ಬೆಳ್ತಂಗಡಿ; ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರು ಜಯಂತಿ ಸಾಧಕರಿಗೆ ಸನ್ಮಾನ
ಬೆಳ್ತಂಗಡಿ : 'ಸಮಾಜದಲ್ಲಿ ಅನೇಕರು ಮಹಾತ್ಮರಾದರೂ ನಾರಾಯಣ ಗುರುಗಳು ದೇವರ ಸ್ಥಾನವನ್ನು ಪಡೆದುಕೊಂಡು ಪೂಜಿತರಾಗಿದ್ದಾರೆ. ಅವರ ವಿಚಾರಧಾರೆಯನ್ನು ಪಾಲಿಸುವುದರಿಂದ ಇಡೀ ಜಗತ್ತು ಸ್ವಾಸ್ಥ್ಯವಾಗಿರಲು ಸಾಧ್ಯ. ಹಾಗಾಗಿಯೇ ಕ್ರೈಸ್ತ ಪರಮೋಚ್ಚ ಗುರುಗಳು ಕೂಡ ಜಗತ್ತಿಗೆ ನಾರಾಯಣ ಗುರುಗಳ ಅಗತ್ಯವನ್ನು ಒತ್ತಿ ಹೇಳಿದ್ದಾರೆ ' ಎಂದು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಹೇಳಿದರು. ಅವರು ಭಾನುವಾರ ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ), ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ...
ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ
ಕೊಕ್ಕಡ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಕೊಕ್ಕಡ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಸೆ 06 ರಂದು ಶ್ರೀರಾಮ ಭಜನಾ ಮಂದಿರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪಕ್ಷದ ಹಿರಿಯ ಕಾರ್ಯಕರ್ತರಾದ ಬಿಜೆಪಿ ಗ್ರಾಮ ಸಮಿತಿ ಮಾಜಿ ಅಧ್ಯಕ್ಷರು ಹಿರಿಯರಾದ ಸುಂದರ ಭಂಡಾರಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಸಕರಾದ ಹರೀಶ್ ಪೂಂಜಾರವರು ಉದ್ಘಾಟನಾ ಭಾಷಣದ ಜೊತೆಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ಕ್ರುತವಾಗಿ ಸಮಾಲೋಚನೆ ನಡೆಸಿದರು. ಕಣಿಯೂರು ಗ್ರಾಮ ಬಿಜೆಪಿ...
ಬೆಳ್ತಂಗಡಿ : ಜಯಂತ್. ಟಿ ಮತ್ತು ಗಿರೀಶ್ ಮಟ್ಟಣ್ಣವರ್ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರು
ಬೆಳ್ತಂಗಡಿ :ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧ ಪಟ್ಂತೆ ಎಸ್.ಐ.ಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ ಮತ್ತೆ ವಿಚಾರಣೆಗೆ ಸೆ.7 ರಂದು ವಿಚಾರಣೆಗೆ ಹಾಜರಾಗಿದ್ದಾರೆ. ಜಯಂತ್.ಟಿ ನಾಲ್ಕನೇ ದಿನ ವಿಚಾರಣೆಗೆ ಹಾಜರಾಗುತ್ತಿದ್ದು. ಗಿರೀಶ್ ಮಟ್ಟಣ್ಣವರ್ ಮೂರನೇ ದಿನದ ವಿಚಾರಣೆಗೆ ಹಾಜರಾಗುತ್ತಿದ್ದಾರೆ.ಶನಿವಾರ ನಡೆದ ಮಹತ್ವದ ಬೆಳವಣಿಗೆಯಲ್ಲಿ ಧರ್ಮಸ್ಥಳ ನೇತ್ರಾವತಿ ಸ್ನಾನಘಟದಲ್ಲಿ ತಲೆ ಬುರುಡೆ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ವಿಠಲ ಗೌಡ ನನ್ನು ಸ್ಥಳಕ್ಕೆ ಕರೆದೊಯ್ದು ಪರಿಶೀಲನೆ ನಡೆಸಲಾಗಿತ್ತು. ತಲೆ ಬುರುಡೆಯನ್ನು ನೋಡಿ ಮಾಹಿತಿ ನೀಡಿದ್ದು ವಿಠಲ ಗೌಡ ಎನ್ನಲಾಗಿದ್ದು ಈ ಬಗ್ಗೆ ವಿಚಾರಣೆ ಭಾನುವಾರವೂ ನಡೆಯುತ್ತಿದೆ....
