ಧರ್ಮಸ್ಥಳ ಪಾಂಗಳದಲ್ಲಿ ಹಗಲು ಹೊತ್ತಿನಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ನಗದು ಕಳ್ಳತನ
ಬೆಳ್ತಂಗಡಿ : ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳ್ಳತನ ಮಾಡಿಕೊಂಡ ಹೋದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದ ಲಕ್ಷ್ಮೀ ನಿವಾಸದ ಬಾಲಕೃಷ್ಣ ಗೌಡರ ಮನೆಗೆ ಜ.29 ರಂದು ಬೆಳಗ್ಗೆ 9:30 ರಿಂದ ಸಂಜೆ 4 ಗಂಟೆ ಒಳಗಡೆ ಮನೆಯಲ್ಲಿ ಯಾರು ಇಲ್ಲದ ವೇಳೆಗೆ ಕಳ್ಳತನ ನಡೆದಿದೆ. ಸಂಜೆ ವೇಳೆಗೆ ಕೆಲಸದಿಂದ ಮನೆಗೆ ಬಂದಾಗ ಕಳ್ಳತನ ಬೆಳಕಿಗೆ ಬಂದಿದ್ದು, ಮನೆಯೊಳಗಿದ್ದ 40 ಸಾವಿರ ಮೌಲ್ಯದ 4 ಗ್ರಾಂ ಕಿವಿಓಲೆ,2 ಸಾವಿರ ಮೌಲ್ಯದ 2 ಜೊತೆ ಬೆಳ್ಳಿಯ ಕಾಲುಗೆಜ್ಜೆ,5,500...
ಬೆಳ್ತಂಗಡಿ; ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ಸರಕಾರದಿಂದ ರೂ.57.93 ಲಕ್ಷ ಅನುದಾನ ಬಿಡುಗಡೆ– ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ:ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ 14 ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತುರ್ತು ದುರಸ್ತಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಒಟ್ಟು ರೂ.57.93 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿದೆ ಎಂದು ಶಾಸಕ ಹರೀಶ್ ಪೂಂಜ ಮಾಹಿತಿ ನೀಡಿದ್ದಾರೆ.ಈ ಅನುದಾನದಿಂದ ಶಾಲೆಗಳ ಮೂಲಭೂತ ಸೌಕರ್ಯಗಳು ಮತ್ತಷ್ಟು ಸುಧಾರಣೆಯಾಗಲಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಹಾಗೂ ಸುರಕ್ಷಿತ ಶಿಕ್ಷಣ ವಾತಾವರಣ ಕಲ್ಪಿಸಲು ಸಹಕಾರಿಯಾಗಲಿದೆಶಾಸಕರ ಮನವಿಗೆ ಸ್ಪಂದಿಸಿ ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಶಿಕ್ಷಣ ಸಚಿವರಿಗೆ ತಾಲೂಕಿನ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಶಾಸಕ ಹರೀಶ್ ಪೂಂಜ...
ಬೆಳ್ತಂಗಡಿ; ಫೆಬ್ರವರಿ 02 ರಂದು ಬ್ಲಾಕ್ ಕಾಂಗ್ರೆಸ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯ ಬಚಾವ್ ಆಂದೋಲನ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಭಾಗಿ
ಬೆಳ್ತಂಗಡಿ; ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಚಾವ್ ಆಂದೋಲನವು, ದಿನಾಂಕ 02:02 2026ನೇ ಸೋಮವಾರ ಬೆಳ್ತಂಗಡಿಯಲ್ಲಿ ನಡೆಯಲಿದ್ದು. ಸಮಾವೇಶದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಪರಿಶ್ರಮ ನೀಟ್ ಅಕಾಡೆಮಿಯ ಸಂಸ್ಥಾಪಕರು. ಪ್ರದೀಪ್ ಈಶ್ವರ್ ಮಾತನಾಡಲಿದ್ದಾರೆ.ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಗಳಾದ ಸತೀಶ್ ಕಾಶಿಪಟ್ಣ ಹಾಗೂ ನಾಗೇಶ್ ಕುಮಾರ್ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.ಆ ದಿನ ಬೆಳಿಗ್ಗೆ 10:00 ಗಂಟೆಗೆ ಲಾಯಿಲ ಸಂಗಮ ಸಭಾಭವನದ ಬಳಿಯಿಂದ ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದವರೆಗೆ ಕಾಲ್ನಡಿಗೆ ಜಾಥ...
