ತೆಕ್ಕಾರು; ಗಾಳಿ ಮಳೆಗೆ ಹಾನಿ; ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ; ತಾಲೂಕಿನಲ್ಲಿ ಸುರಿದ ಗಾಳಿ ಮಳೆಗೆ ತೆಕ್ಕಾರು ಗ್ರಾಮದ ಆನಲಿಕೆ ಶ್ರೀಮತಿ ಬೇಬಿ ಪೂಜಾರ್ತಿಯವರ ಮನೆಯು ಸಂಪೂರ್ಣ ಹಾನಿಗೊಳಗಾಗಿದ್ದು ಶಾಸಕ ಹರೀಶ್ ಪೂಂಜ ಅವರಿ ಶನಿವಾರ ಇಲ್ಲಿಗೆ ಭೇಟಿ ನೀಡಿ ವೈಯಕ್ತಿಕ ಸಹಾಯ ನೀಡಿ, ಮೇಲ್ಛಾವಣಿಗೆ ಶೀಟು ಒದಗಿಸುವ ಭರವಸೆ ನೀಡಿದರು.
ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ.
ಬೆಳ್ತಂಗಡಿ : ಬೆಳ್ತಂಗಡಿ ಕೇಂದ್ರ ಖಿಲರ್ ಜುಮ್ಮಾ ಮಸೀದಿ ಇದರ ವಾರ್ಷಿಕ ಮಹಾಸಭೆಯು ಶುಕ್ರವಾರ ಜುಮ್ಮಾ ನಮಾಝಿನ ಬಳಿಕ ಖಿಲರ್ ಜುಮ್ಮಾ ಮಸೀದಿಯ ಮದರಸ ಹಾಲ್ ನಲ್ಲಿ ಜಮಾ'ಅತ್ ಖತೀಬರಾದ ಹನೀಫ್ ಫೈಝಿಯವರು ದುವಾ ಮೂಲಕ ನಡೆಯಿತು. ಪ್ರಧಾನ ಕಾರ್ಯದರ್ಶಿ ರಝಾಕ್ ಕೊಡಿಸಭೆಯವರು ಕಳೆದ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಅಧ್ಯಕ್ಷರಾದ ಬಿ ಎ ನಝೀರ್ ರವರು ಕಳೆದ ಸಾಲಿನ ಅವಧಿಯಲ್ಲಿ ನಡೆದ ಮಸೀದಿಯ ಅಭಿವೃದ್ಧಿ ಕಾರ್ಯವನ್ನು ವಿವರಿಸಿದರು. ಮಹಮ್ಮದ್ ಬಿ ಎಚ್ ಗೌರವ ಅಧ್ಯಕ್ಷತೆಯಲ್ಲಿ ಹಳೆಯ ಸಮಿತಿಯನ್ನು ಬರ್ಕಾಸುಗೊಳಿಸಿ ನೂತನ ಸಮಿತಿಯನ್ನು...
ಭಾರೀ ಮಳೆ ಬೆಳ್ತಂಗಡಿ ತಾಲೂಕಿನಲ್ಲಿ ಶಾಲೆಗಳಿಗೆ ಜು26ಶನಿವಾರ ರಜೆ
ಬೆಳ್ತಂಗಡಿ: ತಾಲೂಕಿನಲ್ಲಿ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮಾಹಿತಿಯಂತೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (26) ರಜೆ ಘೋಷಿಸಿ, ಬೆಳ್ತಂಗಡಿ ತಹಶೀಲ್ದಾರ್ ಪ್ರಥ್ವಿ ಸಾನಿಕಂ ಆದೇಶ ಹೊರಡಿಸಿದ್ದಾರೆ
ರೆಖ್ಯ ಕಾಡು ಹಂದಿ ದಾಳಿಯಿಂದ ಗಾಯಗೊಂಡ ವ್ಯಕ್ತಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ; ಕಾಡು ಹಂದಿದಾಳಿಯಿಂದ ಗಾಯಗೊಂಡಿರುವರೆಖ್ಯಾ ಗ್ರಾಮದ ಬಾಲಕೃಷ್ಣ ಗೌಡ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ವೈಯುಕ್ತಿಕ ಧನ ಸಹಾಯ ನೀಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಸಂದರ್ಭದಲ್ಲಿ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಡಾಜೆ ಸಮೀಪ ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನದ ಮೇಲೆ ಬಿದ್ದ ಹೆಮ್ಮರ; ಹಲವು ವಿದ್ಯುತ್ ಕಂಬಗಳು ಧರೆಗೆ; ಸಂಚಾರ ಸಂಪೂರ್ಣ ಸ್ಥಗಿತ
