ಶಿಶಿಲ;ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣಕ್ಕೆ 2. 75 ಕೋಟಿ ಅನುದಾನ ಮಂಜೂರು ರಕ್ಷಿತ್ ಶಿವರಾಂ
ಬೆಳ್ತಂಗಡಿ; ತಾಲೂಕಿನ ಶಿಶಿಲ ಗ್ರಾಮದ ಬಹುದಿನದ ಬೇಡಿಕೆಯಾಗಿದ್ದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣ ಕಾಮಗಾರಿ 2 ಕೋಟಿ 75 ಲಕ್ಷ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕೋಪಯೋಗಿ ಇಲಾಖೆ ಮುಖಾಂತರ ಅನುದಾನ ಬಿಡುಗಡೆಗೊಳಿಸಿದ್ದಾರೆ ಎಂದು ಕೆಪಿಸಿಸಿ ಪ್ರಾಧಾನ ಕಾರ್ಯದರ್ಶಿರಕ್ಷಿತ್ ಶಿವರಾಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದ್ವೇಷ ಬಾಷಣ ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನದ ವಾರಂಟ್ ಜಾರಿ
ಬೆಳ್ತಂಗಡಿ : ಇಂದಬೆಟ್ಟು ಖಾಸಗಿ ಕಾರ್ಯಕ್ರಮದಲ್ಲಿ ಜಾತಿಯ ಬಗ್ಗೆ ದ್ವೇಷ ಭಾಷಣ ಮಾಡಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಕಿಶೋರ್ ಕುಮಾರ್ ಎಂಬವರು ದಾಖಲಿಸಿದ್ದ 14/2025 ರ 353(2) ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ, ಪ್ರಕರಣದ ವಿಚಾರಣೆ ನಡೆಯುತ್ತಿದ್ದು ಪದೆ ಪದೆ ನ್ಯಾಯಾಲಯಕ್ಕೆ ಗೈರಾಗುತ್ತಿರುವ ಹಿನ್ನಲೆಯಲ್ಲಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ದ ಡಿ.24 ರಂದು ಬೆಳ್ತಂಗಡಿ ನ್ಯಾಯಾಲಯ ಬಂಧನದ ವಾರಂಟ್ ಜಾರಿ ಮಾಡಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್...
ಮುಗೆರೋಡಿ ಕನ್ಸ್ಟ್ರಕ್ಷನ್ ನ (MCK) ಉಜಿರೆಯ ಹಾಟ್ ಮಿಕ್ಸ್ ಘಟಕಕ್ಕೆಹೈಕೋರ್ಟ್ ನೋಟಿಸ್
ಬೆಂಗಳೂರು: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮಲೆಯಡ್ಕ ಸಮೀಪದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಜನವಸತಿ ಬಳಿ ನಿಯಮಗಳನ್ನು ಮೀರಿ ಕಾರ್ಯನಿರ್ವಹಿಸುತ್ತಿದೆ ಎನ್ನಲಾದ ಮುಗ್ರೋಡಿ ಕನ್ ಸ್ಟ್ರಕ್ಷನ್ ಹಾಟ್ ಮಿಕ್ಸ್ ಘಟಕಕ್ಕೆ(MCK) ಕರ್ನಾಟಕ ರಾಜ್ಯ ಮಾನ್ಯ ಉಚ್ಚ ನ್ಯಾಯಾಲಯ ನೋಟೀಸ್ ಜಾರಿ ಮಾಡಿದೆ. 2008 ರಿಂದ ನಾಡ್ಜೆ ಅರಣ್ಯ ವ್ಯಾಪ್ತಿಗೆ ಸಮೀಪವಿರುವ ಉಜಿರೆ- ಪಡ್ವೆಟ್ಟು-ಸುರ್ಯ ರಸ್ತೆಯಲ್ಲಿ ಮುಗ್ರೋಡಿ ಕನ್ ಸ್ಟ್ರಕ್ಷನ್ ಮಿಕ್ಸಿಂಗ್ (MCK) ಘಟಕ ಕಾರ್ಯನಿರ್ವಹಿಸುತ್ತಿದ್ದು. ಕಲುಷಿತ ನೀರು, ಹೊಗೆ, ತ್ಯಾಜ್ಯದ ಅಸಮರ್ಪಕ ನಿರ್ವಹಣೆ , ಗ್ರಾಮೀಣ ರಸ್ತೆಯಲ್ಲಿ ಎಗ್ಗಿಲ್ಲದೆ ಸಾಗುವ ಭಾರೀ...