ಉಜಿರೆ ಸ್ಕೂಟರ್ ಗೆ ಡಿಕ್ಕಿಹೊಡೆದು ಪರಾಯಾಗಿ ಹೊಂಡಕ್ಕೆ ಬಿದ್ದ ಕಾರು
ಬೆಳ್ತಂಗಡಿ; ಉಜಿರೆಯಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿ ಸ್ಕೂಟರ್ ಗೆ ಡಿಕ್ಕಿಹೊಡೆದು ನಿಲ್ಲಿಸದೆ ಹೋದ ಕಾರು ಹೊಂಡಕ್ಕೆ ಬಿದ್ದ ಘಟನೆ ಜ 28ರಂದು ರಾತ್ರಿ ನಡೆದಿದೆ.ಉಜಿರೆ ಬೆಳಾಲು ಕ್ರಾಸ್ ಬಳಿ ಪೇಟೆಯಲ್ಲಿ ಸ್ಕೂಟರ್ ತಾಗಿ, ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಹೊಂಡಕ್ಕೆ ಬಿದ್ದಿದೆ. ಸ್ಕೂಟರ್ ನಲ್ಲಿದ್ದ ಯುವತಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಚಾಲಕ ಕಾರನ್ನು ಉಜಿರೆ ಬೆಳಾಲು ಕ್ರಾಸ್ ಬಳಿ ಸ್ಕೂಟರ್ ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ತಪ್ಪಿಸಿಕೊಂಡು ಹೋಗಿದ್ದು ಜನಾರ್ಧನ ಶಾಲೆ ಹತ್ತಿರ ಕಾರು...
ಸುಮಂತ್ ಕೊಲೆ ಪ್ರಕರಣ ಸಮಗ್ರ ತನಿಖೆ ಶಾಸಕ ಹರೀಶ್ ಪೂಂಜ ಒತ್ತಾಯ
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಎನ್ನುವ ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ತನಿಖೆಯನ್ನು ಅತ್ಯಂತ ಕೂಲಂಕುಷವಾಗಿ ನಡೆಸಿ ಶೀಘ್ರದಲ್ಲಿ ಸತ್ಯಾ ಸತ್ಯತೆಯನ್ನು ಜನರ ಮುಂದಿಡಬೇಕೆಂದು ಶಾಸಕ ಹರೀಶ್ ಪೂಂಜರವರು ಗೃಹ ಸಚಿವರಾದ ಜಿ ಪರಮೇಶ್ವರ್ ರವರಿಗೆ ಆಗ್ರಹಿಸಿದರು. ಸುಮಂತ್‌ನ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದ್ದು, ಕುಟುಂಬಸ್ಥರು ಹಾಗೂ ಸ್ಥಳೀಯ ಸಾರ್ವಜನಿಕರು ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಲೋಪದೋಷಗಳು ನಡೆಯದಂತೆ, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಶೀಘ್ರದಲ್ಲೇ ನಿಖರವಾದ ಸತ್ಯವನ್ನು ಜನರ ಮುಂದಿಡಬೇಕು ಎಂದು ಶಾಸಕರು ಗೃಹ ಸಚಿವರನ್ನು...
ಸುಮಂತ್ ಕೊಲೆ ಪ್ರಕರಣ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಫೆ 4 ರಂದು ಸಿಪಿಐಎಂ ಪ್ರತಿಭಟನೆ; ಬಿ.ಎಂ ಭಟ್
ಬೆಳ್ತಂಗಡಿ; ಬಾಲಕ ಸುಮಂತ್ ಕೊಲೆಯಾಗಿ ವಾರಗಳೇ ಕಳೆದವು. ಆದರೆ ಕೊಲೆಗಾರರ ಪತ್ತೆ ಇನ್ನೂ ಆಗಿಲ್ಲ. ಇದು ಅತ್ಯಂತ ವಿಷಾಧನೀಯ ಸಂಗತಿ ಎಂದು ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್ ಆಪಾದಿಸಿರುಸುತ್ತಾರೆ.ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯಾಚಾರ, ಕೊಲೆಯಾದರೆ ಬಹುತೇಕ ಪ್ರಕರಣಗಳಲ್ಲಿ ಅಪರಾದಿಗಳು ಪತ್ತೆ ಆಗುತ್ತಿಲ್ಲ ಎಂಬುದು ಆಘಾತಕಾರಿಯಾದ ವಿಚಾರ. ಕರ್ನಾಟಕ ಪೋಲೀಸ್ ಯಾವತ್ತೂ ಸೋಲುವ ಇಲಾಖೆ ಅಲ್ಲ. ಅದರಲ್ಲೂ ಈಗಿನ SP ಯವರು ದಕ್ಷ ಎಂದು ಹೆಸರು ಗಳಿಸಿದವರು. ಈ ಹೆಗ್ಗಳಿಕೆಗಳು ಬೆಳ್ತಂಗಡಿ ಪಾಲಿಗೆ ಅಲ್ಲ ಎನ್ನುವಂತೆ ಆಗಬಾರದಲ್ಲವೇ ಎಂದವರು ಪ್ರಶ್ನಿಸಿದರು?**ಇದೀಗ ಸುಮಂತ್ ಕೊಲೆ ಪ್ರಕರಣದಲ್ಲಾದರೂ ಪೋಲೀಸ್...
