ಬೆಳ್ತಂಗಡಿ : ಪಂಜಾಬ್‌ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ ಆಕಾಂಕ್ಷ ಮೃತದೇಹ ಮನೆಗೆ ಆಗಮನ

0

ಬೆಳ್ತಂಗಡಿ : ಪಂಜಾಬ್ ನಲ್ಲಿ ಧರ್ಮಸ್ಥಳ ಬೊಳಿಯಾರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ದ ಆಕಾಂಕ್ಷ ಎಸ್ ನಾಯರ್(22) ಪಂಜಾಬ್ ನಲ್ಲಿ ಕಾಲೇಜ್ ಕಟ್ಟಡದಿಂದ ಮೇ.17 ರಂದು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಆಕಾಂಕ್ಷ ಮೃತದೇಹ ಮೇ.21 ರಂದು  ಬೆಂಗಳೂರು ವಿಮಾನ ನಿಲ್ದಾಣದಿಂದ ಬೆಳಗ್ಗೆ 9ಗಂಟೆ ಸೂಮಾರಿಗೆ ಆಂಬುಲೆನ್ಸ್ ಮೂಲಕ ಧರ್ಮಸ್ಥಳದ ಬೊಳಿಯರ್ ಗೆ ತೆಗೆದುಕೊಂಡು ಬಂದಿದ್ದಾರೆ.

ಮೇ25 ತಾಲೂಕು ಒಕ್ಕಲಿಗೆ ಗೌಡರ ಸೇವಾ ಟ್ರಸ್ಟ್ ಪದಗ್ರಹಣ ಹಾಗೂ ಆಂಬುಲೆನ್ಸ್ ಲೋಕಾರ್ಪಣೆ

0

ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭ, ಹಾಗೂ ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೇ 25 ನೇ ಆದಿತ್ಯವಾರ ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಲಿದೆ . ಎಂದು ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ, ಕಲ್ಮಂಜ ತಿಳಿಸಿದರು.‌ ಅವರು ಬೆಳ್ತಂಗಡಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಸಾಮಾಜಿಕ ಚಿಂತನೆಗಳ ಮೂಲಕ ಸಮಾಜಮುಖಿ ಸೇವಾ ಯೋಜನೆಗಳನ್ನು ಮಾಡುವ ಉದ್ದೇಶದಿಂದ ಒಕ್ಕಲಿಗ ಸೇವಾಟ್ರಸ್ಟ್ ಕಾರ್ಯನಿರ್ವಹಿಸಲಿದೆ ಮೇ...

ಶಿಬಾಜೆ; ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

0

ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ಮೇ.20ರಂದು ಶೀನ ಎಂಬವರ ಮನೆ ಸಮೀಪ ನೀರು ಹರಿಯುವ ತೋಡಿನಲ್ಲಿ ಸಂಪೂರ್ಣವಾದ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ.ದೇಹದ ಭಾಗಗಳು ಸಂಪೂರ್ಣ ಕೊಳೆತು ಹೋದಂತಿದ್ದು ಯಾವುದೇ ಗುರುತು ಪತ್ತೆಯಾಗಿರಲಿಲ್ಲ.ಧರ್ಮಸ್ಥಳ ಠಾಣೆಯ ಎಸ್.ಐ ಸಮರ್ಥ್ ಆರ್ ಗಾಣಿಗೇರ ಅವರ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಸ್ಥಳದಲ್ಲಿ ಸಿಕ್ಕಿದ ಶರ್ಟ್ ಒಂದರ ಆಧಾರದಲ್ಲಿ ಪರಿಶೀಲನೆ ನಡೆಸಿದಾಗ ಶಿಬಾಜೆ ನಿವಾಸಿಯಾಗಿರುವಪ್ರಸಾದ್ (37) ಎಂಬವರು ಎಂದು ಗುರುತಿಸಿದ್ದಾರೆ. ಮೃತನ ತಂದೆ ವೆಂಕಪ್ಪ ಪೂಜಾರಿ ಅವರು ಮೃತನ ಗುರುತನ್ನು ಪತ್ತೆ ಹಚ್ವಿದ್ದಾರೆ ಈತವಿಪರೀತ...

