ಕೇರಳದ ಶಿವಗಿರಿ ಮಠದ ಸ್ವಾಮಿಗಳಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಭೇಟಿ
ಬೆಳ್ತಂಗಡಿ; ಡಿಸೆಂಬರ್ 3 ರಂದು ಮಂಗಳೂರಿನ ಮಾನಸ ಗಂಗೋತ್ರಿ ವಿಶ್ವವಿದ್ಯಾಲಯದ ಕೋಣಾಜೆ ಮೈದನದಲ್ಲಿ ನಡೆಯಲಿರುವ ಶ್ರೀ ನಾರಾಯಣ ಗುರುಗಳು ಮತ್ತು ಮಹಾತ್ಮಾ ಗಾಂಧಿ ಯವರ ಭೇಟಿಯ ಶತಮಾನೋತ್ಸತ್ವದ ಸಂಬ್ರಮಾಚಾರಣೆಯಾದ, " ಗುರು ಗಾಂಧಿ ಸಂವಾದ ಶತಮಾನೋತ್ಸವ" ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ರಾದ ಪೂಜ್ಯ ಜೇಮ್ಸ್ ಪಟ್ಟೆರಿ ಯವರನ್ನು ಮತ್ತು ನಿಕಟಪೂರ್ವ ಧರ್ಮಾಧ್ಯಕ್ಷರಾದ ಪೂಜ್ಯ ಲಾರೆನ್ಸ್ ಮುಕ್ಕುಝಿಯವರನ್ನು ಆಹ್ವಾನಿಸಲು ಶಿವಗಿರಿಮಠದ ಪೂಜ್ಯ ಶ್ರೀ ಜ್ಞಾನತಿರ್ಥ ಸ್ವಾಮಿಜಿಗಳು ಮತ್ತು ಸೋಲೂರು ಆರ್ಯ ಈಡಿಗ ಮಹಾ ಸಂಸ್ಥಾನದ ಪೂಜ್ಯ ಶ್ರೀ ವಿಖ್ಯಾತಾನಂದ ಸ್ವಾಮಿಜಿಗಳು ಮತ್ತು...
ಧರ್ಮಸ್ಥಳ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಗುತ್ತಿಮಾರು ಬಾಬು ಗೌಡ (56) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ19 ರಂದು ನಡೆದಿದೆ.ಮನೆಯ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಬುಧವಾರ ಸಂಜೆಯ ವೇಳೆಗೆ ಪತ್ತೆಯಾಗಿದೆ. ಇವರ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತರು ಪತ್ನಿ ಮಕ್ಕಳನ್ನು ಅಗಲಿದ್ದಾರೆ.
ಸ್ಕೂಟರ್ ಹಾಗೂ ಕಾರಿನ ನಡುವೆ ಅಪಘಾತ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು
ಬೆಳ್ತಂಗಡಿ: ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ಸ್ಕೂಟರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಕಾವಳಕಟ್ಟೆ ಸಮೀಪದ ಎನ್.ಸಿ.ರೋಡ್ ಬಳಿ ಬುಧವಾರ ಸಂಭವಿಸಿದೆ. ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯ (21) ಮೃತ ವಿದ್ಯಾರ್ಥಿನಿ. ಗುರುವಾಯನಕೆರೆ ನಿವಾಸಿ ಪೃಥ್ವಿ ರಾವ್ ಎಂಬವರು ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿನಿಯನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಇವರಿಬ್ಬರೂ ಮಂಗಳೂರಿನ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೂಂಜಾಲಕಟ್ಟೆ ಪೊಲೀಸರು ಬೇಟಿ ನೀಡಿ ಪರಿಶೀಲನೆ...
ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ
ಬೆಂಗಳೂರು : ಧರ್ಮಸ್ಥಳ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ಹಾಗೂ ಎಸ್.ಐ.ಟಿ ತನಿಖೆಗೆ ತಡೆ ನೀಡಬೇಕು ಎಂದು ಉಜಿರೆಯ ಗಣೇಶ್ ಶೆಟ್ಟಿ ಅವರ ಮನವಿ ಪರಿಗಣಿಸಲು ಹೈಕೊರ್ಟ್ ನಿರಾಕರಿಸಿದೆ. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ (ಎಫ್ಐಆರ್ ಸಂಖ್ಯೆ- 39/2025) ಹಾಗೂ ಎಸ್ಐಟಿ ತನಿಖೆ ರದ್ದು ಕೋರಿ ಉಜಿರೆ ನಿವಾಸಿ ಗಣೇಶ್ ಶೆಟ್ಟಿ (29) ಎಂಬುವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು ಅರ್ಜಿ ಇತ್ಯರ್ಥವಾಗುವವರೆಗೆ ಎಫ್ಐಆರ್ ಮತ್ತು ಎಸ್ಐಟಿ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು. ಮಧ್ಯಂತರ ಮನವಿ ಮಾಡಿದ್ದರು. ಈ ಅರ್ಜಿಯನ್ನು...
ಶ್ರೀಕ್ಷೇತ್ರ ಧರ್ಮಸ್ಥಳ ಸಾಹಿತ್ಯ ಸಮ್ಮೇಳನ ಉದ್ಘಾಟನೆ
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ 93ನೆಯ ಅಧಿವೇಶನದ ಉದ್ಘಾಟನೆಯನ್ನು ಹಿರಿಯ ಸಾಹಿತಿಗಳಾದ ಪ್ರೊ ಪ್ರೇಮಶೇಖರ ಅವರು ಉದ್ಘಾಟಿಸಿದರು.ಸಮ್ಮೇಳನದ ಅಧ್ಯಕ್ಷೆತೆಯನ್ನು ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್ ಅವರು ವಹಿಸಿದ್ದರು.ಸಮ್ಮೇಳನದಲ್ಲಿ ಬೆಂಗಳೂರಿನ ಶಾಂತಾ ನಾಗಮಂಗಲ, ಡಾ.ರಘು, ಡಾ.ಬಿ.ಎಂ ಶರಭೇಂದ್ರ ಸ್ವಾಮಿ ಅವರು ಉಪನ್ಯಾಸಗಳನ್ನು ನೀಡಿದರು.ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಸಾಹಿತ್ಯಕ್ಕೂ ಇರುವ ಸಂಬಂಧಗಳನ್ನುವಿವರಿಸಿದರು ವೇದಿಕೆಯಲ್ಲಿ ಡಿ ಹರ್ಷೇಂದ್ರ ಕುಮಾರ್, ಡಿ ಸುರೇಂದ್ರ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.ಡಾ.ಶ್ರೀಧರ ಭಟ್...
ಜನ ಸ್ಪಂದನ ಸಭೆ ಬಗ್ಗೆ ಮಾಹಿತಿ ನೀಡದ ಕಾಶಿಪಟ್ಣ ಪಿಡಿಒ ಗೆ ನೋಟೀಸ್ ನೀಡಲು ಶಾಸಕ ಹರೀಶ್ ಪೂಂಜ ಸೂಚನೆ
ಬೆಳ್ತಂಗಡಿ: ಜನಸ್ಪಂದನ ಸಭೆಯ ಮಾಹಿತಿ ಪಂಚಾಯತ್ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಸರಿಯಾಗಿ ತಿಳಿಸದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಶೋಕಾಸ್ ನೋಟೀಸ್ ನೀಡುವಂತೆ ಶಾಸಕ ಹರೀಶ್ ಪೂಂಜ ಸೂಚಿಸಿದ ಘಟನೆಕಾಶಿಪಟ್ಣದಲ್ಲಿ ನಡೆದಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಕಾಶಿಪಟ್ಣ, ಗ್ರಾಮ ವ್ಯಾಪ್ತಿಯ ಜನ ಸ್ಪಂದನ ಸಭೆಯು ಕಾಶಿಪಟ್ಣ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನ 18 ರಂದು ನಡೆಯಿತು. ಸಭೆಯ ಪ್ರಾರಂಭದಲ್ಲೇ ಜನಸ್ಪಂದನ ಸಭೆಯ ಮಾಹಿತಿ ಪಂಚಾಯತ್ ಸದಸ್ಯರಿಗಾಗಲಿ ಗ್ರಾಮಸ್ಥರಿಗಾಗಲಿ ಸರಿಯಾಗಿ ತಿಳಿದಿಲ್ಲ ಈ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಗಿಂತ ಅಧಿಕಾರಿಗಳೇ ಹೆಚ್ಚಿದ್ದಾರೆ.ಇದು ಅಧಿಕಾರಿಗಳಿಗೋ...
