ಬೆಳ್ತಂಗಡಿ:ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳು: ಪತ್ನಿಗೆ ಕಿರುಕುಳ ನೀಡಿ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು
ಬೆಳ್ತಂಗಡಿ : ಎರಡು ತಿಂಗಳ ಹಿಂದೆ ಮದುವೆಯಾದ ದಂಪತಿಗಳು ಹನಿಮೂನ್ ಗೆ ಬಂದು ಉಜಿರೆಯ ಪ್ರತಿಷ್ಠಿತ ಹೊಟೇಲ್ ನಲ್ಲಿ ಉಳಿದುಕೊಂಡು ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಂಗಳೂರಿನ ದಕ್ಷಿಣದದ ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನ ನಂದಗೋಕುಲ ನಿವಾಸಿಯಾಗಿರುವ ಸಿದ್ದರಾಜು ಗೌಡ ಮಗನಾದ ಮೂರನೇ ವರ್ಷದ ಕಾನೂನು ವಿದ್ಯಾರ್ಥಿಯಾಗಿರುವ ಪತಿ ವಿಶ್ವನಾಥ(24) ಮತ್ತು 22 ವರ್ಷದ ಪತ್ನಿ 22-05-2025 ರಂದು ಮದುವೆಯಾಗಿದ್ದು. ಜುಲೈ 22 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ಉಜಿರೆಯ ಪ್ರತಿಷ್ಠಿತ ಹೊಟೇಲಿಗೆ ಬಂದು...
ದ.ಕ ಜಿಲ್ಲೆಯಲ್ಲಿ ಜು25 ರಂದು ಶಾಲಾಕಾಲೇಜು ಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಮತ್ತು ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಿರುವ ಹಿನ್ನೆಲೆಯಲ್ಲಿ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಜುಲೈ 25ರಂದು (ಶುಕ್ರವಾರ) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದ 24 ಗಂಟೆಗಳಿಂದ ಮಳೆ ತನ್ನ ಆರ್ಭಟವನ್ನು ಮುಂದುವರಿಸಿದ್ದು. ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. ಆದೇಶದ ಅನ್ವಯ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು...
ಶಾಸಕ ಹರೀಶ್ ಪೂಂಜ ಅವರಿಂದ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭೇಟಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ
ಬೆಳ್ತಂಗಡಿ : ಜು24 ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿಯವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿಯಾಗಿ ತಾಲೂಕಿನ ಪ್ರಮುಖ ಕಾಮಗಾರಿಗಳಾದ ತಾಲೂಕು ಗ್ರಂಥಾಲಯ, ಅಂಬೇಡ್ಕರ್ ಭವನ ಹಾಗೂ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗರ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ನಡೆಸುವ ಕುರಿತು ಚರ್ಚಿಸಿದರು.
ನಿಡಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ನಿಡಿಗಲ್- ಸೀಟು ಮಧ್ಯೆ ಹೆದ್ದಾರಿ ರಸ್ತೆಗೆ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ ಉಂಟಾದ ಘಟನೆ ಗುರುವಾರ ನಡೆದಿದೆ.ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿದ ಕಾರಣ ಸುಮಾರು ಅರ್ಧ ತಾಸಿಗಿಂತ ಅಧಿಕಕಾಲ ಸಂಚಾರ ವ್ಯತ್ಯಯ ಉಂಟಾಯಿತು. ಮರ ಉರುಳುವ ವೇಳೆ ಈ ಪ್ರದೇಶದಲ್ಲಿ ವಾಹನಗಳ ಸಂಚಾರ ಇರದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಮುಂಡಾಜೆ ಗ್ರಾಪಂ, ಪೊಲೀಸ್, ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಮರ ತೆರವು ಕಾರ್ಯ ನಡೆಸಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
ಬೆಳ್ತಂಗಡಿ: ಅಜ್ಮೀರ್ ಯಾತ್ರೆ ಹೊರಟಿದ್ದ ಗುರುವಾಯನಕೆರೆ ನಿವಾಸಿ ಹೃದಯಾಘಾತದಿಂದ ಮೃತ್ಯು
ಬೆಳ್ತಂಗಡಿ: ರಾಜಸ್ಥಾನದ ಪ್ರಖ್ಯಾತ ಮುಸ್ಲಿಂ ಧಾರ್ಮಿಕ ಶ್ರದ್ಧಾ ಕೇಂದ್ರ ಅಜ್ಮೀರ್ ದರ್ಗಾ ಶರೀಫ್ ಗೆ ಯಾತ್ರೆ ಹೊರಟಿದ್ದ ಗುರುವಾಯನಕೆರೆ ಶಕ್ತಿ ನಗರದ ನಿವಾಸಿ(ಪೊಟ್ಟುಕೆರೆ) ಇಸ್‌ಹಾಕ್(37) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಮಿತ್ರ ಅಶ್ರಫ್ ಕಾಪಿನಡ್ಕ ಅವರೊಂದಿಗೆ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದ ಇವರಿಗೆ ಸುರತ್ಕಲ್ ತಲುಪುವಷ್ಟರಲ್ಲಿ ಭಾರೀ ಎದೆ ನೋವು ಕಾಣಿಸಿಕೊಂಡಿತು. ಅಲ್ಲೇ ರೈಲಿನಿಂದ ಇಳಿದು ಹೊರವಲಯದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕರೆ ತರುವ ವೇಳೆ ಅವರು ಅಸುನೀಗಿದರು.ಇಸ್‌ಹಾಕ್ ಅವರು ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದರು.ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಓರ್ವೆ...
