ಗ್ಯಾರಂಟಿ ಯೋಜನೆಗೆ ಎರಡು ವರ್ಷ; ವೇಣೂರಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ಸಂಭ್ರಮಾಚರಣೆ
ಬೆಳ್ತಂಗಡಿ ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಶಕ್ತಿ ಯೋಜನೆ ಎರಡು ವರ್ಷ ಪೂರೈಸಿದ್ದು ಈ ಹಿನ್ನಲೆಯಲ್ಲಿ ಜು 14 ರಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ನಡೆಯಿತು. ಈ ಸಂದರ್ಭದಲ್ಲಿ ಮಹಿಳೆಯವರೆಲ್ಲ ಸೇರಿ ವೇಣೂರು ಬಸ್ ನಿಲ್ದಾಣದಲ್ಲಿ ಧರ್ಮಸ್ಥಳ -ಹುಬ್ಬಳ್ಳಿ ಬಸ್ಸಿಗೆ ಆರತಿ ಎತ್ತಿ ಪೂಜೆ ಮಾಡಿ ಸಂಭ್ರಮಿಸಿದರುಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮಾತನಾಡಿ ಸರ್ಕಾರದ ಪಂಚ ಗ್ಯಾರಂಟಿಗಳ ಬಗ್ಗೆಅದರಲ್ಲಿಯೂ ವಿಶೇಷ ವಾಗಿ ಶಕ್ತಿ ಯೋಜನೆಯ...
ಧರ್ಮಸ್ಥಳ ಹೆಣಗಳನ್ನು ಹೂತು ಹಾಕಿದ ಪ್ರಕರಣ; ಎಸ್ ಐ.ಟಿ ತನಿಖೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಒತ್ತಯಾ; ಮುಖ್ಯಂತ್ರಿಗೆ ಪತ್ರ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರ ನೀಡರುವ ಹೇಳಿಕೆಗಳ ಹಿನ್ನಲೆಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ರಾಜಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರಬರೆದಿದ್ದಾರೆ. ಸಾಕ್ಷಿ ದೂರುದಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ ಬಳಿಕ ಇದೀಗ ಮಹಿಳಾ ಆಯೋಗ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿ ಸೂಕ್ತ ತನಿಖೆ ನಡೆಸುವಂತೆ ಕೇಳಿಕೊಂಡಿದ್ದಾರೆ. ಅಲ್ಲದೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ...
ಕಳಿಯ; ಅಕ್ರಮ ಮರಳು ಸಾಗಾಟ ಎರಡು ವಾಹನಗಳು ವಶಕ್ಕೆ; ಪ್ರಕರಣದಾಖಲು
ಬೆಳ್ತಂಗಡಿ; ಕಳಿಯದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ ಕಳಿಯ ಗ್ರಾಮದ ಗೇರುಕಟ್ಟೆ ಹಾಲಿನ ಸೊಸೈಟಿಯ ಸಮೀಪ ಜು 13ರಂದು ಬೆಳಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ವಾಹನ ಪರಿಶೀಲನೆ ನಡೆಸಿದಾಗ ಇದೆ ದಾರಿಯಾಗಿ ಮರಳು ತುಂಬಿದ ಒಂದು ಲಾರಿ ಹಾಗೂ ಪಿಕಪ್ ವಾಹನ ಬಂದಿದ್ದು ಪೊಲೀಸರನ್ನು ನೋಡಿ ಪಿಕಪ್ ಚಾಲಕ ಪಿಕಪ್ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಚಾಲಕ ಮಹಮ್ಮದ್ ನೌಫಾಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮರಳನ್ನು ಸಾಗಾಟ ಮಾಡುತ್ತಿದ್ದ...
ಮೂಡುಕೋಡಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ವಂಚನೆ ಆರೋಪ; ವೇಣೂರು ಠಾಣೆಯಲ್ಲಿ 7 ಮಂದಿ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ: ಮೂಡುಕೋಡಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ 7 ಮಂದಿಯ ವಿರುದ್ಧ ವೇಣೂರು ಠಾಣೆಯಲ್ಲಿ ಜು.13ರಂದು ಪ್ರಕರಣ ದಾಖಲಾಗಿದೆ.ಮುಡುಕೋಡಿ ಗ್ರಾಮದ ಕೊಳಂಗಜೆ ಮನೆ ಶೇಖರ ಪೂಜಾರಿ ಎಂಬವರು ಈ ದೂರನ್ನು ನೀಡಿದ್ದಾರೆ.ಶ್ರೀಮತಿ ಪದ್ಮಾವತಿ , ಉದಯ, ಶ್ರೀಮತಿ ಉಷಾ, ಸುಕುಮಾರ ಶೆಟ್ಟಿ , ಶ್ರೀಮತಿ ವಿನೋದ, ಅನಿಲ್ ಕುಮಾರ್ ಶೆಟ್ಟಿ ಹಾಗೂ ಮುರುಳಿ ಕೃಷ್ಣ ಭಟ್ ಎಂಬುವವರ ವಿರುದ್ಧ ಈ ದೂರನ್ನು ನೀಡಿದ್ದಾರೆ. ಶೇಖರ ಪೂಜಾರಿ ತಂದೆ: ದಿ.ಅಣ್ಣು ಪೂಜಾರಿ ( ಮೀನಾಕ್ಷಿ ರವರಿಂದ...
ಧರ್ಮಸ್ಥಳ ಘಟನೆ ಸಾಕ್ಷಿ ದೂರು ದಾರನ ಗುರುತು ಬಹಿರಂಗ ಪಡಿಸಿದ ಬಗ್ಗೆ ತನಿಖೆ ಆರಂಭ
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಿರುವ ಬಗ್ಗೆ ಹೇಳಿಕೆನೀಡಿದ್ದ ಸಾಕ್ಷಿ ದೂರುದಾರನ ಗುರುತನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿರುವ ಬಗ್ಗೆ ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕರು ತನಿಖೆ ಆರಂಭಿಸಿದ್ದಾರೆ.ಪ್ರಕರಣದ ಸಾಕ್ಷಿ ದೂರುದಾರನ ಗುರುತನ್ನು ಸಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿರುವ ಬಗ್ಗೆ ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕರು ಇನ್ನೊಂದು ವಿಚಾರಣೆಯನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಜು 13ರಂದು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತು ಹಾಕಿರುವದರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ ಸಾಕ್ಷಿ ದೂರುದಾರ ಜು11ರಂದು ಬೆಳ್ತಂಗಡಿ...
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ಅಶ್ಲೀಲ ಪೋಸ್ಟ್; ಡಾಕ್ಟರ್ ವರ್ಮ ಫೇಸ್ ಬುಕ್ ಪೇಜ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ; ಧರ್ಮಸ್ಥಳ ಧಾರ್ಮಿಕ ಶ್ರದ್ದಾಕೇಂದ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಅಶ್ಲೀಲ ಸಂದೇಶವಿರುವ ಪೋಸ್ಟ್ ಅನ್ನು ಪ್ರಸಾರ ಮಾಡಿದ ಡಾಕ್ಟರ್ ವರ್ಮ ಫೇಸ್ ಬುಕ್ ಪೇಜ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಈ ಬಗ್ಗೆ ಧರ್ಮಸ್ಥಳ ನಿವಾಸಿ ಚೇತನ್ ಎಂಬವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಡಾಕ್ಟರ್ ವರ್ಮ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಧರ್ಮಸ್ಥಳದ ಧರ್ಮಿಕಶ್ರದ್ದಾಕೇಂದ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಅಶ್ಲೀಲ ಸಂದೇಶವಿರುವ ಮತ್ತು ಅಶ್ಲೀಲವಾಗಿ ಚಿತ್ರಿಸಿರುವ ಭಾವಚಿತ್ರವನ್ನು ಪೋಸ್ಟ್ ಮಾಡಿರುವುದು ಕಂಡುಬಂದಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರು...
