ಬೆಳ್ತಂಗಡಿ ನಗರದಲ್ಲಿ ಚಿರತೆ ಪ್ರತ್ಯಕ್ಷ ಆತಂಕದಲ್ಲಿ ಜನರು ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಪರಿಶೀಲನೆ
ಬೆಳ್ತಂಗಡಿ; ನಗರದ ಮುಗುಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಆವಾಸ್ ವಸತಿನಿಲಯದ ಬಳಿಯಿರುವ ಅಡಿಕೆ ತೋಟ ದಲ್ಲಿಬಳಿಯಲ್ಲಿ ಶನಿವಾರ ಬೆಳಿಗ್ಗೆ 6-00 ಗಂಟೆಗೆಚಿರತೆಯೊಂದು ಪತ್ತೆಯಾಗಿದೆ. ಬೆಳಿಗ್ಗೆ ವಸತಿ ನಿಲಯದ ಮಕ್ಕಳು ಬಟ್ಟೆ ತೋಳೆಯಲು ಹೊರಗೆ ಬಂದಾಗ ನಿಲಯಕ್ಕೆ ತಾಗಿಕೊಂಡು ಪಕ್ಕದಲ್ಲಿರುವ ಅಡಿಕೆ ತೋಟದ ಬದಿಯಲ್ಲೇ ಇದ್ದ ಚಿರತೆಯೊಂದನ್ನು ನೋಡಿದಶಾಲಾ ಮಕ್ಕಳು ಹೆದರಿ ನಿಲಯದ ಒಳಗೆ ಓಡಿ ಹೋಗಿ ಬಾಗಿಲು ಹಾಕಿ ಅವಿತು ಕೊಂಡು ನಿಲಯ ಸಿಬ್ಬಂದಿಗೆ ಮತ್ತು ಸ್ಥಳೀಯರಿಗೆ ಮಾಹಿತಿಯನ್ನು ನೀಡಿದ್ದಾರೆ. ಅಲ್ಲದೇ ಅದೇ ಪರಿಸರದ ಪಕ್ಕದ ಕೆಲ್ಲಗುತ್ತು ಜಂಕ್ಷನ್ ಬಳಿಯಲ್ಲಿ ಮಹಿಳೆಯೊಬ್ಬರು ಬೆಳಿಗ್ಗೆ 7-15...
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
ಬೆಳ್ತಂಗಡಿ; ಉಜಿರೆಯ ಸೌಜನ್ಯ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಕಗಕೆ ರಾಜ್ಯ ಉಚ್ಚ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿರುವುದಾಗಿ ತಿಳಿದು ಬಂದಿದೆ.ಪುತ್ತೂರು ಸಹಾಯಕ ಕಮಿಷನರ್ ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶಕ್ಕೆ ತಾತ್ಕಲಿಕ ತಡೆಯಾಜ್ಞೆ ನೀಡಿದ್ದು ಸಹಾಯಕ ಕಮಿಷನರ್ ನೀಡಿರುವ ಆದೇಶ ಸಮರ್ಪಕವಾಗಿಲ್ಲ ಎಂದು 21ದಿನದೊಳಗೆ...
ಉಜಿರೆ: ಕಾಮಗಾರಿ ವೇಳೆ ತಡೆಗೋಡೆ ಕುಸಿದು ಕಾರ್ಮಿಕ ಸಾವು
ಬೆಳ್ತಂಗಡಿ : ಉಜಿರೆಯಿಂದ ಸುರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದವೇಳೆ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕರೊರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ - ಸುರ್ಯ ರಸ್ತೆಯಲ್ಲಿ ಜ.31 ರಂದು ಬೆಳಗ್ಗೆ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆ ಕುಸಿದು ಬಿದ್ದಿದೆ. ಬಿಹಾರ ಮೂಲದ ರಾಕೇಶ್ ಕುಮಾರ್(25) ಎಂಬಾತ ಮಣ್ಣಿನಡಿಯಲ್ಲಿ ಸಿಲುಕಿದ್ದು ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ ಆತನನ್ನು ಹೊರತೆಗೆದು ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರು ಕಾರ್ಮಿಕರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.ಮೃತದೇಹ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು....