ಚಾರಣಪ್ರಿಯರಿಗೆ ನ.20 ರಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ
ಬೆಳ್ತಂಗಡಿ; ಚಾರಣಪ್ರಿಯರಿಗೆ ನ. 20 ರಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.ಕಳೆದ ಹಲವು ತಿಂಗಳಿನಿಂದ ಕಾಡ್ಗಿಚ್ಚು ಭಯ,ಮಳೆಗಾಲ ಇತ್ಯಾದಿ ಕಾರಣಗಳಿಂದ ಸಾರ್ವಜನಿಕರಿಗೆ ಜಲಪಾತ ವೀಕ್ಷಣೆಗೆ ಪ್ರವೇಶ ನಿಷೇಧ ಹೇರಲಾಗಿತ್ತು. ಪ್ರಸ್ತುತ ಮಳೆ ಕಡಿಮೆಯಾಗಿದ್ದು ಇದೀಗ ಮತ್ತೆ ಅವಕಾಶ ಕಲ್ಪಿಸಲಾಗಿದೆ.ನೂರಾರು ಅಡಿ ಎತ್ತರದಿಂದ ನೀರು ಧುಮ್ಮಿಕ್ಕುವ ಬಂಡಾಜೆ ಜಲಪಾತ ಪ್ರದೇಶಕ್ಕೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರದಿಂದ ಚಾರಣದ ಮೂಲಕ ತಲುಪಬಹುದು. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿರುವ ಈ ಜಲಪಾತಕ್ಕೆ ಹೋಗಬೇಕಾದರೆ 11 ಕಿ.ಮೀ.ದೂರವನ್ನು ಚಾರಣದ ಮೂಲಕವೇ ಕ್ರಮಿಸಿ ತಲುಪಬೇಕು.ಕಡಿರುದ್ಯಾವರದಿಂದ ಕಡಿದಾದ ಹಾದಿ, ಜಾರುವ ಬಂಡೆಗಳು,...
ಬೆಳ್ತಂಗಡಿ; ಡಿ.3ರಂದು ಮಂಗಳೂರಿನಲ್ಲಿ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮ; ಸಂಚಾಲಕರಾದ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಪ್ರಮುಖರ ಸಭೆ; ತಾಲೂಕಿನಿಂದ 5000 ಜನರು ಬಾಗಿ
ಬೆಳ್ತಂಗಡಿ. ವರ್ಕಳದ ಶಿವಗಿರಿ ಮಠ ಹಾಗೂ ಮಂಗಳೂರು ನಾರಾಯಣ ಗುರು ಅಧ್ಯಯನ ಪೀಠದ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಹಾಗೂ ನಾರಾಯಣ ಗುರುಗಳ ಮಹಾನಿರ್ವಾಣ ಶತಮಾನೋತ್ಸವ ಕಾರ್ಯಕ್ರಮವು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ಉಪಸ್ಥಿತಿಯಲ್ಲಿ ಡಿ.3ರಂದು ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ನಡೆಯಲಿದ್ದು. ಈ ಕಾರ್ಯಕ್ರಮದ ಬಗ್ಗೆ ಬೆಳ್ತಂಗಡಿ ತಾಲೂಕಿನ ವಿವಿಧ ಸಮುದಾಯದಗಳ ಮುಖಂಡರುಗಳ ಕೂಡುವಿಕೆಯೊಂದಿಗೆ ಪೂರ್ವಭಾವಿ ಸಭೆಯು ಬೆಳ್ತಂಗಡಿ ನಾರಾಯಣಗುರು ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿಗಳು ಹಾಗೂ ಶಿವಗಿರಿ ಮಠದ...
