ಕೊಕ್ಕಡ ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಪಾವತಿ ಅರಣ್ಯ ಸಚಿವ ಈಶ್ವರ ಖಂಡ್ರೆ

0

ಬೆಳ್ತಂಗಡಿ; ಬೆಳ್ತಂಗಡಿತಾಲೂಕಿನ ಕೊಕ್ಕಡದಲ್ಲಿ ಆನೆ ದಾಳಿಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ಕೂಡಲೇ ರೂ 20 ಲಕ್ಷ ಪರಿಹಾರ ಮೊತ್ತ ಪಾವತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಅರಣ್ಯ, ಜೀವಿಶಾಸ್ತ್ರಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಹೇಳಿದ್ದಾರೆ.ಕೊಕ್ಕಡದಲ್ಲಿ ಆನೆದಾಳಿಗೆ ವ್ಯಕ್ತಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಈ ದುಖದ ಸಂದರ್ಭದಲ್ಲಿ ಸರಕಾರ ಅವರಕುಟುಂಬದ ಜೊತೆ ನಿಲ್ಲುತ್ತದೆ ಎಂದು ಹೇಳಿರುವ ಅವರುಮೃತರ ಹತ್ತಿರದ ಬಂಧುಗಳಿಗೆ ಕೂಡಲೇ ಪರಿಹಾರದ ಮೊತ್ತ 20 ಲಕ್ಷ ರೂ. ಪಾವತಿಸುವಂತೆ ಮತ್ತು ಆನೆಗಳನ್ನು ಕಾಡಿಗೆ ಮರಳಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ...

ಧರ್ಮಸ್ಥಳ ಕಾಡಾನೆ ದಾಳಿ ವ್ಯಾಪಕ ಕೃಷಿ ಹಾನಿ; ಜನರಲ್ಲಿ ಆತಂಕ

0

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿಯೂ ಬುಧವಾರ ತಡ ರಾತ್ರಿ ಕಾಡನೆಗಳು ದಾಳಿ ಸಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿ ಯುಂಟುಮಾಡಿದೆ.ಇಲ್ಲಿನ ನೇರ್ತನೆ ಪರಿಸರದಲ್ಲಿ ರಾತ್ರಿಯವೇಳೆ ಕಾಡಾನೆಗಳು ಕಾಣಿಸಿಕೊಂಡಿದ್ದು ಶ್ರೀನಿವಾಸ ಎಂಬವರ ತೋಟದ ತೆಂಗಿನ ಗಿಡಗಳನ್ನು ಹಾಗೂ ಅಡಿಕೆ ಗಿಡಗಳನ್ನು ನಾಶಪಡಿಸಿದೆ. ಈ ಪರಿಸರದ ಇತರ ಹಲವರ ತೋಟಗಳಿಗು ಕಾಡಾನೆ ನುಗ್ಗಿದ್ದು ಅಲ್ಲಲ್ಲಿ ಹಾನಿಯುಂಟುಮಾಡಿದೆ. ಮುಖ್ಯ ರಸ್ತೆಯ ಬದಿಯಲ್ಲಿ ಕಾಡಾನೆಗಳು ಓಡಾಟ ನಡೆಸುತ್ತಿದೆ. ಕೊಕ್ಕಡದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿರುವುದು ಧರ್ಮಸ್ಥಳ ನೇರ್ತನೆ ಪರಿಸರದ ಜನರಲ್ಲಿಯೂ ಆತಂಕ ಮೂಡಿಸಿದೆ. ರಾತ್ರಿಯ ವೇಳೆ ರಸ್ತೆಯಲ್ಲಿ ಓಡಾಡಲೂ ಜನ ಭಯ...

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

0

ಬೆಳ್ತಂಗಡಿ. ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ತಿರುಗಾಡುತ್ತಿದ್ದು ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ಆನೆ ದಾಳಿಗೆ ಬಲಿಯಾಗಿದ್ದು. ಈ ಬಗ್ಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ “ಆನೆ-ಮಾನವ ಸಂಘರ್ಷದಿಂದ, ತಾಲೂಕಿನಲ್ಲಿ ಹೆಚ್ಚಿನ ನಷ್ಟ ಹಾಗೂ ಸಾವು ಸಂಭವಿಸುತ್ತಿದ್ದು, ನಿಯಂತ್ರಣಕ್ಕೆ ಸರ್ಕಾರ ಸಕಲ ರೀತಿಯ, ಪ್ರಯತ್ನ ಮಾಡುವಂತೆ, ಹಾಗೂ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು...

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ – ಹರೀಶ್ ಪೂಂಜ ಆಕ್ರೋಶ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕೊಕ್ಕಡ ಬಳಿಯ ಸೌತಡ್ಕದಲ್ಲಿ ಇಂದು ಬೆಳಿಗ್ಗೆ 2 ಕಾಡಾನೆಗಳು ದಿಢೀರ್ ಪ್ರತ್ಯಕ್ಷವಾಗಿ ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿಯವರನ್ನು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟ ಘಟನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀವ್ರ ದುಃಖ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಕೃಷಿ ಚಟುವಟಿಕೆಗಳಿಗೆ ಕಾಡಾನೆಗಳು ದಾಳಿ ನಡೆಸಿ ಹಾನಿ ಮಾಡುತ್ತಿರುವ ಬಗ್ಗೆ ತಾನು ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದರೂ ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಶಾಸಕರು ಸಂತ್ರಸ್ತ ಕೃಷಿಕರ...

