ನೇತ್ರಾವತಿ ಸ್ನಾನಘಟ್ಟದ ಅರಣ್ಯದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 4 ರಂದು ದೂರುದಾರ ಗುರುತು ಮಾಡದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 5 ರಂದು ನೀಡಿದ ದೂರಿನ ಮೇರೆಗೆ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. SIT ಗೆ ಹಸ್ತಾಂತರ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಗುರುತು ಮಾಡದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಹೆಚ್ಚಿನ ತನಿಖೆಗಾಗಿ ಎಸ್.ಐ.ಟಿ ಸಂಸ್ಥೆಗೆ ಹಸ್ತಾಂತರ ಮಾಡಲಿದ್ದಾರೆ.
ಧರ್ಮಸ್ಥಳ ಪುದುವೆಟ್ಟು ಕ್ರಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಕಲ್ಲೆಸೆದ ದುಷ್ಕರ್ಮಿಗಳು
ಬೆಳ್ತಂಗಡಿ; ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ದುಷ್ಕರ್ಮಿಗಳು ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ಕಲ್ಲು ಹೊಡೆದು ಬಸ್ಸಿಗೆ ಹಾನಿಯುಂಟುಮಾಡಿದ ಘಟನೆ ಮಂಗಳವಾರ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಈ ಬಗ್ಗೆ ಧರ್ಮಸ್ಥಳ ಡಿಪ್ಪೋದ ಸಂಚಾರ ನಿಯಂತ್ರಕ ಪಿ ದಾವೂದ್ ಎಂಬವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.ಮಂಗಳವಾರ ಮಧ್ಯಾಹ್ನದ ವೇಳೆ ಕೆ.ಎ 21 ಎಫ್ 0103 ನಂಬರ್ ನ ಬಸ್ಸನ್ನು ಚಾಲಕ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯದ ಕಡೆಗೆ ಚಲಾಯಿಸುತ್ತಿದ್ದ ವೇಳೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಸಮೀಪ ಎದುರಿನಿಂದ...
ಜಯಂತ್ ಟಿ.ದೂರು ಎಸ್.ಐ.ಟಿ ಗೆ ಹಸ್ತಾಂತರ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಪೊಲೀಸರು ಪ್ರಕರಣ ದಾಖಲಿಸದೆ ಮೃತದೇಹವೊಂದನ್ನು ಹೂತು ಹಾಕಿರುವುದಾಗಿ ಧರ್ಮಸ್ಥಳ ಠಾಣೆಗೆ ನೀಡಿದ್ದ ದೂರರ್ಜಿಯನ್ನು ಇದೀಗ ಕರ್ನಾಟಕ ರಾಜ್ಯ ಡಿಜಿಪಿ&ಐಜಿಪಿ ಅವರ ಆದೇಶದಂತೆ ಮುಂದಿನ ವಿಚಾರಣೆಗಾಗಿ ಎಸ್.ಐ.ಟಿ ತಂಡಕ್ಕೆ ಹಸ್ತಾಂತರಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.ಈ ಪ್ರಕರಣದ ಮುಂದಿನ ತನಿಖೆಯನ್ನು ಎಸ್.ಐ.ಟಿ ತಂಡ ನಡೆಸಲಿದೆ.
12ನೆಯ ಸ್ಥಳದಲ್ಲಿಯೂ ಪತ್ತೆಯಾಗದ ಕಳೆಬರ ಕಾರ್ಯಾಚರಣೆ ಅಂತ್ಯ
ಬೆಳ್ತಂಗಡಿ; ನೇತ್ರಾವತಿ ಸ್ನಾನಘಟ್ಟದಲ್ಲಿ ನಡೆಯಯತ್ತಿರುವ ಕಳೆಬರಗಳಿಗಾಗಿನ ಹುಡುಕಾಟದಲ್ಲಿ 12ನೆಯ ಸ್ಥಳದಲ್ಲಿಯೂ ಯಾವುದೆ ಕಳೆಬರಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆಇಂದು ಮಧ್ಯಾಹ್ನದ ಬಳಿಕ ಇಲ್ಲಿ ಅಗೆಯುವ ಕಾರ್ಯ ನಡೆಸಲಾಗಿತ್ತು ಸುಮಾರು ಒಂದುವರೆ ಗಂಟೆ ನಡೆದ ಕಾರ್ಯಾಚರಣೆಯಲ್ಲಿ ಯಾವಯದೆ ಕುರುಹುಗಳು ಪತ್ತೆಯಾಗಿಲ್ಲ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; 11ರಲ್ಲಿಯೂ ಸಿಗದ ಅವಶೇಷಗಳು
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ 1:55 ರವರೆಗೆ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಇನ್ನೂ 12 ನೇ ಗುರುತು ಮಾಡಿದ ಜಾಗದಲ್ಲಿ ಊಟ ಮಾಡಿದ ಬಳಿಕ ಕಾರ್ಯಾಚರಣೆಗೆ ಮಾಡಲಿದ್ದಾರೆ.