ತಾಲೂಕಿನಲ್ಲಿ ಮುಂದುವರಿದ ಚಿರತೆ ದಾಳಿ; ಆಡನ್ನು ಕೊಂದು ಹಾಕಿದ ಚಿರತೆ
ಬೆಳ್ತಂಗಡಿ; ತಾಲೂಕಿನಲ್ಲಿ ಚಿರತೆ ಹಾವಳಿ ನಿರಂತರವಾಗಿ ಮುಂದುವರಿದಿದ್ದು ಪಡಂಗಡಿ ಗ್ರಾಮದ ಪೊಯ್ಯೆಗುಡ್ಡದಲ್ಲಿ ಚಿರತೆ ಆಡನ್ನು ಕೊಂದುಹಾಕಿದೆ ನಡಗ್ರಾಮ ಪಂಚಾಯತು ವ್ಯಾಪ್ತಿಯ ಕನ್ಯಾಡಿಯಲ್ಲಿ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ.ಪಡಂಗಡಿ ಪೊಯ್ಯೆಗುಡ್ಡದಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಮನೆಯ ಸಮೀಪದ ಹಟ್ಟಿಯಲ್ಲಿ ಕಟ್ಟಿದ್ದ ಆಡನ್ನು ಚಿರತೆ ಕೊಂದು ಹಾಕಿದ್ದು ಅರ್ಥ ತಿಂದ ಬಳಿಕ ಬಿಟ್ಟು ಹೋಗಿದೆ.ನಿರಂತರವಾಗಿ ಚಿರತೆ ಕಾಣಿಸಿಕೊಳ್ಳುತ್ತಿರುವ ನಡ ಗ್ರಾ.ಪಂ ವ್ಯಾಪ್ತಿಯ ಕನ್ಯಾಡಿಯಲ್ಲಿ ಶುಕ್ರವಾರ ಮತ್ತೆ ಚಿರತೆ ಕಾಣಿಸಿಕೊಂಡಿದೆ. ಸ್ಥಳೀಯ ನಿವಾಸಿ ರಮಾನಂದ ಶರ್ಮ ಅವರ ಮನೆಯ ಸಮೀಪ ಗದ್ದೆಯಲ್ಲಿ ಚಿರತೆ ಕಾಣಿಸಿಕೊಂಡಿದೆ. ಇದೇ ಗ್ರಾಮದಲ್ಲಿ ಈ...
ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ 35ನೇ ವರ್ಷದ ಸಂಭ್ರಮ”ಚಾಲೆಂಜರ್ಸ್ ಉತ್ಸವ”
ಬೆಳ್ತಂಗಡಿ; ಯುವ ಜನತೆಯ ಸಮಯದ ಸದ್ವಿನಿಯೋಗದೊಂದಿಗೆ ಅವರನ್ನು ಸಜ್ಜನರಾಗಿ ರೂಪಿಸುವಲ್ಲಿ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಚೂಣಿಯಲ್ಲಿದೆ. ಸಮಾಜದ ಕಷ್ಟಗಳಿಗೆ ಸ್ಪಂದಿಸುವವರೇ ನಿಜವಾದ ಸೇವಕರು ಎಂದು ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ, ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಗೌರವಾಧ್ಯಕ್ಷ ಶ್ರೀಧರ ಜಿ.ಭಿಡೆ ಹೇಳಿದರು.ಅವರು ಗುರುವಾರ ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ 35ನೇ ವರ್ಷದ ಸಂಭ್ರಮ "ಚಾಲೆಂಜರ್ಸ್ ಉತ್ಸವ"ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗುರುವಾಯನಕೆರೆಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಮಾತನಾಡಿ,ಉತ್ತಮ ವ್ಯಕ್ತಿತ್ವ ಉಳ್ಳವರು ನಿಜವಾದ ಶ್ರೀಮಂತರು. ಮಕ್ಕಳ ವ್ಯಕ್ತಿತ್ವ...
ಚಾರ್ಮಾಡಿ ಗ್ರಾಮ ಪಂಚಾಯತ್ ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ತಹಶೀಲ್ದಾರರಿಗೆ ಮನವಿ
ಬೆಳ್ತಂಗಡಿ; ಚಾರ್ಮಾಡಿ ಗ್ರಾಮ ಪಂಚಾಯತ್ ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರರಿಗೆ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗಳ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.ಬೆಳ್ತಂಗಡಿ; ಜೆಜೆಎಂ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಗುಂಪೊಂದು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಹಲವು ದಿನಗಳಿಂದ ಗುಡಿಸಲುಗಳನ್ನು ನಿರ್ಮಿಸಿ ನೆಲೆಸಿದ್ದು, ಇದರಿಂದ ಪಂಚಾಯತ್ ಆವರಣದ ಹಾಗೂ ಪೇಟೆಯ ಶುಚಿತ್ವ ಹದಗೆಟ್ಟು ಗ್ರಾಮಸ್ಥರು ಹಾಗೂ ಪಂಚಾಯತ್‌ಗೆ ಆಗಮಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ವಿಷಯವನ್ನು ಈಗಾಗಲೇ ಗ್ರಾಮ ಸಭೆಯಲ್ಲಿ ಪ್ರಸ್ತಾಪಿಸಲಾಗಿದ್ದು, ಮೂರು ದಿನಗಳೊಳಗೆ ಗುಡಿಸಲುಗಳನ್ನು ತೆರವುಗೊಳಿಸಲಾಗುತ್ತದೆ ಎಂಬ...
