ಅಂಬೇಡ್ಕರ್ ಜಗತ್ತಿಗೆ ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ ಮತ್ತು ನ್ಯಾಯದ ಸಂದೇಶವನ್ನು ನೀಡಿದವರು. ರಕ್ಷಿತ್ ಶಿವರಾಂ
ಬೆಳ್ತಂಗಡಿ. ಡಾ. ಬಿ.ಆರ್ ಅಂಬೇಡ್ಕರ್ ಅವರು ವಿಶ್ವಕಂಡ ಧೀಮಂತ ವ್ಯಕ್ತಿಗಳಲ್ಲಿ ಅಗ್ರಗಣ್ಯರಾಗಿದ್ದಾರೆ, ಇವರ ವಿಚಾರಧಾರೆಗಳಿಗೆ,ಜ್ಞಾನ ಭಂಡಾರಕ್ಕೆ ವಿಶ್ವದಾದ್ಯಂತ ಅನುಯಾಯಿಗಳನ್ನು ಹೊಂದಿದ್ದಾರೆ. ಸಮಾಜದ ಕಟ್ಟೆ ಕಡೆಯ ವ್ಯಕ್ತಿಯ ಆರ್ಥಿಕ,ಸಾಮಾಜಿಕ, ರಾಜಕೀಯ ಸಮಾನತೆಯನ್ನು ಗಮನದಲ್ಲಿ ಇಟ್ಟುಕೊಂಡು ಪ್ರತಿಯೊಬ್ಬರಿಗೂ ಸ್ವತಂತ್ರವಾದ ಜೀವನ ರೂಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಎಂದು ಪುದುವೆಟ್ಟು ಅಂಬೇಡ್ಕರ್ ಭವನ ಭವನದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.ಈ ಸಂದರ್ಭದಲ್ಲಿ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ. ಉಜಿರೆ ಜಿಲ್ಲಾ...
ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಜಯಂತಿ; ಪ್ರಜಾಪ್ರಭುತ್ವ ವ್ಯವಸ್ಥೆ ಅಂಬೇಡ್ಕರ್ ಕೊಡುಗೆ: ಪೂಂಜಾ
ಬೆಳ್ತಂಗಡಿ: ಸಮಾಜದ ಅಸಮಾನತೆಗಳ ವಿರುದ್ಧ ಹೋರಾಡಿದವರು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಅವರ ಜೀವನ ನಮಗೆ ಆದರ್ಶವಾಗಿದೆ. ಅವರು ನೀಡಿದ ಸಂವಿಧಾನದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಗಿದ್ದು ಇದು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಕೊಡುಗೆಯಾಗಿದೆ ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು. ಅವರು ಸೋಮವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ 135 ನೇ ಜನ್ನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಜಗತ್ತು ಮೆಚ್ಚುವ ಸಂವಿಧಾನ ನೀಡಿದ ಅಂಬೇಡ್ಕರ್ ಧರ್ಮಾದಾರಿತ ಮೀಸಲಾತಿಗೆ...
ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ ಮಂಜುನಾಥ ಕಾಮತ್ ನಿಧನ
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ, ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಮೊಕ್ತೇಸರ ಪ್ರಗತಿಪರ ಕೃಷಿಕರೂ ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿ ಮಂಜುನಾಥ ಕಾಮತ್ (೮೯ವ) ಅವರು ವಯೋಸಹಜ ಅಸೌಖ್ಯದಿಂದ ಬಳಲಿ ಇಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿಯಾಗಿರುವ ಮಂಜುನಾಥ ಕಾಮತ್ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದಾರೆ. ಅವರು ಬೆಳ್ತಂಗಡಿ ಭೂ ನ್ಯಾಯಮಂಡಳಿಯ ಸದಸ್ಯರಾಗಿ, ತಾಲೂಕು ಅಭಿವೃದ್ಧಿ ಮಂಡಳಿಯ ಸದಸ್ಯರಾಗಿ, ೨೦ ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೇವೆ...