ಬೆಳ್ತಂಗಡಿ; ಉಜಿರೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿಬ ಮುಂಡಾಜೆ ಗ್ರಾಮದ ಕಾಪು ಎಂಬಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು ಐದಕ್ಕೂ ಹೆಚ್ಚು ವಿದ್ಯುತ್ ಕಂಬಗಳು ರಸ್ತೆಗೆ ಮುರಿದುಬಿದ್ದಿವೆ. ಮರವು ಚಲಿಸುತ್ತಿದ್ದ ಜೀಪಿನ ಮೇಲೆ ಬಿದ್ದಿದ್ದು, ಓರ್ವ ಗಾಯಗೊಂಡಿರುವುದಾಗಿ ತಿಳಿದು ಬಂದಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರಸ್ತುತ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.ಘಟನೆಯಲ್ಲಿ ವಾಹನಗಳ ಮೇಲೆ ಮರ ಹಾಗೂ ವಿದ್ಯುತ್ ಕಂಬಗಳು ಬಿದ್ದಿರುವುದಾಗಿ ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ
ಬೆಳ್ತಂಗಡಿ; ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ- ಕಾಪು ರಕ್ಷಿತಾರಣ್ಯದ ನಿಡಿಗಲ್ -ಸೀಟು ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಉರುಳಿ ಬಿದ್ದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಹಾಸನದ ಶಿವಕುಮಾರ್ ಎಂಬವರು ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ತೆರಳುತ್ತಿದ್ದ ವೇಳೆ ಘಟನೆ ನಡೆದಿದ್ದು ಅದೃಷ್ಟವಶಾತ್ ಅಲ್ಪಸ್ವಲ್ಪ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಹೆದ್ದಾರಿಗೆ ಮರ ಅಡ್ಡಲಾಗಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇಲ್ಲಿಂದ ಸುಮಾರು 50 ಮೀ ದೂರದಲ್ಲಿ ಗುರುವಾರ ಮಧ್ಯಾಹ್ನ ಹೆದ್ದಾರಿ ರಸ್ತೆಗೆ ಮರ ಉರುಳಿ...
ಮೃತದೇಹಗಳನ್ನು ಹೂತಿಟ್ಟ ಪ್ರಕರಣ; ಎಸ್.ಐ.ಟಿ ತಂಡ ಮಂಗಳೂರಿಗೆ ಆಗಮನ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ತನಿಖೆಗಾಗಿ ಜುಲೈ 25 ರಂದು ಸಂಜೆ ಮಂಗಳೂರು ಐಬಿಗೆ ಎಸ್.ಐ.ಟಿ ಅಧಿಕಾರಿಗಳು ಆಗಮಿಸಿದ್ದು ತನಿಖಾ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ ಐಪಿಎಸ್ ಅನುಚೇತ್ ನೇರವಾಗಿ ಎಸ್.ಐ.ಟಿ ಇತರ ಅಧಿಕಾರಿಗಳಿದ್ದ ಮಂಗಳೂರು ಐಬಿಗೆ ತೆರಳಿದ್ದು ಅಲ್ಲಿ ಇತರ ಎಸ್.ಐ.ಟಿ ಅಧಿಕಾರಿಗಳ ಜೊತೆ ಸಭೆ ನಡೆಸಿರುವುದಾಗಿ ತಿಳಿದು ಬಂದಿದೆ ಪ್ರಕರಣದ ಈ ವರೆಗಿನ ಬೆಳವಣಿಗೆಗಳ ಬಗ್ಗೆ ಹಾಗೂ ದಾಖಲೆಗಳನ್ನು ಪರಿಶೀಲನೆ ನಡೆಸಿ ಅದರ ಬಗ್ಗೆ ಚರ್ಚಿಸಿದ ಬಳಿಕ ಮುಂದಿನ ತನಿಖೆಯ ಬಗ್ಗೆ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳಲಿದ್ದಾರೆ.
