24 ಗಂಟೆಯೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ; ಹವಾಮಾನ ಇಲಾಖೆ ಮಾಹಿತಿ
ಹೊಸದಿಲ್ಲಿ: ಮಾಮೂಲಿಗಿಂತ ಮೊದಲೇ ಈ ಬಾರಿ ಮುಂಗಾರು ಪ್ರವೇಶ ಆಗಲಿದೆ. ಮುಂದಿನ 24 ಗಂಟೆಯೊಳಗೆ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಳೆದ 16 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಕೇರಳದಲ್ಲಿ ಅವಧಿಗಿಂತ ಮೊದಲೇ ಮಾನ್ಸೂನ್ ಪ್ರವೇಶಿಸಲಿದೆ. ಮಾನ್ಸೂನ್ ಆರಂಭಕ್ಕೆ ಎಲ್ಲಾ ಅನುಕೂಲಕರ ಪರಿಸ್ಥಿತಿಗಳು ರಾಜ್ಯದಲ್ಲಿ ಅಭಿವೃದ್ಧಿಗೊಂಡಿದ್ದು, ಕಳೆದ ಎರಡು ದಿನಗಳಿಂದ ಕಡಿಮೆ ಒತ್ತಡದ ಪ್ರದೇಶ ಮತ್ತು ಮುಂದುವರಿಯುತ್ತಿರುವ ಮಾನ್ಸೂನ್ ವ್ಯವಸ್ಥೆಯ ಸಂಯೋಜನೆಯಿಂದಾಗಿ ಕೇರಳದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದೆ. 2001 ಮತ್ತು 2009ರಲ್ಲಿ ಮೇ ಅಂತ್ಯದೊಳಗೆ ಕೇರಳಕ್ಕೆ ಮುಂಗಾರು...
ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯ ದರ್ಶಿಯಾಗಿ ನಮಿತಾ ಪೂಜಾರಿ ನೇಮಕ
ಬೆಳ್ತಂಗಡಿ.ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನಮಿತಾ ಕೆ ಪೂಜಾರಿ ಅವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ನೇಮಕ ಮಾಡಿದ್ದಾರೆ. ಇವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ, ಚಾರ್ಮಾಡಿ ಗ್ರಾಮ ಪಂಚಾಯತ್ ನ ಮೂರು ಬಾರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ, ಕರ್ತವ್ಯ ನಿರ್ವಹಿಸಿದ್ದಾರೆ.
ಉಜಿರೆ; ಅನುಗ್ರಹ ಶಾಲೆಯ ವಿಧ್ಯಾರ್ಥಿನಿ ಶಾರಾನ್ ಡಿಸೋಜ ರಾಜ್ಯಕ್ಕೆ ದ್ವಿತೀಯ ರ್ಯಾಂಕ್
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶಾರಾನ್ ಡಿಸೋಜಾ ಎಸ್.ಎಸ್.ಎಲ್.ಸಿ ಯಲ್ಲಿ625ರಲ್ಲಿ623 ಅಂಕಗಳಿಸಿದ್ದರು. ಮರು ಮೌಲ್ಯಮಾಪನದಲ್ಲಿ ವಿಜ್ಞಾನ ವಿಷಯದಲ್ಲಿ ಒಂದು ಅಂಕ ಹೆಚ್ಚುವರಿ ಪಡೆದು624 ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ರಾಂಕ್ ಪಡೆದಿದ್ದಾರೆ. ರಾಜ್ಯಕ್ಕೆ ತೃತೀಯ ರ್ಯಾಂಕ್ ತಾಲೂಕಿಗೆ ಪ್ರಥಮ ರಾಂಕ್ ಪಡೆದಿದ್ದ ಈಕೆ ಇದೀಗ ರಾಜ್ಯಕ್ಕೆ ದ್ವಿತೀಯ ಬ್ಯಾಂಕ್, ತಾಲೂಕಿಗೆ ಪ್ರಥಮ ರ್ಯಾಂಕ್ ಗಳಿಸಿದ್ದಾರೆ. ಇವರ ಅಮೋಘ ಸಾಧನೆಗೆ ಶಾಲಾ ಸಂಚಾಲಕರಾದ ಫಾ.ಅಬೇಲ್ ಲೋಬೊ, ಪ್ರಾಂಶುಪಾಲರಾದ ಫಾ.ವಿಜಯ್ ಲೋಬೊ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.
