ಕಾಯರ್ತಡ್ಕ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ  ಬೆನಕ ಹೆಲ್ತ್ ಸಟರ್ ಹಾಗೂ ಎ.ಜೆ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯತಪಾಸಣೆ ಹಾಗೂ ರಕ್ತದಾನ ಶಿಬಿರ

0

ಬೆಳ್ತಂಗಡಿ; ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳೆಂಜ ಕಾಯರ್ತ್ತಡ್ಕ ಇದರ ಶತಮಾನೋತ್ಸವದ ಅಂಗವಾಗಿ ಬೆನಕ ಹೆಲ್ತ್ ಸೆಂಟರ್ ಉಜಿರೆ, ಬೆನಕ ಚಾರಿಟೇಬಲ್ ಟ್ರಸ್ಟ್ ಉಜಿರೆ ಮತ್ತು ಎ ಜೆ ರಕ್ತ ಕೇಂದ್ರ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ ಆದಿತ್ಯ ವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳೆಂಜ ಕಾಯರ್ತ್ತಡ್ಕ ಇಲ್ಲಿ ಜರುಗಿತು.ಶಿಬಿರದ ಉದ್ಘಾಟನೆಯನ್ನು ಅವಿನಾಶ್ ಮಾಲಿಕರು ಅಗ್ರಿಲೀಫ್ ಬರಂಗಾಯ ಇವರು ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ , ಎಂಜಿ ಭಟ್ ವ್ಯವಸ್ಥಾಪಕರು...

ಬೆಳ್ತಂಗಡಿ : ರೆಖ್ಯದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

0

ಬೆಳ್ತಂಗಡಿ : ದಾವಣಗೆರೆ ನಿವಾಸಿಯೆನ್ನಲಾದ ವ್ಯಕ್ತಿಯೊಬ್ಬರ ಮೃತದೇಹ ರೆಖ್ಯದಲ್ಲಿ ಪತ್ತೆಯಾಗಿದ್ದು‌ . ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ರೆಕ್ಯಾ ಗ್ರಾಮದ ನೆಲ್ಯಡ್ಕ ಎಂಬಲ್ಲಿ ಜ.26 ರಂದು ಅಪರಿಚಿತ ಸುಮಾರು 40 ರಿಂದ 45 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ಮೃತದೇಹದ ಬಳಿ ಪತ್ತೆಯಾಗಿರುವ ದಾಖಲೆಗಳಲ್ಲಿ  ದಾವಣಗೆರೆ ನಿವಾಸಿ ಹನುನಂತಪ್ಪ ಎಂದು ದಾಖಲೆಗಳು ಪತ್ತೆಯಾಗಿದೆ. ಮೃತದೇಹ ಅಸೌಕ್ಯದಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು  ಧರ್ಮಸ್ಥಳ ಪೊಲೀಸರು ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದ್ದು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತಪಟ್ಟ...

ಎಸ್ಡಿಪಿಐ ಯಿಂದ ಗಣರಾಜ್ಯೋತ್ಸವ; ದೇಶ ಹಾಗೂ ದೇಶದ ಬಡಜನತೆ, ಶೋಷಿತರು ಉಳಿಯಬೇಕಾದರೆ, ಸಂವಿಧಾನವನ್ನು ಉಳಿಸಬೇಕು; ಅಬ್ದುಲ್ ಮಜೀದ್ ಮೈಸೂರು

0

  ಬೆಳ್ತಂಗಡಿ (ಜ-26): 77 ನೇ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ "ಸಂವಿಧಾನ ಮೌಲ್ಯಗಳ ರಕ್ಷಣೆ - ಗಣರಾಜ್ಯ ಸಂಭ್ರಮ" ಎಂಬ ಘೋಷ ವಾಕ್ಯದೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮವು ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ತೆಯಲ್ಲಿ ಬೆಳ್ತಂಗಡಿಯಲ್ಲಿ ನಡೆಯಿತು. ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ರವರು ಧ್ವಜಾರೋಹಣ ನೆರೆವೇರಿಸಿ ಮಾತಾಡಿ, ಗಣರಾಜ್ಯೋತ್ಸವ ದಿನಾಚರಣೆಯ ಭಾಗವಾಗಿ ದೇಶ ಹಾಗೂ ದೇಶದ ಬಡಜನತೆ, ಶೋಷಿತರು ಉಳಿಯಬೇಕಾದರೆ, ಸಂವಿಧಾನವನ್ನು ಉಳಿಸಬೇಕು....

