ಧರ್ಮಸ್ಥಳದಲ್ಲಿ ಧರ್ಮಸಂರಕ್ಷಣಾ ಸಮಾವೇಶ; ಎಸ್.ಐ.ಟಿ. ತನಿಖೆಯಿಂದ ಸತ್ಯದ ಸಾಕ್ಷಾತ್ಕಾರವಾಗುತ್ತಿರುವುದು ಸಂತಸ ದಾಯಕವಾಗಿದೆ.

0

ಉಜಿರೆ: ಸತ್ಯದ ಸತ್ವ ಪರೀಕ್ಷೆಯ ಕಾಲ ಇದಾಗಿದ್ದು ಎಸ್.ಐ.ಟಿ. ತನಿಖೆಯಿಂದ ಅನೇಕ ಸತ್ಯಾಂಶಗಳು ನಮಗೆ ನ್ಯಾಯಯುತವಾಗಿ ಪೂರಕವಾಗಿ ಪ್ರಕಟವಾಗುತ್ತಿದ್ದು, ಸತ್ಯದ ಸಾಕ್ಷಾತ್ಕಾರವಾಗುತ್ತಿರುವುದು ಸಂತಸದಾಯಕವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಅವಿಭಜಿತ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯಿಂದ ಬೆಳ್ತಂಗಡಿ ತಾಲ್ಲೂಕು ಜೈನಸಮಾಜ ಬಾಂಧವರ ಆಶ್ರಯದಲ್ಲಿ ಬೆಳ್ತಂಗಡಿ ಜೈನಪೇಟೆಯಲ್ಲಿರುವ ಬಸದಿಯಿಂದ ಧರ್ಮಸ್ಥಳಕ್ಕೆ ಬೃಹತ್ ವಾಹನಜಾಥಾದಲ್ಲಿ ಬಂದ ಸಮಾಜಬಾಂಧವರಿಗೆ ಶುಭ ಹಾರೈಸಿ ಮಾತನಾಡಿದರು.ಧರ್ಮಸ್ಥಳದಲ್ಲಿ ಹುಟ್ಟಿದ ತಾವು ಮತ್ತು ಕುಟುಂಬಸ್ಥರೆಲ್ಲರೂ ಅದೃಷ್ಟಶಾಲಿಗಳು ಹಾಗೂ ಭಾಗ್ಯವಂತರು. ಭಗವಾನ್ ಚಂದ್ರನಾಥ ಸ್ವಾಮಿ,...

ಬೆಳ್ತಂಗಡಿ : ಬೆಂಗಳೂರು ಜಯಂತ್.ಟಿ ಮನೆಯಲ್ಲಿ ಎಸ್.ಐ.ಟಿ ಶೋಧ ಕಾರ್ಯ ಅಂತ್ಯ

0

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ಜೊತೆ ಎಸ್.ಐ.ಟಿ ಅಧಿಕಾರಿಗಳು ಬೆಂಗಳೂರಿನ ಬಗಳಗುಂಟೆಯ ಪೀಣ್ಯ ದಲ್ಲಿರುವ ಜಯಂತ್ ಟಿ ಬಾಡಿಗೆ ಮನೆ ಮೇಲೆ ಆ.30 ರಂದು ಮಾದ್ಯಾಹ್ನ ಕೋರ್ಟ್ ನಿಂದ ಸರ್ಚ್ ವಾರಂಟ್ ಪಡೆದು ದಾಳಿ ಮಾಡಿ ಪರಿಶೀಲನೆ ನಡೆಸಿ ಸಂಜೆ 6:45 ಕ್ಕೆ ಶೋಧ ಮತ್ತು ಮಹಜರು ಕಾರ್ಯ ಮುಕ್ತಾಯವಾಗಿದೆ. ದಾಳಿ ಮಾಡುವ ವೇಳೆ ಜಯಂತ್.ಟಿ ಮಗ ಎಸ್.ಐ.ಟಿ ಅಧಿಕಾರಿಗಳಿಗೆ ಮನೆಯನ್ನು ಕೀ ನೀಡಿ ಓಪನ್ ಮಾಡಿಸಿ ಮನೆಯೊಳಗೆ ಶೋಧ ನಡೆಸುತ್ತಿದ್ದಾರೆ. ಎಸ್‌.ಐ.ಟಿ ಶೋಧ ವೇಳೆ ಜಯಂತ್.ಟಿ ಪತ್ನಿಯ ಹಳೆ ಆಂಡ್ರೈಡ್ ಮೊಬೈಲ್ ಫೋನ್...