ರಿಕ್ಷಾ-ಪಿಕಪ್ ಡಿಕ್ಕಿ ಇಬ್ಬರಿಗೆ ಗಂಭೀರ ಗಾಯ
ಬೆಳ್ತಂಗಡಿ; ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ಲು ಎಂಬಲ್ಲಿರುವ ಕಿರು ಸೇತುವೆ ಬಳಿ ಗುರುವಾರ ಸಂಜೆ ರಿಕ್ಷಾ ಮತ್ತು ಪಿಕಪ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.ರಿಕ್ಷಾ ಚಾಲಕ ಮುಂಡಾಜೆ ಗ್ರಾಮದ ಮೂಲಾರು ನಿವಾಸಿ ಕುಶಾಲಪ್ಪ ದೇವಾಂಗ( 42) ಅವರ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಪಿಕಪ್ ನಲ್ಲಿದ್ದ ಕೊಕ್ಕಡದ ಡೀಕಯ್ಯ (43) ಎಂಬವರಿಗೆ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಪರಿಶೀಲನೆ...
ಶಿಬಾಜೆ; ಜಾತಿನಿಂದನೆ ಮಾಡಿ ಕೊಲೆಬೆದರಿಕೆ, ಆರೋಪಿಗಳಿಬ್ಬರ ಬಂಧನ
ಬೆಳ್ತಂಗಡಿ; ಶಿಬಾಜೆಯಲ್ಲಿ ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಎಂಬವರಾಗಿದ್ದಾರೆ.ಮೇ 15ರಂದು ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೆಲೆ ಸ್ಥಳೀಯ ನಿವಾಸಿ ಪ್ರವೀಣ್ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜರಿ ಹಲ್ಲೆಗೆ ಯತ್ನಿಸಿದ್ದಾರೆ. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು ಹಿಡಿದುಕೊಂಡು ಹಾಗೂ ತಿಮ್ಮಪ್ಪ ಪೂಜಾರಿ ಕಬ್ಬಿಣದ ಸಲಾಕೆಯನ್ನು ಹಿಡಿದು ಕೊಂಡು ಅವಾಚ್ಯವಾಗಿ ನಿಂದಿಸಿ ಜಾತಿ...
ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ವಿರುದ್ದದ ಎಫ್.ಐ.ಆರ್ ಹೈಕೋರ್ಟ್ ನಿಂದ ತಾತ್ಕಾಲಿಕ ತಡೆ
ಬೆಂಗಳೂರು; ಕೋಮು ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮೇಲಿನ ಆದೇಶ ನೀಡಿದೆ. ವಿಚಾರಣೆ ವೇಳೆ ಹರೀಶ್ ಪೂಂಜಾ ಪರ ವಕೀಲರು ವಾದ ಮಂಡಿಸಿ, ಇಡೀ ದೂರನ್ನು ಓದಿದರೆ ದಾಖಲಿಸಿರುವ ಸೆಕ್ಷನ್‌ಗಳು ಅನ್ವಯಿಸುವುದಿಲ್ಲ. ಧರ್ಮಗಳ ನಡುವೆ ದ್ವೇಷ ಹರಡುವಂಥ ಕೆಲಸವನ್ನು ಪೂಂಜಾ ಅವರು ಮಾಡಿಲ್ಲ....
ಬೆಳ್ತಂಗಡಿ : ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ
ಬೆಳ್ತಂಗಡಿ : ರಸ್ತೆಗೆ ಬಂದ ಕಾಡಾನೆ ಜೊತೆ ಸೆಲ್ಫಿ ಫೋಟೋ ತೆಗೆಯುವ ಸಾಹಸಕ್ಕೆ ಕೈ ಹಾಕಿದ ವಾಹನ ಸವಾರರಿಗೆ ಅರಣ್ಯ ಸಚಿವರು ಬಿಸಿ ಮುಟ್ಟಿಸುವ ಕೆಲಸ ಮಾಡಲು ಮುಂದಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ 4 ನೇ ತಿರುವಿನಲ್ಲಿ ಮೇ.22 ರಂದು ಬೆಳಗ್ಗೆ ರಸ್ತೆಗೆ ಬಂದಿದ್ದ ಕಾಡನೆ ಜೊತೆ ವಾಹನ ಸವಾರರು ಇಳಿಸು ಸೆಲ್ಫಿ ಫೋಟೋ ತೆಗೆಯುತ್ತಿದ್ದ ಬಗ್ಗೆ ವಿಡಿಯೋ ಮಾಧ್ಯಮಗಳಲ್ಲಿ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ವಾಹನ ನಂಬರ್ ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಿ...