ಬೆಳ್ತಂಗಡಿ; ಡಿ.ಐ.ಎಫ್.ಐ ಯುವಜನ ಜಾಥಾಕ್ಕೆ ಚಾಲನೆ
ಬೆಳ್ತಂಗಡಿ: ಉದ್ಯೋಗ ಸೇಷ್ಟಿಸಿ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಿ ಎಂಬ ಎಂಬ ಘೋಷಣೆಯೊಂದಿಗೆ ಡಿ.ವೈ.ಎಫ್ಐ ದ.ಕ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಯುವಜನ ಜಾಥಾಕ್ಕೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸೆ. 7ರಂದು ಚಾಲನೆ ನೀಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ರಂಗಕರ್ಮಿ ಸಂತೋಷ್ ಶೆಟ್ಟಿ ಹಿರಿಯಡ್ಕ, ಅವರು ನೆರವೇರಿಸಿ ಮಾತನಾಡುತ್ತಾ ನಮ್ಮ ಜಿಲ್ಲೆಗೆ ಬಂದಿರುವ ಕೈಗಾರಿಕೆಗಳಿಂದಾಗಿ ನಮ್ಮ ನೆಲ,ಜಲ, ವಾಯು ಹಾಳಾಗುತ್ತಿದೆ ಆದರೆ ನಮ್ಮ ಯುವಕರಿಗೆ ಉದ್ಯೋಗಾ ವಕಾಶಗಳು ಮರೀಚಿಕೆಯಾಗಿ ಉಳಿದಿದೆ ಎಂಬುದು ದುರಂತ ಅವಕಾಶಗಳ ಕೊರತೆಯಿಂದಾಗಿ ಯುವ ಸಮುದಾಯ ಅಭದ್ರತೆಯಲ್ಲಿ ಬದುಕುವಂತಾಗಿದೆ. ಡಿವೈಎಫ್.ಐ ಹಮ್ಮಿಕೊಂಡಿರುವ...
ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಮೂರು ವಾಹನಗಳ ನಡುವೆ ಅಪಘಾತ
ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಮೂರು ವಾಹನಗಳ ನಡುವೆ ಅಪಘಾತ ನಡೆದಿದ್ದು. ಹಲವಾರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಸೆ.7 ರಂದು ಬೆಳಗ್ಗೆ 9 ಗಂಟೆಗೆ ಉಜಿರೆಯಿಂದ ಮೂಡಿಗೆರೆ ಕಡೆ ಪ್ರಯಾಣ ಮಾಡುತ್ತಿದ್ದ ಸರಕಾರಿ ಬಸ್ ಗೆ ಮೂಡಿಗೆರೆಯಿಂದ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಡಿಕ್ಕಿ ಹೊಡೆದಿದ್ದು ಬಳಿಕ ಲಾರಿಗೆ ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಹಲವು ಮಂದಿಗೆ ಸಣ್ಣಪುಟ್ಟ ಗಾಯವಾಗಿದ್ದು. ರಸ್ತೆ ಸಂಚಾರಕ್ಕೆ ಅಡಚಣೆಯಾಗಿದ್ದು ಸಾರ್ವಜನಿಕರು ಸುಗಮ ಸಂಚಾರಕ್ಕೆ...
ಬಯಲಾದ ಬುರುಡೆ ರಹಸ್ಯ ಸೌಜನ್ಯ ಮಾವ ವಿಠಲ್ ಗೌಡನೊಂದಿಗೆ ನೇತ್ರಾವತಿ ಸ್ನಾನಘಟ್ಟದಲ್ಲಿ ಸ್ಥಳ ಮಹಜರು
ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಇದೀಗ ಸ್ಪೋಟಕ ತಿರುವು ಪಡೆದುಕೊಂಡಿದೆ ಕೊನೆಗೂ ತಲೆಬುರುಡೆ ಎಲ್ಲಿಂದ ತರಲಾಗಿದೆ ಎಂಬುದು ಬಹಿರಂಗಗೊಂಡಿದ್ದು ನೇತ್ರಾವತಿ ಸ್ನಾನಘಟ್ಟದ ಸಮೀಪದ ಅರಣ್ಯದಲ್ಲಿ ಸೌಜನ್ಯ ಮಾವ ವಿಠಲ ಗೌಡ ಹಾಗೂ ಜಯಂತ್ ಅವರೊಂದಿಗೆ ಬಂದ ಎಸ್.ಐ.ಟಿ ತಂಡಬ ತಲೆಬುರುಡೆಯ ಸ್ಥಳಮಹಜರು ನಡೆಸಿದ್ದಾರೆ.ಇಡೀ ಪ್ರಕರಣದಲ್ಲಿ ಈ ಬುರುಡೆಯ ಸುತ್ತ ಹಲವು ಕತೆಗಳನ್ನಿ ಹೆಣೆಯಲಾಗಿತ್ತು. ಆದರೆ ಅದೆಲ್ಲದಕ್ಕೂ ಇದೀಗ ಕೊನೆಯಾಗಿದ್ದು ತಲೆಬುರುಡೆಯನ್ನು ಇದೇ ಸ್ಥಳದಿಂದ ತೆಗೆದಿರುವುದು ತನಿಖೆಯಿಂದ ಬಹಿರಂಗ ಗೊಂಡಿದೆಈ ಪ್ರಕರಣದಲ್ಲಿ ಬುರುಡೆಯನ್ನು ಮೊದಲು ನೋಡಿರುವ ವಿಠಲ ಗೌಡ ಹಾಗೂ...
