ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾಮ ಪಂಚಾಯತ್, ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ.

0

ಅ 24 ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಈದ್ ಮೀಲಾದ್ ಕಾರ್ಯಕ್ರಮದ 1500 ನೇ ವರ್ಷಾಚರಣೆಯ ಪ್ರಯುಕ್ತ ಕಳಿಯ ಗ್ರಾಮ ಪಂಚಾಯತ್, ಸ್ನೇಹ ಸಂಗಮ ಆಟೋರಿಕ್ಷಾ ಚಾಲಕರ ಸಂಘ, ಈದ್ ಮೀಲಾದ್ ಸ್ವಾಗತ ಸಮಿತಿಯ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವಾಕರ ಎಮ್, ಖತೀಬರಾದ ಮಹಮ್ಮದ್ ವಿಸ್ಬಾಹಿ, ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಝಿಯಾದ್ ಮುಈನಿ,ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕರೀಮ್ ಲತೀಫ್ ಪರಿಮರ,ಈದ್ ಮಿಲಾದ್ ಸ್ವಾಗತ ಸಮಿತಿಯ ಅಶ್ರಫ್ ಜಿ.ಡಿ., ಪಂಚಾಯತ್ ಕಾರ್ಯದರ್ಶಿ ಕುಂಙ ಕೆ,...

ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ವಿಚಾರಣೆ ಅಂತ್ಯ; ನಾಳೆ ಮತ್ತೆ ವಿಚಾರಣೆಗೆ ಬರಲು ಸೂಚನೆ

0

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್.ಎಮ್.ಡಿ ಆ.24 ರಂದು ಭಾನುವಾರ ಬೆಳಗ್ಗೆ 1 ಗಂಟೆಗೆ ಬಂದು ಸಂಜೆ 6 ಗಂಟೆಗೆ ವಿಚಾರಣೆ ಮುಗಿಸಿ ವಾಪಸ್ ಕಾರಿನಲ್ಲಿ ವಕೀಲರ ಜೊತೆ ವಾಪಸ್ ತೆರಳಿದ್ದಾನೆ. ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಇಂದು ದಾಖಲೆ ಮೂಲಕ ವಿಚಾರಣೆ ನಡೆಸಿದ್ದು. ಆ.25 ಸೋಮವಾರದಂದು ಮತ್ತೆ ವಿಚಾರಣೆಗೆ ಬರಲು ನೋಟಿಸ್ ನೀಡಿ ಸೂಚನೆ ಕೊಟ್ಟು ದಾಖಲೆಗಳಿಗೆ ಸಹಿ ಪಡೆದು ಕಳುಹಿಸಿದ್ದಾರೆ.ಎI ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ವಶಕ್ಕೆ ಪಡೆಯಲು ಬಾಕಿ ಇರುವುದಾಗಿ ಪೊಲೀಸ್ ಮೂಲಗಳಿಂದ...

ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರು

0

ಬೆಳ್ತಂಗಡಿ; ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಆರೋಪಿ ಮಹೇಶ್‌ ಶೆಟ್ಟಿ ತಿಮರೋಡಿಗೆ ನ್ಯಾಯಾಲಯ ಶನಿವಾರ (ಆ.23) ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಅವಹೇಳನಕಾರಿ ಹೇಳಿಕೆ ನೀಡಿದ್ದ ಬಗ್ಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಮಹೇಶ್‌ ತಿಮರೋಡಿ ವಿರುದ್ಧ ದೂರು ದಾಖಲಾಗಿತ್ತು. ಕಳೆದ ಗುರುವಾರ (ಆ.21) ಬ್ರಹ್ಮಾವರ ಪೊಲೀಸರು ಉಜಿರೆಯ ತಿಮರೋಡಿ ನಿವಾಸಕ್ಕೆ ತೆರಳಿ ಅವರನ್ನು ಬಂಧಿಸಿದ್ದರು. ಈ ವೇಳೆ ಹೈಡ್ರಾಮಾ ನಡೆದಿತ್ತು. ಅದೇ ದಿನ ಪೊಲೀಸರು...

ಸಾಕ್ಷಿ ದೂರು ದಾರ ಎಸ್.ಐ.ಟಿ  ಕಸ್ಟಡಿಗೆ

0

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಾಕ್ಷಿ ದೂರುದಾರನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲವು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಕಳೆದ ಎರಡು ತಿಂಗಳಿನಿಂದ ನಡೆಯುತ್ತಿದ್ದ ಘಟನೆಗಳಿಗೆ ಇದೀಗ ಹೊಸ ತಿರುವು ಲಭಿಸಿದೆ. ಸಾಕ್ಷಿ ದೂರುದಾರ ನೀಡುತ್ತಿರುವ ಹೇಳಿಕೆಗಳಲ್ಲಿನ ಗೊಂದಲವೇ ಆತನನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂಬ ಮಾಹಿತಿಗಳು ಲಭ್ಯವಾಗುತ್ತಿದೆ. ಆತ ತಂದ ತಲೆಬುರುಡೆಯ ವಿಚಾರದಲ್ಲಿ ಈತ ಹೇಳುತ್ತಿರುವ ವಿಚಾರಗಳಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಿದ ವೇಳೆ ಈತ ನೀಡಿರುವ ಹೇಳಿಕೆಗಳು ತಾಳೆಯಾಗದ ಹಿನ್ನಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ...