ಬೆಳ್ತಂಗಡಿ; ರಾಜಕೇಸರಿ ಟ್ರಸ್ಟ್ ವತಿಯಿಂದ ಬಸ್ ನಿಲ್ದಾಣ ದಲ್ಲಿ ಆಟಿದ ಕಷಾಯ ಮತ್ತು ಗಂಜಿ ವಿತರಣೆ
ಬೆಳ್ತಂಗಡಿ; ರಾಜ ಕೇಸರಿ ಟ್ರಸ್ಟ್ ರಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ನಡೆದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 566 ಸೇವಾ ಯೋಜನೆಯ ಮೂಲಕ ನಡೆದಂತಹ ಬೆಳ್ತಂಗಡಿ ಬಸ್ ಸ್ಟ್ಯಾಂಡಿನಲ್ಲಿ ಆಟಿದ ಕಷಾಯ ಮತ್ತು ಮೆತ್ತೆಗಂಜಿ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ ಕೇಸರಿ ಟ್ರಸ್ಟ್ ರಿ ಇದರ ಜಿಲ್ಲಾಧ್ಯಕ್ಷರಾದ ಸಂತೋಷ್ ಕೂಲ್ಯ ನೆರೆವೇರಿಸಿ ಶುಭ ಹಾರೈಸಿದರುಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಿರಣ್ ಚಂದ್ರ ಡಿ ಪುಷ್ಪಗಿರಿ ಇವರು ಮಾತನಾಡಿ ಸದಾ...
ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಣಂದೂರು ಗ್ರಾಮ ದ ಮೊದಲೆ ಸಬರಬೈಲು ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ಬೆಳ್ತಂಗಡಿ. ತಾಲೂಕಿನಲ್ಲಿ ಕಳೆದ ಮಳೆಗಾಲದಲ್ಲಿ ಸುರಿದ ಭಾರಿ ಮಳೆಗೆ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಣಂದೂರು ಗ್ರಾಮ ದ ಮೊದಲೆ ಸಬರಬೈಲು ಪಡಂಗಡಿ ಸಂಪರ್ಕ ಸೇತುವೆ ಮುರಿದು ಬಿದ್ದು ಸಂಪರ್ಕ ಕಡಿತಗೊಂಡಿದ್ದು. ಈ ಸೇತುವೆಯು ಇಂದಿನವರೆಗೂ ದುರಸ್ತಿ ಆಗಿರುವುದಿಲ್ಲ. ಇದೀಗ 2024 25 ನೇ ಸಾಲಿನಲ್ಲಿ ಲೆ.ಶೀ. 5054 ರಡಿ ರಾಜ್ಯದಲ್ಲಿ ಸುರಿದ ಮಳೆ ಮತ್ತು ಪ್ರವಾಹದಿಂದ ಹಾನಿಗಳಾದ ಗ್ರಾಮೀಣ ರಸ್ತೆ ಸೇತುವೆ ಹಾಗೂ ಚರಂಡಿ ಕಾಮಗಾರಿಯನ್ನು ಕೈಗೊಳ್ಳಲು ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿದ್ದು ಸರ್ಕಾರ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ 10...
