ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು
ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಸಹಿ ಹಾಕಲು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಡಿ.22 ರಂದು ಬೆಳಗ್ಗೆ 11:30 ಕ್ಕೆ ಆರೋಪಿ ಚಿನ್ನಯ್ಯ ತನ್ನ ಪತ್ನಿ ಮಲ್ಲಿಕಾ ಜೊತೆ ಬಾಡಿಗೆ ಆಟೋ ರಿಕ್ಷಾದಲ್ಲಿ ಬಂದು ಹಾಜರಾಗಿ ಎಸ್ಐಟಿ ದಾಖಲೆ ಪುಸ್ತಕಕ್ಕೆ ಸಹಿ ಹಾಕಿ ವಾಪಸ್ 12:30 ಕ್ಕೆ ಆಟೋ ರಿಕ್ಷಾದಲ್ಲಿ ತೆರಳಿದ್ದಾನೆ.
ಧರ್ಮಸ್ಥಳ ಅಶೋಕ ನಗರದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ನಿಧಿಯಿಂದ 2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ
ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಅನುದಾನದಲ್ಲಿ ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗೆ 2.41 ಕೋಟಿ ರೂ. ಮಂಜೂರಾಗಿದ್ದು ಕಾಶಮಗಾರಿಗೆ ಶಿಲಾನ್ಯಾಸ ಸಮರಂಭ ಭಾನುವಾರ ಅಮೃತವರ್ಷಿಣಿ ಸಭಾಭವನದ ಬಳಿ ಇರುವ ಮೈದಾನದಲ್ಲಿ ನಡೆಯಿತು.ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ಮಾಡಿದ ಶಾಸಕ ಹರೀಶ್ ಪೂಂಜ ಮಾತನಾಡಿ, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ದಕ್ಷ ನೇತೃತ್ವದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಕನಸು ಕಂಡ ಗ್ರಾಮರಾಜ್ಯದ ಮೂಲಕ ರಾಮರಾಜ್ಯದ ಕನಸು ದೇಶದೆಲ್ಲೆಡೆ ನನಸಾಗುತ್ತಿದೆ. ಅಶೋಕನಗರದಲ್ಲಿ ರಸ್ತೆ, ಬೀದಿದೀಪ, ಚರಂಡಿ ವ್ಯವಸ್ಥೆ, ಸ್ವಚ್ಛತೆ ಮೊದಲಾದ ಮೂಲಭೂತ ಸೌಕರ್ಯಗಳ ಪೂರೈಕೆಗಾಗಿ...
ಶಿಶಿಲ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಮಹಿಳೆ ಮೃತ್ಯು
ಬೆಳ್ತಂಗಡಿ: ಶಿಶಿಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಡಿ. 21ರಂದು ನಡೆದಿದೆ.ಇಲ್ಲಿನ ಗುಡ್ಡೆ ತೋಟ ನಿವಾಸಿ ಪ್ರೇಮ ( ವ. 55)ರವರು ಮೃತ ಮಹಿಳೆಯಾಗಿದ್ದಾರೆ. ಮದ್ಯಾಹ್ನ ದ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಇವರಿಗೆ ನಾಗರ ಹಾವು ಕಡಿದಿದೆಹಾವು ಕಡಿದ ತಕ್ಷಣ ಪುತ್ತೂರು ಸರಕಾರಿ ಆಸ್ಪತ್ರೆಗೆಶೌರ್ಯ ವಿಪತ್ತು ತಂಡದ ಸದಸ್ಯರ ಸಹಾಯದೊಂದೊಂದಿಗೆ ಕರೆದೋಯ್ಯಲಾಯಿತಾದರೂ ವಿಷ ವಿಪರೀತ ಅವರಿಸಿರುವ ಕಾರಣ ಮೃತಪಟ್ಟಿದ್ದಾರೆ ಎಂದು ತಿಳಿದುಮೃತ ಮಹಿಳೆ ಓರ್ವ ಹೆಣ್ಣು ಮಗಳು ವಿಜಯ ಹಾಗೂ ಪುತ್ರ...
