ಸಮುದಾಯ ಭವನ ಧ್ವಂಸ : ವೇಣೂರು ಗ್ರಾಮ ಪಂಚಾಯತ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

0

ಬೆಳ್ತಂಗಡಿ;  ದಲಿತ ಸಮುದಾಯದ ಕಾರ್ಯಚಟುವಟಿಕೆಗಳ ಭಾಗವಾಗಿ 1955 ರಲ್ಲಿ ವೇಣೂರಿನ ಹೃದಯಭಾಗದಲ್ಲಿ ನಿರ್ಮಾಣವಾಗಿದ್ದ ಸಮುದಾಯ ಭವನವನ್ನು ಕಾನೂನು ಬಾಹಿರವಾಗಿ ಸರ್ಕಾರದ ಸ್ವತ್ತು ಸಂಪೂರ್ಣ ನಾಶ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ವೇಣೂರು ಗ್ರಾಮದ ಸ.ನಂ 76/2A3 ಯಲ್ಲಿನ 0.06 ಎಕರೆ ಜಮೀನಿನಲ್ಲಿ 1955 ರಲ್ಲಿ ಅಂದಿನ ರಾಜ್ಯ ಸರ್ಕಾರ ದಲಿತ ಸಮುದಾಯದ ಕಾರ್ಯಚಟುವಟಿಕೆಗಳನ್ನು ನಡೆಸುವ ಉದ್ದೇಶದಿಂದ ಸಮುದಾಯ ಭವನವನ್ನು ನಿರ್ಮಾಣ ಮಾಡಲಾಗಿತ್ತು. ಅಂದಿನ ಸಚಿವ ಭಕ್ತವತ್ಸಲಂ ರವರು ದಿನಾಂಕ 22-04-1955 ರಲ್ಲಿ ಉದ್ಘಾಟಿಸಿದ್ದರು. ಈ ಸಮುದಾಯ ಭವನದಲ್ಲಿ...

ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್

0

ಬೆಳ್ತಂಗಡಿ, ಆ.25: ಖಿಳರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು. ಖತೀಬ್ ಹನೀಫ್ ಫೈಝೀ ಅವರ ನೇತೃತ್ವದಲ್ಲಿ ಮೌಲಿದ್ ಪಾರಾಯಣದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆ.24ರಂದು ನಡೆದ ಕಾರ್ಯಕ್ರಮದಲ್ಲಿ ಹಯಾತುಲ್ ಇಸ್ಲಾಂ ಮದರಸ ವಿದ್ಯಾರ್ಥಿಗಳಿಂದ ವಿವಿಧ ಕಾರ್ಯಕ್ರಮಗಳು ಹಾಗೂ ಸಭಾ ಕಾರ್ಯಕ್ರಮ ನಡೆಯಿತು. ಖಿಳರ್ ಜುಮ್ಮಾ ಮಸೀದಿಯ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಅತಿಥಿಯಾಗಿ ಉದ್ಯಮಿ ಹಾರಿಶ್...

ರಾಕಿಂಗ್ ಸ್ಟಾರ್ ಯಶ್ ಧರ್ಮಸ್ಥಳಕ್ಕೆ ಭೇಟಿ

0

ಬೆಳ್ತಂಗಡಿ: ಟಾಕ್ಸಿಕ್ ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಆ.25ರ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿ ಆಶೀರ್ವಾದ ಪಡೆದು ಬಳಿಕ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಸಿನಿಮಾ ಬಿಡುಗಡೆಗೂ ಮುನ್ನ ಯಶ್ ಪ್ರತಿ ಬಾರಿ ಧರ್ಮಸ್ಥಳಕ್ಕೆ ಬಂದು, ಮಂಜುನಾಥನ ದರ್ಶನ ಪಡೆಯುವ ಸಂಪ್ರದಾಯ ಇದ್ದು, ಈ ಬಾರಿಯೂ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮೊದಲು ಧರ್ಮಸ್ಥಳಕ್ಕೆ ಬಂದು, ದೇವರ ದರ್ಶನ ಪಡೆದಿದ್ದಾರೆ.

