ಬೆಳ್ತಂಗಡಿ : ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ

0

ಬೆಳ್ತಂಗಡಿ : ನಾಯಿ ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿದ ಬೊಲೆರೋ ವಾಹನ ಪಲ್ಟಿಯಾಗಿ ಚರಂಡಿಗೆ ಬಿದ್ದು ಸಿಲುಕಿಕೊಂಡ ಘಟನೆ ಚಾರ್ಮಾಡಿ ಗ್ರಾಮದ ಬೀಟಿಗೆಯ ಹೆದ್ದಾರಿಯಲ್ಲಿ ಜೂ.8 ರಂದು ರಾತ್ರಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿಗಳಾದ ಚೇತನ್ ಮತ್ತು ಸುರೇಶ್ ಇಬ್ಬರು ಉಡುಪಿ ಜಿಲ್ಲೆಯ ಕಾರ್ಕಳ ಸಂಬಂಧ ಮನೆಗೆ ಹೋಗಿ ವಾಪಸ್ ಬರುವಾಗ  ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ಹೆದ್ದಾರಿಯಲ್ಲಿ ನಾಯಿ ಅಡ್ಡ ಬಂದ ಕಾರಣದಿಂದ ನಿಯಂತ್ರಣ ತಪ್ಪಿದ ಬೊಲೆರೋ ವಾಹನ ಪಲ್ಟಿಯಾಗಿ ರಸ್ತೆಯ ಬದಿಯ ಕ್ರಾಂಕ್ರಿಟ್ ಚರಂಡಿಗೆ ಬಿದ್ದು ಸಿಲುಕಿಕೊಂಡಿದೆ....

ಸುಹಾಸ್ ಶೆಟ್ಟಿ ಹತ್ಯೆ ನಡೆಸಿದವರನ್ನು ಹೆಡೆಮುರಿ ಕಟ್ಟಲು ತನಿಖೆ ರಾಷ್ಟ್ರೀಯ ತನಿಖಾದಳಕ್ಕೆ- ಹರೀಶ್ ಪೂಂಜ

0

ಬೆಳ್ತಂಗಡಿ;  ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಭೀಕರ ಹತ್ಯೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಕಾ ದಳಕ್ಕೆ ವಹಿಸಿದ್ದು ದಕ್ಷಿಣ ಕನ್ನಡದ ಸಮಸ್ತ ಹಿಂದೂ ಸಮಾಜ ಇದನ್ನು ಮನಪೂರ್ವಕವಾಗಿ ಸ್ವಾಗತಿಸುತ್ತಿದೆ. ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದರೆ.ಸುಹಸ್ ಶೆಟ್ಟಿ ಅವರ ಹತ್ಯೆಯಲ್ಲಿ ಪಾಲ್ಗೊಂಡಿದ್ದ ಪಿ ಎಫ್ ಐ ಹಾಗೂ ಇನ್ನಿತರ ಜಿಹಾದಿ ಸಂಘಟನೆಗಳ ಬೇರುಗಳನ್ನು ಬುಡ ಸಮೇತ ಕಿತ್ತು ಹಾಕಲು ಮತ್ತು ಈ ಹತ್ಯೆಯ ಹಿಂದಿರುವ ಕಾಣದ ಕೈಗಳನ್ನು ಪತ್ತೆಹಚ್ಚಿ, ಈ ಸಂಚಿಗೆ ಬೇಕಾದ ಹಣಕಾಸಿನ ವ್ಯವಸ್ಥೆಯನ್ನು ಒದಗಿಸಿದ...

ಬೆಳ್ತಂಗಡಿ : ಉಜಿರೆಯ ಮೂರು ಅಂಗಡಿಗಳಿಗೆ ಕನ್ನ; ಶಟರ್ ಬೀಗ ಮುರಿದು ನಗದು ಕಳ್ಳತನ

0

ಬೆಳ್ತಂಗಡಿ : ಉಜಿರೆ ಜನಾರ್ದನ ದೇವಸ್ಥಾನದ ದ್ವಾರದ ಬಳಿಯಿರುವ ಮೂರು ಅಂಗಡಿಗಳಿಗೆ ಕಳ್ಳರು ನುಗ್ಗಿ ನಗದು ಹಣ ಕಳ್ಳತನ ಮಾಡಿದ ಘಟನೆ ಜೂ.7 ರಂದು ರಾತ್ರಿಯ ವೆಳೆ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರು ಅಂಗಡಿಯ ಶಟರ್ ಗೆ ಹಾಕಿದ್ದ ಬೀಗಕ್ಕೆ ಸುತ್ತಿಗೆಯಿಂದ ಮುರಿದು ಒಳನುಗ್ಗಿ ಒಟ್ಟು 38 ಸಾವಿರ ರೂಪಾಯಿ ಹಣ ಕಳ್ಳತನ ಮಾಡಲಾಗಿದೆ.ಬಾಲಾಜಿ ಎಂಟರ್ ಪ್ರೈಸ್ ನಿಂದ 30 ಸಾವಿರ ನಗದು, ಮಧುರ ಎಂಟರ್ ಪ್ರೈಸ್ ನಿಂದ 6 ಸಾವಿರ ರೂಪಾಯಿ, ಗಣೇಶ್ ಇಲೆಕ್ಟ್ರಿಕಲ್ ನಿಂದ 2...