ನಾರ್ಯ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ತು ಕಂಬಕ್ಕೆ ಕಾರುಡಿಕ್ಕಿ.
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನಾರ್ಯ ಸಮೀಪದ ದೆಲಂಪಾಡಿ ಎಂಬಲ್ಲಿ ವಿದ್ಯುತ್ ಕಂಬಕ್ಕೆ ಇನೋವಾ ಕಾರೊಂದು ಡಿಕ್ಕಿ ಹೊಡೆದ ಘಟನೆ ಜು.24 ರಂದು ಬೆಳಗ್ಗೆ ನಡೆದಿದೆ. ಅಪಘಾತಕ್ಕೆ ವಿದ್ಯುತ್ವಕಂಬ ಮುರಿದು ರಸ್ತೆಗೆ ಬಿದ್ದಿದೆ.ನೇತ್ರಾವತಿಯಿಂದ ನಾರ್ಯ ಕಡೆಗೆ ಬರುತ್ತಿದ್ದ ಕಾರಿನ ಚಾಲಕ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕಿನ ಅಪಘಾತವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ತು ಕಂಬಕ್ಕೆ ಡಿಕ್ಕಿ ಹೊಡೆದು ಕಂಬವು ರಸ್ತೆಗೆ ಅಡ್ಡಲಾಗಿ ಬಿದ್ದು ವಿದ್ಯುತ್ ಕಂಬ ಸಂಪೂರ್ಣ ಹಾನಿಯಾಗಿದೆ, ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ ಘಟನಾ ಸ್ಥಳಕ್ಕೆ ಮೆಸ್ಕಾಂ...
ಧರ್ಮಸ್ಥಳ; ಬೊಳಿಯಾರು ಪರಿಸರದಲ್ಲಿ ಕಾಡಾನೆ ದಾಳಿ ಕೃಷಿ ಹಾನಿ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಕಾಡಾನೆಹಾವಳಿ ಮುಂದುವರಿದಿದ್ದು ಕೃಷಿಕರು ತೀವ್ರ ಆತಂಕದಲ್ಲಿದ್ದಾರೆ.ಇಲ್ಲಿ ಕಳೆದ ಮೂರು ದಿನಗಳಿಂದ ಕಾಡಾನೆಗಳು ಓಡಾಟ ನಡೆಸುತ್ತಿದೆ. ಇಲ್ಲಿ ಹಲವರ ತೋಟಗಳಿಗೆ ಆನೆ ನುಗ್ಗಿದೆ. ಬಾಳೆ ಹಾಗೂ ಅಡಿಕೆ ಗಿಡಗಳನ್ನು ನಾಶಗೊಳಿಸಿದೆ. ಕೊಕ್ಕಡದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆಯ ಬಳಿಕ ಆನೆಯನ್ನು ಓಡಿಸಲೂ ಜನರು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲೆ ಓಡಾಟ;ಧರ್ಮಸ್ಥಳ ಪೆರಿಯಶಾಂತಿ ರಸ್ತೆಯ ಬದಿಯಲ್ಲಿಯೇ ಈ ಆನೆಗಳು ಓಡಾಟ ನಡೆಸುತ್ತಿದೆ. ಬುಧವಾರ ಬೆಳಗ್ಗೆ 9 ಗಂಟೆಯ ಸುಮಾರಿಗೆ ಒಂಟಿ ಸಲಗವೊಂದು ಬೊಳಿಯಾರಿನಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು...
ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.
ಬೆಳ್ತಂಗಡಿ. ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ನಾರಾಯಣಗೌಡ ಇವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಟೀಂಟೋ ನೇಮಕ ಮಾಡಿ ಆದೇಶಿಸಿದ್ದಾರೆ. ಇಂದು ಬ್ಲಾಕ್ ಕಾಂಗ್ರೆಸ್ ನಲ್ಲಿ ಆದೇಶ ಪತ್ರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಹತ್ತಾಂತರಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆಕಾಶಿಪಟ್ನ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೀನತ್ ಉಜಿರೆ, ಸದಸ್ಯರಾದ ಶ್ರೀಮತಿ ಸುಚಿತ್ರ ಕೊಲ್ಲಾಜೆ ವಿಜಯಲಕ್ಷ್ಮಿ...















