಳಾ ಸಂಘಟನೆ ಬೆಳ್ತಂಗಡಿ ತಾಲೂಕು ಸಮಿತಿ ಇದರ ವತಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮನವಿ ನೀಡಲಾಗಿದೆ. ಬಾಣಂತಿಯಾದ ಈಕೆಯ ಮಗುವನ್ನು ಅವಳಿಂದ ದೂರ ಮಾಡಿ ಆಕೆಯ ತಂದೆ ನಾಗೇಶ್ ರವರು ಆಕೆಯನ್ನು ಮಾನಸಿಕ ಅಸ್ವಸ್ಥೆ ಎಂದು ಬಿಂಬಿಸುವ ಕಾರ್ಯವನ್ನು ಮಾಡಿದ್ದಾರೆ. ಒಟ್ಟು ಘಟನೆಯನ್ನು ಗಮನಿಸದಾಗ ಇದೊಂದು ಸಹಜ ಸಾವು ಅಲ್ಲ ಎಂಬ ಭಾವನೆ ಮೂಡುತ್ತಿದೆ....















