ಜಪಾನ್-ನ ಸಿ.ಡಬ್ಲ್ಯು.ಬಿ ಮತ್ತು ಉಜಿರೆ ಎಸ್.ಡಿ.ಎಂ ಕಾಲೇಜು ನಡುವೆ ಅಂತಾರಾಷ್ಟ್ರೀಯ ಸಾಂಸ್ಕೃತಿಕ-ಶೈಕ್ಷಣಿಕ ವಿನಿಮಯ ಒಪ್ಪಂದ
ಉಜಿರೆ, ಅ. 1: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಮತ್ತು ಜಪಾನಿನ ಸಿ.ಡಬ್ಲ್ಯು.ಬಿ (ಕಮ್ಯುನಿಟಿ ವರ್ಕ್ ಬಿಯಾಂಡ್ ಬಾರ್ಡ-ರ್ಸ್) ನಡುವೆ ಸಾಂಸ್ಕೃತಿಕ, ಶೈಕ್ಷಣಿಕ, ವೃತ್ತಿಪರ ತರಬೇತಿ ಮತ್ತು ಮತ್ತು ಇಂಟರ್ನ್ಶಿಪ್ ನೀಡುವ ಕುರಿತಾಗಿ ಒಪ್ಪಂದ (ಎಂಒಯು) ನಡೆದಿದೆ. ಅಕ್ಟೋಬರ್ 8, 2026 ರಿಂದ ಮುಂದಿನ ಎರಡು ವರ್ಷಗಳ ಕಾಲ ಈ ಒಪ್ಪಂದ ಜಾರಿಯಲ್ಲಿರಲಿದ್ದು, ಇದಕ್ಕೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್. ಇವರ ಮಾರ್ಗದರ್ಶನದಂತೆ ಕಾಲೇಜಿನ ಪರವಾಗಿ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ್ ಪಿ. ಹಾಗೂ ಜಪಾನಿನ ಸಿ.ಡಬ್ಲ್ಯು.ಬಿ...
ನಾವೂರು ಪ್ರಕರಣ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ವಿರುದ್ಧ ಅಪಪ್ರಚಾರಕ್ಕೆ ಯುವ ಕಾಂಗ್ರೆಸ್ ನಿಂದ ಪೊಲೀಸ್ ಠಾಣೆಗೆ ದೂರು
ಬೆಳ್ತಂಗಡಿ: ತಾಲೂಕಿನ ನಾವುರಿನಲ್ಲಿ ಇತ್ತೀಚೆಗೆ ನಡೆದ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಅಹಿತಕರ ಘಟನೆಯನ್ನು ಬಂಡವಾಳ ಮಾಡಿಕೊಂಡು, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿ , ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ , ರಕ್ಷಿತ್ ಶಿವರಾಂ ರವರಿಗೆ ಸಂಬಂಧ ಕಲ್ಪಿಸಿ ಸಾಮಾಜಿಕ ಜಾಲತಾಣ ಫೇಸ್ಬುಕ್ , ವಾಟ್ಸಾಪ್ ,...
ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಧ್ವನಿವರ್ಧಕ ಕೊಡುಗೆ .
ಕಣಿಯೂರು: ಅ 15. ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಅಕ್ಟೋಬರ್ 15 ರಂದು ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಧ್ವನಿವರ್ಧಕದ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಲಾಯಿತು . ಈ ಸಂದರ್ಭದಲ್ಲಿ ಪದ್ಮುಂಜ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರು ಉಮೇಶ್ ಗೌಡ ಖಂಡಿಗ, ಕಾರ್ಯದರ್ಶಿ ಸತೀಶ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್, ನಿರ್ದೇಶಕರಾದ ರಮಾನಂದ ಪೂಜಾರಿ ,ಸುನಿಲ್, ಹರೀಶ್ ಗೌಡ, ಶಾರದಾ ಮುಚ್ಚೂರು,ಸದಾಶಿವ ಶೆಟ್ಟಿ, ಪ್ರತಿಮಾ, ಮೊಗ್ರು ಡೈರಿ ಕಾರ್ಯದರ್ಶಿ...