ಬುರುಡೆ ಪ್ರಕರಣ ಚಿನ್ನಯ್ಯ ನ್ಯಾಯಾಲಯಕ್ಕೆ ಹಾಜರು 14 ದಿನಗಳ ನ್ಯಾಯಾಂಗ ಬಂಧನ
ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿ ಬಂದಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು ಶನಿವಾರ ಆತನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಸಾಕ್ಷಿ ದೂರುದಾರನಾಗಿ ಬಂದ ಚಿನ್ನಯ್ಯನನ್ನುಆ23 ರಂದು ಎಸ್.ಐ.ಟಿ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿತ್ತು ಆಭದಲ್ಲಿ ಸೆ.3ರ ವರೆಗೆ ವಶಕ್ಕೆ ಪಡೆದಿದ್ದರು, ಸೆ.3ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ ವೇಳೆ ಸೆ6 ರ ವರೆಗೆ ಆತನನ್ನು ಎಸ್.ಐ.ಟಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿತ್ತು....
ಬೆಳಾಲು ಸೇವಾ ಸಹಕಾರಿ ಬ್ಯಾಂಕಿನ ಅವ್ಯವಹಾರ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬೆಳ್ತಂಗಡಿ; ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.ಬಂಧಿತ ಆರೋಪಿ ಬ್ಯಾಂಕಿನ ಮಾಜಿ ಸಿಬ್ಬಂದಿ ಸದಾಶಿವ ಯಾನೆ ಸುಜಿತ್ ಎಂಬಾತನಾಗಿದ್ದಾನೆ. ಮಂಗಳೂರಿನ ಪಡೀಲ್ ನಲ್ಲಿ ತಲೆ ಮರೆಸಿಕೊಂಡಿದ್ದ ಈತನನ್ನು ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆತಗ ಗಾಣಿಗೇರ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಸೆ.5ರಂದು ವಶಕ್ಕೆ ಪಡೆದಿದ್ದರು. ಆರೋಪಿಯನ್ನು ಸೆ.6 ರಂದು ಅಪರಾಹ್ನ ನ್ಯಾಯಾಲಯಕ್ಕೆ ಹಾಜರು...
ಬುರುಡೆ ಪ್ರಕರಣ ಚಿನ್ನಯ್ಯ ಇಂದು ನ್ಯಾಯಾಲಯಕ್ಕೆ ಹಾಜರು
ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿ ಬಂದಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು ಶನಿವಾರ ಆತನನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆಆ23 ರಂದು ಚಿನ್ನಯ್ಯ ನನ್ನು ಎಸ್.ಐ.ಟಿ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿಸೆ.3ರ ವರೆಗೆ ವಶಕ್ಕೆ ಪಡೆದಿದ್ದರು, ಸೆ.3ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ ವೇಳೆ ಸೆ6 ರ ವರೆಗೆ ಆತನನ್ನು ಎಸ್.ಐ.ಟಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿತ್ತು. ಶನಿವಾರ ಚಿನ್ನಯ್ಯನನ್ನು ಮತ್ತೆ ನ್ಯಾಯಾಲಯಕ್ಕೆಹಾಜರು ಪಡಿಸಲಾಗುತ್ತಿದೆ. ಬುರುಡೆ ಪ್ರಕರರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ...
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಎಸ್.ಐ.ಟಿ ಮುಂದೆ ವಿಚಾರಣೆಗೆ ಹಾಜರಾದ ಸೌಜನ್ಯ ಮಾವ ವಿಠಲ ಗೌಡ
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಎಸ್.ಐ.ಟಿ ನೀಡಿದ ನೋಟಿಸ್ ನಂತೆ ಬೆಳ್ತಂಗಡಿ ಎಸ್.ಐ.ಟಿ ಠಾಣೆಗೆ ವಿಚಾರಣೆಗಾಗಿ ಸೌಜನ್ಯ ಮಾವ ವಿಠಲ ಗೌಡ ಸೆ.5 ರಂದು ಸಂಜೆ ಹಾಜರಾಗಿದ್ದಾರೆ. ಜಯಂತ್. ಟಿ ಮತ್ತು ಗಿರೀಶ್ ಮಟ್ಟಣ್ಣವರ್ ಜೊತೆ ನಿಕಟ ಸಂಪರ್ಕದಲ್ಲಿದ್ದ ವಿಠಲ ಗೌಡ ಅವರಿಗಿದ್ದು ಈ ಕಾರಣಕ್ಕಾಗಿ ವಿಚಾರಣೆಗೆ ಕರೆಸಿರುವುದಾಗಿ ತಿಳಿದು ಬಂದಿದೆ.ತಡ ರಾತ್ರಿಯ ವರೆಗೂ ಎಸ್.ಐ.ಟಿ ಕಚೇರಿಯಲ್ಲಿ ಎಲ್ಲರ ವಿಚಾರಣೆ ನಡೆದಿತ್ತು. ವಿಚಾರಣೆ ಬಳಿಕ ಹಿಂತಿರುಗಿದ್ದಾರೆ















