ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಶುಕ್ರವಾರ ಜಿಲ್ಲಾ ಬಂದ್

0

ಮಂಗಳೂರು: ಬಜ್ಜೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು ಹಿಂದೂ ಸಂಘಟನೆಗಳು ದಕ್ಷಿಣ ಕನ್ನಡ ಬಂದ್ ಗೆ ಕರೆ ನೀಡಿವೆ. ಈ ಬಗ್ಗೆ ಮಾಹಿತಿ ನೀಡಿದ ವಿಎಚ್‌ಪಿ ದಕ್ಷಿಣ ಪ್ರಾಂತ ಸಂಚಾಲಕ ಶರಣ್ ಪಂಪ್‌ವೆಲ್ ಅವರು ಸುಹಾಸ್ ಶೆಟ್ಟಿ ಹಾಗೂ ಇತರ ಐದು ಜನ ಕಾರ್ಯಕರ್ತರು ತಮ್ಮ ಕಾರಿನಲ್ಲಿ ಹೋಗುತ್ತಿದ್ದಾಗ  ಪೂರ್ವ ಯೋಜಿತವಾಗಿ ದಾಳಿ ನಡೆಸಿ ಸುಹಾಸ್‌ ಅವರನ್ನು ಕೊಲೆ ಮಾಡಿದ್ದಾರೆ. ಇದರ ಹಿಂದೆ ನಿಷೇಧಿತ ಸಂಘಟನೆ ಗಳ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮಂಗಳೂರು; ತಲವಾರಿನಿಂದ ಕಡಿದು ಯುವಕನ ಭೀಕರ ಕೊಲೆ

0

ಮಂಗಳೂರು: ಸುರತ್ಕಲ್ ನ ಮಹಮ್ಮದ್ಫಾಝಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಸಾರ್ವಜನಿಕರ ಎದುರೇ ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಬಜ್ಜೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣದ ರಸ್ತೆಯಲ್ಲಿ ನಡೆದಿದೆ.ಲಭ್ಯ ಮಾಹಿತಿಗಳ ಪ್ರಕಾರ ಕಿನ್ನಿಪದವು ಪೇಟೆಯಲ್ಲಿ ಮೀನಿನ ಪಿಕಪ್ ಮತ್ತು ಸುಹಾಸ್‌ ಶೆಟ್ಟಿಯ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಕಾರು ಸಮೀಪದ ಅಂಗಡಿಗೆ ನುಗ್ಗಿತ್ತು. ಬಳಿಕ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ ಇದಾದ ಬಳಿಕ ಹೊಡೆದಾಟ ನಡೆದಿರುವುದಾಗಿ ಹೇಳಲಾಗಿದೆ. ಇದೇವೇಳೆ ನಾಲ್ವರು...

ಬೆಳ್ತಂಗಡಿ; ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕ ದಿನಾಚರಣೆ

0

ಬೆಳ್ತಂಗಡಿ; ಕಾರ್ಮಿಕರು ಒಂದಿ ದಿನವನ್ನು 8 ಗಂಟೆ ಕೆಲಸ, 8 ಗಂಟೆ ಮನೋರಂಜನೆ, 8 ಗಂಟೆ ವಿಶ್ರಾಂತಿ ಎಂಬ ಮೂರು ವಿಬಾಗ ಮಾಡಿಸುವ ಬೇಡಿಕೆಯೊಂದಿಗೆ ತ್ಯಾಗಬಲಿದಾನಗಳಿಂದ ಹೋರಾಡಿ ಗೆದ್ದ ದಿನವೇ ಮೇ ದಿನ. ಅದುವೇ ಕಾರ್ಮಿಕರ ದಿನ ಹೋರಾಟದ ಮೂಲಕ ಗೆದ್ದ ಈ ಅವಕಾಶಗಳನ್ನು ಕಸಿದುಕೊಳ್ಳುವ ಪ್ರಯತ್ನಗಳು ನಡೆಯುತ್ತಿದ್ದು ಇದರ ವಿರುದ್ದ ಕಾರ್ಮಿಕರು ಸಂಘಟಿತರಾಗಬೇಕಾದ ಅಗತ್ಯವಿದೆ ಎಂದು ಸಿಐಟಿಯು ದ.ಕ. ಜಿಲ್ಲಾ ಉಪಾಧ್ಯಕ್ಷರಾದ ಸುಕುಮಾರ್ ತೊಕ್ಕೊಟ್ಟು ಹೇಳಿದರು.ಬೆಳ್ತಂಗಡಿಯ ಮಿನಿ ವಿಧಾನ ಸೌಧ ಎದುರು ಸಿಐಟಿಯು ನೇತೃತ್ವದಲ್ಲಿ ನಡೆದ ಮೇ ದಿನಾಚರಣೆಯ ರ‍್ಯಾಲಿಯನ್ನು ಉದ್ಘಾಟಿಸಿ...