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಮಾಸ್ಕ್ ಮ್ಯಾನ್ ಬಂಧಿಸಿದ ಎಸ್.ಐ.ಟಿ

0

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆ.22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು. ಆ.23 ರಂದು ಬೆಳಗ್ಗೆ ಬಂಧಿಸಿ 11 ಗಂಟೆಗೆ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ ಎಂದು ಎಸ್.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಎಸ್.ಐ.ಟಿ ಯಿಂದ ದೂರುದಾರನನ್ನು ರಾತ್ರಿ ಪೂರ್ತಿ ವಿಚಾರಣೆ

0

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ದೂರುದಾರನನ್ನು ಆ.22 ರಂದು ಬೆಳಗ್ಗೆ 10 ಗಂಟೆಯಿಂದ ಆ.23 ರ ಬೆಳಗ್ಗಿನ ಜಾವ 5 ಗಂಟೆಯವರೆಗೆ ತೀವ್ರ ವಿಚಾರಣೆಯನ್ನು ಖದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರ ನೇತೃತ್ವದ ತಂಡ ನಡೆಸಿರುವುದಾಗಿ ಮಾಹಿತಿಗಳು ಲಭ್ಯವಾಗುತ್ತಿದೆ. ಎಸ್.ಐ.ಟಿ ತಂಡ ಆರಂಭದಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ಸಾಕ್ಷಿ ದೂರುದಾರ ತೋರಿಸಿದ ಸ್ಥಳಗಳಲ್ಲಿ ಅಗೆಯುವ ಕಾರ್ಯ ಮಾಡಿದ್ದರು. ಅಲ್ಲಿ ಸಿಕ್ಕಿರುವ ಮಾಹಿತಿಗಳ ಹಿನ್ನಲೆಯಲ್ಲಿ ತಂಡ ಇದೀಗ ತನಿಖೆ ನಡೆಯುತ್ತಿದೆ. ಆರಂಭದಲ್ಲಿ ದಾಖಲೆಗಳ ಸಂಗ್ರಹ ಹಾಗೂ ಪರಿಶೀಲನೆ ನಡೆಸುತ್ತಿದ್ದರು ಇದೀಗ...

ಮತ್ತೆ ಉಲ್ಟಾ ಹೊಡೆದ ಸುಜಾತಾ ಭಟ್ “ಯೂಟ್ಯೂಬ್ ಚಾನೆಲ್ ನವರು ನನ್ನನ್ನು ಬೆದರಿಸಿ ಹೇಳಿಕೆ ಪಡೆದುಕೊಂಡರು” ಆರೋಪ

0

ಬೆಂಗಳೂರು: ಅನನ್ಯಾ ಭಟ್ ನನ್ನ ಮಗಳೇ. ನನಗೆ ಮಗಳು ಇದ್ದಳು. ನಾನು ಅದನ್ನು SIT ಮುಂದೆ ಪ್ರೂವ್ ಮಾಡುತ್ತೇನೆ ಎಂದು ಸುಜಾತಾ ಭಟ್ ಮತ್ತೆ ಉಲ್ಟಾ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಸಂಜೆ Insight Rush ಎನ್ನುವ ಯೂಟ್ಯೂಬ್ಚಾನೆಲ್ ನಲ್ಲಿ ಸುಜಾತಾ ಭಟ್ ಹೇಳಿರುವ ಅನನ್ಯಾ ಭಟ್ ನಾಪತ್ತೆ ಕಥೆ ಫೇಕ್ ಎಂದು ಸುದ್ದಿ ಪ್ರಸಾರವಾಗಿತ್ತು. ಅದರಲ್ಲಿ 2003 ರಲ್ಲಿ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎಂದು ಹೇಳಲಾಗುತ್ತೊರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತ ಭಟ್, ಅವರು ನನಗೆ ಅನನ್ಯಾ ಭಟ್ ಎನ್ನುವ ಮಗಳೇ...

