ಪದ್ಮಲತಾ ಪ್ರಕರಣ ಮರುತನಿಖೆಯಾದರೆ ಸತ್ಯ ಹೊರಬರಲಿದೆ ಇಂದ್ರಾವತಿ ವಿಶ್ವಾಸ
ಪದ್ಮಲತಾಳ ಹತ್ಯೆಯಾಗಿ 39 ವರ್ಷಗಳಾಗಿದೆ ಈಗಲೂ ತನಿಖೆ ನಡೆದರೆ ಸತ್ಯ ಹೊರ ಬಂದು ಆರೋಪಿಗಳಿಗೆ ಶಿಕ್ಷೆಯಾಗುವ ವಿಶ್ವಾಸವಿದೆ ಎಂದು ಕೊಲೆಯಾದ ಪದ್ಮಲತಾಳ ಅಕ್ಕ ಇಂದ್ರಾವತಿ ಹೇಳಿದ್ದಾರೆ.ಪದ್ಮಲತಾ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಎಸ್.ಐ.ಟಿ. ಗೆ ದೂರು ನೀಡಲು ಆಗಮಿಸಿದ ವೇಳೆ ಅವರು ಮಾದ್ಯಮದವರೊಂದಿಗೆ ಮಾತನಾಡಿದರು.ಪದ್ಮಲತಾ ಪ್ರಕರಣದಲ್ಲಿ ಈ ಹಿಂದೆ ಹಲವು ಹಂತದ ತನಿಖೆಗಳು ನಡೆದಿದ್ದರೂ ನಮಗೆ ನ್ಯಾಯ ಸಿಕ್ಕಿಲ್ಲ. ಸಿಒಡಿ ತನಿಖೆ ನಡೆಸಿ ಪತ್ತೆಯಾಗದ ಪ್ರಕರಣ ಎಂದು ವರದಿ ನೀಡಿದ್ದಾರೆ.ಇದೀಗ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ರಾಜ್ಯ...
ಧರ್ಮಸ್ಥಳ ಘರ್ಷಣೆ ಪ್ರಕರಣ 6ಮಂದಿ ಆರೋಪಿಗಳ ಬಂಧನ
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಆ.6 ರಂದು ಸಂಜೆ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಬಳಕಿ ಪಾಂಗಳ ಕ್ರಾಸ್ ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂದಿಸಿದಂತೆ ಧರ್ಮಸ್ಥಳ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆ.9 ರಂದು ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ನನ್ನು ಬಂಧಿಸಿದ್ದು ಶನಿವಾರ ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು. 6 ಮಂದಿಗೂ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಆ.11 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲು...
ಸಂದ್ಯಾ ವಾಯ್ಸ್ ಫಾರ್ ಜಸ್ಟಿಸ್ ಎಂಬ ಫೇಸ್ ಬುಕ್ ಪೇಜ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ; ಸಂದ್ಯಾ ಎಂಬ ಹೆಸರಿನಲ್ಲಿ ಸಂದ್ಯಾ ವಾಯ್ಸ್ ಫಾರ್ ಜಸ್ಟಿಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯುಂಟುಮಾಡುವಂತೆ ಅಶ್ಲೀಲವಾಗಿ ಮಾತನಾಡಿದ ಬಗ್ಗೆ ಫೇಸ್ ಬುಕ್ ಪೇಜ್ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಈ ಬಗ್ಗೆ ದಯಾನಂದ ಎಂಬವರು ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಪೇಜ್ ವಿರುದ್ದ ಕಲಂ 296 ಬಿಎನ್.ಎಸ್ ನಂತೆ ಪ್ರಕರಣ ದಾಖಲಿಸಲಾಗಿದೆ
ಧರ್ಮಸ್ಥಳ; ಪಾಂಗಳದಲ್ಲಿ ಗುಂಪು ಘರ್ಷಣೆ ಆರು ಮಂದಿಯ ಬಂಧನ
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಆ.6 ರಂದು ಸಂಜೆ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಬಳಕಿ ಪಾಂಗಳ ಕ್ರಾಸ್ ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂದಿಸಿದಂತೆ ಧರ್ಮಸ್ಥಳ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆ.9 ರಂದು ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ನನ್ನು ಬಂಧಿಸಿದ್ದು ಶನಿವಾರ ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು. 6 ಮಂದಿಗೂ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಆ.11 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲು...
ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮ ಗಳ ನಡುವೆ ವೈಮನಸ್ಯ ಮೂಡಿಸುವ ಸಂದೇಶ; ವಸಂತ ಗಿಳಿಯಾರ್ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಧರ್ಮ ಧರ್ಮಗಳ ನಡುವೆ ಸಮುದಾಯಗಳ ನಡುವೆ ವೈಮನಸ್ಯವುಂಟುಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಬಗ್ಗೆ ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಈ ಬಗ್ಗೆ ಶೇಖರ ಲಾಯಿಲ ಎಂಬವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ವಸಂತ ಗಿಳಿಯಾರ್ ಅವರು ಫೇಸ್ ಬುಕ್ ನಲ್ಲಿ ಹಾಕಿರುವ ಸಂದೇಶದಿಂದ ಧರ್ಮ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತಿದ್ದು ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿವೆ ಎಂಬುದಾಗಿ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಸೆಕ್ಷನ್ 196(1)(ಎ), 353(2)...