ನೆರಿಯ ನೀಲಯ್ಯ ಮಲೆಕುಡಿಯ ಅವರಿಗೆ ಶ್ರದ್ದಾಂಜಲಿ ಸಭೆ
ಬೆಳ್ತಂಗಡಿ: ನೀಲಯ್ಯ ಮಲೆಕುಡಿಯರು ಎಲ್ಲಾ ಧರ್ಮೀಯರನ್ನು ಸಹೋದರರಂತೆ ಕಂಡು , ಸಮಾಜದ ಸೌಹಾರ್ದತೆಗಾಗಿ ದುಡಿದ ನಾಯಕ ಎಂದು ನೆರಿಯ ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಯು.ಸಿ ಪೌಲೋಸ್ ಹೇಳಿದರು. ಅವರು ನೆರಿಯ ಗ್ರಾಮದ ಕಲ್ಕಾರ್ ನಲ್ಲಿ ಹಿರಿಯ ಕಾಂಗ್ರೆಸ್ ನಾಯಕ , ಮಾಜಿ ನೆರಿಯ ಗ್ರಾಮ ಪಂಚಾಯತ್ ಸದಸ್ಯ , ಮಾಜಿ ಭೂ ನ್ಯಾಯ ಮಂಡಳಿ ಸದಸ್ಯ ನೀಲಯ್ಯ ಮಲೆಕುಡಿಯ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಒಂದು ನಿರ್ದಿಷ್ಟ ಪಕ್ಷದ ನಾಯಕರಾಗಿದ್ದರೂ ಎಲ್ಲರೊಂದಿಗೆ ಬೆರೆತು , ತನ್ನದೇ ರೀತಿಯಲ್ಲಿ ತಾಲೂಕಿನ ಅಭಿವೃದ್ಧಿಗಾಗಿ ದುಡಿದ...
ಪದೇ ಪದೇ ಐ.ಟಿ ದಾಳಿ ಹಿನ್ನಲೆ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಆತ್ಮಹತ್ಯೆ
ಬೆಂಗಳೂರು, ಜನವರಿ 30: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಲ್ಯಾಂಗ್ಫೋರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ನಡೆದಿದೆ. ಪದೇ ಪದೆ ಐಟಿ ಇಲಾಖೆ ಅಧಿಕಾರಿಗಳಿಂದ ದಾಳಿಯಿಂದ ಮನನೊಂದು ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಕೂಡ IT ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಶೋಕ್ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ ಕಾರ್ಯಕ್ರಮ
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ (SDM College) ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರು ತಮ್ಮ 33 ವರ್ಷಗಳ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿ ಬಳಗ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಯೋಗದಲ್ಲಿ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆಎಸ್.ಡಿ.ಎಂ ಕಾಳೆಜಿನ ಪತ್ರಿಕೋದ್ಯಮ ವಿಭಾಗದ ಮೂಲಕವಾಗಿ ನೂರಾರು ಮಂದಿ ಪತ್ರಕರ್ತರನ್ನು ರೂಪಿಸಿದ ಭಾಸ್ಕರ ಹೆಗಡೆ ಅವರ ಶಿಷ್ಯಂದಿರು ದೇಶದ ವಿವಿಧ ಭಾಗಗಳಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು...
ಗೇರುಕಟ್ಟೆ ಕಾರು ಬೈಕ್ ನಡುವೆ ಅಪಘಾತ
ಗೇರುಕಟ್ಟೆ: ಇಲ್ಲಿನ ಪರಪ್ಪು ಸಮೀಪ ಗೇರುಕಟ್ಟೆ ಕಡೆಯಿಂದ ನಾಳಕ್ಕೆ ಹೋಗುವ ಸ್ವಿಫ್ಟ್ ಕಾರು ಹಾಗೂ ನಾಳದ ಕಡೆಯಿಂದ ಬರುವ ಬೈಕ್ ಎದುರು ಬದುರಾಗಿ ಡಿಕ್ಕಿ ಹೊಡೆದ ಘಟನೆ ಜ.29 ರಂದು ರಾತ್ರಿ ನಡೆದಿದೆ.ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯರ ಸಹಕಾರದಿಂದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.














