ಧರ್ಮಸ್ಥಳ; ಮಾಜಿ ಗ್ರಾ.ಪಂ ಅಧ್ಯಕ್ಷೆ ಮನೆಯಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಅನಾಹುತ; ಸುಟ್ಟುಕರಕಲಾದ ಅಡುಗೆಮನೆ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಗ್ರಾ.ಪಂ ಮಾಜಿ ಅಧ್ಯಕ್ಷೆ ಗೀತಾ ದಾಮೋದರ ಆಚಾರ್ಯ ಅವರ ಮನೆಯಲ್ಲಿ ಜು.13 ರಂದು ಬೆಳಗ್ಗೆ ಗ್ಯಾಸ್ ಸೋರಿಕೆಯಾಗಿ ಅಡುಗೆ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಸಂಭವಿಸಿದೆ.ಭಾನುವಾರ ಬೆಳಗ್ಗೆ ಉಪಹಾರ ತಯಾರಿಸಲು ಗ್ಯಾಸ್ ಉರಿಸಿದಾಗ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿ ಪೂಜಾ ಕಾರ್ಯಕ್ರಮ ಇದ್ದ ಕಾರಣ ತುಂಬಾಜನರಿದ್ದರು. ಮನೆಯವರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಅದು ಸಾಧ್ಯವಾಗಿಲ್ಲ. ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಲು ಸಹಕರಿಸಿದರು. ಮನೆಯ ಅಡುಗೆಕೋಣೆ ಸಂಪೂರ್ಣ ಸುಟ್ಟು ಹೋಗಿದ್ದು ವ್ಯಾಪಕ ಹಾನಿ ಸಂಭವಿಸಿದೆ.
ಯುಟ್ಯೂಬರ್ ಸಮೀರ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಖ್ಯಾತ ಯುಟ್ಯೂಬರ್ ಸಮೀರ್ ಎಂ.ಡಿ ಎಂಬವರ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರ ದಾಖಲಿಸಲಾಗಿದೆ.ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರ ಹೆಚ್ಚಿನ ಮಾಹಿತಿಯಿರುವ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು...
ಕೊಯ್ಯೂರು; ವಿವಾಹಿತೆ ಮಹಿಳೆ ನೇಣಿಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ವಿವಾಹಿತೆ ಮಹಿಳೆ ತಾಯಿ ಮನೆಯಲ್ಲಿ ನೇಣಿಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಮಗಳು ರಮ್ಯ(32) ಮನೆಯ ಕೊಣೆಯಲ್ಲಿ ಜುಲೈ 12 ರಂದು ಮಧ್ಯಾಹ್ನ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಎರಡು ವರ್ಷದ ಹಿಂದೆ ಕೊಯ್ಯೂರು ಗ್ರಾಮದ ಪಾದಡ್ಕ ನಿವಾಸಿ ಲತೀಶ್ ನೊಂದಿಗೆ ಈಕೆಯ ವಿವಾಹವಾಗಿತ್ತು. ರಮ್ಯ ಬೆಳ್ತಂಗಡಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಮ್ಯಗೆ ಆರೋಗ್ಯಸಮಸ್ಯೆಗಳಿತ್ತು ಎನ್ನಲಾಗಿದೆಈಕೆ ತಾಯಿ ಮನೆಗೆ ಬಂದಿದ್ದವಳು ಆರೋಗ್ಯ ಸಮಸ್ಯೆ ಬಗ್ಗೆ ಮನ ನೊಂದು ಆತ್ಮಹತ್ಯೆ...
ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದಅಕ್ರಮ ಮರಳು ಸಾಗಾಟ: ಪಿಕಪ್ ಸಹಿತಿ ಮರಳು ವಶ
ಬೆಳ್ತಂಗಡಿ: ಕಡಿರುದ್ಯಾವರ ಗ್ತಾಮದ ಬೊಳ್ಳೂರು ಬೈಲು ಎಂಬಲ್ಲಿಯ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್‌ನಲ್ಲಿ ಸಾಗಾಟ ಮಾಡುತ್ರಿರುವ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಪಿಕಪ್ ಹಾಗೂ ಮರಳು ಸಹಿತ ಸಾಮಾಗ್ರಿಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಜು. 11 ರಂದು ಕಡಿರುದ್ಯಾವರ ಗ್ರಾಮದ ಬೊಳ್ಳೂರು ಎಂಬಲ್ಲಿ ಪ್ರತೀಕ್ಷ್ ಎಂಬಾತನು ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆ ಪಡೆಯದೆ ಮರಳು ಸಾಗಾಟ ಮಾಡುತ್ತಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಪಡಿಸಿಕೊಂಡಿದ್ದು ವಾಹನದಲ್ಲಿದ್ದ ಮರಳನ್ನು ಹಾಗೂ ಮರಳು ತೆಗೆಯಲು ಉಪಯೋಗಿಸಿದ್ದ ಉಪಕರಣಗಳನ್ನು ವಶಪಡಿಸಿಕೊಂಡಿದ್ದು ಪ್ರಕರಣ ದಾಖಲಿಸಿದ್ದಾರೆ.
ಧರ್ಮಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನ ಕಳವು
ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ನಿಲ್ಲಿಸಿಹೋಗಿದ್ದ ದ್ವಿಚಕ್ರವಾಹನವನ್ನು ಕಳವುಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ನಿಡ್ಲೆ ಗ್ರಾಮದ ನಿವಾಸಿ ಆಶಾ ಎಂಬವರು ಜು.10ರಂದು ಧರ್ಮಸ್ಥಳ ಗೇಟ್ ಸಮೀಪ ತನ್ನ ದ್ವಿಚಕ್ರವಾಹನ ಕೆ.21ಎಕ್ಸ್ 7375 ನಂಬರ್ ನ ಹೋಂಡಾ ಡಿಯೋ ವಾಹನವನ್ನು ಬಿಟ್ಟು ಕೆಲಸಕ್ಕೆಂದು ಉಜಿರೆಗೆ ತೆರಳಿದ್ದರು. ಸಂಜೆ ಕೆಲಸ ಮುಗಿಸಿ ಬಂದು ನೋಡಿದಾಗ ನಿಲ್ಲಿಸಿದ್ದ ವಾಹನ ಅಲ್ ಇರಲಿಲ್ಲ ಸ್ಥಳೀಯ ವಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಸಿಗದ ಕಾರಣ ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದ್ದು...
ದೂರುದಾರನ ಗುರುತು ಬಯಲು ಮಾಡಿದವರ ಬಗ್ಗೆ ಪ್ರತ್ಯೇಕ ತನಿಖೆ; ಅಸ್ಥಿಪಂಜರ ಅವಶೇಷಗಳನ್ನು ಸ್ವಾಧೀನಕ್ಕೆ ಪಡೆದುಕೊಂಡಿದ್ದೇವೆ ಎಸ್.ಪಿ ಮಾಹಿತಿ
ಮಂಗಳೂರು: 'ಧರ್ಮಸ್ಥಳ' ಪ್ರಕರಣದ ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು ಜಿಲ್ಲೆಯ ಸಕ್ಷಮ ಪ್ರಾಧಿಕಾರವು ಧರ್ಮಸ್ಥಳ' ಪ್ರಕರಣದಲ್ಲಿ ಸಾಕ್ಷಿಯ ರಕ್ಷಣೆಗೆ ಜು. 10ರಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದೆ. ಶುಕ್ರವಾರ ಸಾಕ್ಷಿ, ದೂರುದಾರ ಬೆಳ್ತಂಗಡಿಯ ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನು ನೀಡಿದ್ದಾರೆ....