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದಿಂದ ಗಣರಾಜ್ಯೋತ್ಸವ, ನೂತನ ಕಚೇರಿ ಉದ್ಘಾಟನೆ

0

ಬೆಳ್ತಂಗಡಿ; ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ(ರಿ)/ದ ಕ ಜಿಲ್ಲೆ ಬೆಳ್ತಂಗಡಿ ಘಟಕದ ಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವನ್ನು ಕುಮಾರಕೃಪಾ ವಾಣಿಜ್ಯ ಸಂಕೀರ್ಣ ದಲ್ಲಿ ಆಚರಿಸಲಾಯಿತುಧ್ವಜಾರೋಹಣವನ್ನು ತಾಲೂಕು ಸಮಿತಿಯ ಗೌರವ ಅಧ್ಯಕ್ಷ ಎ.ಕೆ ಶಿವನ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶಪ್ರೇಮವನ್ನು ಬೆಳೆಸಿಕೊಳ್ಳುವಂತೆ ಕರೆನೀಡಿದರು. ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಸಂಘಟನೆಯನ್ನು ಬಲಿಷ್ಠ ಗೊಳಿಸಲು ಹಾಗೂ ಮಾಜಿ ಸೈನಿಕರ ಅಗತ್ಯಗಳಿಗೆ ಸ್ಪಂದಿಸುವ ಕಾರ್ಯವನ್ನು ಮಾಡಬೇಕು ಎಂದರು.ಇದೇ ಸಂದರ್ಭದಲ್ಲಿ ಸಂಘದ ನೂತನ ಕಚೇರಿಯ ಉದ್ಘಾಟನೆಯನ್ನು ನೆರವೇರಿಸಲಾಯಿತು. ಹಿರಿಯ ಸದಸ್ಯರಾದ...

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

0

ಬೆಳ್ತಂಗಡಿ;  ಸಿಯೋನ್ ಆಶ್ರಮ ಗಂಡಿಬಾಗಿಲು, ಬೆಳ್ತಂಗಡಿ ತಾಲೂಕು ಇಲ್ಲಿ ದಿನಾಂಕ:25.01.2026 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಆಲ್ಫಿಯ ದಂತವೈದ್ಯರು, ಡಾ.ಆಯಿಷಾ ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು....

ಬೆಳ್ತಂಗಡಿ; ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ದ ಕಾಲ್ನಡಿಗೆ ಜಾಥಾಕ್ಕೆ ಚಾಲನೆ

0

ಬೆಳ್ತಂಗಡಿ;  ನಾಲ್ಕು ಕಾರ್ಮಿಕ ವಿರೊದಿ ವೇತನ ಸಂಹಿತೆಗಳು, ರೈತ ವಿರೋದಿ ಬೀಜ ಕಾಯ್ದೆ, ವಿದ್ಯುತ್ ತಿದ್ದುಡಿ ಕಾಯ್ದೆ ಸೇರಿದಂತೆ ಜನರ ಬದುಕಿಗೆ ಅಪಾಯಕಾರಿಯಾದ ಕಾನೂನುಗಳ ಜಾರಿ ಮಾಡಿದ ಕೇಂದ್ರ ಸರಕಾರ ಉದ್ಯೋಗ ಖಾತ್ರಿ ಯೋಜನೆಯನ್ನು ಕತ್ತು‌ ಹಿಸುಕಿ ಕೊಂದಿದೆ ಎಂದು ರೈತ-ಕಾರ್ಮಿಕ ರಾಜ್ಯ ಮುಖಂಡರಾದ ಕೆ. ಯಾಧವ ಶೆಟ್ಟಿ ಅವರು ಹೇಳಿದರು.ಅವರು‌‌ ಇಂದು ಬೆಳ್ತಂಗಡಿಯಲ್ಲಿ ಸಿಐಟಿಯು ನೇತೃತ್ವದಲ್ಲಿ ಬೆಳ್ತಂಗಡಿ - ಮಂಗಳೂರು ನಾಲ್ಕು ದಿನಗಳ ಕಾಲ್ನಡಿಗೆ ಜಾತಾವನ್ನು ಉದ್ಘಾಟಿಸಿ ಮಾತಾಡುತ್ತಿದ್ದರು. ಕೇಂದ್ರ ಸರಕಾರದ ರೈತ- ಕಾರ್ಮಿಕ ವಿರೋದಿ ದೋರಣೆಯ ಖಂಡಿಸಿ ಎಲ್ಲಾ ಕೇಂದ್ರ...

ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

0

ಉರುವಾಲು: ಜ 25 ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲ ಹಿಂದೂ ಸಂಗಮ ಕಾರ್ಯಕ್ರಮ ಜ.25 ರಂದು ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾಭವನ ದಲ್ಲಿ ನೆರವೇರಿತು. ವಿವಿಧ ಭಜನಾ ಮಂಡಳಿಗಳ ಸದಸ್ಯರಿಂದ ಕುಣಿತ ಭಜನೆ, ಗೊಪೂಜೆ, ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಪ್ರಜ್ವಲನೆಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಗ್ರಾಮವಿಕಾಸ ಪ್ರಾಂತ ಸಂಯೋಜಕರಾದ ಜಗದೀಶ್ ಕಲ್ಲಡ್ಕರವರು ಪುರಾತನ ಭಾರತೀಯ ಸಂಸ್ಕೃತಿ ಮೇಲೆ ಹೇಗೆ ಪಾಶ್ಚಾತ್ಯ ಸಂಸ್ಕೃತಿ...