ಬೆಳ್ತಂಗಡಿ : ಬೈಕ್ – ಟಿಪ್ಪರ್ ನಡುವೆ ಅಪಘಾತ; ಓರ್ವ ಸಾವು, ಸಾಹಸವಾರನಿಗೆ ಗಾಯ
ಬೆಳ್ತಂಗಡಿ : ಬೈಕ್ ಮತ್ತು ಟಿಪ್ಪರ್ ನಡೆವೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ - ಉಪ್ಪಿನಂಗಡಿ ರಸ್ತೆಯ ಪಣೆಜಾಲಿನ ರತ್ನಗಿರಿ ಎಂಬಲ್ಲಿ ಏ.14 ರಂದು ಬೆಳಗ್ಗೆ ಗುರುವಾಯನಕೆರೆಗೆ ಬರುತ್ತಿದ್ದ ರಾಜ್ ಕಮಲ್ ಸಂಸ್ಥೆಯ ಟಿಪ್ಪರ್ ವಾಹನ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ನಡೆದಿದೆ. ಅಪಘಾತ ರಭಸಕ್ಕೆ ಬೈಕ್ ಸವಾರನ ತಲೆ,ಕಣ್ಣು ಹೊರಕ್ಕೆ ಬಂದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸಹಸವಾರ ಸಣ್ಣಪುಟ್ಟ ಗಾಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಕೂಡ ಖಾಸಗಿ ಸಂಸ್ಥೆಯಲ್ಲಿ ಕೆಲಸ...
ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ತರಬೇತಿ ಸಮಾರೋಪ
ಉಜಿರೆ : ನೀವು ಮಾಡುವ ಉದ್ಯಮದಲ್ಲಿ ಅದನ್ನು ನಡೆಸುವಾಗ ಎಲ್ಲ ರೀತಿಯಲ್ಲಿ ಸಮತೋಲನ ಕಾಯ್ದುಕೊಂಡು ಮುಂದುವರೆಯಬೇಕು. ಜೊತೆಯಲ್ಲಿ ಇತರರು ನಿಮಗೆ ಸ್ಪೂರ್ತಿದಾಯಕ ವಾದ ಪ್ರೋತ್ಸಾಹ ನೀಡುತ್ತಾ ಇದ್ದರೆ ಹಾಗೂ ನಿಮ್ಮ ಪ್ರಯತ್ನ ಕೊಡಿಕೊಂಡರೆ ಖಂಡಿತವಾಗಿ ನೀವು ಯಶಸ್ವಿಯಾಗಿ ಉದ್ಯಮ ನಡೆಸಬಹುದು. ಇದಕ್ಕೆ ಪೂರಕವಾಗಿ ಪರಮ ಪೂಜ್ಯ ಡಾ|.ಡಿ.ವೀರೇಂದ್ರ ಹೆಗ್ಗಡೆಯವರು ದೂರ ದೃಷ್ಟಿ ಈ ರುಡ್ ಸೆಟ್ ಸಂಸ್ಥೆ ಯು ನಿಮಗೆ ನಿರಂತರವಾಗಿ ನಿಮ್ಮ ಹಿಂದೆ ಇದ್ದು ಮಾಹಿತಿ-ಮಾರ್ಗದರ್ಶನ ನೀಡುತ್ತದೆ. ಬಹುಶ ಇಂದು ಇಡೀ ದೇಶದಲ್ಲಿ ರುಡ್ಸೆಟ್ ಸಂಸ್ಥೆಯ ಮೂಲಕ ತರಬೇತಿ ಪಡೆದ ಕೋಟ್ಯಂತರ...