ಚಿನ್ನಯ್ಯನಿಗೆ ಪೊಲೀಸ್ ರಕ್ಷಣೆ ನೀಡಿ ಜಯಂತ್ ಟಿ ಯಿಂದ ಮುಖ್ಯಮಂತ್ರಿಗಳಿಗೆ ಮನವಿ
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿರುವ ಚಿನ್ನಯ್ಯ ಸೌಜನ್ಯ ಹೋರಾಟಗಾರರ ವಿರುದ್ದ ಪೊಲೀಸರಿಗೆ ದೂರು ನೀಡಿದ್ದು ಈ ದೂರು ನೀಡಲು ಒತ್ತಡ ಹಾಕಿ ನಡೆಸಿರುವ ಅಪರಾಧಿಕ ಪಿತೂರಿಯ ಬಗ್ಗೆ ತನಿಖೆ ನಡೆಸುವಂತೆ ಹಾಗೂ ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಿ ರಕ್ಷಣೆ ನೀಡುವಂತೆ ಸೌಜನ್ಯ ಪರ ಹೋರಾಟಗಾರ ಜಯಂತ್ ಟಿ ಮುಖ್ಯಮಂತ್ರಿ ಯವರಿಗೆ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಮಾಡಿದ್ದಾರೆ. ಮನವಿಯಲ್ಲಿ ಏನಿದೆಚಿನ್ನಯ್ಯ ಜಾಮೀನಿನ ಮೇಲೆ ಹೊರಬಂದು ಬಳಿಕ ಪೊಲೀಸರಿಗೆ ಸೌಜನ್ಯ ಪರ ಹೋರಾಟಗಾರರಿಂದ ತನಗೆ ಜೀವ ಭಯವಿದೆ ಆದ್ದರಿಂದ ತನಗೆ ರಕ್ಷಣೆ ನೀಡಬೇಕು...
ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಕ್ರಿಸ್ಮಸ್ ಆಚರಣೆ
ಬೆಳ್ತಂಗಡಿ; ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ ಡಿಸೆಂಬರ್ 20 ರಂದು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಷ್ಪರಾಜ್ ವಹಿಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾದರ್ ಬಿನೋಯಿ ಎ ಜೆ ಪ್ರಾಸ್ತಾವಿಕ ನುಡಿಯನ್ನಾಡಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸೈಂಟ್ ಮೇರಿ ಚರ್ಚ್ ಇದರ ಸಹಾಯಕ ಧರ್ಮಗುರುಗಳಾದ ವಂದನೀಯ ಫಾದರ್ ಎಬಿನ್ ಕುರಿಯನ್ ಕ್ರಿಸ್ಮಸ್ ಕೇಕ್ ಕತ್ತರಿಸಿ ಕ್ರಿಸ್ಮಸ್ ಸಂದೇಶ ನೀಡಿದರು. ಸಿಸ್ಟರ್ ಲೀನಾ ಮದರ್ಸುಪಿರಿಯರ್ ಕುಟ್ರುಪ್ಪಾಡಿ ಕಾನ್ವೆಂಟ್, ಮಾತೃವೇದಿ...
ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ಸಭೆ
ಬೆಳ್ತಂಗಡಿ, ಡಿಸೆಂಬರ್ 20: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಅಡಿಯಲ್ಲಿ ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರಾದ ಅನಿಲ್ ಕುಮಾರ್ ಎಸ್. ಎಸ್ ರವರು ಕಾರ್ಯಕ್ರಮ ಉದ್ಘಾಟನೆ ನಡೆಸಿದರು. ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮ ಧರ್ಮಸ್ಥಳ ದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯ ಕಾರ್ಯಕ್ರಮವಾಗಿದೆ. ರಾಜ್ಯದ 91 ತಾಲ್ಲೂಕಿನಲ್ಲಿ ವಿಪತ್ತು ನಿರ್ವಹಣಾ ಸಮಿತಿ...
ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ರಾಜ್ಯ ಸರಕಾರದಿಂದ ರೂಬ1ಕೋಟಿ ಅನುದಾನ ಮಂಜೂರು
ಬೆಳ್ತಂಗಡಿ; ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅವಶ್ಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ರಾಜ್ಯ ಸರಕಾರ ರೂ. 1 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದೆ.ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಉನ್ನತ ಶಿಕ್ಷಣ ಸಚಿವರಾದ ಸನ್ಮಾನ್ಯ ಡಾ.ಎಂ.ಸಿ. ಸುಧಾಕರ್ ಅವರಿಗೆ ಶಾಸಕರಾದ ಹರೀಶ್ ಪೂಂಜಾ ಅವರು ಧನ್ಯವಾದ ಸಲ್ಲಿಸಿರುತ್ತಾರೆ.