ಇಚ್ಚಂಪಾಡಿ ಸೇತುವೆ ಬಳಿ ಯುವಕ ನೀರಿನಲ್ಲಿ ಮುಳುಗಿ ಸಾವು

0

ಕಡಬ: ಕಡಬ ತಾಲೂಕಿನಲ್ಲಿ ಇಚ್ಚಂಪಾಡಿ ಗ್ರಾಮದ ಸೇತುವೆ ಬಳಿ  ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.ಮೃತಪಟ್ಟ ಯುವಕನು ಚೇತನ್ ಶೆಟ್ಟಿ (21) ಎಂದು ಗುರುತಿಸಲಾಗಿದ್ದು, ಇವನು ಇಚ್ಚಂಪಾಡಿ ಗ್ರಾಮದ ಪಾನ ಕೆಡೆಂಬೇಲು ಮನೆ ನಿವಾಸಿ ರಾಮಣ್ಣ ಶೆಟ್ಟಿ ಎಂಬವರ ಪುತ್ರ. ಯುವಕನು ಮಂಗಳೂರಿನಲ್ಲಿ  ಮೆಡಿಕಲ್ ರೆಪ್  ಕೆಲಸ ಮಾಡುತ್ತಿದ್ದು ರಜೆಯ ಸಂದರ್ಭ ಮನೆಯಲ್ಲೇ ಇದ್ದನು. ಕ್ರಿಕೆಟ್ ಆಡಲು ಹೊರಟ ಚೇತನ್ ಶೆಟ್ಟಿ, ಮಧ್ಯಾಹ್ನದ ವೇಳೆಗೆ ಸ್ನೇಹಿತರ ಜೊತೆ ಇಚ್ಚಂಪಾಡಿ ಸೇತುವೆ ಬಳಿ ಇರುವ ಗುಂಡ್ಯ ಹೊಳೆಗೆ ಸ್ನಾನಕ್ಕೆ ಇಳಿದನು....

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ NIA ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ

0

ಬೆಳ್ತಂಗಡಿ: ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆಪ್ರಕರಣದ‌ತನಿಖೆಯನ್ನು ಎನ್.ಐ.ಎ ಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿರುವುದಾಗಿ ತಿಳಿದು ಬಂದಿದೆ. ತನಿಖೆಗೆ ಆದೇಶ ಹೊರಡಿಸಿರುವ ಬಗ್ಗೆ ಎ.ಎನ್.ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಆಟೋ ರಿಕ್ಷಾ ಮೇಲೆ ಕಾಡಾನೆ ದಾಳಿ; ರಕ್ಷಿತ್ ಶಿವರಾಂ ಭೇಟಿ

0

ಬೆಳ್ತಂಗಡಿ;  ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ ನಡೆಸಿ ಆಟೋ ರಿಕ್ಷಾವನ್ನು ಜಖಂ ಗೊಳಿಸಿದ ಘಟನೆ ನಡೆದ ಧರ್ಮಸ್ಥಳ ಗ್ರಾಮದ ಬೋಳಿಯಾರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು  ಶನಿವಾರ ಭೇಟಿ ನೀಡಿದರು. ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಆಟೋ ಚಾಲಕ ದಿನೇಶ್ ಮತ್ತು ಕುಟುಂಬಸ್ಥರನ್ನು ಭೇಟಿಯಾದ ಅವರು ಘಟನೆಯ ಬಗ್ಗೆ ಮಾಹಿತಿ ತಿಳಿದುಕೊಂಡರು. ಈ ಸಂದರ್ಭದಲ್ಲಿ ಧರ್ಮಸ್ಥಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದೇವಸ್ಯ ಟಿ.ವಿ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

ಮಹಿಳೆಯ ಮಾನಭಂಗಕ್ಕೆ ಯತ್ನ ; ತೋಟತ್ತಾಡಿ ನಿವಾಸಿ ಆರೋಪಿ ಬಂಧನ

0

ಬೆಳ್ತಂಗಡಿ; ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹುಕ್ರೋಟ್ಟು ರಸ್ತೆಯಲ್ಲಿ ಮಹಿಳೆಯೊಬ್ಬರು ಜೂ.6 ರಂದು ಸಂಜೆ ತನ್ನ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಯುವಕನೊಬ್ಬ ಹಿಂಬಾಲಿಸಿಕೊಂಡು ಬಂದು ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಬಗ್ಗೆ ನೊಂದ ಮಹಿಳೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಧರ್ಮಸ್ಥಳ ಪೊಲೀಸರು BNS 74,78(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ಮತ್ತು ಸಿಬ್ಬಂದಿ ಪ್ರಕರಣ...