ಫೇಸ್ ಬುಕ್ ನಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲು
ಬೆಳ್ತಂಗಡಿ; ಫೇಸ್ ಬುಕ್ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶವಿರುವ ಪೋಸ್ಟ್ ಪ್ರಸಾರ ಮಾಡಿದ ಬಗ್ಗೆ ಪ್ರವೀಣ್ ಲೋಬೋ ಎಂಬ ಫೇಸ್ ಬುಕ್ ಪೇಜ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಜಯಂತ್ ಟಿ ಎಂಬವರು ಈ ಬಗ್ಗೆ ದೂರು ನೀಡಿದ್ದು ಫೇಸ್ ಬುಕ್ ಪೇಜ್ ಅನ್ನು ಪರಿಶೀಲಿಸಿದಾಗ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶಗಳನ್ನು ಪ್ರಸಾರಮಾಡಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಇದರಂತೆ ಬೆಳ್ತಂಗಡಿ ಠಾಣೆಯಲ್ಲಿ 296 ಬಿ.ಎನ್.ಎಸ್ 2023ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲಾಯಿಲ; ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ : ಲಾಯಿಲಾ ಗ್ರಾಮದ ಕಕ್ಕೇನ ಎಂಬಲ್ಲಿ ತೋಡಿನ ಬದಿಯಲ್ಲಿ ಜುಲೈ 12ರಂದು ಅಪರಚಿತ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆಶನಿವಾರಸುಮಾರು 11 ಗಂಟೆ ಹೊತ್ತಿಗೆ 35 ರಿಂದ 45 ವರ್ಷದ ಪ್ರಾಯದ ಗಂಡಸ್ಸು ಅಸ್ವಸ್ಥರೀತಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣದಾಖಲಿಸಿಕೊಂಡಿದ್ದಾರೆ.ಮೃತರ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ.ಮೃತಪಟ್ಟ ವ್ಯಕ್ತಿಯು ಎತ್ತರ 5.5 ಇಂಚು ಗೋಧಿ ಮೈಬಣ್ಣ ತಲೆಯಲ್ಲಿ ಒಂದೂವರೆ ಇಂಚು ಉದ್ದ ಕೂದಲು, ಕಪ್ಪುಗಡ್ಡ ದೃಢ ಕಾಯ, ದುಂಡು ಮುಖ...
ಮುಂಡಾಜೆ ನಿವಾಸಿ ಜೇಮ್ಸ್ ಕಾರಿಮಲ ನಿಧನ
ಬೆಳ್ತಂಗಡಿ; ಮುಂಡಾಜೆ ಗ್ರಾಮದ ನಿವಾಸಿ ಜೇಮ್ಸ್ ಕಾರಿಮಲ (52) ಹೃದಯಾಘಾತದಿಂದ ನಿಧನರಾಗಿದ್ದಾರೆ.ಕೆಲದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದ ಇವರಿಗೆ ಅಲ್ಲಿ ಜ್ವರ ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ಪ್ರಯೋಜನಕ್ಕೆ ಬರಲಿಲ್ಲ. ಕಿಡ್ನಿ ವೈಫಲ್ಯವಾಗಿರುವುದು ಕಂಡು ಬಂದಿದ್ದುಭಾನುವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಧರ್ಮಸ್ಥಳ; ಮಾಜಿ ಗ್ರಾ.ಪಂ ಅಧ್ಯಕ್ಷೆ ಮನೆಯಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಅನಾಹುತ; ಸುಟ್ಟುಕರಕಲಾದ ಅಡುಗೆಮನೆ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಗ್ರಾ.ಪಂ ಮಾಜಿ ಅಧ್ಯಕ್ಷೆ ಗೀತಾ ದಾಮೋದರ ಆಚಾರ್ಯ ಅವರ ಮನೆಯಲ್ಲಿ ಜು.13 ರಂದು ಬೆಳಗ್ಗೆ ಗ್ಯಾಸ್ ಸೋರಿಕೆಯಾಗಿ ಅಡುಗೆ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಸಂಭವಿಸಿದೆ.ಭಾನುವಾರ ಬೆಳಗ್ಗೆ ಉಪಹಾರ ತಯಾರಿಸಲು ಗ್ಯಾಸ್ ಉರಿಸಿದಾಗ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿ ಪೂಜಾ ಕಾರ್ಯಕ್ರಮ ಇದ್ದ ಕಾರಣ ತುಂಬಾಜನರಿದ್ದರು. ಮನೆಯವರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಅದು ಸಾಧ್ಯವಾಗಿಲ್ಲ. ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಲು ಸಹಕರಿಸಿದರು. ಮನೆಯ ಅಡುಗೆಕೋಣೆ ಸಂಪೂರ್ಣ ಸುಟ್ಟು ಹೋಗಿದ್ದು ವ್ಯಾಪಕ ಹಾನಿ ಸಂಭವಿಸಿದೆ.