ಗಾಂಜಾ ಪ್ರಕರಣ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ
ಬೆಳ್ತಂಗಡಿ; ಇಳಂತಿಲದಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅನುಚಿತವಾಗಿ ವರ್ತಿಸಿದ ಪ್ರಕರಣದಲ್ಲಿ ಮೂರು ಮಂದಿ ಆರೋಪಿಗಳಿಗೆ ಬೆಳ್ತಂಗಡಿ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪ ನೀಡಿದೆ.2023ರ ಸೆಪ್ಟೆಂಬರ್ 2ರಂದುಬೆಳಗ್ಗೆ 10 ಗಂಟೆ ವೇಳೆಗೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ರಿಫಾಯಿನಗರದಲ್ಲಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಬಂಟ್ವಾಳ ತಾಲೂಕಿನ ಪೆರ್ನೆಯ ಸಲೀಂ ಹುಸೇನ್ ಮತ್ತು ಪೆರಾಜೆಯ ಶಹ್ಯಾಜ್ ಅಹಮ್ಮದ್ ಎಂಬವರನ್ನು ಉಪ್ಪಿನಂಗಡಿ ಎಸ್ಐ ಓಮನ ಎನ್.ಕೆ. ಮತ್ತು ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸರ್ವಧರ್ಮ ಸಮ್ಮೇಳನ ಉದ್ಘಾಟನೆ, ಎಲ್ಲ ಧರ್ಮಗಳೂ ಮನುಕುಲದ ಒಳಿತನ್ನು ಬಯಸುತ್ತೆ, ಸಚಿವ ಎಂ.ಬಿ ಪಾಟೀಲ್
ಬೆಳ್ತಂಗಡಿ: ಎಲ್ಲ ಧರ್ಮಗಳೂ ಮನುಕುಲದ ಒಳಿತನ್ನು ಬಯಸುತ್ತದೆ ಅದನ್ನು ತಿಳಿದುಕೊಂಡು ನಾವು ಬದುಕನ್ನು ನಡೆಸಿದಾಗ ಎಲ್ಲರಿಗೂ ಒಳಿತಾಗಲು ಸಾಧ್ಯ ಎಂದು ರಾಜ್ಯ ಸರಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ.ಎಂ.ಬಿ ಪಾಟೀಲ್ ಅವರು ಹೇಳಿದರು.ಶ್ರೀಕ್ಷೇತ್ರ ಧರ್ಮಸ್ಥಳ ದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ನಡೆಯುವ ಸರ್ವಧರ್ಮ ಸಮ್ಮೇಳನದ 93ನೆಯ ಅಧಿವೇಶನದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಮಾಜದಲ್ಲಿ ಶಾಂತಿಯುತ ಸಹಬಾಳ್ವೆಗೆ ಇಂತಹ ಸರ್ವ ಧರ್ಮಸಮ್ಮೇಳನಗಳು ಅವಕಾಶ ನೀಡುತ್ತದೆ. ಎಲ್ಲ ಧರ್ಮಗಳಲ್ಲಿ ಅಡಕವಾಗಿರುವ ಮೌಲ್ಯಗಳನ್ನು ಮತ್ತೊಮ್ಮೆ ನೆನಪಿಸಲು ಇದು ಸಹಕಾರಿಯಾಗಿದೆ. ವಿಶ್ವಕ್ಕೆ ಭಾರತ ನೀಡುವ ಸಂದೇಶ ವಸುದೈವ...