ಕೊಕ್ಕಡ; ಕಾಡಾನೆ ದಳಿಗೆ ವ್ಯಕ್ತಿ ಬಲಿ

0

ಬೆಳ್ತಂಗಡಿ: ಕೊಕ್ಕೆ ಸಮೀಪ ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ಓಡಿಸುವ ಸಂದರ್ಭದಲ್ಲಿ ಓರ್ವ ವ್ಯಕ್ತಿ ಆನೆ ದಾಳಿಗೆ ಬಲಿಯಾದ ಘಟನೆ ಜು. 17 ರಂದು ನಡೆದಿದೆ. ಮೃತ ವ್ಯಕ್ತಿ ಸೌತಡ್ಕದ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂದು ತಿಳಿದುಬಂದಿದೆ.ಕಾಡಾನೆಯ ಹಿಂಡು ಈ ಪ್ರದೇಶದಲ್ಲಿ ಓಡಾಟ ನಡೆಸಿದ್ದು ಇದನ್ನು ಗಮನಿಸಿದ ಸ್ಥಳೀಯರು ಆನೆಯನ್ನು ಓಡಿಸುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ ಹೆಚ್ವಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ

ಬೆಳಾಲು ವೀಣಾ ಅಸಹಜ ಸಾವು ಪ್ರಕರಣ ; ಸಮಗ್ರ ತನಿಖೆಗೆ ಜನವಾದಿ ಮಹಿಳಾ ಸಂಘಟನೆಯಿಂದ ಪೊಲೀಸರಿಗೆ ಮನವಿ

0

ಬೆಳ್ತಂಗಡಿ;  ತಾಲೂಕಿನ ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ಯುವತಿ ವೀಣಾಳ ಅನುಮಾನಾಸ್ಪದ ಸಾವಿನ ಕುರಿತು ಹಲವಾರು ಅನುಮಾನಗಳಿದ್ದು ಈ ಬಗ್ಗೆ ಸಮಗ್ರವಾದ  ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜನವಾದಿ ಮಹಿಳಾ ಸಂಘಟನೆ  ಬೆಳ್ತಂಗಡಿ ತಾಲೂಕು ಸಮಿತಿ  ಇದರ ವತಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮನವಿ ನೀಡಲಾಗಿದೆ. ಬಾಣಂತಿಯಾದ ಈಕೆಯ ಮಗುವನ್ನು ಅವಳಿಂದ ದೂರ ಮಾಡಿ ಆಕೆಯ ತಂದೆ ನಾಗೇಶ್ ರವರು ಆಕೆಯನ್ನು ಮಾನಸಿಕ ಅಸ್ವಸ್ಥೆ ಎಂದು ಬಿಂಬಿಸುವ ಕಾರ್ಯವನ್ನು ಮಾಡಿದ್ದಾರೆ. ಒಟ್ಟು ಘಟನೆಯನ್ನು ಗಮನಿಸದಾಗ ಇದೊಂದು ಸಹಜ ಸಾವು ಅಲ್ಲ ಎಂಬ ಭಾವನೆ ಮೂಡುತ್ತಿದೆ....

ತೆಕ್ಕಾರು ಪತಿಯಿಂದಲೇ ಪತ್ನಿಯ ಕೊಲೆ

0

ಬೆಳ್ತಂಗಡಿ; ತಾಲೂಕಿನ ತೆಕ್ಕಾರು ಗ್ರಾಮಪಂಚಾಯತು ವ್ಯಪ್ತಿಯ ಬಾಜಾರು ಎಂಬಲ್ಲಿ ವ್ಯಕ್ತಿ ಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಸಂಭವಿಸಿರುವುದಾಗಿ ತಿಳಿದು ಬಂದಿದೆಇಲ್ಲಿನ ನಿವಾಸಿ ಝೀನತ್ ಎಂಬವರೇ ಮೃತ ಮಹಿಳೆಯಾಗಿದ್ದಾರೆ. ಈಕೆಯ ಪತಿ ರಫೀಕ್ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ ಗುರುವಾರ ಬೆಳಗ್ಗೆ ಪತಿ ಪತ್ನಿಯರ ನಡುವೆ ಜಗಳ ನಡೆದಿದೆ ಎನ್ನಲಾಗಿದ್ದು ಈ ವೇಳೆ ಝೀನತ್ ಮೇಲೆ ಆಕೆಯ ಪತಿ ಚೂರಿಯಿಂದ ಇರಿದು ಹತ್ಯೆ ಮಾಡಿರುವುದಾಗಿ ಸ್ಥಳೀಯರು ನೀಡುವ ಮಾಹಿತಿಯಿಂದ ತಿಳಿದು ಬಂದಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣದ ಬಗ್ಗೆ ಪರಿಶೀಲನೆ...

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ.

0

ಬೆಳ್ತಂಗಡಿ :ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆ ಜುಲೈ 15 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಹಾಗೂ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ ನೀಡಿ ಪಕ್ಷದ ಚಟುವಟಿಕೆ, ಕಾರ್ಯ ಯೋಜನೆ, ಬಗ್ಗೆ ಮಾಹಿತಿ ನೀಡಿದರು, ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಹಾಗೂ ಯುವಮೋರ್ಚಾ ಪ್ರಭಾರಿ ಪ್ರಶಾಂತ್ ಪಾರೆಂಕಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು,...

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ನಿಧನ

0

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಸಂತ ಶೆಟ್ಟಿ (48) ಎನ್ಮಾಡಿ ಯವರು ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂದು ಬಳಗದವರನ್ನು ಆಗಲಿದ್ದಾರೆ.

ಜು. 17ದ‌.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ; ಜಿಲ್ಲಾಧಿಕಾರಿ ಘೋಷಣೆ

0

ಬೆಳ್ತಂಗಡಿ; ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜು17ರಂದು  ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ.ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.