ನೂತನ ಬಿಷಪ್ ಅವರಿಗೆ ಅಭಿನಂದನೆ ಸಲ್ಲಿಸಿದ ರಕ್ಷಿತ್ ಶಿವರಾಂ

0

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ರವರನ್ನು ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಗೂ ಶುಭಾಶಯ ಕೋರಿದರು.ಈ ಸಂದರ್ಭದಲ್ಲಿ ಪ್ರವೀಣ್ ಫೆರ್ನಾಂಡಿಸ್ ಉಜಿರೆ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್‌‌.ಐ.ಟಿ ದಾಳಿ

0

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ಜೊತೆ ಎಸ್.ಐ.ಟಿ ಅಧಿಕಾರಿಗಳು ಬೆಂಗಳೂರಿನ ಬಗಳಗುಂಟೆಯ ಪೀಣ್ಯ ದಲ್ಲಿರುವ ಜಯಂತ್ ಟಿ ಬಾಡಿಗೆ ಮನೆ ಮೇಲೆ ಆ.30 ರಂದು ಮಾದ್ಯಾಹ್ನ ಕೋರ್ಟ್ ನಿಂದ ಸರ್ಚ್ ವಾರಂಟ್ ಪಡೆದು ದಾಳಿ ಮಾಡಿದ್ದಾರೆ. ದಾಳಿ ಮಾಡುವ ವೇಳೆ ಜಯಂತ್.ಟಿ ಮಗ ಎಸ್.ಐ.ಟಿ ಅಧಿಕಾರಿಗಳಿಗೆ ಮನೆಯನ್ನು ಕೀ ನೀಡಿ ಓಪನ್ ಮಾಡಿಸಿ ಮನೆಯೊಳಗೆ ಶೋಧ ನಡೆಸುತ್ತಿದ್ದಾರೆ. ಎಸ್‌.ಐ.ಟಿ ಶೋಧ ವೇಳೆ ಜಯಂತ್.ಟಿ ಪತ್ನಿಯ ಹಳೆ ಆಂಡ್ರೈಡ್ ಮೊಬೈಲ್ ಫೋನ್ ವಶಕ್ಕೆ ಪಡೆದು ಮಹಜರು ನಡೆಸುತ್ತಿದ್ದಾರೆ ಎನ್ನಲಾಗಿದೆ.

ವಿಚಾರಣೆ ಮುಗಿಸಿ ಹಿಂತಿರುಗಿದ ಯುಟ್ಯೂಬರ್ ಸಮೀರ್ ಎಂ.ಡಿ

0

ಬೆಳ್ತಂಗಡಿ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ  ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಯುಟ್ಯೂಬರ್ ಸಮೀರ್ ಎಂ.ಡಿ ಅವರು ಬೆಳ್ತಂಗಡಿ ಠಾಣೆಗೆ ಆಗಮಿಸಿ ವಿಚಾರಣೆ ಎದುರಿಸಿ ಹಿಂತಿರುಗಿದ್ದಾರೆ. ತನ್ನ ವಕೀಲರೊಂದಿಗೆ ಆಗಮಿಸಿದ ಸಮೀರ್ ಅವರು ಬೆಳ್ತಂಗಡಿ ಠಾಣೆಗೆ ತರೆಳಿ ಅಗತ್ಯ ಮಾಹಿತಿಗಳನ್ನು ನೀಡಿ ಹಿಂತಿರುಗಿದ್ದಾರೆ. ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿರುವ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಬೆಳ್ತಂಗಡಿ : ಬುರುಡೆ ಪ್ರಕರಣ ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಸಾಕ್ಷಿದೂರುದಾರ ಚಿನ್ನಯ್ಯನನ್ನು ಎಸ್.ಐ.ಟಿ ತಂಡ‌ಮಹಜರಿಗಾಗಿ ಕರೆದೊಯ್ದಿದ್ದಾರೆ.ಆತನಿಗೆ ಸಂಬಂಧಿಸಿದ ಸ್ಥಳಗಳಿಗೆ ಮಹಜರು ನಡೆಸಲು ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಬೇಕಾದ ಅಗತ್ಯವಿದ್ದು ಆ.30 ರಂದು ಬೆಳಗ್ಗೆ 6 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ.ಆತನನ್ನು ಕರೆದುಕೊಂಡು ಹೋಗಿರುವುದು ಎಲ್ಲಿಗೆ ಎಂಬ ಬಗ್ಗೆ ಯಾವುದೆ ಮಾಹಿತಿಗಳು ಲಭ್ಯವಾಗಿಲ್ಲ

ಬೆಳ್ತಂಗಡಿ : ವಿಚಾರಣೆ ಮುಗಿಸಿ ವಾಪಸ್ ತೆರಳಿದ ಲಾಯರ್ ಜಗದೀಶ್

0

ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಧರ್ಮಸ್ಥಳ ನಿವಾಸಿ ಪ್ರಭಾಕರ್ ಗೌಡ ಆ.13 ರಂದು ದೂರು ನೀಡಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆಗಾಗಿ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ವಿಚಾರಣೆ ರಾತ್ರಿ 9:30 ಕ್ಕೆ ಮುಗಿಸಿ ವಾಪಸ್ ಬೆಂಗಳೂರಿಗೆ ತೆರಳಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ ಭಯ ಕಾಡುತ್ತಿದ್ದು ಇದರಿಂದ ಪೊಲೀಸ್ ಭದ್ರತೆ ನೀಡಬೇಕಾಗಿ ವಿನಂತಿ ಮಾಡಿದ್ದ ಕಾರಣ ಇಬ್ಬರು ಬೆಳ್ತಂಗಡಿ ಪೊಲೀಸರು ಬೆಂಗಳೂರಿಗೆ ತೆರಳಿ ಕಾರಿನಲ್ಲಿ ಆ.29 ರಂದು...