ಮುಂಡಾಜೆ- ಧರ್ಮಸ್ಥಳ ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ
ಬೆಳ್ತಂಗಡಿ; ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ- ಧರ್ಮಸ್ಥಳ ರಸ್ತೆಯ ಕೊಂಬಿನಡ್ಕ ಶಾಲೆ ಸಮೀಪದ ಕೆದಿಹಿತ್ಲು ಎಂಬಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು ಧರ್ಮಸ್ಥಳದಿಂದ ಮುಂಡಾಜೆಯತ್ತ ಸಂಚರಿಸುತ್ತಿದ್ದ ಕಾರು ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಘಟನೆ ಭಾನುವಾರ ನಡೆದಿದೆ. ಘಟನೆಯಲ್ಲಿ ಎರಡು ಕಾರುಗಳಲ್ಲಿ ಇದ್ದವರು ಅಪಾಯದಿಂದ ಪಾರಾಗಿದ್ದಾರೆ. ಒಂದು ವೇಳೆ ಕಾರು ಮೋರಿಯಲ್ಲಿ ಸಿಲುಕದೆ ಕೆಳಗಡೆ ಹರಿಯುವ ಹಳ್ಳಕ್ಕೆ ಬೀಳುತ್ತಿದ್ದರೆ ಅಪಾಯ ಎದುರಾಗುವ ಸಾಧ್ಯತೆ ಇತ್ತು.ಈ ರಸ್ತೆಯಲ್ಲಿ ಸುಮಾರು 6 ಕಡೆ ಅಗಲ ಕಿರಿದಾಗ ಕಿರುಸೇತುವೆಗಳಿದ್ದು ಇವು ಅಪಾಯಕಾರಿಯಾಗಿವೆ.
ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ; ಮಕ್ಕಳ ಆರೈಕೆಯಲ್ಲಿ ಜಾಗರೂಕತೆ ಬಹುಮುಖ್ಯ – ಡಾ. ಗೋಪಾಲಕೃಷ್ಣ
ಬೆಳ್ತಂಗಡಿ; ಮಕ್ಕಳು ದೇವರ ಸ್ವರೂಪ ಮತ್ತು ದೇವರು ನಮಗೆ ನೀಡಿದ ಕಾಣಿಕೆ. ಅವರನ್ನು ಸರಿಯಾದ ರೀತಿಯಲ್ಲಿ ಪೋಷಿಸಿ ಆರೋಗ್ಯಕರವಾಗಿ ಮತ್ತು ಉತ್ತಮ ಸಂಸ್ಕಾರ ನೀಡಿ ಬೆಳೆಸುವುದು ಹೆತ್ತವರ ಆದ್ಯ ಕರ್ತವ್ಯ. ಚಿಕಿತ್ಸೆಗಿಂದ ಮುಂಜಾಗ್ರತೆ ಮೇಲು ಎಂಬಂತೆ ಮಕ್ಕಳ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಂಡರೂ ಕೂಡಲೇ ಅವರನ್ನು ವೈದ್ಯರಿಗೆ ತೋರಿಸಿ ತಪಾಸಣೆ ನಡೆಸಿ ಸಲಹೆ ಪಡೆಯುವುದು ಪ್ರಾಮುಖ್ಯವಾದದ್ದು, ಎಂದು NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ಉಜಿರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ರವರು ಹೇಳಿದರು.ಅವರು ಬೆನಕ ಆಸ್ಪತ್ರೆಯಲ್ಲಿ ಜರುಗಿದ ಮಕ್ಕಳ ಉಚಿತ ಆರೋಗ್ಯ...
ತಾಲೂಕಿನಲ್ಲಿ ಸಂಭ್ರಮದಿಂದ ಗರಿಗಳ ಭಾನುವಾರ ಆಚರಣೆ
ಬೆಳ್ತಂಗಡಿ: ತಾಲೂಕಿನಲ್ಲಿ ಕ್ರೈಸ್ತ ಬಾಂಧವರು ಗರಿಗಳ ಭಾನುವಾರವನ್ನು ಸಂಭ್ರಮದಿಂದ ಆಚರಿಸಿದರು.ತಾಲೂಕಿನ ಎಲ್ಲ ಚರ್ಚ್ ಗಳಲ್ಲಿಯೂ ವಿಶೇಷ ಪ್ರಾರ್ಥನೆಗಳು ನಡೆಯಿತು, ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಥಾನ ದೇವಾಲಯವಾದ ಸಂತ ಲಾರೆನ್ಸ್ ದೇವಾಲಯದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಲಾರೆನ್ಸ್ ಮುಕ್ಕುಯಿ ಅವರ ಕಾರ್ಮಿಕತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು.ಗರಿಗಳ ಭಾನುವಾರದೊಂದಿಗೆ ಕ್ರೈಸ್ತರ ಪವಿತ್ರ ವಾರ ಆರಂಭವಾಗುತ್ತದೆ.ಪ್ರಭು ಕ್ರಿಸ್ತನ ಜೆರುಸೆಲಂ ಪ್ರವೇಶನದ ನೆನಪಿನಲ್ಲಿ ಆಚರಿಸುವ ಈ ಹಬ್ಬ ಇದಾಗಿದೆ. ಈ ಹಬ್ಬವು ಪ್ರಭು ಕ್ರಿಸ್ತರ ಶಿಲುಬೆಯ ಮರಣದ ಹಾಗೂ ಪುನರುದ್ಧಾನದ ಸ್ಮರಣೆಯನ್ನು ಆಚರಿಸುವ ಪವಿತ್ರ ವಾರದ ಮೊದಲನೆಯ ದಿನವಾಗಿದೆ.ತಾಲೂಕಿನ ಎಲ್ಲ...