ಕಾಡಾನೆ ಸಮಸ್ಯೆ; ಕೆ.ಎಸ್.ಎಂ.ಸಿ.ಎ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ
ಬೆಳ್ತಂಗಡಿ; ಕಾಡಾನೆ ಹಾವಳಿಯಿಂದಾಗಿ ತತ್ತರಿಸಿ ಹೋಗಿರುವ ಬೆಳ್ತಂಗಡಿ ತಾಲೂಕಿನ ಜನರ ಪರವಾಗಿ ದಿನಾಂಕ 21/07/2025 ರಂದು ಬೆಳ್ತಂಗಡಿ ಯಲ್ಲಿ KSMCA ನೇತೃತ್ವದಲ್ಲಿ ನಡೆದ ಜನಾಂಧೋಲನದ ಮುಂದುವರಿದ ಬಾಗವಾಗಿ ಜು25ರಂದು ಉಸ್ತುವಾರಿ ಸಚಿವರಿಗೆ ಕೆ.ಎಸ್.ಎಂ.ಸಿ.ಎ ಯ ಪರವಾಗಿ ಕೇಂದ್ರ ಸಮಿತಿ ಅಧ್ಯಕ್ಷ ರಾದ ಬಿಟ್ಟಿ ನೆಡುನಿಲಂ ರವರ ಸೂಚನೆ ಮೇರೆಗೆ ಕೇಂದ್ರಸಮಿತಿ ಸದಸ್ಯರಾದ ಜಾರ್ಜ್ ಟಿ ವಿ ಅವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್‌ರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಆನೆ ಹಾಗೂ...
ರಾಜಕೇಸರಿ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅವರಿಗೆ ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025
ಬೆಳ್ತಂಗಡಿ; ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಅವರು ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025 ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ರಾಜ ಕೇಸರಿಯ ಟ್ರಸ್ಟನ್ನು ಹುಟ್ಟಿಹಾಕಿ ಶ್ರಮಿಕ ಯುವಕರನ್ನು ಒಟ್ಟುಗೂಡಿಸಿ ಮತ್ತು ಅವರ ಕೈಲಾದ ಸೇವಾ ಮೂಲಕ ಸಮಾಜದ ದಾನಿಗಳ ಮೂಲಕ ಅದೆಷ್ಟೋ ಕುಟುಂಬಗಳಿಗೆ ಆಸರೆಯಾಗಿ ಎಷ್ಟೋ ವಿದ್ಯಾರ್ಥಿಗಳ ಬಾಳಲ್ಲಿ ಬೆಳಕಾಗಿ ರಾಜ್ಯ ಮಟ್ಟದಲ್ಲಿ ಜನ ಸೇವಾ ಮನೋಭಾವದ ಮೂಲಕ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವಂತಹ ಸೇವಾ ಸಂಘಟನೆಯಾದ...
ಧರ್ಮಸ್ಥಳ ಪ್ರಕರಣ; ಬೆಳ್ತಂಗಡಿ ಯಲ್ಲಿ ಎಸ್.ಐ.ಟಿ ಕಚೇರಿ ಇಂದಿನಿಂದ ತನಿಖೆ ಆರಂಭ?
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆ ನಡೆಸಲು ನಿಯೋಜನೆಯಾಗಿರುವ ಎಸ್.ಐ.ಟಿ ತಂಡ ಬೆಳ್ತಂಗಡಿ ಯನ್ನು ಕೇಂದ್ರವಾಗಿಸಿ ಕಾರ್ಯನಿರ್ವಹಿಸಲಿರುವುದಾಗಿ ತಿಳಿದು ಬಂದಿದ್ದು ಜು 25ರಂದು ಬೆಳ್ತಂಗಡಿಯಲ್ಲಿ ಎಸ್.ಐ.ಟಿ ಕಚೇರಿ ಆರಂಭವಾಗಲಿದ್ದು ಇಲ್ಲಿ ಎಲ್ಲ ಸುದ್ದತೆಗಳನ್ನು ಮಾಡಲಾಗುತ್ತಿರುವುದಾಗಿ ತಿಳಿದು ಬಂದಿದೆಬೆಳ್ತಂಗಡಿ ಪೊಲೀಸ್ ಠಾಣೆಯ ಸಮೀಪವೇ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ವಸತಿ ಗೃಹವನ್ನೇ ಎಸ್.ಐ.ಟಿ ಕೇಂದ್ರವಾಗಿ ಮಾಡಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.ನೂತನವಾಗಿ ನಿರ್ಮಾಣಗೊಂಡಿರುವ ಈ ವಸತಿಗೃಹಗಳ ಉದ್ಘಾಟನೆ ಇನ್ನೂ ನಡೆದಿಲ್ಲ ಇಲ್ಲಿ ಇಡೀ ತಂಡ ಕಾರ್ಯ ನಿರ್ವಹಿಸಲು ಅಗತ್ಯವಿರುವ ಸ್ಥಳಾವಕಾಶಗಳಿದೆ. ಪೊಲೀಸ್ ಠಾಣೆಯ ಆವರಣದ ಒಳಗೆಯೇ ಈ...