ಬಸ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು ಪ್ರಯಾಣಿಕರಿಗೆ ಗಾಯ
ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆಎಸ್ಸಾರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದು,ಧರೆಗೆ ಗುದ್ದಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಹಾಸನದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಏಕಾಏಕಿ ರಸ್ತೆಯ ಬಲಬದಿಗೆ ಚಲಿಸಿ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಧರ್ಮಸ್ಥಳದಿಂದ ಕುಕನೂರಿಗೆ ಸಂಚಾರ ನಡೆಸುವ ಕೆಎಸ್ಸಾರ್ಟಿಸಿಬಸ್ ನ ಎಡಬದಿಗೆ ಡಿಕ್ಕಿ ಹೊಡೆದು ಸುಮಾರು 50 ಮೀ.ದೂರದವರೆಗೆ ಹೋಗಿ ಧರೆಗೆ ಗುದ್ದಿ ಉರುಳಿ ಬಿತ್ತು. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು...
ಇಂದಬೆಟ್ಟು; ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ
ಬೆಳ್ತಂಗಡಿ; ಇಂದಬೆಟ್ಟು ಗ್ರಾಮದ ತುರ್ಕರೆಬೆಟ್ಟು ರಾಜೇಶ್ ಎಂಬವರಿಗೆ ಸೇರಿದ ದನದ ಹಟ್ಟಿ, ಕೊಟ್ಟಿಗೆ ಹಾಗೂ ರಬ್ಬರ್ ಸ್ಮೋಕ್ ಹೌಸ್ ಗೆ ಶುಕ್ರವಾರ ತಡ ರಾತ್ರಿ ವೇಳೆಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಕೊಟ್ಟಿಗೆ ಸಂಪೂರ್ಣ ಸುಟ್ಟು ಹೋಗಿರುತ್ತದೆ. ಈ ಸಂದರ್ಭದಲ್ಲಿ ಸ್ಥಳಿಯರ ಸಹಕಾರದಿಂದ ಹಟ್ಟಿಯಲ್ಲಿ ಕಟ್ಟಿದ್ದ ದನ ಹಾಗೂ ಕರುವನ್ನು ರಕ್ಷಿಸಲಾಗಿದೆ, ಜನರೇ ಸೇರಿ ನೀರು ಹಾಕಿ ಬೆಂಕಿ ನಂದಿಸಲಾಗಿದೆ, ಕೊಟ್ಟಿಗೆಯಲ್ಲಿ ಇದ್ದ ರಬ್ಬರ್ ಶೀಟ್, ಅಡಿಕೆ ಹಾಗೂ ಕೃಷಿ ಸಂಬಂಧಿತ ಉಪಕರಣಗಳು, ಮೇಲ್ಚಾವಣಿ ಸುಟ್ಟು ಹೋಗಿದೆ. ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದ ಸ್ಥಳಕ್ಕೆ...
ಬೆಳ್ತಂಗಡಿ : ಜೀವ ಬೆದರಿಕೆ ಹಾಕಬಹುದು ಎಂದು ಮಹೇಶ್ ಶೆಟ್ಟಿ ಹಾಗೂ ಇತರರ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ ಚಿನ್ನಯ್ಯ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಬುರುಡೆ ಚಿನ್ನಯ್ಯ ಇದೀಗ ಮಹೇಶ್ ಶೆಟ್ಟಿ ಹಾಗೂ ಇತರ ನಾಲ್ವರು ತಮಗೆ ಜೀವಬೆದರಿಕೆ ಹಾಕಬಹುದು ಆದ್ದರಿಂದ ತನಗೆ ರಕ್ಷಣೆ ನೀಡಬೇಕು ಎಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ದೂರು ಅರ್ಜಿ ಸಲ್ಲಿಸಿದ್ದಾನೆ.ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿ ಡಿ.18 ರಂದು ಶಿವಮೊಗ್ಗ ಜೈಲಿನಿಂದ ಬಂದ ಚಿನ್ನಯ್ಯ ತನ್ನ ಪತ್ನಿ ಮಲ್ಲಿಕಾ ಮತ್ತು ಸಹೋದರಿ ರತ್ನ ಜೊತೆ ಡಿ.18 ರಂದು ರಾತ್ರಿ 8 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ಮಹೇಶ್ ಶೆಟ್ಟಿ ತಿಮರೋಡಿ,...