ಎಫ್.ಐ.ಆರ್.ರದ್ದು ಕೋರಿ ಶಾಸಕರ ಅರ್ಜಿ ವಿಚಾರಣೆ; ಹರೀಶ್ ಪೂಂಜಾ ಶಾಸಕ ಸ್ಥಾನಕ್ಕೆ ಅನರ್ಹವಾದ ವ್ಯಕ್ತಿ’ ನ್ಯಾಯಾಲಯದಲ್ಲಿ  ಹಿರಿಯ ವಕೀಲ ಎಸ್ ಬಾಲನ್ ವಾದ ಮಂಡನೆ

0

' ಬೆಂಗಳೂರು : ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾದ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ಇಂದು ವಿಚಾರಣೆಗೆ ಬಂದಿದ್ದು, ದೂರುದಾರ ಎಸ್ ಬಿ ಇಬ್ರಾಹಿಂ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್ ಬಾಲನ್ ಅವರು 'ಹರೀಶ್ ಪೂಂಜಾ ಶಾಸಕ ಸ್ಥಾನಕ್ಕೆ ಅನರ್ಹವಾದ ವ್ಯಕ್ತಿ. ಸಾಂವಿಧಾನಿಕ ಕರ್ತವ್ಯಗಳ ಅರಿವಿಲ್ಲದ ವ್ಯಕ್ತಿ ಶಾಸಕನಾಗಿ ಇರಕೂಡದು' ಎಂದರು. "ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಯಲ್ಲಿರುವ ಸಂದರ್ಭದಲ್ಲಿ ಕೋಮುಗಲಭೆ ಹುಟ್ಟುಹಾಕಬೇಕು ಎಂಬ ಕಾರಣಕ್ಕಾಗಿಯೇ ಶಾಸಕ ಹರೀಶ್ ಪೂಂಜಾ ತೆಕ್ಕಾರಿನಲ್ಲಿ ಕೋಮುದ್ವೇಷದ ಭಾಷಣ ಮಾಡಿದ್ದಾರೆ. ಶಾಸಕಾಂಗಕ್ಕೆ...

ತೆಕ್ಕಾರು ಮುಸ್ಲಿಂ ಸಮುದಾಯ ನಿಂದನೆ ಪ್ರಕರಣ;  ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

0

ಬೆಳ್ತಂಗಡಿ: ತೆಕ್ಕಾರಿನ ಕಂಟ್ರಿ ಬ್ಯಾರಿಗಳು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಾಕಿದ ಟ್ಯೂಬ್ ಲೈಟನ್ನು ಒಡೆದು ಹಾಕುತ್ತಾರೆ, ಡೀಸೆಲ್ ಕದಿಯುತ್ತಿದ್ದಾರೆ ಎಂದು ಊರಿನ ಮುಸ್ಲಿಮರ ವಿರುದ್ದ ಅವಹೇಳನಕಾರಿ ಮತ್ತು ಕೋಮು ಪ್ರಚೋದನ ಕಾರಿಯಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿದ ಪ್ರಕರಣದಲ್ಲಿ ಇದೀಗ ಉಪ್ಪಿನಂಗಡಿ ಪೊಲೀಸರು ಶಾಸಕ ಹರೀಶ್ ಪೂಂಜ ವಿರುದ್ದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ 19 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಶಾಸಕರು ಮೇ.3 ರಂದು ಮಾಡಿದ ಭಾಷಣದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.ಬೆಳ್ತಂಗಡಿ ತಾಲೂಕಿನ ತೆಕ್ಕಾರುಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ...