ಆ.28: ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರುಜಯಂತಿ, ಸಾಧಕರಿಗೆ ಸನ್ಮಾನ 13 ಲಕ್ಷ ವಿಧ್ಯಾರ್ಥಿ ವೇತನ ವಿತರಣೆ: ಅಧ್ಯಕ್ಷ ಜಯವಿಕ್ರಮ್  ಮಾಹಿತಿ

0

ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಹಾಗೂ ಬಿಲ್ಲವ ಮಹಿಳಾ ವೇದಿಕೆ, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಾರಾಯಣ ಗುರುಗಳ 172ನೇ ಗುರುಜಯಂತಿ, ಸಮಾಜದ ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಹಾಗೂ 13 ಲಕ್ಷ ವಿದ್ಯಾರ್ಥಿವೇತನ ವಿತರಣೆ ಸಮಾರಂಭವು ಆ. 28, ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ...

ಅಳದಂಗಡಿ: ವಿವಾದಿತ‌ ಕಲ್ಲು ಗಣಿಗಾರಿಕಾ ಪ್ರದೇಶಕ್ಕೆ ಗಣಿ ಇಲಾಖೆಯ ಅಧಿಕಾರಿಗಳ ಭೇಟಿ ಪರಿಶೀಲನೆ

0

ಬೆಳ್ತಂಗಡಿ; ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಸೋಮವಾರ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು , ಕಂದಾಯ ಇಲಾಖೆ , ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಂಟಿ ತನಿಖೆ , ಪರಿಶೀಲನೆ ನಡೆಸಿದರು. ಸ್ಥಳೀಯರಾದ ಶ್ರೀಕಾಂತ್ ಭಟ್ ಎಂಬವರು ಕೃಷಿ ಚಟುವಟಿಕೆ...

ಬೆಳ್ತಂಗಡಿ ತಾಲೂಕಿನ 2 ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ₹51.45 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎರಡು ಸರ್ಕಾರಿ ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರ ಒಟ್ಟು ₹51.45 ಲಕ್ಷ ಅನುದಾನ ಮಂಜೂರು ಮಾಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಶಿಪಟ್ಟಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ನೂತನ ಕೊಠಡಿಗಳ ನಿರ್ಮಾಣಕ್ಕೆ ₹34.30 ಲಕ್ಷ ಹಾಗೂ ನಿಟ್ಟಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ಕೊಠಡಿ ನಿರ್ಮಾಣಕ್ಕೆ ₹17.15 ಲಕ್ಷ ಅನುದಾನವನ್ನು ಸರ್ಕಾರ ಮಂಜೂರು ಮಾಡಿದೆ. ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ...

ಉಪ್ಪಿನಂಗಡಿ : ನಾಲ್ಕು ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ವಾರಂಟ್ ಆರೋಪಿ ಬಂಧನ

0

ಉಪ್ಪಿನಂಗಡಿ: ಆರ್.ಕೆ. ಚಿನ್ನದಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ನಾಲ್ಕು ವರ್ಷಗಳಿಂದ ಪುತ್ತೂರು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ.ರಾಜಸ್ಥಾನ ರಾಜ್ಯದ ಬೂಂದಿ ಜಿಲ್ಲೆಯ ಗುರುದ್ವಾರ ಸಮೀಪದ ಡೊಂಗ್ರಿ ನಿವಾಸಿ ಮೊಹಮ್ಮದ್ ಅವರ ಪುತ್ರ ಜಮಿಲ್ ಚಾಚಾ (62) ಬಂಧಿತ ಆರೋಪಿ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019ರಲ್ಲಿ ನಡೆದ ಆರ್.ಕೆ. ಚಿನ್ನದಂಗಡಿ ಕಳ್ಳತನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಶಿಕ್ಷೆ ಅನುಭವಿಸಿದ್ದ ಈತ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ.ಆರೋಪಿಯ...