ಧರ್ಮಸ್ಥಳ ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸರಕಾರ ಕುಟುಂಬದೊಂದಿಗೆ ನಿಂತು ನ್ಯಾಯ ದೊರಕಿಸಿಕೊಡಬೇಕು :ಅಕ್ಬರ್ ಬೆಳ್ತಂಗಡಿ
ಬೆಳ್ತಂಗಡಿ (ಮೇ-21): ಧರ್ಮಸ್ಥಳದ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ ಪಂಜಾಬ್ ನ ಜಲಂದರ್ ನಲ್ಲಿರುವ ಕಾಲೇಜಿನಲ್ಲಿ ಮೇ 18ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯ ಸರಕಾರ ಕುಟುಂಬದೊಂದಿಗೆ ನಿಂತು ನ್ಯಾಯ ದೊರಕಿಸಿಕೊಡಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅಗ್ರಹಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಧರ್ಮಸ್ಥಳದ ಗ್ರಾಮದ ಬೊಳಿಯಾರ್ ನಿವಾಸಿ, ಪ್ರಸ್ತುತ ಬೆಳ್ತಂಗಡಿಯ ಲಾಯಿಲ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿಗಳ ಪುತ್ರಿ...
ಸಿದ್ದರಾಮಯ್ಯ ಸರಕಾರಕ್ಕೆ ಎರಡು ವರ್ಷ; ಬೆಳ್ತಂಗಡಿಯಲ್ಲಿ ಸಂಭ್ರಮಾಚರಣೆ
ಬೆಳ್ತಂಗಡಿ; ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡು ವರ್ಷ ಸಂದ ಸಂದರ್ಭದಲ್ಲಿ ಶಕ್ತಿ ಯೋಜನೆಯ ಯಶಸ್ವಿಗಾಗಿ ಇಂದು ಬೆಳ್ತಂಗಡಿಯಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಸಂಭ್ರಮಾಚರಣೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ರಾಜ್ಯ ಸರ್ಕಾರ ಐದು ಗ್ಯಾರಂಟಿಗಳ ಮೂಲಕ ನುಡಿದಂತೆ ನಡೆದು ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರೈಸಿದೆ. ತಾಲ್ಲೂಕಿನಲ್ಲಿ 1.25 ಕೋಟಿ ಮಹಿಳೆಯರು ಶಕ್ತಿ ಯೋಜನೆಯನ್ನು ಉಪಯೋಗಿಸಿದ್ದು , ರಾಜ್ಯ ಸರ್ಕಾರ 65 ಕೋಟಿ ರೂಪಾಯಿಗಳನ್ನು ನಮ್ಮ ತಾಲೂಕಿಗೆ ನೀಡಿದೆ....
ಬೆಳ್ತಂಗಡಿ : ಪಂಜಾಬ್ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ ಆಕಾಂಕ್ಷ ಮೃತದೇಹ ಮನೆಗೆ ಆಗಮನ
ಬೆಳ್ತಂಗಡಿ : ಪಂಜಾಬ್ ನಲ್ಲಿ ಧರ್ಮಸ್ಥಳ ಬೊಳಿಯಾರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ದ ಆಕಾಂಕ್ಷ ಎಸ್ ನಾಯರ್(22) ಪಂಜಾಬ್ ನಲ್ಲಿ ಕಾಲೇಜ್ ಕಟ್ಟಡದಿಂದ ಮೇ.17 ರಂದು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಆಕಾಂಕ್ಷ ಮೃತದೇಹ ಮೇ.21 ರಂದು ಬೆಂಗಳೂರು ವಿಮಾನ ನಿಲ್ದಾಣದಿಂದ ಬೆಳಗ್ಗೆ 9ಗಂಟೆ ಸೂಮಾರಿಗೆ ಆಂಬುಲೆನ್ಸ್ ಮೂಲಕ ಧರ್ಮಸ್ಥಳದ ಬೊಳಿಯರ್ ಗೆ ತೆಗೆದುಕೊಂಡು ಬಂದಿದ್ದಾರೆ.