ಮಂಗಳೂರು; ಮಕ್ಕಳಮೇಲೆ ಲೈಂಗಿಕ ದೌರ್ಜನ್ಯ ನಗರದ ಚರ್ಚ್ ನ ಧರ್ಮಗುರುವಿನ ವಿರುದ್ದ ಪ್ರಕರಣ ದಾಖಲು
ಮಂಗಳೂರು: ಚರ್ಚಿಗೆ ಪ್ರಾರ್ಥನೆಗೆಂದು ಬರುತ್ತಿದ್ದ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನಗರದ ಚರ್ಚ್ ವೊಂದರ ಧರ್ಮಗುರು ಸಿಪ್ರಿಯನ್ ಪಿಂಟೋ ಎಂಬವರ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಫಾ.ಸಿಪ್ರಿಯನ್ ಪಿಂಟೋ ವಿರುದ್ಧ ಸಂತ್ರಸ್ತರು ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು. ಅದರಂತೆ ರಕ್ಷಣಾ ನಿರ್ದೇಶನಾಲಯವು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ದ.ಕ. ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಸೂಚನೆ ನೀಡಿತ್ತು. ಅಲ್ಲದೆ ಮೈಸೂರಿನ ಒಡನಾಡಿ ಸಂಸ್ಥೆ ಕೂಡ ಪ್ರಕರಣದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲು...
ಕುದುರೇಮುಖ ರಾಷ್ಟ್ರೀಯ ಉದ್ಯಾನ ವನದೊಳಗೆ ಮರ ಕಡಿದ ಪ್ರಕರಣ ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ : ಕುದುರೇಮುಖ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿ ವಿಭಾಗಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು ಮಾಡಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೊರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್ ಎಂಬಾತನೇ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು ಆತನ ವಿರುದ್ದ ಪ್ರಕರಣ ದಾಖಲಿಸಲಾಗಿದೆ.ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಬಲ್ತಾರ ಎಂಬಲ್ಲಿ ವನ್ಯಜೀವಿ ವಿಭಾಗಕ್ಕೆ ಸೇರಿದ ಕಾಡಿನೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಲಸಿನ ಮರಗಳನ್ನು ಕಡಿದು ದಾಸ್ತಾನು ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ...
ಬೆಳ್ತಂಗಡಿ: ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಮೂವರು ಆರೋಪಿಗಳ ಬಂಧನ S P ಮಾಹಿತಿ
ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ ಕಟ್ಟಡದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ಡಿಸೇಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ನಾವೂರು ನಿವಾಸಿ ರವಿ ಪೂಜಾರಿ, ನಾವೂರು ನಿವಾಸಿ ಸುರೇಶ್ ಇಂಚರ ಹಾಗೂ ದಿನೇಶ್ ಪ್ರಭು ನಾವೂರು ಎಂದು ಗುರುತಿಸಲಾಗಿದೆ.ಅ.7ರಂದು ನಾವೂರು ಪೇಟೆಯಲ್ಲಿರುವ ಸ್ವಾತಿ ಕಟ್ಟಡದಲ್ಲಿ ಕಾರ್ಯಚರಿಸುತ್ತಿರುವ ಡಾ। ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ತಡ ರಾತ್ರಿ ಡಿಸೇಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿತ್ತು....
ಬೆಳ್ತಂಗಡಿ: ನಾವೂರು ಡಾ.ಪ್ರದೀಪ್ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣ ಒಬ್ಬನ ಬಂಧನ ಇಬ್ಬರು ವಶಕ್ಕೆ
ಬೆಳ್ತಂಗಡಿ: ನಾವೂರು ಗ್ರಾಮದ ನಾವೂರು ಸ್ವಾತಿ ಕಟ್ಟಡದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ಡಿಸೇಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದ ತನಿಖೆಯನ್ನು ಆರಂಭಿಸಿದ ಬೆಳ್ತಂಗಡಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು. ಈ ಪ್ರಕರಣದಲ್ಲಿ ಶಂಕಿತ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಆರೋಗ್ಯ ಕ್ಲಿನಿಕ್ಗೆ ರಾತ್ರಿ ಸಮಯ ಡಿಸೇಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದ ಆರೋಪಿ ನಾವೂರು ನಿವಾಸಿ ರವಿ ಪೂಜಾರಿಯನ್ನು ಎಂಬಾತನನ್ನು ಅ.14 ರಂದು ಸಂಜೆ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ...