ನೇತ್ರಾವತಿ ಸ್ನಾನಘಟ್ಟದ 11ನೆಯ ಸ್ಥಳದಲ್ಲಿ ಹುಡುಕಾಟ ಆರಂಭಿಸಿದ ಎಸ್.ಐ.ಟಿ
ಬೆಳ್ತಂಗಡಿ;ನೇತ್ರಾವತಿ ಸ್ನಾನಘಟ್ಟದ ಸಮೀಪ ಅನಾಮಿಕನ ಹೇಳಿಕೆಯ ಮೇರೆಗೆ ಕಳೆಬರಕ್ಕಾಗಿನ ಹುಡುಕಾಟ ಕಾರ್ಯಾಚರಣೆ ಏಳನೆ ದಿನವಾದ ಮಂಗಳವಾರ ಆರಂಭವಾಗಿದೆ.ಇಂದು ಸಾಕ್ಷಿ ದೂರು ದಾರ ಈ ಹಿಂದೆ ಗುರುತಿಸಿದ್ದ 11ನೆಯ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.ಸೋಮವಾರ ಈತ ತೋರಿಸಿದ ಪ್ರದೇಶದಲ್ಲಿ ಕಳೆಬರ ಲಭ್ಯವಾಗಿತ್ತು ಈ ಹಿನ್ನಲೆಯಲ್ಲಿ ಈತ ಈ ಹಿಂದೆ ಗುರುತಿಸಿದ 11ನೆಯ ಸ್ಥಳದಲ್ಲಿಯೇ ಇಂದು ಹುಡುಕಾಟ ಆರಂಭಿಸಿದ್ದಾರೆ. ಉಳಿದಂತೆ ಇನ್ನೂ ಹಲವಡೆ ಇರುವುದಾಗಿ ಆತ ಹೇಳಿದ್ದರೂ ಅದರ ಬಗ್ಗೆ ಮುಂದಿನ ದಿನಗಳಲ್ಲಿ ಪರಿಶೀಲಿಸಲಿರುವುದಾಗಿ ಎಸ್.ಐ.ಟಿ ಅಧಿಕಾರಿಗಳು ಮಾಹಿತಿ ನೀಡುತ್ತಿದ್ದಾರೆ 11.30 ರ ಸುಮಾರಿಗೆ ಎಸ್.ಐ.ಟಿ ತಂಡ...
ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಲಾರೆನ್ಸ್ ಎಮ್. ಟಿ ಇವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ 26 ನೆಯ ವರ್ಷಾಚರಣೆಯ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಬಿಷಪ್ ಲಾರೆನ್ಸ್ ಮುಕ್ಕುಯಿ ಅವರನ್ನು ಭೇಟಿಯಾಗಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿಕಾರ್ ಜನರಲ್ ಫಾ. ಜೋಸೆಫ್ ವಲಿಯಪ ರಂಬಿಲ್ ಸೆಬಾಸ್ಟಿಯನ್ ಪಿ.ಸಿ, ಹಾಗೂ ಇತರರು ಇದ್ದರು.
ಬೆಳ್ತಂಗಡಿ : 6 ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 31 ರಂದು ದೂರುದಾರ ಆರನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 1 ರಂದು ನೀಡಿದ ದೂರಿನ ಮೇರೆಗೆ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. SIT ಗೆ ಹಸ್ತಾಂತರ: ಅಸ್ಥಿಪಂಜರ ಪತ್ತೆಯಾದ ಕಳೇಬರಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಎಸ್.ಐ.ಟಿ ಅಧಿಕಾರಿಗಳು ಕಳುಹಿಸಿದ್ದು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 6 ನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ...
ಪದ್ಮಲತಾ ಮನೆಗೆ ಸಿಪಿಐಎಂ ರಾಜ್ಯ ಕಾರ್ಯದರ್ಶಿ ನೇತೃತ್ವದ ನಿಯೋಗ ಭೇಟಿ; ಮರು ತನಿಖೆಗೆ ಒತ್ತಾಯ
ಬೆಳ್ತಂಗಡಿ: ದಶಕಗಳ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸಿಪಿಐಎಂ ಮುಖಂಡ ದೇವಾನಂದ ಅವರ ಮಗಳು ಪದ್ಮಲತಾಳ ಮನೆಗೆ ಸಿಪಿಐ ಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಪ್ರಕಾಶ್ ನೇತೃತ್ವವ ತಂಡ ಭೇಟಿ ನೀಡಿ ಪದ್ಮಲತಾಳ ತಾಯಿ ಹಾಗೂ ಸಹೋದರಿ ಹಾಗೂ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು. ಈ ಪ್ರಕರಣದ ಬಗ್ಗೆ ಮುಂದಿನ ತನಿಖೆಗಳಿಗೆ ಒತ್ತಾಯಿಸುವ ಕುರಿತು ಮನೆಯವರೊಂದಿಗೆ ಮಾತುಕತೆ ನಡೆಸಿದರು.ಬಳಿಕ ಬೆಳ್ತಂಗಡಿ ಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿ.ಪಿಐ.ಎ ರಾಜ್ಯ ಕಾರ್ಯದರ್ಶಿ ಪ್ರಕಾಶ್ ಕೆ ಇದೀಗ ಅನಾಮಿಕ ನೀಡಿದ ಹೇಳಿಕೆಯ ಹಿನ್ನಲೆಯಲ್ಲಿ ರಚನೆಯಾಗಿರುವ...
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಯುವನಿಧಿ ನೋಂದಣಿ ಪ್ರಚಾರಕ್ಕೆ ಚಾಲನೆ
ಬೆಳ್ತಂಗಡಿ; ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಾರಂಭವಾದ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ನೋಂದಣಿ ಪ್ರಚಾರಕ್ಕೆ ಚಾಲನೆ ನೀಡಲಾಯಿತು. ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಬಿ.ಪದ್ಮನಾಭ ಸಾಲ್ಯಾನ್ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡುತ್ತಾ ಈ ಯೋಜನೆಯ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳುವಂತೆ ಕರೆ ನೀಡಿದರು. ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಶುಭ ಹಾರೈಸಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್, ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಪ್ರಾoಶುಪಾಲರಾದ...