ಧರ್ಮಸ್ಥಳ; ಬೊಳಿಯಾರಿನಲ್ಲಿ ರಸ್ತೆ ಬದಿಯಲ್ಲಿ ಕಾಡಾನೆ
ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಎರಡು ಮೂರು ವಾರದಿಂದ ಬೀಡುಬಿಟ್ಟಿರುವ ಕಾಡಾನೆಯು ಇಂದು(ಆ.9) ಬೆಳಿಗ್ಗೆ ಮತ್ತೆ ರಸ್ತೆಯ ಬದಿ ಪ್ರತ್ಯಕ್ಷವಾಗಿದೆ. ಶಾಲಾ ಮಕ್ಕಳು ಬಸ್ ಗೆ ಕಾಯುತ್ತಿರುವ ವೇಳೆ ಕಾಡಾನೆಯು ಪ್ರತ್ಯಕ್ಷವಾಗಿದ್ದು ಯಾವುದೇ ತೊಂದರೆ ಮಾಡದೆ ಬೋಳಿಯಾರ್ ನಿಂದ ಅರಣ್ಯಕ್ಕೆ ಹೋಗಿದೆ. ರಾತ್ರಿ ಹೊತ್ತು ಕಾಣಿಸುತ್ತಿದ್ದ ಕಾಡಾನೆಗಳು ಕಳೆದ ಕೆಲ ದಿನಗಳಿಂದ ಬೊಳಿಯಾರು ಪರಿಸರದಲ್ಲಿ ಹಗಲು ಹೊತ್ತಿನಲ್ಲಿಯೇ ಓಡಾಟ ನಡೆಸುತ್ತಿದ್ದು ಸಾರ್ವಜನಿಕರಲ್ಲಿ ಭಯ ಮೂಡಿಸಲು ಕಾರಣವಾಗಿದೆ. ವಾರದ ಹಿಂದೆ ಇಲ್ಲಿ ಕಾಡಾನೆ ಶಾಲೆಗೆ ಹೋಗಲು ಬಸ್ ಕಾಯುತ್ತಿದ್ದ ಮಕ್ಕಳತ್ತ ನುಗ್ಗಿತ್ತು. ಮಕ್ಕಳು ಓಡಿ ತಪ್ಪಿಸಿಕೊಂಡಿದ್ದರು. ಇದೀಗ...
ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಜಗನ್ನಾಥ್ ಇವರ ಮನೆ ಕುಸಿತಸ್ಥಳಕ್ಕೆ ಸಂಸದರಾದ ಶ್ರೀ ಬ್ರಿಜೇಶ್ ಚೌಟ ಶಾಸಕರಾದ ಶ್ರೀ ಹರೀಶ್ ಪೂಂಜಾ ಭೇಟಿ
ಬೆಳ್ತಂಗಡಿ; ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಜಗನ್ನಾಥ್ ಇವರ ಮನೆ ರಾತ್ರಿ ತಡ ರಾತ್ರಿ 1.30 ಕುಸಿದಿದೆ. ಈ ಸಂದರ್ಭದಲ್ಲಿ ಮನೆಯಲ್ಲಿ ಸುಗಂಧಿ ಇವರ ಪತಿ ಜಗನ್ನಾಥ್, ಮಗ ಅನಿಲ್, ಸೊಸೆ ಮಧುರ ಪುಟ್ಟ ಮಕ್ಕಳು ಮಲಗಿದ್ದರು. ಗೋಡೆ ಬಿರುಕು ಬಿಟ್ಟ ಶಬ್ದ ಕೇಳಿ ಮನೆಯವರು ಎಚ್ಚರ ಗೊಂಡಿದ್ದರಿಂದ ಮನೆಯ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಸಿತದಿಂದ ಮನೆಯ ನಿತ್ಯ ಬಳಕೆಯ ಸಾಮಗ್ರಿಗಳು, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿವೆ. ವಿಷಯ ತಿಳಿದ ತಾಲ್ಲೂಕಿನ ಶಾಸಕರಾದ ಶ್ರೀ ಹರೀಶ್ ಪೂಂಜಾ, ಹಾಗೂ ಸಂಸದರಾದ ಶ್ರೀ...
ಧರ್ಮಸ್ಥಳ ಯೂಟ್ಯೂಬರ್ಸ್ ಮೇಲೆ ಹಲ್ಲೆ : ದಲಿತ ಸಂಘರ್ಷ ಸಮಿತಿ ಮುಖಂಡರ ನಿಯೋಗ ಆಸ್ಪತ್ರೆಗೆ ಭೇಟಿ
ಬೆಳ್ತಂಗಡಿ :ಧರ್ಮಸ್ಥಳದಲ್ಲಿ ಹಲವಾರು ಶವಗಳ ಕಾನೂನುಬಾಹಿರ ದಫನ ಪ್ರಕರಣದ ಎಸ್ ಐ ಟಿ ತನಿಖೆಯ ವರದಿ ಮಾಡುತ್ತಿದ್ದಸಂದರ್ಭ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊೂಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವಯೂಟ್ಯೂಬರ್ ಗಳನ್ನುಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಇದರ ಬೆಳ್ತಂಗಡಿ ತಾಲೂಕು ಪದಾಧಿಕಾರಿಗಳು ಮತ್ತು ಮೈಸೂರು ವಿಭಾಗೀಯ ಪದಾಧಿಕಾರಿಗಳ ನಿಯೋಗಭೇಟಿ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.ತನಿಖೆಯ ಹಾದಿ ತಪ್ಪಿಸುವ ದುರುದ್ದೇಶದಿಂದಸ್ಥಳೀಯ ಕೆಲವು ಗೂಂಡಾ ಪ್ರವೃತ್ತಿಯ ಕಿಡಿಗೇಡಿಗಳುಮಾಧ್ಯಮ ವರದಿಗಾರರಾಗಿಬಂದಿರುವ ಯೂಟ್ಯೂಬ್ ಚಾನೆಲ್ ವರದಿಗಾರರ ಮೇಲೆ ಹಲ್ಲೆ ನಡೆಸಿದ್ದಾರೆ.ವರದಿಗಾಗಿ ಬಂದಿರುವ ಯೂಟ್ಯೂಬರ್ ಗಳ ಮೇಲೆ ಹಲ್ಲೆ...
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲ ಪದಬಳಕೆ; ರಾಕೇಶ್ ಶೆಟ್ಟಿ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಅಶ್ಲೀಲವಾಗಿ ಮಾತನಾಡಿರುವ ಬಗ್ಗೆ ರಾಕೇಶ್ ಶೆಟ್ಟಿ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಳ್ತಂಗಡಿ ನಿವಾಸಿ ಶ್ರೀನಿವಾಸ್ ಎಂಬವರು ಈ ಬಗ್ಗೆ ದೂರು ನೀಡಿದ್ದು ರಾಕೇಶ್ ಶೆಟ್ಟಿ ಎಂಬಾತನು ಯೂಟ್ಯೂಬ್ ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯಾವುವಂತೆ ಅಶ್ಲೀಲ ಪದಗಳನ್ನು ಬಳಸಿ ಮಾತನಾಡಿರುವ ವೀಡಿಯೋ ಕಂಡುಬಂದಿರುವುದಾಗಿ ದೂರು ನೀಡಿದ್ದಾರೆ. ಈದೂರಿನ ಹಿನ್ನಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಕಲಂ 296ಬಿ.ಎನ್. ಎಸ್. ಅಂತೆ ಪ್ರಕರಣ ದಾಖಲಿಸಲಾಗಿದೆ
ಬೆಳ್ತಂಗಡಿ : ಕಾಡು ಹಂದಿಯನ್ನು ಭೇಟೆಯಾಡಿ ಮಾಂಸ ಮಾಡುತ್ತಿದ್ದಾಗ ಅರಣ್ಯ ಇಲಾಖೆ ದಾಳಿ; ಇಬ್ಬರು ವಶಕ್ಕೆ ; ಕಾಡು ಹಂದಿ ಮಾಂಸ ಮತ್ತು ಪರಿಕರಗಳು ವಶಕ್ಕೆ
ಬೆಳ್ತಂಗಡಿ : ಪಟ್ಟ ಜಾಗದಲ್ಲಿ ರೋಪ್ ಬಳಸಿ ಉರುಳು ಇಟ್ಟು ಕಾಡು ಹಂದಿಯನ್ನು ಬೇಟೆಯಾಡಿ ಅದನ್ನು ಮನೆಯ ಶೇಡ್ ನಲ್ಲಿ ಮಾಂಸ ಮಾಡುತ್ತಿದ್ದಾಗ ವೇಣೂರು ಅರಣ್ಯ ಇಲಾಖೆ ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದು ಕಾಡು ಹಂದಿ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡು ವನ್ಯಜೀವಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ರಮೇಶ್ ಹೆಗ್ಡೆ ಎಂಬವರ ಪಟ್ಟ ಜಾಗದಲ್ಲಿ ರೋಪ್ ಬಳಸಿ ಉರುಳು ಇಟ್ಟು ಕಾಡು ಹಂದಿಯನ್ನು ಬೇಟೆಯಾಡಿ ಅದನ್ನು ಹೊಸ ಮನೆ ಸುಧಕಾರ ಎಂಬವರ ಮನೆಯ ಶೇಡ್ ಗೆ ತಂದು...