ಬೆಳ್ತಂಗಡಿ; ‘ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ತುಳು ಮತ್ತು ಕನ್ನಡ ರಂಗಭೂಮಿ, ಚಲನಚಿತ್ರ ನಟ ಮತ್ತು ನಿರ್ದೇಶಕ ಚೇತನ್ ರೈ ಮಾಣಿ ಭೇಟಿ

0

ಬೆಳ್ತಂಗಡಿ : ಆಗಸ್ಟ್ 24ರಂದು ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ತುಳುನಾಡಿನ ಹೆಮ್ಮೆಯ ತುಳು ಮತ್ತು ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ನಟ ಮತ್ತು ನಿರ್ದೇಶಕರಾದ ಚೇತನ್ ರೈ ಮಾಣಿಯವರು ನಮ್ಮ ಸಂಸ್ಥೆಗೆ ಭೇಟಿ ನೀಡಿ ನಮ್ಮನ್ನುದ್ದೇಶಿಸಿ ಹಿತವಚನ ನೀಡಿದರು. ಅವರೊಂದಿಗೆ ಕರಾವಳಿ ಸುದ್ದಿಪತ್ರಿಕೆಯ ಸಂಪಾದಕರಾದ ಶ್ರೀ ರೋಷನ್ ಮಾರ್ಟಿಸ್ ರವರು ಸಂಸ್ಥೆಯ ಬೆಳವಣಿಗೆ ಹಾಗೂ ಸಂಸ್ಥೆಯ ಮುಂದಿನ ದಿನಗಳಲ್ಲಿ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳಾದ ರಶ್ಮಿತಾ, ಪೂರ್ಣಿಮಾ, ಲಿಖಿತಾ ರವರು ಪ್ರಾರ್ಥನೆ ಮಾಡಿ...

ರಕ್ಷಿತ್ ಶಿವರಾಂ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ

0

ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಹುಟ್ಟುಹಬ್ಬದ ಪ್ರಯುಕ್ತ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಯುವ ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಯ ವಿವಿಧ ವಾರ್ಡ್‌ಗಳಿಗೆ ತೆರಳಿ, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿ ಹಣ್ಣುಹಂಪಲು ವಿತರಿಸಿದರು. ಹುಟ್ಟುಹಬ್ಬದ ಆಚರಣೆಯನ್ನು ಸಮಾಜಮುಖಿ ಹಾಗೂ ಮಾನವೀಯ ಸೇವೆಯೊಂದಿಗೆ ಆಚರಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸಂದೇಶ ನೀಡಲಾಯಿತು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಸಮಿತಿ ಅಧ್ಯಕ್ಷ ಅಜರ್ ನಾವೂರು ಬೆಳ್ತಂಗಡಿ ವಿಧಾನಸಭಾ...

ಈದ್ ಮಿಲಾದ್ ರಜೆ ದಿನಾಂಕ ಬದಲಾವಣೆ: ಆ.25ರಂದು ದ.ಕ ಜಿಲ್ಲೆಗೆ ಸಾರ್ವತ್ರಿಕ ರಜೆ

0

ಮಂಗಳೂರು: ಈದ್ ಮಿಲಾದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆಯ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ. ಈ ಹಿಂದೆ ಆ.26ರಂದು ಬುಧವಾರ ಈದ್ ಮಿಲಾದ್‌ ಹಬ್ಬದ ಸಾರ್ವತ್ರಿಕ ರಜೆ ಘೋಷಿಸಲಾಗಿದ್ದರೂ, ಜಿಲ್ಲೆಯಲ್ಲಿ ಮಂಗಳವಾರ ಹಬ್ಬವನ್ನು ಆ.25ರಂದು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ರಜೆಯನ್ನು ಒಂದು ದಿನ ಮುಂಚಿತವಾಗಿ ನೀಡಲು ಸರ್ಕಾರ ಆದೇಶಿಸಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರ ಕಾರ್ಯಾಲಯದಿಂದ ಆ.24ರಂದು ಈ ಕುರಿತು ಅಧಿಕೃತ ಜ್ಞಾಪನ ಹೊರಡಿಸಲಾಗಿದೆ.2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿನ ಸರ್ಕಾರದ ಅಧಿಸೂಚನೆಯಂತೆ ಆ.26ರಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ...