ಅಳದಂಗಡಿ; ಕಾರುಗಳ ಮುಖಾಮುಖಿ ಡಿಕ್ಕಿ ಹಲವರಿಗೆ ಗಾಯ

0

ಬೆಳ್ತಂಗಡಿ; ಅಳದಂಗಡಿ ಸಮೀಪ ಕೆದ್ದುವಿನಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಹಲವರು ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ. ಎರಡು ಕಾರುಗಳಲ್ಲಿದ್ದ 5 ಮಂದಿ ಪ್ರಯಾಣಿಕರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಇದರಲ್ಲಿ ಒಂದಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ಕೂಡಲೇ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಎರಡೂ ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿದ್ದು ಸ್ಥಳಕ್ಲೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಹೆಚ್ವಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಎ. 28: ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ

0

ಬೆಳ್ತಂಗಡಿ :ಕರ್ನಾಟಕದಲ್ಲಿ ಮಹಾತ್ಮ ಪ್ರೊ.ಬಿ.ಕೃಷ್ಣಪ್ಪರವರ ನಾಯಕತ್ವದಲ್ಲಿ ಸ್ಥಾಪನೆಗೊಂಡಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ ಎಂಬ ಸಾಮಾಜಿಕ ಸಂಘಟನೆಯು ನಾಡಿನ ದಲಿತ, ದಲಿತೇತರ ಎಲ್ಲಾ ಶೋಷಿತ ಸಮುದಾಯಗಳ ಆಶಾಕಿರಣವಾಗಿ ಪ್ರಬಲ ಧ್ವನಿಯಾಗಿ ಸಿಡಿದೆದ್ದುಸ್ವಾಭಿಮಾನಿ ದಲಿತರನ್ನು ಒಗ್ಗೂಡಿಸಿಕೊಂಡು ರಾಜ್ಯಾದ್ಯಂತ ಹೆಮ್ಮರವಾಗಿ ಬೆಳದು ಬಂದಿರುವುದು70ರ ದಶಕದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಾಗಿ ಉದಯಿಸಿದ ಕರ್ನಾಟಕ ದಲಿತ ಚಳುವಳಿ 2025ನೇ ವರ್ಷದಲ್ಲಿ 50ರ ಸಂಭ್ರಮದಲ್ಲಿದೆ ಇದರ ಅಂಗವಾಗಿ ಎ. 28ರಂದು ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ ನಡೆಯಲಿದೆ...

ಪೋಪ್ ಫ್ರಾನ್ಸಿಸ್‌ ನಿಧನ

0

ರೋಮ್:‌ ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ , ರೋಮನ್ ಕ್ಯಾಥೋಲಿಕ್ ಧರ್ಮ ಸಭೆಯ ಮುಖ್ಯಸ್ಥ ಪೋಪ್ ಫ್ರಾನ್ಸಿಸ್ (88) ಸೋಮವಾರ ನಿಧನರಾಗಿದ್ದಾರೆ. ಸೋಮವಾರ (ಏ.21) ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ ಎಂದು ವ್ಯಾಟಿಕಾನ್ ನ ಕಾರ್ಡಿನಲ್ ಕೆವಿನ್ ಫಾರೆಲ್ ದೃಢ ಪಡಿಸಿದ್ದಾರೆ. ಕಳೆದ ಕೆಲ ಸಮಯದಿಂದ ಅವರು ನ್ಯುಮೋನಿಯಾ, ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು, ಈ ಸಂಬಂಧ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ದಿನ ಕಳೆದಂತೆ ಅವರು ಆರೋಗ್ಯ ಸ್ಥಿತಿ ಗಂಭೀರವಾಗಿತ್ತು ಎಂದು ವರದಿ ತಿಳಿಸಿದೆ. ಅನಾರೋಗ್ಯ ಕಾರಣ ಅವರನ್ನು ಫೆ.14ರಂದು...