ಬೆಳ್ತಂಗಡಿ : ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಮಹಾರಾಷ್ಟ್ರದಲ್ಲಿ ಬಂಧನ
ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಗೆ ಬೆದರಿಕೆ ಹಾಕಿದ ಪ್ರಕರಣವೊಂದರಲ್ಲಿ ಕಳೆದ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಿಂದ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ದಿ.ಕೃಷ್ಣಪ್ಪ ಪೂಜಾರಿ ಮಗ ರವಿಕುಮಾರ್(32) ಎಂದು ಗುರುತಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ 2021ರಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 70/2021ರ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಕಲಂ 341, 504, 506, 354(B), 427 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವು ಬಂಟ್ವಾಳದ ಮಾನ್ಯ ಹೆಚ್ಚುವರಿ...
ಸುಳ್ಯ; ಮೀನು ಹಿಡಿಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಇಬ್ಬರು ಯುವಕರು ಮೃತ್ಯು, ತೋಟದ ಮಾಲಿಕನ ವಿರುದ್ದ ಪ್ರಕರಣ ದಾಖಲು
ಸುಳ್ಯ: ತೋಡಿನಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ತೋಟಕ್ಕೆ ಅನಧಿಕೃತವಾಗಿ ವಿದ್ಯುತ್ ಅಳವಡಿಸಿದ್ದ ಮಾಲೀಕ ಮಧುಸೂದನ್ ಭಟ್ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಕ್ಟೋಬರ್ 12ರಂದು ಕಲ್ಮಡ್ಕ ಗ್ರಾಮದ ಹೊಳೆಕ್ಕೆರೆ ತೋಡಿನಲ್ಲಿ ಮೀನು ಹಿಡಿಯುತ್ತಿದ್ದಾಗ ಈ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಕಲ್ಮಡ್ಕದ ಭರತ್ (28) ಹಾಗೂ ಬೆಳ್ತಂಗಡಿಯ ರಮೇಶ್ ಅಲಿಯಾಸ್ ಗಣೇಶ್ (36) ಮೃತಪಟ್ಟಿದ್ದು, ಜೊತೆಗಿದ್ದ ಅಪ್ರಾಪ್ತ ಬಾಲಕ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮಧುಸೂದನ್ ಭಟ್ ತಮ್ಮ ತೋಟಕ್ಕೆ ಅನಧಿಕೃತವಾಗಿ ವಿದ್ಯುತ್ ಅಳವಡಿಸಿದ್ದರಿಂದಲೇ...
ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಮುಂಡಾಜೆಯ ತೇಜಲ್ ಗೆ ದಾಖಲೆಯೊಂದಿಗೆ ಚಿನ್ನದ ಪದಕ
ಬೆಳ್ತಂಗಡಿ: ಮೈಸೂರಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ(ಸಿ.ಎಂ ಕಪ್) ನಲ್ಲಿ ಮುಂಡಾಜೆ ನಿವಾಸಿ ತೇಜಲ್ ಕೆ.ಆರ್ ಅವರು 110 ಮೀ ಹರ್ಡಲ್ಸ್ ನಲ್ಲಿ ಹೊಸ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಪಡೆದು ಕೊಂಡಿದ್ದಾರೆಮುಂಡಾಜೆ ನಿವಾಸಿ ರಾಜೇಶ್ ಕೆ.ವಿ ಹಾಗೂ ಜಿನ್ಸಿ ದಂಪತಿಯರ ಪುತ್ರ ತೇಜಲ್ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪದವಿ ವಿದ್ಯಾರ್ಥಿ ಯಾಗಿದ್ದು ತರಬೇತುದಾರರಾದ ಶಾಂತರಾಮ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.