ನನಗೆ ಮಗಳೇ ಇಲ್ಲ ಸುಳ್ಳು ಹೇಳಿದ್ದೇನೆ ಸುಜಾತಾ ಭಟ್ ಹೇಳಿಕೆ ವೈರಲ್

0

ಬೆಳ್ತಂಗಡಿ: ಅನನ್ಯ ಭಟ್ ಎಂಬ ಮಗಳೇ ಇಲ್ಲ ನಾನು ಸುಳ್ಳು ಹೇಳಿದ್ದೇನೆ ಎಂದು ಸುಜಾತಾ ಭಟ್ ಯೂಟ್ಯೂಬ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದು ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಗಿರೀಶ್ ಮಟ್ಟಣ್ಣನವ‌ರ್ ಮತ್ತು ಜಯಂತ್ ಅವರು ಈ ರೀತಿ ಹೇಳಲು, ಹೇಳಿದ್ದರು. ಅನನ್ಯ ಭಟ್ ಎಂಬ ಮಗಳೇ ಇಲ್ಲ. ತಾತಾನ ಆಸ್ತಿ ವಿಷಯದಲ್ಲಿ ನಾನು ಈ ರೀತಿ ಮಾಡಿದ್ದೇನೆ ಎಂಬ ರೀತಿಯಲ್ಲಿ ಅವರು ಹೇಳಿಕೆ ನೀಡಿದ್ದಾರೆ. ಪೋಟೋ ತೋರಿಸಿರುವುದು ದೂರು ನೀಡಿರುವುದು ಸುಳ್ಳು. ನನ್ನ ಆಸ್ತಿಯನ್ನು ನನಗೆ ಮಾಹಿತಿಯಿಲ್ಲದೆ ಮಾರಿದ್ದಾರೆ ಈ...

ಬೆಳ್ತಂಗಡಿ; ಎಸ್.ಐ.ಟಿ ಕಾರ್ಯಾಚರಣೆ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ ನ್ಯಾಯವಾದಿ ಮಂಜುನಾಥ್ ಎನ್ ವಿರುದ್ದ ಪ್ರಕರಣ ದಾಖಲು

0

ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ನಡೆಯುತ್ತಿರುವ ಎಸ್‌.ಐ.ಟಿ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕರಲ್ಲಿ ಭಯವುಂಟು ಮಾಡುವಂತಹ ಅನಧಿಕೃತ ಮಾಹಿತಿಗಳನ್ನು ಒಳಗೊಂಡಿರುವ ಸುಳ್ಳು ಪತ್ರಿಕಾ ಪ್ರಕಟಣೆಯನ್ನು ಪ್ರಸಾರ ಮಾಡಿರುವ ಬಗ್ಗೆ ನ್ಯಾಯವಾದಿ ಮಂಜು‌ನಾಥ್ ಎನ್, ಅವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ ಎಂಬವರು ಈ ಬಗ್ಗೆ ದೂರು ನೀಡಿದ್ದು ಪ್ರಸ್ತುತ ಎಸ್.ಐ‌ಟಿ ತಂಡದಿಂದ ನಡೆಯುತ್ತಿರುವ ಕಾರ್ಯಾಚರಣೆ ಬಗ್ಗೆ ಸುಳ್ಳು ಪತ್ರಿಕಾ ಪ್ರಕಟಣೆಗಳನ್ನು ಬಿಡುಗಡೆ ಮಾಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗುವಂತೆ ಮಾಡಿದ ಬಗ್ಗೆ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ 353(1)(b),...

ಸೌಜನ್ಯ ಪರ ಹೊರಾಟಗಾರ ಮಹೇಶ್ ಶೆಟ್ಟಿ ಬಂಧನ ಖಂಡಿಸಿ ಸರಕಾರಕ್ಕೆ ಮನವಿ

0

ಬೆಳ್ತಂಗಡಿ; ಉಜಿರೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಆರ್.ಎಸ್.ಎಸ್ ಸಂಘಟನೆಯ ಮುಖಂಡನನ್ನು ಅವಹೇಳನಕಾರಿಯಾಗಿ ಟೀಕಿಸಿದ್ದಾರೆ ಎಂಬ ಕಾರಣಕ್ಕೆ ಬ್ರಹ್ಮಾವರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ದುರುದ್ದೇಶ ಪೂರ್ವಕವಾಗಿ ಕಾನೂನು ಬಾಹಿರವಾಗಿ ಬಂಧಿಸಿರುವುದು ಖಂಡನೀಯ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ.ಭಟ್ ಹೇಳಿದ್ದಾರೆ.ಮಹೇಶ್ ಶೆಟ್ಟಿ ಅವರನ್ನು ಕಾನೂನುಬಾಹಿರವಾಗಿ ಬಂದಿಸಿದ ಸರಕಾರದ ಕ್ರಮದ ವಿರುದ್ದ ಮದ್ಯ ಪ್ರವೇಶಿಸಿ ನ್ಯಾಯ ಒದಗಿಸಲು ಆಗ್ರಹಿಸಿ ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಬೆಳ್ತಂಗಡಿ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ನೀಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಯಾರನ್ನೂ...