ಮಾಲಾಡಿ ಮನೆಯ ಬೀಗ ಒಡೆದು ರೂ 14ಲಕ್ಷ ಮೌಲ್ಯದ ಚಿನ್ನಾಭರಣ ನಗದು ಕಳ್ಳತನ

0

ಬೆಳ್ತಂಗಡಿ; ಮಾಲಾಡಿ ಗ್ರಾಮದ ಕೊಲ್ಪೆದ ಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದವೇಳೆ ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು ರೂ 14ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿದ ಘಟನೆ ಸಂಭವಿಸಿದೆ.ಕೊಲ್ಪೆದ ಬೈಲು ನಿವಾಸಿ ವಸಂತಿ ಹೆಗ್ಡೆ ಎಂಬವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯವರು ಎ.20 ರಂದು ಮಧ್ಯಾಹ್ನ ಮನೆಗೆ ಬೀಗ ಹಾಕಿ ಬೆಳ್ತಂಗಡಿ ಗೆ ತೆರಳಿದ್ದರು.ಸಂಜೆ ಮನೆಗೆ ಬಂದು ನೋಡಿದಾಗ ಮನೆಯ ಮುಂದಿನ‌ಬಾಗಿಲಿನ ಬೀಗ ಒಡೆದಿರುವುದು ಕಂಡು ಬಂದಿದೆ ಪರಿಶೀಲಿಸಿದಾಗ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಮನೆಯ ಕೋಣೆಯ ಕಪಾಟಿನಲ್ಲಿ...

ಬೆಳ್ತಂಗಡಿ; ಡಿಜಿಟಲ್ ಯೂತ್ ತಂಡಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

0

ಬೆಳ್ತಂಗಡಿ; ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಡಿಜಿಟಲ್ ಯೂತ್ ತಂಡವನ್ನು ರಚಿಸಲಾಗಿತ್ತು ಈ ತಂಡಕ್ಕೆ ಕೆಪಿಸಿಸಿ ಅಧ್ಯಕ್ಷ ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಅವರು ಡಿಜಿಟಲ್ ಯೂತ್ ವಿಂಗ್ ಗೆ ಚಾಲನೆ ನೀಡಿದರು.ಈ ಡಿಜಿಟಲ್ ಯೂತ್ ವಿಂಗ್ ನಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 243 ಬೂತ್ ಗಳಿಂದಲೂ ತಲಾ ಇಬ್ಬರು ಯುವಕರಿದ್ದಾರೆ. ಈ ತಂಡ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಪಕ್ಷದ ಧ್ವನಿಯಾಗಿ ರೂಪಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದು ಯುವ ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ.

ಬೆಳ್ತಂಗಡಿ; ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ;  ಮುಂದಿನ   ಚುನಾವಣೆಯಲ್ಲಿಯೂ ಕಾಂಗ್ರೆಸ್ ಗಲುವು ನಿಶ್ಚಿತ, ಡಿ.ಕೆ ಶಿವಕುಮಾರ್

0

ಬೆಳ್ತಂಗಡಿ; ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷ ಸ್ಪಷ್ಟವಾದ ಬಹುತದೊಂದಿಗೆ ಗೆಲುವನ್ನು ಪಡೆಯಲಿದೆ ತುಳುನಾಡಿನಿಂದ ಕನಿಷ್ಟ ಹತ್ತು ಮಂದಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.ಅವರು ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ರಕ್ಷಿತ್ ಶಿವರಾಂ ಅವರ ನೇತೃತ್ವದಲ್ಲಿ ಗುರುವಾಯನಕೆರೆಯಲ್ಲಿ ನಡೆದ ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ ಇದು ರಾಜ್ಯದ ಸಾಮಾನ್ಯ ಜನರಿಗೆ ಶಕ್ತಿ...

ಬೆಳ್ತಂಗಡಿ : ಮೀಸಲು ಅರಣ್ಯದಲ್ಲಿ ಮರ ಕಳ್ಳತನ ಅರಣ್ಯ ಇಲಾಖೆ ದಾಳಿ ಪ್ರಕರಣ ದಾಖಲು

0

ಬೆಳ್ತಂಗಡಿ : ಮೇಲಂತಬೆಟ್ಟು ಗ್ರಾಮದಲ್ಲಿ ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಿಟಾಚಿ ಬಳಸಿ ಬೆಳೆಬಾಳುವ ಮರಗಳನ್ನು ದೋಚಲು ಯತ್ನಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಸರ್ವೆ ನಂಬರ್ 158 ರ ಮೀಸಲು ಅರಣ್ಯ ಪ್ರದೇಶದೊಳಗೆ ಹಿಟಾಚಿ ಬಳಸಿ ರಸ್ತೆ ನಿರ್ಮಾಣ ಮಾಡಿ ಬೆಲೆಬಾಳುವ ಮರಗಳನ್ನು ದೋಚುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಒ ತ್ಯಾಗರಾಜ್.ಟಿ.ಎಮ್ ನೇತೃತ್ವದ ತಂಡ ಏ.16...