ಬೆಳ್ತಂಗಡಿ : ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

0

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಿ ಪ್ರೊಫೆಸರ್ ಕೇರಳ ಮೂಲದ ಬಿಜಿಲ್ ಸಿ ಮ್ಯಾಥ್ಯೂ ಎಂಬಾತನನ್ನು ಮೇ.19 ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆಕಾಂಕ್ಷ ಮೃತದೇಹವನ್ನು ಮೇ.19 ರಂದು ಮಧ್ಯಾಹ್ನ ಮರಣೋತ್ತರ ಪರೀಕ್ಷೆ ಮಾಡಿದ್ದು. ರಾತ್ರಿ ಮನೆಯವರಿಗೆ ಸಿವಿಲ್ ಸರಕಾರಿ ಆಸ್ಪತ್ರೆಯವರು ಬಿಟ್ಟುಕೊಟ್ಟಿದ್ದು ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2...

ಎಕ್ಸೆಲ್ ವಿದ್ಯಾಸಂಸ್ಥೆಯ ವಿಧ್ಯಾರ್ಥಿಗಳಿಗೆ ಎ.ಎಂ.ಇ ಸಿಇಟಿ ರ್ಯಾಂಕ್

0

ಬೆಳ್ತಂಗಡಿ; ಅಖಿಲ ಭಾರತ ಮಟ್ಟದಲ್ಲಿ ನಡೆಯುವ ಏರ್‌ಕ್ರಾಫ್ಟ್ ಎಂಜಿನಿಯರಿಂಗ್‌ ಪ್ರವೇಶ ಮೈಂಟೆನೆನ್ಸ್ ಸಾಮಾನ್ಯ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹತ್ವದ ಸಾಧನೆ ಮಾಡಿದ್ದಾರೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಾದ ಧ್ರುವ ಅನೂಪ್, ಮನ್ವಿತ್ ಎಂ.ಬಿ.,ರೋಹಿತ್, ವರ್ಷಿತಾಗೌತಮ್ ಎಸ್., ಇಂಚರಾ ಟಿ.ಆರ್., ನೇಹನ್ ಯು., ವರ್ಷಿತಾ ಎಲ್.ಬಿ., ರೋಹಿತ್ ಎಂ., ಶ್ರೀಲಕ್ಷ್ಮೀ ಅವರು ರ್ಯಾಂಕ್ ಪಡೆದುಕೊಂಡು, ರಾಷ್ಟ್ರ ಮಟ್ಟದ ಸ್ಕಾಲರ್ ಶಿಪ್‌ಗೆ ಅರ್ಹರಾಗಿದ್ದಾರೆ. ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಿನ್ಸಿಪಾಲ್, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

ಭಾರೀ ಮಳೆ ಮುನ್ಸೂಚನೆ; ಮೇ 23ರವರೆಗೂ ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ, ಬೆಳಗ್ಗಿನಿಂದಲೇ ಆರಂಭವಾದ ಮಳೆ

0

ಬೆಳ್ತಂಗಡಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜಿಲ್ಲಾಡಳಿತ‌ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಿದ ಬೆನ್ನಲ್ಲಿಯೇ ಜಿಲ್ಲೆಯಾದ್ಯಂತ ಭಾರೀ ಮಳೆ ಆರಂಭಗೊಂಡಿದೆ.ಮೇ 23 ರವರೆಗೂ ಗಾಳಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿತ್ತು. ಮಂಗಳವಾರ ಬೆಳಗ್ಗಿನಿಂದಲೇ ಭಾರೀ ಮಳೆ;ಬೆಳ್ತಂಗಡಿ ತಾಲೂಕಿನಲ್ಲಿ ಮಂಗಳವಾರ ಬೆಳಗ್ಗಿನಿಂದಲೇ ನಿರಂತರ ಮಳೆ ಸುರಿಯುತ್ತಿದೆ. ಸೋಮವಾರ ರಾತ್ರಿಯೇ ಮಳೆ ಆರಂಭಗೊಂಡಿದ್ದು ಮಂಗಳವಾರ ಬೆಳಗ್ಗಿನ ವೇಳೆಗೆ ಬಿರುಸು ಪಡೆದುಕೊಂಡಿದೆ. ಮೇ 21 ಹಾಗೂ 22 ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು ಮಳೆಯ ಅಬ್ಬರ ಇನ್ನಷ್ಟು ಹೆಚ್ಚಾಗುವ ಅಪಾಯವಿದೆ.ಮಳೆ ಮುನ್ಸೂಚನೆ...