ಬೆಳ್ತಂಗಡಿ ರೋಷನ್ ಕಿರಣ್ ಡಿಸೋಜ ನಾಪತ್ತೆ
ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಚರ್ಚ್ ರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರೋಷನ್ ಕಿರಣ್ ಡಿಸೋಜ(೩೬) ಅವರು ನಾಪತ್ತೆಯಾಗಿರುವ ಕುರಿತು ಅವರ ಪತ್ನಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿಯ ಸಿಕ್ವೇರಾ ಟ್ರಾವೆಲ್ಸ್‌ನ ಪಿಕಪ್‌ನಲ್ಲಿ ಚಾಲಕ ಕೆಲಸ ಮಾಡಿಕೊಂಡಿದ್ದ ರೋಷನ್ ಡಿಸೋಜ ಅವರು ಜ.24ರಂದು ತನ್ನ ಪತ್ನಿಗೆ ಕರೆ ಮಾಡಿ ಜ.25ರಂದು ಬೆಂಗಳೂರಿಗೆ ಬರುವುದಾಗಿ ತಿಳಿಸಿದ್ದರು.25 ರಂದು ಬೆಳಿಗ್ಗೆ ಬಸ್ ಹತ್ತಿ ಬರುತ್ತಿರುವುದಾಗಿ ತಿಳಿಸಿದ್ದ ಅವರು ನಂತರ ಪತ್ನಿಗೆ ಕರೆ ಮಾಡಿಲ್ಲ. ಪತ್ನಿ 4 ಗಂಟೆಗೆ ಕರೆ ಮಾಡಿದಾಗ ರೋಷನ್ ಕಿರಣ್...
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಂಚರಿಸುತ್ತಿದ್ದ ವಿಮಾನ ಪತನ
ಮುಂಬಯಿ: ಮಹಾರಾಷ್ಟ್ರ ಡಿಸಿಎಂ, ಎನ್ ಸಿಪಿ ನಾಯಕ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ಬುಧವಾರ ಬೆಳಗ್ಗೆ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ. ಅಪಘಾತದಲ್ಲಿ 66 ವರ್ಷದ ನಾಯಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಅಪಘಾತಕ್ಕೆ ಕಾರಣ, ಹಾನಿಯ ಪ್ರಮಾಣ ಮತ್ತು ಎನ್‌ಸಿಪಿ ಮುಖ್ಯಸ್ಥರ ಸ್ಥಿತಿ ಕುರಿತು ಇನ್ನೂ ತಿಳಿದುಬಂದಿಲ್ಲ.ಬೆಂಕಿ ಹೊತ್ತಿಕೊಂಡಿರುವ ದೃಶ್ಯಗಳು ಲಭ್ಯವಾಗಿದ್ದು ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.
ಪುತ್ತೂರು ಮಾದಕವಸ್ತು ಮಾರಾಟಯತ್ನ ತಂಡದ ನಾಲ್ವರ ಬಂಧನ
ಬೆಳ್ತಂಗಡಿ: ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಮಾಡಿ, ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಹರ್ಷದ್ (33), ಪುತ್ತೂರು, ಮಹಮ್ಮದ್ ಆರೀಶ್ (31), ಪುತ್ತೂರು, ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46), ಪುತ್ತೂರು ಹಾಗೂ ಆರೋಪಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ನೀಡುತ್ತಿದ್ದ ಬಂಟ್ವಾಳ ನಿವಾಸಿ ಮುಸ್ತಾಫ (46) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಅಂದಾಜು ರೂ. 50,000/- ಮೌಲ್ಯದ 6.39 ,...
ಮಡಂತ್ಯಾರಿನಲ್ಲಿ ಹಿಂದೂ ಸಂಗಮ
ಮಡಂತ್ಯಾರು :ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಅಂಗವಾಗಿ ಮಡಂತ್ಯಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ನಡೆಯಿತು. ಮಡಂತ್ಯಾರು ಗಣಪತಿ ಮಂಟಪದಲ್ಲಿ ಪಾರೆಂಕಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಧರ್ ಭಟ್ ಪೇಜಾವರ ಇವರ ದಿವ್ಯ ಹಸ್ತದಿಂದ ದೀಪ ಪ್ರಜ್ವಲನೆಯ ಮುಖೇನ ಶೋಭಾಯಾತ್ರೆಯ ಪ್ರಾರಂಭಗೊಂಡು ಅತ್ಯಂತ ವಿಜೃಂಭಣೆಯಿಂದ ನಡೆಯಿತು.ನಂತರ ಬಸವನಗುಡಿ ಪಂಚಕಟ್ಟೆ ಬಸವೇಶ್ವರ ದೇವಸ್ಥಾನದ ಪಕ್ಕದಲ್ಲಿ ತಯಾರಿಸಿದ ವೇದಿಕೆಯ ಎದುರು ದೀಪಂ ಜ್ಯೋತಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಎಂ ಪುಂಜಾಲ್ಕಟ್ಟೆ ಅವರು ಕಾರ್ಯಕರ್ತ ಬಂಧುಗಳೊಂದಿಗೆ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ಥಳೀಯ...