ಮದ್ದಡ್ಕ;ಯುವಕ ನೇಣುಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ: ಯುವಕನೋರ್ವ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಸಂಜೆ ಮದ್ದಡ್ಕದಲ್ಲಿ ನಡೆದಿದೆ.ಮದ್ದಡ್ಕ ಸಹನಾ ಕ್ಲಿನಿಕ್ ವೈದ್ಯರಾದ ಹರೀಶ್ ಶೆಣೈ ರವರ ಪುತ್ರ ಹೇಮಂತ್ ಶೆಣೈ (28ವ) ಭಾನುವಾರ ಸಂಜೆ ಮನೆಯಲ್ಲಿಯೇ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ಆತ್ಮಹತ್ಯೆಗೆ ಕಾರಣವೆಂದು ತಿಳಿದು ಬಂದಿಲ್ಲ.ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದೇ ವರ್ಷ ಗ್ರಾ ಪಂ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಚಿವ ದಿನೇಶ್ ಗುಂಡೂರಾವ್

0

ಬೆಳ್ತಂಗಡಿ: ಇದೇವರ್ಷ ರಾಜ್ಯದಲ್ಲಿ ಗ್ರಾಮಪಂಚಾಯತುಗಳಿಗೆ ತಾಲೂಕು,ಜಿಲ್ಲಾ ಪಂಚಾಯತು ಹಾಗೂ ಬೆಂಗಳೂರು ಸೇರಿದಂತೆ ನಗರಪಾಲಿಕೆಗಳಿಗೆ ಚುನಾವಣೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿಬೇಶ್ ಗುಂಡೂರಾವ್ ಹೇಳಿದರುಅವರು ಕುಕ್ಕೇಡಿಯಲ್ಲಿ ಅಂಬೇಡ್ಕರ್ ಭವನ ಉದ್ಘಾಟನಾ ಸಮಾರಂಭದ ಬಳಿಕ ಮಾಧ್ಯಮ ದವರೊಂದಿಗೆ ಮಾತನಾಡಿದರು.ಗ್ರಾಮಪಂಚಾಯತು ಚುನಾವಣೆಗಳನ್ನು ಮೊದಲು ನಡೆಸಿ ಬಳಿಕ ಇತರ ಚುನಾವಣೆಗಳನ್ನು ನಡೆಸುವ ಸಾಧ್ಯತೆಯಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.ತಾಲೂಕು ಕೇಂದ್ರವಾದ ಬೆಳ್ತಂಗಡಿಗೆ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮೂರು ಕೋಟಿ ಅನುದಾನ ಈಗಾಗಲೇ ಮಂಜೂರಾಗಿದೆ ಆದರೆ ಕಾಮಗಾರಿ ಇನ್ನೂ ಆರಂಭವಾಗಿಲ್ಲ ಶಾಸಕರು ಬೇರೆಯೇ ಆಲೋಚನೆಯನ್ನು ಹೇಳುತ್ತಿದ್ದಾರೆ ಇದರಿಂದಾಗಿ...

ಕುಕ್ಕೇಡಿ; ಅಂಬೇಡ್ಕರ್ ಭವನ ಉದ್ಘಾಟನೆ ರಾಜ್ಯ ಸರಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ ದಿನೇಶ್ ಗುಂಡೂರಾವ್

0

ಬೆಳ್ತಂಗಡಿ.ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದು, ಹಲವು ಯೋಜನೆಗಳ ಮೂಲಕ ಪರಿಶಿಷ್ಟರ ಅಭಿವೃದ್ಧಿಗೆ ದೊಡ್ಡ ಮಟ್ಟದ ಅನುದಾನವನ್ನು ಮೀಸಲಿಟ್ಟಿದೆ.ನೊಂದವರ ಮೀಸಲಾತಿ, ಭೂಮಿ ರಹಿತರಿಗೆ ನಿವೇಶನ ಕೊಡುವ ಕಾರ್ಯ, ಬಡವರ ಶೋಷಿತರ ಪರವಾದ ಕಾರ್ಯ ಕ್ರಮಗಳೆಲ್ಲವು ಕಾಂಗ್ರೆಸ್ ಸರಕಾರಗಳ ಕೊಡುಗೆಯಾಗಿದೆ ಎಂದುಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಭಾನುವಾರ ಬೆಳ್ತಂಗಡಿ ತಾಲೂಕು ಆಡಳಿತ, ತಾ.ಪಂ. ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕುಕ್ಕೇಡಿ ಡಾ.ಬಿ.ಆರ್.ಅಂಬೇಡ್ಕರ್ ಭವನವದ ನವೀಕೃತ ಕಟ್ಟಡವನ್ನು ಉದ್ಘಾಟಿಸಿ ಹಾಗೂ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಿ ಮಾತನಾಡಿದರು.ಸಂವಿಧಾನ ಮೂಲಕ...