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸ  ಸುರೇಂದ್ರ ಆರೋಪ

0

ಬೆಳ್ತಂಗಡಿ; ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ಘಟನೆಯ ಬಗ್ಗೆ ಗೊಂದಲ ಮುಂದುವರಿದಿದ್ದು ಮನೆಯವರನ್ನು ವಂಚಿಸುವ ಪ್ರಯತ್ನ ಸ್ಥಳೀಯ ಪೊಲೀಸರಿಂದ ನಡೆಯುತ್ತಿದೆ ಎಂದು ಮೃತ ಆಕಾಂಕ್ಷಳ ತಂದೆ ಸುರೇಂದ್ರನ್ ಆರೋಪಿಸಿದ್ದಾರೆ.ಆಕಾಂಕ್ಷ ಸಾವನ್ನಪ್ಪಿದ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ತಂದೆ ಹಾಗು ಮನೆಯವರು ಪೊಲೀಸರಿಗೆ ದೂರು ನೀಡಿ ತಮ್ಮ ಮಗಳ ಅಹಜ ಸಾವಜನ ಬಗ್ಗೆ ಅನುಮಾನವಿದ್ದು ಈ ಬಗ್ಗೆ ಸಮಗ್ರವಾದ ತನಿಖೆ ನಡೆಸುವಂತೆ ದೂರನ್ನು ನೀಡಿದ್ದರು.ಆದರೆ ಸೋಮವಾರ ಸುರೇಂದ್ರನ್ ಅವರ ಕೈಗೆ ಸ್ಥಳೀಯ ಪೊಲೀಸರು ಎಫ್.ಐ.ಆರ್ ಪ್ರತಿಯನ್ನು ನೀಡಿದ್ದಾರೆ. ಸ್ಥಳೀಯ...

ಪಂಜಾಬಿನಲ್ಲಿ ಕಾಲೇಜು ಕಟ್ಟಡದಿಂದ ಹಾರಿ ಧರ್ಮಸ್ಥಳ ಮೂಲದ ಯುವತಿ ಆಕಾಂಕ್ಷ ಆತ್ಮಹತ್ಯೆ; ಪೊಲೀಸ್ ತನಿಖೆಯಲ್ಲಿ ಬಹಿರಂಗ

0

ಬೆಳ್ತಂಗಡಿ : ಧರ್ಮಸ್ಥಳ ಮೂಲದ ಏರೋನಾಟಿಕ್ಸ್ಇಂಜಿನಿಯರ್ ನಿಗೂಢ ಸಾವು ಪ್ರಕರಣ ಇದೀಗ ಬಿಗ್ ಟ್ವಿಸ್ಟ್ ಪಡೆದಿದ್ದು ಆಕೆ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗಗೊಂಡಿದೆ. ಧರ್ಮಸ್ಥಳದ ಬೋಳಿಯೂರು ನಿವಾಸಿ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿ ಮಗಳು ಆಕಾಂಕ್ಷ ಎಸ್ ನಾಯರ್ ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್ ಯುವತಿ. ಮೇ 17ರಂದು ಪಂಜಾಬ್ ನ ಯುನಿವರ್ಸಿಟಿ ಕಾಲೇಜು ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣ ಎಂಬ ಮಾಹಿತಿ ಲಭ್ಯವಾಗುತ್ತಿದ್ದು ಎಲ್ ಪಿ ಯುನಿವರ್ಸಿಟಿಯ ಪ್ರೊಫೆಸರ್...