ಉಜಿರೆ; ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಕಳವು
ಬೆಳ್ತಂಗಡಿ; ಉಜಿರೆ ಕಾಲೇಜು ರಸ್ತೆಯಲ್ಲಿ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ನಿವಾಸಿ ವ್ಯಾಪಾರಿಯಾಗಿರುವ ಅಬ್ದುಲ್ ಮತ್ತಲೀಬ್ ಎಂಬರ ಆಲ್ಟೊ ಕಾರು ಕಳ್ಳತನವಾಗಿದೆ.ಇವರು ಕಾರನ್ನು ಉಜಿರೆ ಕಾಲೇಜು ರಸ್ತೆಯಲ್ಲಿರುವ ತಮ್ಮ ಅಂಗಡಿಯ ಸಮೀಪದ ಪಾರ್ಕಿಂಗ್ ಜಾಗದಲ್ಲಿ ಕಾರನ್ನು ನಿಲ್ಲಿಸಿದ್ದರು. ರಾತ್ರಿ ಅಂಗಡಿ ಮುಚ್ಚಿ ಬಂದು ನೋಡಿದಾಗ ನಿಲ್ಲಿಸಿದ್ದ ಕಾರು ನಾಪತ್ತೆಯಾಗಿತ್ತು. ಕಾರಿನ ಅಂದಾಜು ಮೌಲ್ಯ 6,50,000 ಎಂದು ಅಂದಾಜಿಸಲಾಗಿದೆ. ಎ.29ರಂದು ಘಟನೆ ನಡೆದಿದ್ದು ಕಾರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ...
ಬೆಳ್ತಂಗಡಿ :ಕಾಲುಗಳನ್ನು ಕತ್ತರಿಸಿದ ರೀತಿಯಲ್ಲಿ ಚಿರತೆ ಮೃತದೇಹ ಪತ್ತೆ
ಬೆಳ್ತಂಗಡಿ: ಕಾಲುಗಳನ್ನು ಕತ್ತರಿಸಿದ ಕೊಳೆತ ರೀತಿಯಲ್ಲಿ ಚಿರತೆಯೊಂದು ಸವಣಾಲು ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕಾರ್ಕಳ ಮತ್ತು ಬೆಳ್ತಂಗಡಿ ವನ್ಯಜೀವಿ ಇಲಾಖೆ ಅಧಿಕಾರಿಗಳು ತಂಡ ದೌಡಿಯಿಸಿ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಮೀಸಲು ಅರಣ್ಯ ಪ್ರದೇಶ ಇತ್ತಿಲಪೇಲ ಎಂಬಲ್ಲಿ ಕೊಳೆತ ಸ್ಥಿತಿಯಲ್ಲಿ ಚಿರತೆಯ ಮೃತ ದೇಹ ನಾಲ್ಕು ಕಾಲುಗಳನ್ನು ತುಂಡರಿಸಿದ ರೀತಿಯಲ್ಲಿ ಪತ್ತೆಯಾಗಿದ್ದು.ಏ.11 ರಂದು ಸಂಜೆ ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್.ಎಫ್.ಓ ಶರ್ಮಿತಾ ಅವರಿಗೆ ಮಾಹಿತಿ ಬಂದಿದ್ದು. ಏ.12 ರಂದು ಬೆಳಗ್ಗೆ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ...