ಕಾಡಾನೆ ದಾಳಿಯಿಂದ ರಿಕ್ಷಾ ಹಾನಿ; ಕಿರಣ್ ಚಂದ್ರ ಪುಷ್ಪ ಗಿರಿ ಅವರಿಂದ ಸಹಾಯ

0

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಬೊಳಿಯಾರ್ ಎಂಬಲ್ಲಿ ನಡೆದ ಆನೆ ದಾಳಿಗೆ ಚಾಲಕ ದಿನೇಶ್ ಎಂಬವರ ರಿಕ್ಷಾ ಸಂಪೂರ್ಣ ದಾಳಿಗೆ ತುತ್ತಾಗಿದ್ದು ಈ ಬಗ್ಗೆ ಮಾಹಿತಿ ತಿಳಿದು ಇವರ ಮನೆಗೆ ಸಾಮಾಜಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿ ಕುಶಲೋಪರಿ ವಿಚಾರಿಸಿ ಆರ್ಥಿಕ ಸಹಾಯ ಮಾಡಿದರು.

ಧರ್ಮಸ್ಥಳ; ಆಟೋರಿಕ್ಷಾ ಮೇಲೆ ಕಾಡಾನೆ ದಾಳಿ; ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ

0

ಬೆಳ್ತಂಗಡಿ; ಶುಕ್ರವಾರ ಬೆಳಗಿನ ಜಾವ ಧರ್ಮಸ್ಥಳ ಸಮೀಪದ ಬೊಳಿಯಾರಿನಲ್ಲಿ ಕಾಡಾನೆ ರಿಕ್ಷಾ ಮೇಲೆ ದಾಳಿ ಮಾಡಿದ ಪರಿಣಾಮ ರಿಕ್ಷಾ ಸಂಪೂರ್ಣ ಜಖಂ ಆದ ಘಟನೆ ನಡೆದಿದ್ದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್ ಎಫ್ ಒ ತ್ಯಾಗರಾಜು ಟಿ.ಎನ್.ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಇಲಾಖೆಯಿಂದ ಸಿಗುವ ಪರಿಹಾರ ಒದಗಿಸುವ ಕುರಿತು ಭರವಸೆ ನೀಡಿದರು.ಡಿಆರ್ ಎಫ್ ಒ ಕಮಲಾ,ರಿಕ್ಷಾ ಮಾಲೀಕ ದಿನೇಶ್ ಉಪಸ್ಥಿತರಿದ್ದರು.

ಕಾಜೂರಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ; ಪವಿತ್ರ ದಿನವು ಸೌಹಾರ್ದ, ಸಮೃದ್ಧಿ ಮತ್ತು ಶಾಂತಿಯ ಸಂದೇಶವನ್ನು ಪಸರಿಸಲಿ; ಸಯ್ಯದ್ ಕಾಜೂರು ತಂಗಳ್

0

ಬೆಳ್ತಂಗಡಿ; ಮನುಷ್ಯರಲ್ಲಿರುವ ಪರಸ್ಪರ ವಿಶ್ವಾಸ ನಷ್ಟ ಹೊಂದಿದೆ ಎಂದರೆ ಅದು ಲೋಕಾವಸಾನದ ಕುರುಹು ಆಗಿದೆ ಇಂದು ಮಕ್ಕಳಿಗೆ ತಂದೆ ತಾಯಿಯಲ್ಲೂ ಪರಸ್ಪರ ಸ್ನೇಹಿತರೆಲ್ಲೂ ಇಂದು ವಿಶ್ವಾಸ ನಷ್ಟ ಹೊಂದಿದೆ ಸಹಾಯ ಮಾಡಿದ ಗೆಳೆಯನನ್ನೇ ಕೊಚ್ಚಿ ಕೊಚ್ಚಿ ಕೊಂದು ಹಾಕುವಂತಹ ಕಾಲವಿದು ಇಂತಹ ಕಾಲದಲ್ಲಿ ನಾವಿಂದು ಜೀವಿಸುತ್ತಿದ್ದೇವೆಪರಸ್ಪರ ವಿಶ್ವಾಸ ನಷ್ಟ ಹೊಂದಿರುವ ಕಾಲ ಬಂತೆಂದಾದರೆ ಅದು ಲೋಕಾವಸಾನದ ಕುರುಹುವಾಗಿದೆ ಎಂದು  ಪ್ರವಾದಿ ಮುಹಮ್ಮದ್ ಮುಸ್ತಫಾ ಸ ಅ ತಂಜ್ಞಳ್ ರವರು 1450 ವರ್ಷಗಳ ಹಿಂದೆ ಹೇಳಿದ್ದಾರೆ ಎಂದು ಸಯ್ಯದ್ ಕಾಜೂರು ತಂಗಳ್ ರವರು ಬಕ್ರೀದ್...