ಲಾಯಿಲ ಸಂಚರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ ಸವಾರನಿಗೆ ಗಂಭೀರ ಗಾಯ
ಬೆಳ್ತಂಗಡಿ : ಸಂಚರಿಸುತ್ತಿದ್ದ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ಮಾಡಿದ್ದು. ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕೂಡೇಲು ನಿವಾಸಿ ವೆಂಕಪ್ಪ ಪೂಜಾರಿಯ ಮಗ ಸುಕೇಶ್(31) ಎಂಬಾತ ಬೈಕ್ ಶೋರೂಂ ನಲ್ಲಿ ಕೆಲಸ ಮಾಡುತ್ತಿದ್ದು ಎಂದಿನಂತೆ ಬೆಳ್ತಂಗಡಿಯಿಂದ ಕೆಲಸ ಮುಗಿಸಿ ಡಿ.26 ರಂದು ರಾತ್ರಿ ಸುಮಾರು 8:45 ಕ್ಕೆ ಮನೆ ಕಡೆ ಬೈಕ್ ನಲ್ಲಿ ಬರುತ್ತಿದ್ದಾಗ ಲಾಯಿಲ ಗ್ರಾಮದ ಅಲೆಕ್ಕಿ ರಸ್ತೆಯಲ್ಲಿ ಏಕಾಏಕಿ ಕಾಡುಕೋಣ ಕಾಡಿನಿಂದ ಇಳಿದು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಸಂಚರಿಸುತ್ತಿದ್ದಾಗ...
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದಿಂದ 1971 ಇಂಡೋ ಪಾಕ್ ಯುದ್ದದ ವೀರ ಯೋಧ ಜಾರ್ಜ್ ಅವರಿಗೆ ಸನ್ಮಾನ
ಬೆಳ್ತಂಗಡಿ; ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ 1971ರ ಇಂಡೋ ಪಾಕ್ ಯುದ್ದದಲ್ಲಿ ಭಾಗವಹಿಸಿದ್ದ ವೀರ ಯೋಧ ಸಿ ಜಾರ್ಜ್ ಕುಟ್ಟಿ ಅವರನ್ನು ಧರ್ಮಸ್ಥಳ ಗ್ರಾಮದ ಅವರ ಮನೆಗೆ ತೆರಳಿ ಸನ್ಮಾಸಲಾಯಿತು.ಈಸಂದರ್ಬದಲ್ಲಿ ಮಾತನಾಡಿದ ಧರ್ಮಸ್ಥಳ ಸೈಂಟ್ ಜೊಸೆಫ್ ಚರ್ಚ್ ನ ಧರ್ಮ ಗುರುಗಳಾದ ಫಾ. ಜೋಸೆಫ್ ವಾಳೂಕಾರನ್ ಅವರು ದೇಶಕಟ್ಟುವ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ. ದೇಶದ ಒಳಿತಿಗಾಗಿ ತಮ್ಮ ಜೀವನವನ್ನು ಮೀಸಲಿಟ್ಟವರು ಸೈನಿಕರು ಅವರನ್ನು ಗೌರವಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಭಾರತದ ಪರ ಯುದ್ದದಲ್ಲಿ ಭಾಗವಹಿಸಿ ದೇಶದ ಗೆಲುವಿಗೆ...
ಕುವೆಟ್ಟು ಹೆದ್ದಾರಿಯ ದಾರಿದೀಪಗಳ ಲೋಕಾರ್ಪಣೆಗೊಳಿಸಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ; ಗುರುವಾಯನಕೆರೆ ಮೂಡಬಿದ್ರೆ ರಸ್ತೆಯಲ್ಲಿ ರೂ.1.00 ಕೋಟಿ ವೆಚ್ಚದಲ್ಲಿ ಕುವೆಟ್ಟುವಿನಲ್ಲಿ ಅಳವಡಿಸಿರುವ ಹೆದ್ದಾರಿ ದಾರಿ ದೀಪಗಳನ್ನು ಶಾಸಕ ಹರೀಶ್ ಪೂಂಜ ಅವರು ಶುಕ್ರವಾರ ಲೋಕಾರ್ಪಣೆ ಗೊಳಿಸಿದರು.