ಬೆಳ್ತಂಗಡಿ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿಯಿಂದ ಸಭೆ;   ಮೇ 9 ಕ್ಕೆ ಪ್ರಮುಖ ಸಾದಾತುಗಳ ಹಾಗೂ ಉಮರಾ ನಾಯಕರ ನೇತೃತ್ವದಲ್ಲಿ ಪ್ರತಿಭಟನಾ ಸಭೆಗೆ ನಿರ್ಧಾರ. ಪೋಸ್ಟರ್ ಬಿಡುಗಡೆ

0

ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯಿದೆಯ ವಿರುದ್ಧ ಬೆಳ್ತಂಗಡಿಯಲ್ಲಿ ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ವತಿಯಿಂದ 2025 ನೇ ಮೇ 9 ರಂದು ಶುಕ್ರವಾರ ಮದ್ಯಾಹ್ನ 2:30 ಗಂಟೆಗೆ ಬೆಳ್ತಂಗಡಿಯ ಬಸ್ಸು ನಿಲ್ದಾಣದ ಬಳಿಯಲ್ಲಿ ಶಾಂತಿಯುತ ಪ್ರತಿಭಟನಾ ಸಭೆಯನ್ನು ಪ್ರಮುಖ ಸಾದಾತುಗಳ ಮತ್ತು ಉಮರಾ ನಾಯಕರ ನೇತೃತ್ವದಲ್ಲಿ ನಡೆಸುವುದೆಂದು ತೀರ್ಮಾನಿಸಲಾಯಿತು. ಕಳೆದ ಸಭೆಯಲ್ಲಿ ತೀರ್ಮಾನಿಸಿದಂತೆ ಪ್ರಮುಖ ಸಾದಾತುಗಳನ್ನು ಬೇಟಿ ಮಾಡಿದ ಬಗ್ಗೆ ಮತ್ತು ತಾಲೂಕಿನಲ್ಲಿ ಪ್ರಸಕ್ತ ನಡೆಯುತ್ತಿರುವ ವಿವಿದ ಪ್ರಕರಣಗಳ ಬಗ್ಗೆ ಸಮುದಾಯವನ್ನು ಟಾರ್ಗೆಟ್ ಮಾಡಿ ಶಾಂತಿ ಭಂಗದಂತಹ ಘಟನೆಗಳನ್ನು ಪೋಲಿಸ್...

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

0

ಬೆಳ್ತಂಗಡಿ;  ಬಿಜೆಪಿಗರು ಅರ್ಥವಿಲ್ಲದ ಟೀಕೆಗಳನ್ನು ಮಾಡುತ್ತಲೇ ನಮ್ಮ ಕರ್ನಾಟಕ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನು ಅನುಸರಿಸಿದರು. ಈಗ ಅದೇ ರೀತಿಯಲ್ಲಿ ಜಾತಿ ಗಣತಿಯನ್ನು ವಿರೋಧಿಸುತ್ತಿದ್ದ ಇವರು ಈಗ ಜಾತಿ ಗಣತಿಯನ್ನು ಮಾಡುವುದಾಗಿ ಘೋಷಿಸಿದ್ದಾರೆ ಎಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಂದಹಾಗೆ ಜಾತಿ ಗಣತಿಯು ಜಾತಿಗಳ ನಡುವೆ ಒಡಕು ಮೂಡಿಸುತ್ತದೆ ಎಂಬ ಬಾಲಿಷವಾದ ಹೇಳಿಕೆ ನೀಡಿದ್ದ ರಾಜ್ಯ ಬಿಜೆಪಿಯ ನಾಯಕರು ಮತ್ತು ಅವರ ಮಿತ್ರ ಪಕ್ಷ ಈಗ ಏನು ಹೇಳುತ್ತದೆ ಎಂಬ ಕುತೂಹಲ. ಇನ್ನೊಂದು ಪ್ರಮುಖ ಅಂಶವೆಂದರೆ ಕಾಂಗ್ರೆಸ್...

ಉಜಿರೆ; ಬೈಕ್ ಡಿಕ್ಕಿ ಪಾದಚಾರಿ ಸಾವು

0

ಬೆಳ್ತಂಗಡಿ; ಉಜಿರೆ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಹೊಡೆದು ಗಂಭೀರವಾಗಿ ಗಾಯಗೊಂಡು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ನಾರಾಯಣ ಪೂಜಾರಿ (65) ಎಂಬವರಾಗಿದ್ದಾರೆ.ಎ 29 ರಂದು ಮದ್ಯಾಹ್ನ ನಾರಾಯಣ ಪೂಜಾರಿ ಅವರು ಉಜಿರೆ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ನಾರಾಯಣ ಪೂಜಾರಿ ಅವರ ತಲೆಗೆ ಗಂಭೀರ ಗಾಯವಾಗಿದ್ದು ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಎ...

ಮಾಲಾಡಿಯಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ

0

ಬೆಳ್ತಂಗಡಿ;  ಭಾರತರತ್ನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ದಿನಾಂಕ 27-4-2025 ನೇ ಭಾನುವಾರ ಮಾಲಾಡಿ ಅಂಬೇಡ್ಕರ್ ಭವನದ ವಠಾರದಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.. ಮಾಲಾಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ  ಪುನೀತ್ ಕುಮಾರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಾಶಯ ಕೋರಿ ಈ ಸಮಿತಿಯೊಂದಿಗೆ ಸದಾ ಸಹಕಾರ ನೀಡುತ್ತಾ ಜತೆಯಾಗಿ ಇರುವುದಾಗಿ ಹೇಳಿದರು. ಮುಖ್ಯ ಅತಿಥಿಗಳಾಗಿ ಗುತ್ತಿಗೆದಾರರಾದ ಜನಾರ್ಧನ ಕೈಲಾರ, ಮಾಲಾಡಿ ಬೌದ್ಧ ಮಹಾಸಭಾದ ಅಧ್ಯಕ್ಷರಾದ ಸುನಿಲ್,...

ಗುರುವಾಯನಕೆರೆಯಲ್ಲಿ ಟ್ರಾಫಿಕ್ ಜಾಮ್ ತತ್ತರಿಸಿ ಹೋದ ವಾಹನ ಸವಾರರು

0

ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಗುರುವಾಯನಕೆರೆಯಲ್ಲಿ ಬುಧವಾರ ಮಧ್ಯಾಹ್ನ ಸುಮಾರು ಎರಡು ತಾಸಿಗಿಂತ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಟ ನಡೆಸಿದರು.ಅಕ್ಷಯ ತೃತೀಯದ ಖರೀದಿ, ಅಲ್ಲಲ್ಲಿ ಮದುವೆ ಇನ್ನಿತರ ಶುಭ ಕಾರ್ಯಗಳು, ರಸ್ತೆ ಬದಿ ಇರುವ ಸಭಾ ಭವನಗಳಲ್ಲಿ ಕಾರ್ಯಕ್ರಮಗಳು, ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್, ರಜಾ ದಿನವಾದ ಕಾರಣ ಹೆಚ್ಚಿನ ಪ್ರವಾಸಿ ವಾಹನಗಳ ಓಡಾಟ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಇತ್ಯಾದಿ ಟ್ರಾಫಿಕ್ ಜಾಮ್ ಗೆ ಕಾರಣವಾಯಿತು. ಇಗುರುವಾಯನಕೆರೆಯಿಂದ ಮದ್ದಡ್ಕದವರೆಗೆ, ಗುರುವಾಯನ ಕೆರೆಯಿಂದ ಬೆಳ್ತಂಗಡಿಯ ಹಳೆಕೋಟೆ ತನಕ ಹಾಗೂ...

ಗಾಳಿ ಮಳೆಗೆ ಮನೆ ಹಾನಿಗೊಂಡ ಚಾರ್ಮಾಡಿಯ ಸಮೀರ್ ಮುಸ್ಲಿಯರ್, ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

0

ಬೆಳ್ತಂಗಡಿ. ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟುಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ,ಸಮೀರ್ ಮುಸ್ಲಿಯರ್, ಮತ್ತು ವಲಸರಿ ದಿನೇಶ್ ಪೂಜಾರಿ ಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಇಂದು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಸದಸ್ಯರಾದ ಪ್ರವೀಣ್ ಹಳ್ಳಿ ಮನೆ, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಅಝರ್ ನಾವೂರು, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅರುಣ್ ಲೋಬೊ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ . ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ,...

ಮುಂಡಾಜೆ ಕ್ರೈಸ್ಟ್ ಅಕಾಡಮಿಗೆ ಶೇ 100 ಫಲಿತಾಂಶ

0

ಬೆಳ್ತಂಗಡಿ; ಮುಂಡಾಜೆಯ ಕ್ರೈಸ್ಟ್ ಅಕಾಡೆಮಿ ಯ ವಿದ್ಯಾರ್ಥಿಗಳು ಈ ಬಾರಿಯ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದುಕೊಂಡಿದ್ದಾರೆ.ಈ ಬಾರಿಯ ಐ.ಸಿ.ಎಸ್. ಇ ಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದೆ.ಮುಂಡಾಜೆ ಕ್ರೈಸ್ಟ್ ಅಕಾಡಮೆಯ ಪ್ರಥಮ‌ ಎಸ್.ಎಸ್.ಎಲ್.ಸಿ ಬ್ಯಾಚ್ ನಲ್ಲಿ ಪರೀಕ್ಷೆಗೆ ಕುಳಿತ ಎಲ್ಲ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆರು ಮಂದಿ ಉನ್ನತ ಶ್ರೇಣಿಯಲ್ಲಿ ಹಾಗೂ ಐದು ಮಂದಿ ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ ನಲ್ಲಿ ಉತ್ತೀರ್ಣರಾಗಿದ್ದಾರೆ. ಇಲ್ಲಿನ ವಿದ್ಯಾರ್ಥಿ ನಿ ಫಾತಿಮಾ ಅನುಫಾ 90% ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಹಾಗೂ ತ್ರಿಶಾ ರೈ 85% ಅಂಕಗಳೊಂದಿಗೆ...