ಬಂಧನ ನಾಪತ್ತೆ ವದಂತಿಗಳ ನಡುವೆ ಠಾಣೆ ಹಾಗೂ ಎಸ್.ಐ.ಟಿ‌ ಕಚೇರಿಗೆ ಬಂದು ಹಿಂತಿರುಗಿದ ಮಹೇಶ್ ಶೆಟ್ಟಿ ತಿಮರೋಡಿ

0

ಬೆಳ್ತಂಗಡಿ; ಮಹೇಶ್ ಶೆಟ್ಟಿ ಅವರನ್ನು ಎಸ್.ಐ.ಟಿ ತಂಡ ಬಂಧಿಸಲಿದೆ ಅವರು ನಾಪತ್ತೆಯಾಗಿದ್ದಾರೆ ಎಂಬ ವದಂತಿಗಳ ನಡುವೆಯೇ ಬೆಳ್ತಂಗಡಿ ಠಾಣೆಗೆ ಆಗಮಿಸಿದ್ದ ಮಹೇಶ್ ಶೆಟ್ಟಿ ಅವರು ಎಸ್.ಐ.ಟಿ ಠಾಣೆಗೆ ತೆರಳಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಹಿಂತಿರುಗಿದ್ದಾರೆ.ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬ್ರಹ್ಮಾವರ ಪೊಲೀಸರ ದೂರಿನಂತದ ದಾಖಲಾಗಿದ್ದ ಕರ್ತವ್ಯಕ್ಕೆ ಅಡ್ಡಿ ಪ್ರಕರಣದ ಬಗ್ಗೆ ವಿಚಾರಣೆಗಾಗಿ ಮಹೇಶ್ ಶೆಟ್ಟಿ ಅವರು ಶುಕ್ರವಾರ ಬೆಳ್ತಂಗಡಿ ಠಾಣೆಗೆ ಆಗಮಿಸಿದ್ದರು. ಠಾಣೆಯಲ್ಲಿ ಹೇಳಿಕೆ ನೀಡಿದ ಬಳಿಕ ಅವರು ನೇರವಾಗಿ ಎಸ್.ಐ.ಟಿ ಕಚೇರಿಗೆ ತೆರಳಿದ್ದಾರೆ. ಎಸ್.ಐ.ಟಿ ಅಧಿಕಾರಿಗಳು ಅವರಿಗೆ ಯಾವುದೇ ನೋಟೀಸ್ ನೀಡಿದ್ದರೆ ಎಂಬ...

ಬೆಳ್ತಂಗಡಿ : ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

0

ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗಾಗಿ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ ಭಯ ಕಾಡುತ್ತಿದ್ದು ಇದರಿಂದ ಪೊಲೀಸ್ ಭದ್ರತೆ ನೀಡಬೇಕಾಗಿ ವಿನಂತಿ ಮಾಡಿದ್ದ ಕಾರಣ ಇಬ್ಬರು ಪೊಲೀಸರ ಜೊತೆ 1:45 ಕ್ಕೆ ಹಾಜರಾಗಿರುವ ಲಾಯರ್ ಜಗದೀಶ್.

ಬೆಳ್ತಂಗಡಿ : ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

0

ಬೆಳ್ತಂಗಡಿ: ಬ್ರಹ್ಮವಾರ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬ್ ನಲ್ಲಿ ಬಿಜೆಪಿಯ ಸಂತೋಷ್ ಜಿ ಬಗ್ಗೆ ಅವ್ಯಾಚ ಶಬ್ದಗಳಿಂದ ಬೈದು ವಿಡಿಯೋ ಪ್ರಸಾರವಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆ.21 ರಂದು ಉಜಿರೆ ನಿವಾಸದಿಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮವಾರ ಪೊಲೀಸರು ಬಂಧಿಸಲು ಬಂದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬ್ರಹ್ಮವಾರ ಪೊಲೀಸರು ಆ.22 ರಂದು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಆರೋಪಿ -3 ಅಗಿದ್ದರು. ಈ ಪ್ರಕರದಲ್ಲಿ ವಿಚಾರಣೆಗಾಗಿ ತಿಮರೋಡಿ ಮಹೇಶ್ ಶೆಟ್ಟಿ ತಿಮರೋಡಿ ಆ.29...