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿ. ಕೆ ಶಿವಕುಮಾರ್

0

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನವನ್ನು ಏ.20 ರಂದು ಬೆಳಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಡೆದರು. ಮಂಜುನಾಥ ಸ್ವಾಮಿಗೆ ಪ್ರಾಥನೆ ಸಲ್ಲಿಸಿ ಹುಂಡಿಗೆ ಕಾಣಿಗೆ ಹಾಕಿದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅರ್ಶಿವಾದ ಪಡೆದು ಬೆಳ್ತಂಗಡಿ ಕಾರ್ಯಕ್ರಮಕ್ಕೆ ಪ್ರಯಾಣ ಮಾಡಿದರು. ಮಾಜಿ ಎಮ್.ಎಲ್.ಸಿ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುನಿಯಲು ಉದಯ ಕುಮಾರ್ ಶೆಟ್ಟಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.

ಉಜಿರೆಯಲ್ಲಿ ಶಾಂತಿ ಭಂಗ; ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ದ ಪ್ರಕರಣ ದಾಖಲು

0

ಬೆಳ್ತಂಗಡಿ; ಉಜಿರೆಯಲ್ಲಿ ಪುನೀತ್ ಕೆರೆಹಳ್ಳಿ ಯನ್ನು ತಡೆದ ಘಟನೆಗೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ನಿವಾಸಿಗಳಾದ ಅನಿಲ್ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ, ಪ್ರಭಾಕರ, ಗಣೇಶ್ ಹಾಗೂ ಇತರರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.ಬೆಳ್ತಂಗಡಿ ಪೊಲೀಸ್ ಠಾಣೆಯ ಎಸ್‌. ಐ ಮುರಳೀಧರ ನಾಯ್ಕ್ ಕೆ.ಜಿ ಅವರ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.ಪುನೀತ್ ಕೇರೆಹಳ್ಳಿ ಅವರು ಉಜಿರೆಗೆ ಬಂದರೆ ಉಜಿರೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ಶಾಂತಿ ಭಂಗ ಉಂಟುಮಾಡುವ ಸಾಧ್ಯತೆ ಇದ್ದ ಕಾರಣ ದ.ಕ ಜಿಲ್ಲಾಧಿಕಾರಿಯವರು ಸರ್ವಜನಿ...

ಗುರುವಾಯನಕೆರೆ; ಕಾಂಗ್ರೆಸ್ ಸಮಾವೇಶದ ಬ್ಯಾನರ್ ಹರಿದ ಕಿಡಿಗೇಡಿಗಳು

0

ಬೆಳ್ತಂಗಡಿ; ಗುರುವಾಯನಕೆರೆಯ ಶಕ್ತಿನಗರದಲ್ಲಿ ಭಾನುವಾರ ನಡೆಯಲಿರುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಎಂಬ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಹತ್ತಾರು ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದ ಘಟನೆ ಶನಿವಾರ ರಾತ್ರಿಯ ವೇಳೆ ಸಂಭವಿಸಿದೆ. ಸಮಾವೇಶದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ , ಸಚಿವರಾದ ಚೆಲುವರಾಯ ಸ್ವಾಮಿ , ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಮಟ್ಟದ ಹಲವಾರು ನಾಯಕರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ತಾಲುಕಿನಾದ್ಯಂತ ವ್ಯಾಪಕ ಪ್ರಮಾಣದ ಪ್ರಚಾರ ಬ್ಯಾನರ್ , ಪಕ್ಷದ ಧ್ವಜಗಳು ಸೇರಿದಂತೆ ಬಂಟಿಂಕ್ಸ್...