ಬೆಳ್ತಂಗಡಿ : ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ ಕೆರೆಯಲ್ಲಿ ಪತ್ತೆ; ವೀಣಾ ಸಾವಿನ ಸುತ್ತ ಹಲವು ಅನುಮಾನಗಳು ಪೊಲೀಸ್ ತನಿಖೆ ಆರಂಭ
ಬೆಳ್ತಂಗಡಿ : ಅನುಮಾನಸ್ಪದ ರೀತಿಯಲ್ಲಿ ಯುವತಿಯೊಬ್ಬಳ ಶವ ಮನೆಯ ಕೆರೆಯಲ್ಲಿ ಪತ್ತೆಯಾಗಿದ್ದು. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ನಾಗೇಶ್- ಭಾರತಿ ದಂಪತಿಗಳ ಎರಡನೇ ಪುತ್ರಿ ವೀಣಾ(19) ಎಂಬಾಕೆಯ ಶವ ಮನೆಯ ಕೆರೆಯಲ್ಲಿ ಜುಲೈ 11 ರಂದು ಮಾದ್ಯಾಹ್ನದ ಬಳಿಕ ಪತ್ತೆಯಾಗಿದೆ. ನಾಗೇಶ-ಭಾರತಿಗೆ ನಾಲ್ಕು ಜನ ಮಕ್ಕಳಲ್ಲಿ ವೀಣಾ ಎರಡನೇ ಪುತ್ರಿಯಾಗಿದ್ದು ಅವಳಿಗೆ ಮಾನಸಿಕ ಖಾಯಿಲೆ ಇದ್ದು ಆಕೆಗೆ ಪತ್ತೂರಿನ ಆಸ್ಪತ್ರೆಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ವೀಣಾಗೆ ಒಂದುವರೆ ತಿಂಗಳ ಮಗು...
ಧರ್ಮಸ್ಥಳ; ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬೆಳ್ತಂಗಡಿ; ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಬಂದಿತ ಆರೋಪಿ ಶ್ರೀಧರ ವೆಂಕಟ ಕ್ರಷ್ಣ ಉಪಾಧ್ಯಯ ಹೊನ್ನಾವರ ಎಂಬಾತನಾಗಿದ್ದಾನೆ.ಈತನ ವಿರುದ್ದಮಾನ್ಯ ಬೆಳ್ತಂಗಡಿ ನ್ಯಾಯಲಯcc no 205/2016,ಠಾಣಾ ಅ. ಕ್ರ. 510/2015 ಕಲಂ. 379 ಐಪಿಸಿ.ಪ್ರಕರಣದಲ್ಲಿ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಜು11 ರಂದುಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರು ನಾಗೇಶ್ ಕದ್ರಿ, ಉಪ ನೀರಿಕ್ಷಕರು ಸಮರ್ಥ್ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿ ವ್ರಷಭ ಮತ್ತು ಚರಣ್ ರಾಜ್...
ದ್ವೇಷ ಭಾಷಣ ಮಾಡುವಂತಿಲ್ಲ ಶಾಸಕ ಹರೀಶ್ ಪೂಂಜ ಅವರಿಗೆ ಹೇಕೋರ್ಟ್ ಆದೇಶ
ಬೆಳ್ತಂಗಡಿ: ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ, ಈಗಾಗಲೇ ದಾಖಲಾಗಿರುವ ಸೆಕ್ಷನ್ ಗಳ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ಹೈಕೋರ್ಟ್ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಇಂದು ಆದೇಶ ನೀಡಿದೆ. ಕೋಮುಗಲಭೆಗಳಿಗೆ ಪ್ರಚೋದನೆ ನೀಡುವ, ಮುಸ್ಲಿಮ್, ಸಮುದಾಯವನ್ನು ತುಚ್ಚಕರಿಸುವ ಭಾಷಣ ಮಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಬೇಕು ಎಂದು ದೂರುದಾರು ಇಬ್ರಾಹಿಂ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ನಲ್ಲಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿ...
ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಲಾರಿ ಪಲ್ಟಿ
ಬೆಳ್ತಂಗಡಿ; ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಮರ ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ಗುರುವಾರ ಮುಂಜಾನೆ ನಡೆದಿದೆ.ಲಾ ರಿಚಾಲಕ ಮತ್ತು ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.ಘಟನೆಯಿಂದ ಒಂದು ತಾಸು ಹೊತ್ತು ಘಾಟಿಯಲ್ಲಿ ಸಂಚಾರಕ್ಕೆ ಸಮಸ್ಯೆ ಉಂಟಾಯಿತು. ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಸ್ಥಳೀಯರ ಸಹಕಾರದಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿಕೊಟ್ಟರು.