ಜಯಂತ್ ಟಿ ಕೈಸೇರಿದ ಎಸ್.ಐ.ಟಿ ವರದಿ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಶುಕ್ರವಾರ ಮಹತ್ವದ ಬೆಳವಣಿಗೆಗಳು ನಡೆದಿದ್ದು ಎಸ್.ಐ.ಟಿ ನ್ಯಾಯಾಲಯದಲ್ಲಿ ಸಲ್ಲಿಸಿರುವ ವರದಿ ಕೊನೆಗೂ ಸೌಜನ್ಯ ಪರ ಹೋರಾಟಗಾರ ಜಯಂತ್.ಟಿ ಅವರ ಕೈ ಸೇರಿದೆ. ಎಸ್.ಐ.ಟಿ 3923 ಪುಟಗಳ ವರದಿಯನ್ನು ಸಲ್ಕಿಸಿದ್ದು ಇದರಲ್ಲಿ 1,100 ಪುಟಗಳನ್ನು ನ್ಯಾಯಾಲಯ ಜಯಂತ್ ಅವರಿಗೆ ನೀಡಿರುವುದಾಗಿ ತಿಳಿದು ಬಂದಿದೆ.ಎಸ್.ಐ.ಟಿ ಸಲ್ಲಿಸಿರುವ ವರದಿಯನ್ನು ಬಹಿರಂಗ ಗೊಳಿಸದಂತೆ ನ್ಯಾಯಾಲಯದಲ್ಲಿ ಕೇಳಿಕೊಂಡಿತ್ತು.ಎಸ್.ಐ.ಟಿ ವರದಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ವಿರುದ್ದ ಕ್ರಮ ಕೈಗೊಳ್ಳಲು ಅವಕಾಶ ಕೋರಿ ನ್ಯಾಯಾಲಯಕ್ಕೆ ನ 20 ರಂದು ವರದಿ ಸಲ್ಲಿಸಿದ್ದರು.ಈ ವರದಿಯನ್ನು ಪಡೆಯಲು...
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ವರದಿಯ ಬಗ್ಗೆ ಆದೇಶ ಮುಂದೂಡಿದ ನ್ಯಾಯಾಲಯ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215 ಅಡಿಯಲ್ಲಿ ಸಲ್ಲಿಸಿದ್ದ ವರದಿಯ ಬಗ್ಗೆ .26 ಕ್ಕೆ ನಿಗದಿಪಡಿಸಲಾಗಿದ್ದ ಆದೇಶವನ್ನು ಡಿ29 ಕ್ಕೆ ಬೆಳ್ತಂಗಡಿ ನ್ಯಾಯಾಲಯ ಮುಂದೂಡಿದೆ ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ನ.20 ರಂದು 'ಸುಳ್ಳು ಸಾಕ್ಷಿ' ವರದಿಯನ್ನು (u/s)215 ಅಡಿಯಲ್ಲಿ ಚಿನ್ನಯ್ಯ , ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತ ಭಟ್ ವಿರುದ್ಧ ವರದಿ ಸಲ್ಲಿಸಿದ್ದರು. ಈ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಹೆಚ್.ಟಿ ಅವರು ವಿಚಾರಣೆ ನಡೆಸಿ...
ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ
ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಚಿನ್ನಯ್ಯ ಜೈಲಿನಿಂದ ಬಿಡುಗಡೆ ಬಳಿಕ ಮೊದಲ ಭಾರಿಗೆ ಡಿ.26 ರಂದು 12 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಪತ್ನಿ ಮಲ್ಲಿಕಾ ಹಾಗೂ ವಕೀಲರ ಜೊತೆ ಬಾಡಿಗೆ ಆಟೋ ರಿಕ್ಷಾದಲ್ಲಿ ಬಂದು ಹಾಜರಾಗಿ ಅಲ್ಲಿಂದ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಸಹಿ ಹಾಕಿ ವಾಪಸ್ ಆಟೋ ರಿಕ್ಷಾದಲ್ಲಿ ತೆರಳಿದ್ದಾರೆ.
ಲಾಯಿಲ ಜನಸ್ಪಂದನ ಸಭೆ; ಅನಧಿಕೃತ ಕಟ್ಟಡಗಳ ವಿರುದ್ಧ ಗ್ರಾಮಸ್ಥರು ಆಕ್ಷೇಪ ಕ್ರಮಕ್ಕೆ ಒತ್ತಾಯ
ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ. 26 ರಂದು ಭಾರತ್ ಮಾತಾ ಸಭಾಭವನದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ.ಕೆ., ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಸದಸ್ಯರು, ಇಲಾಖಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರುಲಾಯಿಲ ಗ್ರಾಮದ ವಿವಿದೆಡೆಗಳಲ್ಲಿ ಅಕ್ರಮ ಕಟ್ಟಡಗಳು ಎದ್ದು ನಿಲ್ಲುತ್ತಿವೆ ಇದರ ವಿರುದ್ದ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಪ್ರಶ್ನಿಸಿದರು.24 94/ಸಿಸಿ ಕಡತಗಳು ಕಳೆದ ನಾಲ್ಕು ವರ್ಷಗಳಿಂದ ವಿಲೇಯಾಗದೆ ಬಾಕಿ ಉಳಿದಿದೆ ಆದರೆ ಸರ್ವೇ ನಂಬರ್...















